Blog Archive

‘ನಮ್ಮಷ್ಟು ಹಿಂದೂಪರ ಕೆಲಸ ಯಾರೂ ಮಾಡಿಲ್ಲ: ಪ್ರಮೋದ್ ಮಧ್ವರಾಜ್

Thursday, February 8th, 2018
udupi-pramod

ಉಡುಪಿ:‘ಕಾಂಗ್ರೆಸ್ ಸರ್ಕಾರ ಮಾಡಿದಷ್ಟು ಹಿಂದೂಪರವಾದ ಕೆಲಸವನ್ನು ಬೇರೆ ಯಾವ ಸರ್ಕಾರವೂ ಮಾಡಿಲ್ಲ’ ಎಂದು ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ‘ಮೊದಲು ದೇವಸ್ಥಾನಗಳಿಗೆ ಕೇವಲ 15 ಸಾವಿರ ಮಾತ್ರ ತಸ್ತೀಕ್ ನೀಡಲಾಗುತ್ತಿತ್ತು, ಆದರೆ ನಮ್ಮ ಸರ್ಕಾರ ಅದನ್ನು 48 ಸಾವಿರಕ್ಕೆ ಏರಿಕೆ ಮಾಡಿದೆ. ಮಠಗಳನ್ನು ಸರ್ಕಾರ ಸ್ವಾಧೀನಕ್ಕೆ ಪಡೆಯುವ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಧಾರ್ಮಿಕ ದತ್ತಿ ಕಾಯ್ದೆಯನ್ನು ಪುನರ್ […]

ಸೇಡಿನ ರಾಜಕೀಯ ಮಾಡುವ ಮೂಲಕ ಕೀಳು ಮಟ್ಟಕ್ಕೆ ರಾಜಕಾರಣ : ಮುನಿಯಾಲು ಉದಯ ಶೆಟ್ಟಿ

Thursday, February 8th, 2018
congress

ಕಾರ್ಕಳ: ಕಾರ್ಕಳ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ದಿ ನಡೆಸಿ, ಸಿಇಟಿ ಮೂಲಕ ಮನೆಮನೆಯ ಬೆಳಕನ್ನು ಬೆಳಗಿಸಿದ ಡಾ.ಎಂ.ವೀರಪ್ಪ ಮೊಯ್ಲಿ ಅವರನ್ನು ಬಿಜೆಪಿಗರು ಕೀಳುಮಟ್ಟದಲ್ಲಿ ನಿಂದಿಸಿಸುವ ಮೂಲಕ ಸೇಡಿನ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿಯಾಲು ಉದಯ ಶೆಟ್ಟಿ ಹೇಳಿದ್ದಾರೆ. ಅವರು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿಯ ಅವಳಹೇಳನವನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಬಂಡೀ ಮಠ ಬಸ್ ನಿಲ್ದಾಣ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ರಾಷ್ಟ್ರ ನಾಯಕ ಮೊಯ್ಲಿ, ಸಜ್ಜನರಾಗಿ, […]

ಸಂಸತ್‌‌ನಲ್ಲಿ ಸಿದ್ದರಾಮಯ್ಯ ಹೆಸರು ಉಲ್ಲೇಖ… ಮೋದಿಗೆ ಟ್ಟಿಟ್ಟರ್‌‌ನಲ್ಲಿ ಸಿಎಂ ಟಾಂಗ್‌

Thursday, February 8th, 2018
narendra-modi

ಬೆಂಗಳೂರು: ಲೋಕಸಭೆಯಲ್ಲಿ ನಡೆಯುತ್ತಿರುವ ಬಜೆಟ್‌‌ ಅಧಿವೇಶನದ ವೇಳೆ ಭಾಷಣ ಮಾಡುತ್ತಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ಹೆಸರು ಉಲ್ಲೇಖಿಸಿ ಮಾತನಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನೀವು ಸಂಸತ್‌ನಲ್ಲಿ ನನ್ನನ್ನು ಮತ್ತು ಬಸವಣ್ಣನವರನ್ನು ನೆನಪಿಸಿಕೊಂಡಿದ್ದರಿಂದ ಸಂತಸವಾಗಿದೆ. ಉಳ್ಳವರು ಶಿವಾಲಯ ಮಾಡುವರು, ನಾನೇನು ಮಾಡಲಿ ಬಡವನಯ್ಯಾ ಎಂದು ಬಸವಣ್ಣ ಹೇಳಿದ್ದರು. ಬಸವಣ್ಣನವರ ತತ್ವಗಳನ್ನು ನೀವು ಅನುಸರಿಸಿದರೆ ಕನ್ನಡಿಗರು ನಿಮಗೆ ಧನ್ಯವಾದ ಹೇಳುತ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಅಟಲ್ ಬಿಹಾರಿ […]

ಹಿರಿಯ ಕಾಂಗ್ರೆಸ್ಸಿಗ, ಸಚಿವ ರೈ ಸಂಬಂಧಿ ಸಂಕಪ್ಪ ರೈ ನಿಧನ

Thursday, February 8th, 2018
sankappa-rai

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಜಿಲ್ಲಾ ಪರಿಷತ್ ಅಧ್ಯಕ್ಷರಾಗಿ ಅವಿಭಜಿತ ಜಿಲ್ಲೆಯಾದ್ಯಂತ ಹೆಸರು ಗಳಿಸಿದ್ದ, ಪುತ್ತೂರು ತಾಲೂಕಿನ ಪ್ರತಿಷ್ಠಿತ ಬೆಳ್ಳಿಪ್ಪಾಡಿ ಮನೆತನದವರಾದ ಬಿ. ಸಂಕಪ್ಪ ರೈ(85) ವಯೋಸಹಜ ಅನಾರೋಗ್ಯದಿಂದಾಗಿ ಇಂದು ಪುತ್ತೂರಿನಲ್ಲಿ ನಿಧನರಾದರು. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿಯವರಾದ ಬಿ.ಸಂಕಪ್ಪ ರೈ ಅವರು ಅವಿವಾಹಿತರಾಗಿದ್ದು, ಪುತ್ತೂರು ನಗರದ ಕೊಂಬೆಟ್ಟುವಿನಲ್ಲಿ ತನ್ನ ಮೊಮ್ಮಗನಾದ ಪುತ್ತೂರು ಪೂಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅವರೊಂದಿಗೆ ವಾಸವಾಗಿದ್ದರು. ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. […]

ಪ್ರಶ್ನೆಗಳಿಗೆ ಉತ್ತರಿಸಿ, ಆರೋಪಗಳು ಬೇಡ: ಪ್ರಧಾನಿಗೆ ರಾಹುಲ್ ತಿರುಗೇಟು

Wednesday, February 7th, 2018
rahul-gandhi

ನವದೆಹಲಿ: “ಪ್ರಶ್ನೆಗಳಿಗೆ ಉತ್ತರ ನೀಡಿ. ನಿಮ್ಮ ಆರೋಪಗಳು ಬೇಕಾಗಿಲ್ಲ,” ಎಂದು ಲೋಕಸಭೆಯಲ್ಲಿ ದೀರ್ಘ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಫೆಲ್ ಡೀಲ್, ರೈತರು ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ರಾಹುಲ್ ಆಗ್ರಹಿಸಿದರು. ರಾಹುಲ್ ಗಂಭೀರ ಆರೋಪ “ನಾನು ವಿರೋಧ ಪಕ್ಷದ ನಾಯಕ ಅಲ್ಲ, ಪ್ರಧಾನಿ ಎಂಬುದನ್ನು ಅವರು ಮರೆತಂತೆ ಕಾಣಿಸುತ್ತಿದೆ,” ಎಂದು ವರದಿಗಾರರಿಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದರು. “ಪ್ರಧಾನಿಗೆ […]

ಕತ್ತಲ್ಸರ್‌ಗೆ ಕಾಂಗ್ರೆಸ್‌ ಗಾಳ ? : ಬಿಜೆಪಿ ತಳಮಳ

Wednesday, February 7th, 2018
congress

ಸುಬ್ರಹ್ಮಣ್ಯ : ಬಿಜೆಪಿಯ ಭದ್ರ ಕೋಟೆ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಹೇಗಾದರೂ ಮಾಡಿ ಈ ಬಾರಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಶತಾಯಗತಾತಯ ಪ್ರಯತ್ನದಲ್ಲಿದೆ. ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು, ಜಾನಪದ ವಾಚಸ್ಪತಿ ದಯಾನಂದ ಕತ್ತಲ್ಸರ್‌ ಅವರಿಗೆ ಗಾಳ ಹಾಕಲು ಮುಂದಾಗಿದೆ. ಸುಳ್ಯ ವಿಧಾನಸಭಾ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಕತ್ತಲ್ಸರ್‌ ಅವರಿಗೆ ಕಾಂಗ್ರೆಸ್‌ ಸುಳ್ಯ ಘಟಕದಿಂದ ದಿಡೀರ್‌ ಕರೆ ಹೋಗಿದೆ. ಇದು ಸುಳ್ಯ ರಾಜಕೀಯ ಪಡಶಾಲೆಯಲ್ಲಿ ತೀವ್ರ ಸಂಚಲನ […]

ವಿಜಯ ಶಂಕರ್‌, ಅನಿಲ್‌ ಕಾಂಗ್ರೆಸ್‌ಗೆ ಸೇರ್ಪಡೆ

Tuesday, February 6th, 2018
congress

ಬೆಂಗಳೂರು: ಮಾಜಿ ಸಚಿವ ಸಿ. ಎಚ್‌. ವಿಜಯ ಶಂಕರ್‌ ಹಾಗೂ ದಿವಂಗತ ಶಾಸಕ ಚಿಕ್ಕಮಾದು ಅವರ ಪುತ್ರ ಅನಿಲ್‌ ಚಿಕ್ಕಮಾದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ತಮ್ಮ ಬೆಂಬಲಿಗರೊಂದಿಗೆ ವಿಜಯ ಶಂಕರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದರು. ಅನಿಲ್‌ ಚಿಕ್ಕಮಾದು ಜಿಲ್ಲಾ ಪಂಚಾಯತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ತೊರೆದು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು. ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, […]

ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು

Monday, February 5th, 2018
ramalinga-reddy

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮೊದಲು ಅಪರಾಧ ಪ್ರಕರಣಗಳ ಸಭೆ ಮಾಡಲಿ ಆನಂತರ ಕರ್ನಾಟಕದ ವಿರುದ್ಧ ಮಾತನಾಡಲಿ ಎಂದು ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಪರಾಧಗಳ ರಾಜ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರು 13 ವರ್ಷ ಗುಜರಾತ್‍ನಲ್ಲಿ ಮುಖ್ಯಮಂತ್ರಿಯಾಗಿದ್ದರು. ಗೋಧ್ರಾ ದುರಂತದಲ್ಲಿ ಕರಸೇವಕರು ಸುಟ್ಟು ಕರಕಲಾದರು. ಆಗ ಮೋದಿ ಅವರಿಗೆ ಜವಾಬ್ದಾರಿ ಇರಲಿಲ್ಲವೇ ಎಂದು ಪ್ರಶ್ನಿಸಿದರು. ಗುಜರಾತ್‍ನಲ್ಲಿ […]

ಇಂಧನ ತೈಲ ಬೆಲೆಯೇರಿಕೆ ವಿರೋಧಿಸಿ ಮಹಿಳಾ ಕಾಂಗ್ರೆಸ್‌ನಿಂದ ಸೈಕಲ್, ಎತ್ತಿನಗಾಡಿ ಜಾಥಾ

Saturday, February 3rd, 2018
congress

ಮಂಗಳೂರು: ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಿ, ಕೇಂದ್ರ ಸರಕಾರದ ಜನವಿರೋಧಿಯನ್ನು ವಿರೋಧಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ಬೆಳಗ್ಗೆ ನಗರದಲ್ಲಿ ಎತ್ತಿನ ಗಾಡಿಯೊಂದಿಗೆ ಸೈಕಲ್ ಜಾಥಾ ನಡೆಯಿತು. ನಗರದ ಅಂಬೇಡ್ಕರ್ ವೃತ್ತ(ಜ್ಯೋತಿ)ದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಹಮ್ಮಿಕೊಂಡಿದ್ದ ಸೈಕಲ್ ಜಾಥಾವನ್ನು ಚಲನಚಿತ್ರ ನಟಿ ಭಾವನಾ ಹಾಗೂ ಶಾಸಕ ಜೆ.ಆರ್.ಲೋಬೊ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ಪೆಟ್ರೋಲ್, ಡೀಸೆಲ್ ಬೆಲೆ ದಿನೇದಿನೆ ಗಗನಕ್ಕೇರುತ್ತಿದೆ. ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಇಂಧನ ತೈಲ ಬೆಲೆಯೇರಿಕೆಯ ವಿರುದ್ಧ […]

ಪುತ್ತೂರಿನಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿ ಯಾರೆಂದೇ ಗೊತ್ತಿಲ್ಲ

Saturday, February 3rd, 2018
puttur

ಮಂಗಳೂರು: ಕರಾವಳಿಯ ರಾಜಕೀಯ ವಲಯದಲ್ಲಿ ಚುನಾವಣಾ ಕಾವು ಏರ ತೊಡಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ವಿಶಿಷ್ಟ ಕೂತೂಹಲ ಕೆರಳಿಸಿರುವ ಕ್ಷೇತ್ರ ಪುತ್ತೂರು ವಿಧಾನ ಸಭಾ ಕ್ಷೇತ್ರ. ಬಿಜೆಪಿ ಹಾಗೂ ಕಾಂಗ್ರೆಸ್ ನ ನಡುವೆ ಇಲ್ಲಿ ಭಾರೀ ಜಿದ್ದಾಜಿದ್ದಿಯ ಹೋರಾಟ ನಡೆಯುತ್ತಲೇ ಬಂದಿದೆ. ಪ್ರಸ್ತುತ ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದ್ದು ಶಕುಂತಲಾ ಶೆಟ್ಟಿ ಇಲ್ಲಿನ ಶಾಸಕಿಯಾಗಿದ್ದಾರೆ. ಒಟ್ಟು ಎರಡು ಬಾರಿ ಈ ಕ್ಷೇತ್ರದಿಂದ ಶಕುಂತಲಾ ಶೆಟ್ಟಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ […]