Blog Archive

ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದ ಕಿಡಿಗೇಡಿಗಳು…!

Saturday, February 3rd, 2018
indira-canteen

ಮಂಗಳೂರು: ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದು ವಿರೂಪಗೊಳಿಸಿದ ಘಟನೆ ನಗರದ ಸುರತ್ಕಲ್‌ನಲ್ಲಿ ನಡೆದಿದೆ. ಇಂದಿರಾ ಕ್ಯಾಂಟೀನ್‌‌ ರಾಜ್ಯವ್ಯಾಪಿ ಸ್ಥಾಪಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲೂ ಕ್ಯಾಂಟೀನ್ ನಿರ್ಮಿಸಲು ಯೋಜಿಸಲಾಗಿದೆ. ಇದರಂತೆ ಸುರತ್ಕಲ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್‌ಗೆ ಹಾಗೂ ಅಲ್ಲಿದ್ದ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದು ವಿರೂಪಗೊಳಿಸಿದ್ದಾರೆ. ಘಟನೆ ತಡರಾತ್ರಿ ನಡೆದಿರಬಹುದೆಂದು ಅಂದಾಜಿಸಲಾಗಿದ್ದು, ಸುರತ್ಕಲ್ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಾಧನೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ […]

ಕಾಂಗ್ರೆಸ್‌‌ನಿಂದ ಸಂಘಟನೆಗಳ ದುರುಪಯೋಗ: ಸುಲೋಚನಾ ಭಟ್‌

Friday, February 2nd, 2018
bjp-mangaluru

ಮಂಗಳೂರು: ಗೌರಿ ಲಂಕೇಶ್ ಜನ್ಮ ದಿನಾಚರಣೆ ಮಾಡುವುದು ಹಾಗೂ ಕನ್ನಡ ಸಂಘಟನೆಗಳನ್ನು ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೀಗಳೆಯಲು ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೌರಿ ಲಂಕೇಶ್ ಕಾರ್ಯಕ್ರಮದಲ್ಲಿ ಅವರ ಗುಣಗಾನ ಮಾಡುವುದು ಬಿಟ್ಟು, ಮೋದಿಯವರನ್ನು ದೂಷಿಸಲು ಬಳಸಿಕೊಳ್ಳಲಾಗಿದೆ. ಹತ್ಯೆ ನಡೆಸಿದವರನ್ನು ಬಂಧಿಸಲು ಸಾಧ್ಯವಾಗದ ರಾಜ್ಯ ಸರ್ಕಾರದ ಬಗ್ಗೆ ಚಕಾರ ಎತ್ತಿಲ್ಲ. ಹೀಗಾಗಿ ಇದು ರಾಜ್ಯ ಸರ್ಕಾದ […]

ಮಾಜಿ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

Wednesday, January 31st, 2018
anand-singh

ಬೆಂಗಳೂರು: ಮಾಜಿ ಸಚಿವ, ವಿಜಯನಗರ ಕ್ಷೇತ್ರದ ಮಾಜಿ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರಿದರು. ಶನಿವಾರ ಅವರು ಶಾಸಕ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಸಮ್ಮುಖದಲ್ಲಿ ಆನಂದ್ ಸಿಂಗ್ ತಮ್ಮ ಬೆಂಬಲಿಗರ ಜೊತೆ ಪಕ್ಷ ಸೇರ್ಪಡೆಯಾದರು. ಶಾಸಕ ಸ್ಥಾನಕ್ಕೆ ಬಳ್ಳಾರಿಯ ಆನಂದ್ ಸಿಂಗ್ ರಾಜೀನಾಮೆ! ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ‘ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತ ಬಯಸಿ ಬರುವವರಿಗೆ ಸ್ವಾಗತ. […]

ಕಾರ್ಕಳದಲ್ಲಿ ಸುನೀಲ್ ಕುಮಾರ್ ಎದುರಿಸುವ ಕಾಂಗ್ರೆಸ್‌ ಅಭ್ಯರ್ಥಿ ಯಾರು?

Tuesday, January 30th, 2018
sunil-kumar

ಉಡುಪಿ: ಒಂದೆಡೆ ದಿಗಂತದವರೆಗೆ ಚಾಚಿಕೊಂಡಿರುವ ಅರಬ್ಬೀ ಸಮುದ್ರ. ಇನ್ನೊಂದೆಡೆ ಪಶ್ಚಿಮ ಘಟ್ಟದ ಸಾಲು. ಇವೆರಡರ ನಡುವೆ ತೆಂಗು – ಕಂಗುಗಳ ಮರೆಯಲ್ಲಿ ಪ್ರಕೃತಿ ವಿಸ್ಮಯಗಳನ್ನು ಓಡಲಲ್ಲಿ ಅಡಗಿಸಿಕೊಂಡಿರುವ ಜಿಲ್ಲೆ ಉಡುಪಿ . ಅಷ್ಟ ಮಠಗಳ ನಾಡು ಈಗ ಚುನಾವಣಾ ಕದನಕ್ಕೆ ಸಿದ್ಧಗೊಳ್ಳುತ್ತಿದೆ. ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಕೈಯಲ್ಲಿರುವ ಏಕೈಕ ಕ್ಷೇತ್ರವೆಂದರೆ ಅದು ಕಾರ್ಕಳ ವಿಧಾನಸಭಾ ಕ್ಷೇತ್ರ. ಕರಿಗಲ್ಲ ಗೊಮ್ಮಟ ನಗರಿ ಕಾರ್ಕಳ ಈಗ ಚುನಾವಣಾ ಅಖಾಡಕ್ಕೆ ತೆರದು ಕೊಳ್ಳುತ್ತಿದೆ. ರಾಮ, […]

ಕುಂದಾಪುರ ಚುನಾವಣಾ ಅಖಾಡದಲ್ಲಿ ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಯುದ್ಧ

Tuesday, January 30th, 2018
kundapur

ಉಡುಪಿ: ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕುಂದಾಪುರ ವಿಧಾನಸಭಾ ಕ್ಷೇತ್ರ ಹೆಚ್ಚು ಕುತೂಹಲ ಮೂಡಿಸಿದೆ. ಜಿಲ್ಲೆಯಲ್ಲಿ ಸ್ವಲ್ಪವಾದರೂ ಕೃಷಿ ಜೀವಂತವಾಗಿರುವ ತಾಲೂಕು ಕುಂದಾಪುರ. ಇಲ್ಲಿನ ಸುಂದರ ಪ್ರಕೃತಿ ಮಡಿಲು, ಮರವಂತೆಯ ಕಡಲಿನ ಸೌಂದರ್ಯ ಎಲ್ಲವೂ ಚಿತ್ತಾಕರ್ಷಕ. ಪ್ರಕೃತಿಯ ಸೌಂದರ್ಯದ ನಡುವೆಯೂ ಇಲ್ಲಿ ಆಗಾಗ ನಕ್ಸಲರ ಗುಂಡಿನ ಸದ್ದು ಜಿಲ್ಲಾಡಳಿತವನ್ನು ಕಂಗೆಡಿಸುತ್ತಿದೆ. ಕುಂದಗನ್ನಡದ ಕಡಲತಡಿಯ ನಗರ ಕುಂದಾಪುರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆಯೇ ಇಲ್ಲಿಯವರೆಗೆ ಪೈಪೋಟಿ ನಡೆಯುತ್ತಾ ಬಂದಿದೆ. ಇಲ್ಲಿ ಜೆಡಿಎಸ್ ಆಟಕ್ಕೂಂಟು ಲೆಕ್ಕಕ್ಕಿಲ್ಲದ […]

ಜನಾರ್ದನ ಪೂಜಾರಿ ಆತ್ಮಕಥೆ ‘ಸಾಲಮೇಳದ ಸಂಗ್ರಾಮ’ ಬಿಡುಗಡೆ

Saturday, January 27th, 2018
salamela

ಮಂಗಳೂರು: ಹಿರಿಯ ಕಾಂಗ್ರೆಸಿಗ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಆತ್ಮಕಥೆ ‘ಸಾಲಮೇಳದ ಸಂಗ್ರಾಮ’ ಶುಕ್ರವಾರ ಲೋಕಾರ್ಪಣೆಗೊಂಡಿತು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು. ತಮ್ಮ ಸುದೀರ್ಘ 45 ವರ್ಷಗಳ ರಾಜಕೀಯ ಜೀವನವನ್ನು ತಮ್ಮ ಈ ಆತ್ಮಕಥೆಯಲ್ಲಿ ಪೂಜಾರಿ ದಾಖಲಿಸಿದ್ದಾರೆ. ಬಿಡುಗಡೆ ದಿನದ ಪ್ರಯುಕ್ತ 300 ರೂ. ಪುಸ್ತಕ 50 ರೂ.ಗೆ ವಿತರಣೆ ಮಾಡಲಾಯಿತು. ಪುಸ್ತಕ ಕೊಳ್ಳಲು ಜನಾರ್ದನ ಪೂಜಾರಿಯವರ ನೂರಾರು ಅಭಿಮಾನಿಗಳು ಮುಗಿಬಿದ್ದಿದ್ದು ಕಂಡು ಬಂತು. ಕಾರ್ಯಕ್ರಮದಲ್ಲಿ […]

ಶಾ ಧಮ್ಕಿಗೆ ಹೆದರೋಕೆ ನಾವು ಕೈಗೆ ಬಳೆ ತೊಟ್ಟಿಲ್ಲ: ತನ್ವೀರ್‌ ಸೇಠ್ ಗುಡುಗು

Friday, January 26th, 2018
amit-shah

ರಾಯಚೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಜ್ಯಕ್ಕೆ ಧಮ್ಕಿ ಹಾಕೋಕೆ ಬರುತ್ತಾರೆ. ಅವರ ಧಮ್ಕಿಗೆ ಯಾರು ಹೆದರುವವರಿಲ್ಲ. ಇಲ್ಲಿ ಯಾರು ಕೈಗೆ ಬಳೆ ಹಾಕಿಕೊಂಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ಸೇಠ್ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಭ್ರಷ್ಟಾಚಾರ ರಹಿತ ಆಡಳಿತವನ್ನು ಕಾಂಗ್ರೆಸ್ ನೀಡಿದೆ. ಬಿಜೆಪಿಯವರು ಕಾಂಗ್ರೆಸ್‌ ಸರ್ಕಾರದ ಮೇಲೆ ವಿನಾಕಾರಣ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ರಾಯಚೂರು ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರವಾಗಿ ನನಗೆ ಇನ್ನೂ ಯಾವುದೇ […]

ಭಾಷಣ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಹಮೀದ್‌ ಕಂದಕ್‌ ಚಿಕಿತ್ಸೆ ಫಲಿಸದೆ ಸಾವು

Thursday, January 25th, 2018
abdul-hameed

ಮಂಗಳೂರು: ರಾಜಕೀಯ, ಸಾಮಾಜಿಕ ಮುಖಂಡ ಹಮೀದ್ ಕಂದಕ್ (68) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೋಟೆಲ್‌ ವುಡ್‌ಲ್ಯಾಂಡ್‌ನಲ್ಲಿ ನಡೆದ ಅಹಿಂದ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಅವರನ್ನು ತಕ್ಷಣ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹಲವಾರು ವರ್ಷಗಳಿಂದ ಜೆಡಿಎಸ್‌ನಲ್ಲಿದ್ದ ಅವರು, ಮುಸ್ಲಿಂ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳಲ್ಲೂ ಪ್ರಮುಖ ಜವಾಬ್ದಾರಿಗಳನ್ನು ಹೊಂದಿದ್ದರು. ಹಲವು ವರ್ಷಗಳ ಕಾಲ ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಟ್ರಾವೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಹಾಜಿ ಹಮೀದ್ ಕಂದಕ್ ಪ್ರಸ್ತುತ ಕಾಂಗ್ರೆಸ್ […]

ಸಹ್ಯಾದ್ರಿ ಸಂಚಯದಿಂದ ಅಭ್ಯರ್ಥಿಗಳು ಕಣಕ್ಕೆ: ದಿನೇಶ್‌ ಹೊಳ್ಳ

Wednesday, January 24th, 2018
Nethravathi

ಮಂಗಳೂರು: ಕರಾವಳಿಗರ ಜೀವನದಿ ನೇತ್ರಾವತಿಯನ್ನು ಬರಿದುಗೊಳಿಸುವ ಎತ್ತಿನಹೊಳೆಯಂತಹ ಮಾರಕ ಯೋಜನೆಗಳನ್ನು ಭವಿಷ್ಯದಲ್ಲಿ ಜಾರಿಗೊಳಿಸುವ ಜನಪ್ರತಿನಿಧಿಗಳಿಗೆ ಪಾಠ ಕಲಿಸಬೇಕು. ಅದಕ್ಕಾಗಿ ಜನಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸಲು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಹ್ಯಾದ್ರಿ ಸಂಚಯ ಮುಂದಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಚಯದ ಸಂಚಾಲಕ ದಿನೇಶ್ ಹೊಳ್ಳ, ಸೂಕ್ತ ಅಭ್ಯರ್ಥಿ ದೊರೆಯದಿದ್ದಲ್ಲಿ ನೋಟಾ ಅಭಿಯಾನದ ಮೂಲಕ ಪ್ರತಿರೋಧ ಒಡ್ಡಲಾಗುವುದು. ನಮ್ಮ ಅಭಿಯಾನದ ಫಲವಾಗಿ ಕಳೆದ ಸಂಸತ್ ಚುನಾವಣೆಯಲ್ಲಿ 7800 ನೋಟಾ ಮತಗಳು ಚಲಾವಣೆಯಾಗಿದ್ದವು. ಕಳೆದ ಪಂಚಾಯತ್ ಚುನಾವಣೆಯಲ್ಲಿ 28 […]

ಜ. 26: “ಸಾಲ ಮೇಳದ ಸಂಗ್ರಾಮ” ಅನಾವರಣ

Tuesday, January 23rd, 2018
autobiography

ಮಂಗಳೂರು: ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗುವ ಸಾಧ್ಯತೆಯುಳ್ಳ, ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಆತ್ಮಕಥೆ “ಸಾಲ ಮೇಳದ ಸಂಗ್ರಾಮ’ ಜ. 26ರಂದು ಸಂಜೆ 5.30ಕ್ಕೆ ಕುದ್ರೋಳಿ ಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ಬಿಡುಗಡೆಗೊಳ್ಳಲಿದೆ. ಸೋಮವಾರ ಕುದ್ರೋಳಿ ಕ್ಷೇತ್ರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಬಿ. ಜನಾರ್ದನ ಪೂಜಾರಿ ಅವರು, ಪುಸ್ತಕ ಬಿಡುಗಡೆ ಮಾಡು ವಂತೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೋರಿ ಕೊಂಡಿದ್ದೆವು. ಆದರೆ […]