ಶಾ ಧಮ್ಕಿಗೆ ಹೆದರೋಕೆ ನಾವು ಕೈಗೆ ಬಳೆ ತೊಟ್ಟಿಲ್ಲ: ತನ್ವೀರ್ ಸೇಠ್ ಗುಡುಗು
Friday, January 26th, 2018ರಾಯಚೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಧಮ್ಕಿ ಹಾಕೋಕೆ ಬರುತ್ತಾರೆ. ಅವರ ಧಮ್ಕಿಗೆ ಯಾರು ಹೆದರುವವರಿಲ್ಲ. ಇಲ್ಲಿ ಯಾರು ಕೈಗೆ ಬಳೆ ಹಾಕಿಕೊಂಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ಸೇಠ್ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಭ್ರಷ್ಟಾಚಾರ ರಹಿತ ಆಡಳಿತವನ್ನು ಕಾಂಗ್ರೆಸ್ ನೀಡಿದೆ. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಮೇಲೆ ವಿನಾಕಾರಣ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ರಾಯಚೂರು ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರವಾಗಿ ನನಗೆ ಇನ್ನೂ ಯಾವುದೇ […]