Blog Archive

ಬಿಲ್ಲವರ ಬಗ್ಗೆ ಮಾತನಾಡುವ ನೈತಿಕತೆ ವಿನಯರಾಜ್‌ಗೆ ಇಲ್ಲ: ಹರಿಕೃಷ್ಣ ತಿರುಗೇಟು

Saturday, January 20th, 2018
harikrishna

ಮಂಗಳೂರು: ಬಿಲ್ಲವ ಸಮುದಾಯದ ಬಗ್ಗೆ ಮಾತನಾಡಲು ಬಿಲ್ಲವ ಸಂಘ ಇದೆ. ಹಾಗಿರುವಾಗ ಬಿಲ್ಲವರ ಬಗ್ಗೆ ಮಾತನಾಡಲು ನೀವು ಯಾರು, ನಿಮಗೆ ಯಾವ ನೈತಿಕತೆ ಇದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಸಿ. ವಿನಯರಾಜ್ ಅವರಿಗೆ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಷ್ಟು ಮಂದಿ ಬಿಲ್ಲವರಿಗೆ ಪದಾಧಿಕಾರಿಯಾಗಲು ಅವಕಾಶ ನೀಡಿದೆ ಎಂಬ ಬಗ್ಗೆ ದಾಖಲೆ ಬಿಡುಗಡೆ ಮಾಡಲಿ. ರಾಜ್ಯ ಬಿಜೆಪಿಯಲ್ಲಿ 12 ಮಂದಿ ಬಿಲ್ಲವ ಪದಾಧಿಕಾರಿಗಳಿದ್ದರೆ, ಕಾಂಗ್ರೆಸ್ ಕೇವಲ […]

ಸಾಧನೆ ಜನರಿಗೆ ತಿಳಿಸಿ ಕಾಂಗ್ರೆಸ್‌ ಗೆಲ್ಲಿಸಿ: ಶಾಸಕಿ ಶಕುಂತಳಾ ಶೆಟ್ಟಿ

Friday, January 19th, 2018
shankuntala-shetty

ಪುತ್ತೂರು: ವಿಧಾನಸಭಾ ಕ್ಷೇತ್ರವೊಂದರ ಅಭಿವೃದ್ಧಿಗೆ 800 ಕೋಟಿ ರೂ. ಅನುದಾನ ತರಿಸುವ ಸಾಧನೆ ಮಾಡಿದ್ದು, ಪಕ್ಷದ ನರ-ನಾಡಿಗಳನ್ನು ಅರಿತಿರುವ ಕಾರ್ಯಕರ್ತರು ಮುಂದಿನ ಬಾರಿಯೂ ಕಾಂಗ್ರೆಸ್‌ ಗೆಲುವಿಗೆ ತಮ್ಮ ಶ್ರಮವನ್ನು ತೋರ್ಪಡಿಸಬೇಕು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ವಿನಂತಿಸಿದರು. ಸುಭದ್ರಾ ಸಭಾಂಗಣದಲ್ಲಿ ಗುರುವಾರ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್‌ ವ್ಯಾಪ್ತಿಯ ಬೂತ್‌ ಪ್ರತಿನಿಧಿಗಳ ತರಬೇತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು. ರಾಜ್ಯ ಸರಕಾರದ ಸಾಧನಾ ಸಮಾವೇಶಕ್ಕೆ ಪುತ್ತೂರಿನಲ್ಲಿ ದಾಖಲೆಯ […]

ಕಾಂಗ್ರೆಸ್‌ ವಿರುದ್ಧ ಸೆಣಸಲು ಅಭ್ಯರ್ಥಿ ಹುಡುಕುತ್ತಿದೆ ಬಿಜೆಪಿ

Friday, January 19th, 2018
udupi

ಉಡುಪಿ: ಶ್ರೀ ಕೃಷ್ಣನ ನಾಡು ಉಡುಪಿಯಲ್ಲಿ ರಾಜಕೀಯ ಲೆಕ್ಕಾಚಾರ ಬಿರುಸುಗೊಂಡಿದೆ. ಉಡುಪಿಯಲ್ಲಿ ಪರ್ಯಾಯ ಮಹೋತ್ಸವದ ಸಂಭ್ರಮ ಒಂದೆಡೆಯಾದರೆ ಇನ್ನೊಂದೆಡೆ ರಾಜಕೀಯ ಪಕ್ಷಗಳು ಚುನಾವಣಾ ಅಖಾಡಕ್ಕಿಳಿಯಲು ಸಜ್ಜಾಗುತ್ತಿವೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ಯಾರು ಎಂಬ ಲೆಕ್ಕಾಚಾರ ಬಿರುಸಿನಿಂದ ಸಾಗಿದೆ. ಉಡುಪಿ ರಾಜಕೀಯಕ್ಕೆ ತನ್ನದೇ ಆದ ಇತಿಹಾಸವಿದೆ. ವಿ.ಎಸ್. ಆಚಾರ್ಯ, ಯು.ಆರ್. ಸಭಾಪತಿ , ಮನೋರಮಾ ಮಧ್ವರಾಜ್ ಯಂತಹ ಘಟಾನುಘಟಿ ರಾಜಕಾರಣಿಗಳು ಈ ಜಿಲ್ಲೆಯಿಂದ ಗೆದ್ದು ಇತಿಹಾಸ […]

ಕಾಂಗ್ರೆಸ್‌ v/s ಬಿಜೆಪಿ ನೇರ ಹಣಾಹಣಿ

Wednesday, January 17th, 2018
j-r-lobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಕುತೂಹಲ ಕೆರೆಳಿಸಿರುವ ಕ್ಷೇತ್ರ ಮಂಗಳೂರು ದಕ್ಷಿಣ. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇಲ್ಲಿ ನೇರಾನೇರ ಸ್ಪರ್ಧೆ. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್‌ನ ಜೆ.ಆರ್.ಲೋಬೋ. ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ಕ್ಷೇತ್ರದ ಟಿಕೆಟ್‌ಗೆ ಪ್ರಯತ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು ಅವರಾದರೂ ಜೆ.ಆರ್.ಲೋಬೋಗೆ ಟಿಕೆಟ್ ನಿರಾಕರಿಸಲು ಕಾರಣಗಳು ಇಲ್ಲ. ಬಿಜೆಪಿ ಕ್ಷೇತ್ರದಿಂದ ಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂಬುದು ಸದ್ಯದ ಸುದ್ದಿ. ಉದ್ಯಮಿಗಳಾದ […]

ನಾವು ಪಾಂಡವರು, ಬಿಜೆಪಿಯವರು ಕೌರವರು: ಸಿದ್ದರಾಮಯ್ಯ

Tuesday, January 16th, 2018
yedeyorappa

ಬೆಂಗಳೂರು: ಸರಿಯಾದ ದಾರಿಯಲ್ಲಿ ನಡೆಯುತ್ತಿರುವ ನಾವು ಪಾಂಡವರು, ಬಿಜೆಪಿಯವರು ಕೌರವರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚುನಾವಣೆ ಯುದ್ಧವಿದ್ದಂತೆ, ಸರಿಯಾದ ದಾರಿಯಲ್ಲಿ ನಡೆಯುತ್ತಿರುವ ನಾವು ಪಾಂಡವರು, ತಪ್ಪು ಹಾದಿಯಲ್ಲಿ ನಡೆಯುತ್ತಿರುವ ಬಿಜೆಪಿಯವರು ಕೌರವರು ಎಂದು ಅವರು ಪಕ್ಷದ ಸದಸ್ಯರನ್ನು ಮಹಾಭಾರತ ಪಾತ್ರಗಳಿಗೆ ಹೋಲಿಸಿದರು. ಯಡಿಯೂರಪ್ಪ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗೋವಾ ನೀರಾವರಿ ಸಚಿವರು ಕರ್ನಾಟಕದ ಬಗ್ಗೆ ಮಾತನಾಡಿದ ಹೇಳಿಕೆ ವಿರುದ್ಧ ಹರಿಹಾಯ್ದರು. “ಆತನ ಭಾಷೆ ಆತನ […]

ಕಾಂಗ್ರೆಸ್‌ ಹಾಲಿ ಶಾಸಕರು ನಿರಾಳ, ಆಕಾಂಕ್ಷಿಗಳ ತಳಮಳ

Tuesday, January 16th, 2018
congress

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿನ ಹಾಲಿ ಶಾಸಕರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಖಾತ್ರಿ ಬಗ್ಗೆ ನೀಡುತ್ತಿರುವ ಅಭಯ ಕಾಂಗ್ರೆಸ್‌ ಶಾಸಕರಲ್ಲಿ ನಿರಾಳ ಭಾವ ಮೂಡಿಸಿದೆ. ಇನ್ನೊಂದೆಡೆ ಟಿಕೇಟು ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುತ್ತಿರುವ 10 ವಿಧಾನ ಸಭಾ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಜ. 7 ಹಾಗೂ 8ರಂದು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ […]

ಯಾರಿಗೆ ಸಿಗುತ್ತೆ ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್?

Monday, January 15th, 2018
abhay-chandra

ಮಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಭಾರೀ ಕುತೂಹಲ ಕೆರಳಿಸಿದ ಕ್ಷೇತ್ರ ಮುಲ್ಕಿ ಮೂಡಬಿದರೆ ವಿಧಾನ ಸಭಾ ಕ್ಷೇತ್ರ. ಭಾರಿ ನಿರೀಕ್ಷೆಯ ಕ್ಷೇತ್ರವಾದ ಮುಲ್ಕಿ- ಮೂಡಬಿದಿರೆಗೆ ಈ ಭಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರು ಎನ್ನುವುದು ಕುತೂಹಲ ಹಾಗೂ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಕ್ಷೇತ್ರದಿಂದ ಕಳೆದ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಭಯಚಂದ್ರ ಜೈನ್ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನುವ ಸುಳಿವು ಈ ಹಿಂದೆಯೇ ನೀಡಿದ್ದರು. ಈ ಬಾರಿ ಕ್ಷೇತ್ರ ದಿಂದ […]

ನಾಳೆಯಿಂದ ಎರಡು ದಿನ ಕರಾವಳಿಯಲ್ಲಿ ಸಿಎಂ

Saturday, January 6th, 2018
siddaramiah

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಜ.7ರಿಂದ 2 ದಿನ ದ. ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, 200ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈ ಭಾಗದಲ್ಲಿ ಮುಖ್ಯಮಂತ್ರಿಗಳ ಮಹತ್ವದ ಪ್ರವಾಸ ಇದು. ದಕ್ಷಿಣ ಕನ್ನಡ ಕಾರ್ಯಕ್ರಮ: ಪುತ್ತೂರು, ಬಂಟ್ವಾಳ ಹಾಗೂ ಮೂಡ ಬಿದಿರೆ ವಿ.ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 200 ಕೋ. ರೂ. ವೆಚ್ಚದ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ಮಾಡಲಿದ್ದಾರೆ. ಪುತ್ತೂರು ವಿ. ಸಭಾ […]

ಪೂಜಾರಿ ಆತ್ಮಚರಿತ್ರೆ ಬಿಡುಗಡೆಗೆ ಸಿದ್ಧ, ರಾಜ್ಯ ರಾಜಕಾರಣದಲ್ಲಿ ತಳಮಳ

Friday, January 5th, 2018
janardhan-poojary

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಒಂದೆಡೆ ಬಿಜೆಪಿ ಪರಿರ್ವತನಾ ಯಾತ್ರೆ ಆರಂಭಿಸಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ. ಇವೆಲ್ಲದರ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ ಈಗ ಭಾರೀ ತಳಮಳ ಆರಂಭವಾಗಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ. ನೇರ, ನಿಷ್ಠುರ ಮಾತುಗಳ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಗುರುತಿಸಿ ಕೊಂಡಿರುವ ಬಿ. ಜನಾರ್ಧನ ಪೂಜಾರಿ ಅವರ ಆತ್ಮಚರಿತ್ರೆ ಬಿಡುಗಡೆಗೆ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ […]

‘ಕಾಂಗ್ರೆಸ್‌ನಿಂದ ದೇವಸ್ಥಾನ ರಾಜಕೀಯ’

Tuesday, January 2nd, 2018
Rahul-gandhi

ಮಂಗಳೂರು: ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ದೃಷ್ಟಿಯಿಂದ ಹಿಂದೂ ದೇವರ ಮೇಲೆ ವಿಪರೀತ ನಂಬಿಕೆ ಇರುವಂತೆ ನಟಿಸುತ್ತಿದ್ದು, ಚುನಾವಣೆಗಾಗಿ ಗುಜರಾತಿನಲ್ಲಿ ರಾಹುಲ್ ಗಾಂಧಿ ದೇವಸ್ಥಾನಗಳಿಗೆ ಭೇಟಿ ನೀಡುವ ಗಿಮಿಕ್ ರಾಜಕೀಯ ರಾಜ್ಯದಲ್ಲೂ, ಅದರಲ್ಲೂ ಮಂಗಳೂರು ಕ್ಷೇತ್ರದಲ್ಲೂ ನಡೆಯುತ್ತಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಾಯಣ, ಮಹಾಭಾರತ ಎಂಬುದು ನಡೆದೇ ಇಲ್ಲ, ರಾಮಸೇತು ಕಾಲ್ಪನಿಕ ಎಂದವರು, ಪರಮ ಪಾವನ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಕೋಳಿ, […]