Blog Archive

ನಾವು ಪಾಂಡವರು, ಬಿಜೆಪಿಯವರು ಕೌರವರು: ಸಿದ್ದರಾಮಯ್ಯ

Tuesday, January 16th, 2018
yedeyorappa

ಬೆಂಗಳೂರು: ಸರಿಯಾದ ದಾರಿಯಲ್ಲಿ ನಡೆಯುತ್ತಿರುವ ನಾವು ಪಾಂಡವರು, ಬಿಜೆಪಿಯವರು ಕೌರವರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚುನಾವಣೆ ಯುದ್ಧವಿದ್ದಂತೆ, ಸರಿಯಾದ ದಾರಿಯಲ್ಲಿ ನಡೆಯುತ್ತಿರುವ ನಾವು ಪಾಂಡವರು, ತಪ್ಪು ಹಾದಿಯಲ್ಲಿ ನಡೆಯುತ್ತಿರುವ ಬಿಜೆಪಿಯವರು ಕೌರವರು ಎಂದು ಅವರು ಪಕ್ಷದ ಸದಸ್ಯರನ್ನು ಮಹಾಭಾರತ ಪಾತ್ರಗಳಿಗೆ ಹೋಲಿಸಿದರು. ಯಡಿಯೂರಪ್ಪ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗೋವಾ ನೀರಾವರಿ ಸಚಿವರು ಕರ್ನಾಟಕದ ಬಗ್ಗೆ ಮಾತನಾಡಿದ ಹೇಳಿಕೆ ವಿರುದ್ಧ ಹರಿಹಾಯ್ದರು. “ಆತನ ಭಾಷೆ ಆತನ […]

ಬಿಜೆಪಿಗೆ ತಾಕತ್ತಿದ್ದರೆ ದ.ಕ. ಜಿಲ್ಲೆಯಲ್ಲಿ ಬಿಲ್ಲವರಿಗೆ ಟಿಕೆಟ್‌‌‌ ನೀಡಲಿ: ಸಚಿವ ರೈ ಸವಾಲು

Tuesday, January 16th, 2018
congress-samithi

ಮಂಗಳೂರು: ಪಕ್ಷದ ಪ್ರಚಾರ ಸಭೆಯ ಬ್ಯಾನರ್‌ಗಳಲ್ಲಿ ದೇವರ ಭಾವಚಿತ್ರ ಹಾಕಿ ಬಿಲ್ಲವ ಸಮುದಾಯಕ್ಕೆ ಅವಮಾನ ಮಾಡುವ ಬದಲು ಬಿಜೆಪಿಗೆ ತಾಕತ್ತಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಲ್ಲವರಿಗೆ ಟಿಕೆಟ್ ನೀಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸವಾಲು ಹಾಕಿದ್ದಾರೆ. ಭಾರತೀಯ ಜನತಾ ಪಕ್ಷದ ಪ್ರಚಾರ ಸಭೆ ಬ್ಯಾನರ್‌ಗಳಲ್ಲಿ ದೈವ-ದೇವರ ಭಾವಚಿತ್ರ ಹಾಕಿಕೊಂಡು ಅವಮಾನ ಮಾಡಲಾಗಿದೆ ಎಂದು ಆಕ್ಷೇಪಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ […]

ಕನ್ನಡಿಗರ ಬಗ್ಗೆ ಅವಾಚ್ಯ ಪದ ಬಳಕೆ: ಗೋವಾ ಸಚಿವನ ವಿರುದ್ಧ ಬಿಜೆಪಿ ನಾಯಕರು ಗರಂ

Monday, January 15th, 2018
pratap-simha

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಗೋವಾ ಜಲಸಂಪನ್ಮೂಲ ಸಚಿವ ವಿನೋದ್‌ ಪಾಲೇಕರ್‌‌ ಕನ್ನಡಿಗರ ಬಗ್ಗೆ ಅವಾಚ್ಯ ಪದ ಬಳಕೆಯನ್ನು ರಾಜ್ಯ ಬಿಜೆಪಿ ಮುಖಂಡರು ಖಂಡಿಸಿದ್ದಾರೆ. ಗೋವಾ ಸಚಿವ ವಿನೋದ್‌ ಪಾಲೇಕರ್‌‌ ಬೆಳಗಾವಿ ಜಿಲ್ಲೆಯ ಕಣಕುಂಬಿಗೆ ಭೇಟಿ ನೀಡಿದ ಬಳಿಕ ‘ಕನ್ನಡಿಗರು ಹರಾಮಿಗರು’ ಎಂದು ಉದ್ಧತಟನದ ಹೇಳಿಕೆ ಕೊಟ್ಟಿದ್ದರು. ಪಾಲೇಕರ್‌‌ ಹೇಳಿಕೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಸಂಸದ ಪ್ರತಾಪ್‌ ಸಿಂಹ ಕೂಡ ಗೋವಾ ಸಚಿವ […]

ಸಿದ್ದರಾಮಯ್ಯ ‘ಉಗ್ರ’ ಹೇಳಿಕೆಗೆ ವಿಎಚ್‌ಪಿ, ಬಜರಂಗದಳ ತೀವ್ರ ವಿರೋಧ

Monday, January 15th, 2018
bajarngdal

ಮಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್ ನವರು ಉಗ್ರರು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ತೀವ್ರ ಖಂಡನೆ ವ್ಯಕ್ತಪಡಿಸಿವೆ. ಈ ಕುರಿತು ಶುಕ್ರವಾರ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿ.ಎಚ್.ಪಿ ಪ್ರಾಂತ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್, “ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಈ ರೀತಿಯ ಹೇಳಿಕೆ ನೀಡುವುದು ಖಂಡನೀಯ,” ಎಂದು ಹೇಳಿದರು. “ಈ ಕೂಡಲೇ ಮುಖ್ಯಮಂತ್ರಿ ಅವರು ಬಹಿರಂಗ ಕ್ಷಮೆ ಕೇಳಿ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು,” ಎಂದು ಅವರು ಆಗ್ರಹಿಸಿದರು. ‘ಬಿಜೆಪಿ, ಆರ್ ಎಸ್ ಎಸ್, […]

ಜೈಲ್‌ ಭರೋ ಜಪ: ಇಂದು ರಾಜ್ಯಾದ್ಯಂತ ಪ್ರತಿಭಟನೆ

Friday, January 12th, 2018
shobha-karandlaje

ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಂಘಟನೆಯನ್ನು ಉಗ್ರಗಾಮಿಗಳಿಗೆ ಹೋಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿರುದ್ಧ ರಾಜ್ಯ ಬಿಜೆಪಿ ಶುಕ್ರವಾರ “ನಾವು ಬಿಜೆಪಿ, ನಾವು ಆರ್‌ಎಸ್‌ಎಸ್‌- ತಕ್ಷಣ ನಮ್ಮನ್ನು ಬಂಧಿಸಿ ಜೈಲಲ್ಲಿಡಿ’ ಎಂಬ ಘೋಷಣೆಯೊಂದಿಗೆ ಜೈಲ್‌ ಭರೋ ಹೋರಾಟಕ್ಕೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದಿನೇಶ್‌ ಗುಂಡೂರಾವ್‌ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ನಾವು ಬಿಜೆಪಿ, ನಾವು ಆರ್‌ಎಸ್‌ಎಸ್‌, ತಕ್ಷಣ ನನ್ನನ್ನು ಬಂಧಿಸಿ ಜೈಲಿನಲ್ಲಿಡಿ ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ಶುಕ್ರವಾರ ಹಾಗೂ ಬೆಂಗಳೂರಿನಲ್ಲಿ […]

ಬಿಜೆಪಿ ಒಂದು ಡ್ರಾಮಾ ಕಂಪನಿ…ಮೋದಿ ಅದರ ಮಾಲೀಕ, ಶಾ ಮ್ಯಾನೇಜರ್‌

Friday, January 12th, 2018
narendra-modi

ಮಂಗಳೂರು: ಬಿಜೆಪಿಯೊಂದು ಡ್ರಾಮಾ ಕಂಪನಿ. ನರೇಂದ್ರ ಮೋದಿ ಅದರ ಮಾಲೀಕರಾದರೆ, ಅಮಿತ್ ಶಾ ಮ್ಯಾನೇಜರ್ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಟೇಕಿಸಿದ್ದಾರೆ. ನಗರದ ಶಕ್ತಿನಗರದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಸತಿ ಸಂಕೀರ್ಣಕ್ಕೆ ಕಟ್ಟಡ ನಿರ್ಮಾಣ ಶಿಲಾನ್ಯಾಸ, ಫಲಕ ಅನಾವರಣಗೊಳಿಸಿದ ಬಳಿಕ ಮಾತನಾಡಿದರು. ಈಸ್ಟ್ ಇಂಡಿಯಾ ಕಂಪನಿ ಕೂಡಾ ದೇಶವನ್ನು ಇದೇ ರೀತಿ ಕೊಳ್ಳೆ ಹೊಡೆದಿತ್ತು. ಬಿಜೆಪಿಯವರು ಹಣ ನೀಡಿ ಮತದಾರರನ್ನು ಖರೀದಿಸುವ ಭ್ರಮೆಯಲ್ಲಿದ್ದಾರೆ. ಆದರೆ, ಕರ್ನಾಟಕದ ಮತದಾರರು ಸ್ವಾಭಿಮಾನಿಗಳು. ಬಿಜೆಪಿ ನಾಟಕ ಇಲ್ಲಿ ನಡೆಯಲ್ಲ. ಇದನ್ನು ಪ್ರಧಾನಿ ಮೋದಿ […]

ಎಡಿಬಿ:ಲೋಕಾಯುಕ್ತ ತನಿಖೆಗೆ ಆಗ್ರಹ

Friday, January 12th, 2018
mangaluru

ಮಂಗಳೂರು: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಡಿಬಿ ಮೊದಲ ಹಂತದ ಯೋಜನೆಯಲ್ಲಿ ಕುಡ್ಸೆಂಪ್ ಕೈಗೊಂಡ ಒಳಚರಂಡಿ, ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿ ಕಳಪೆಯಾಗಿದ್ದು, ಬಹುತೇಕ ಕಡೆ ಉಪಯೋಗವಿಲ್ಲದಾಗಿದೆ. ಕಾಮಗಾರಿ ಪೂರ್ಣಗೊಳ್ಳದೆ ಹಸ್ತಾಂತರ ನಡೆಸುವ ಮೂಲಕ ವ್ಯಾಪಕ ಭ್ರಷ್ಟಾಚಾರ ಎಸಗಲಾಗಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಒತ್ತಾಯಿಸಿದ್ದಾರೆ. ಸುರತ್ಕಲ್ ಮದ್ಯ ಮಾಧವ ನಗರದ ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕ, ಪಡೀಲ್ ಮತ್ತು ಬಜಾಲ್‌ ರೇಚಕ ಸ್ಥಾವರಗಳಿಗೆ ಭೇಟಿ ನೀಡಿ […]

ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ

Friday, January 12th, 2018
yedeyorrappa

ತುಮಕೂರು: ಮುಂದಿನ ಚುನಾವಣೆಯಲ್ಲಿ ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪೊಲೀಸರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡಿದರೆ ನಿಮ್ಮ ಪರಿಸ್ಥಿತಿ ಸರಿ ಇರುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನು ಅವರು ಎಚ್ಚರಿಸಿದ್ದಾರೆ. ಜನ ಚಪ್ಪಾಳೆ ತಟ್ಟಿದ್ದು ಏಕೆ? ಸಿದ್ದರಾಮಯ್ಯಗೆ ಬಿಎಸ್‌ವೈ ಟ್ವೀಟ್ ಬಾಣ ಗುರುವಾರ ತುಮಕೂರಿನ ಶಿರಾದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, “ಮೂರು ನಾಲ್ಕು ತಿಂಗಳ ನಂತರ ನಾನು ಮುಖ್ಯಮಂತ್ರಿಯಾಗಿ ಬರುತ್ತೇನೆ ಎಂಬುದನ್ನು ನಾನು […]

ಬಿಜೆಪಿ, ಆರ್ ಎಸ್ಎಸ್ ನವರೇ ಒಂಥರ ಉಗ್ರಗಾಮಿಗಳು: ಸಿಎಂ

Wednesday, January 10th, 2018
chamarajanagar

ಚಾಮರಾಜನಗರ: ಬಿಜೆಪಿ, ಬಜರಂಗದಳ, ಆರೆಸ್ಸೆಸ್ಸನವರೇ ಒಂಥರ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತೀವ್ರ ವಾಗ್ದಾಳಿ ನಡೆಸುವ ಮೂಲಕ ವಿವಾದದ ಕಿಡಿಹೊತ್ತಿಸಿದ್ದಾರೆ. ಚಾಮರಾಜನಗರದ ನಾಗವಳ್ಳಿ ಹೆಲಿಪ್ಯಾಡ್ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಸರಿ ಪಡೆ ನಾಯಕರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಪ್ರತಿಕ್ರಿಯೆ ನೀಡಿರುವುದಾಗಿ ಖಾಸಗಿ ವಾಹಿನಿಗಳು ವರದಿ ಮಾಡಿವೆ. ಆರ್ ಎಸ್ಎಸ್ ಆಗಲಿ, ಪಿಎಫ್ಐ ಆಗಲಿ ಯಾವುದೇ ಸಂಘಟನೆಯಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು. ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಿಬಿಐ ಜಾರ್ಜ್ […]

ಕೇಂದ್ರದ ಅನುದಾನವನ್ನು ಸಿದ್ದರಾಮಯ್ಯ ನುಂಗಿದ್ದಾರೆ: ಅಮಿತ್ ಶಾ

Wednesday, January 10th, 2018
Amit-shah

ಚಿತ್ರದುರ್ಗ: ಕೇಂದ್ರದ ಮೋದಿ ಸರ್ಕಾರ ನೀಡಿದ ಅನುದಾನವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ಕೋಟೆ ನಾಡು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಆಯೋಜನೆಗೊಂಡಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ಕರ್ನಾಟಕಕ್ಕೆ 2.19 ಲಕ್ಷ ಕೋಟಿ ರೂಪಾಯಿ ಅನುದಾನ ಬಂದಿದೆ ಆದರೆ ಸಿದ್ದರಾಮಯ್ಯ ಆ ಅನುದಾನವನ್ನು ದುರಪಯೋಗ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರು ಕೇಂದ್ರದ ಲೆಕ್ಕ ಕೇಳುತ್ತಾರೆ, ನಾನಿಂದು ಬಂದಿರುವುದು ಅದೇ ಲೆಕ್ಕ ಹೇಳಲು ಎಂದ […]