Blog Archive

ಆಳ್ವಾಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ 2018

Friday, December 21st, 2018
christmas

ಮೂಡುಬಿದಿರೆ: ದ್ವೆಷ ಮತ್ತು ಧರ್ಮ ಹೀಗೆ ವಿಭಜಿಸುವ ಗೋಡೆಗಳನ್ನು ಕಿತ್ತೆಸೆದು ಮಾನವೀಯತೆ ಬೆಸೆಯುವ, ಬಂಧುತ್ವವನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಬಂಧುತ್ವ ಎನ್ನುವುದು ಜಾತಿ, ಮತ ಧರ್ಮದ ಎಲ್ಲೆ ಮೀರಿದ ಸಂಬಂಧವಾಗಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಪೀಟರ್ ಪಾವ್ಲ್ ಸಲ್ದಾನ್ಹ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗುರುವಾರ ಸಾಯಂಕಾಲ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ `ಆಳ್ವಾಸ್ ಕ್ರಿಸ್ಮಸ್ ಸಂಭ್ರಮ ೨೦೧೮’ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ನಾವೆಲ್ಲರೂ ಆತ್ಮ ಸಾಕ್ಷಿಗೆ ಸ್ಪಂದಿಸಿ ಒಳಿತನ್ನುಂಟು ಮಾಡುವ ಮತ್ತು ಆ […]

ಅಖಿಲ ಭಾರತ ಅಂತರ್ ವಿವಿ ಭಾರ ಎತ್ತುವ ಸ್ಪರ್ಧೆ: ಆಳ್ವಾಸ್‍ನ ಭವಿಷ್ಯ ಪೂಜಾರಿಗೆ ಬೆಳ್ಳಿ!

Saturday, December 8th, 2018
gold-medal

ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಭವಿಷ್ಯ ಪೂಜಾರಿ ಬೆಳ್ಳಿ ಪದಕ ಹಾಗೂ ಲಾವಣ್ಯ ರೈ ಕಂಚಿನ ಪದಕ ಪಡೆದಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದಲ್ಲಿ ನಡೆದ ಸ್ಪರ್ಧೆಯಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿಗಳಾದ ಇವರಿಬ್ಬರು ಮಂಗಳೂರು ವಿವಿಯನ್ನು ಪ್ರತಿನಿಧಿಸಿ ಪದಕ ಗೆದ್ದಿದ್ದಾರೆ. ಭವಿಷ್ಯ ಪೂಜಾರಿ ಮಂಗಳೂರು ತಾಲೂಕಿನ ಮೂಡುಶೆಡ್ಡೆ ಶಿವನಗರದ ಪ್ರೇಮಾ-ನವೀನ್ ಪೂಜಾರಿ ದಂಪತಿಯ ಪುತ್ರಿ. ಲಾವಣ್ಯ ರೈ ಅರಂಗೋಡು ಜಲಜಾಕ್ಷಿ ರೈ ಹಾಗೂ ರತ್ನಾಕರ ರೈ ದಂಪತಿಯ […]

ಆಳ್ವಾಸ್‌ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ

Thursday, November 22nd, 2018
Alvas-Yoga

ಮೂಡುಬಿದಿರೆ: ಪ್ರಕೃತಿ ಚಿಕಿತ್ಸಾ ಸಪ್ತಾಹದ ಅಂಗವಾಗಿ ಸಾಮೂಹಿಕ ಯೋಗಾಭ್ಯಾಸವನ್ನು ಗುರುವಾರ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಲಾಯಿತು. ಆಳ್ವಾಸ್ ಆನಂದಮಯ ಆರೋಗ್ಯಧಾಮದ ಸುಂದರ ಪ್ರಕೃತಿಯ ನಡುವೆ ಶಿಸ್ತು ಬದ್ಧವಾಗಿ ಸುಮಾರು 400 ರಷ್ಟು ವಿದ್ಯಾರ್ಥಿಗಳು ಯೋಗದ ಅಭ್ಯಾಸವನ್ನು ಕೈಗೊಂಡರು. ಭಾರತ ಪರಿಸರ ಸಚಿವಾಲಯದ ಸಲಹೆಗಾರ ಡಾ. ಆನಂದಿ ಸುಬ್ರಮಣ್ಯನ್ ಮುಖ್ಯ ಅತಿಥಿ ಭಾಗವಹಿಸಿದ್ದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ, ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ, ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ ಉಪಸ್ಥಿತರಿದ್ದರು. […]

ಆಳ್ವಾಸ್ ನ ಸುಮಾರು 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲಾ ವೈಭವ

Sunday, November 18th, 2018
ಆಳ್ವಾಸ್ ನ ಸುಮಾರು 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲಾ ವೈಭವ

ಆಳ್ವಾಸ್‌ ವಿದ್ಯಾರ್ಥಿ ಸಿರಿ-2018 ವಿದ್ಯಾರ್ಥಿ ಸಾಹಿತ್ಯ- ಸಂಸ್ಕೃತಿ ಸಮ್ಮೇಳನ ಉದ್ಘಾಟನೆ

Friday, November 16th, 2018
vidyasiri

ಮೂಡಬಿದಿರೆ: ಆತ್ಮವಿಶ್ವಾಸದೊಂದಿಗೆ ಸ್ವಂತಿಕೆಯನ್ನು ಅರಳಿಕೊಳ್ಳುವುದರಷ್ಟೇ ಮುಖ್ಯ ಸಾಂಘಿಕ ಪ್ರಜ್ಞೆಯೊಂದಿಗೆ ಬದುಕಲು ಕಲಿಯು ವುದು ಎಂದು ನಟಿ, ನಿರ್ದೇಶಕಿ ವಿನಯಾ ಪ್ರಸಾದ್‌ ಹೇಳಿದರು. ವಿದ್ಯಾಗಿರಿಯಲ್ಲಿ ಗುರುವಾರ “ಆಳ್ವಾಸ್‌ ವಿದ್ಯಾರ್ಥಿ ಸಿರಿ-2018′ ವಿದ್ಯಾರ್ಥಿ ಸಾಹಿತ್ಯ- ಸಂಸ್ಕೃತಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊರತೆಗಳಿವೆ ಎಂದು ಕೊರಗುವುದರಲ್ಲಿ ಅರ್ಥವಿಲ್ಲ; ಅವುಗಳ ನಡುವೆ ಸಂತೃಪ್ತ ಜೀವನ ನಡೆಸಲು ಸಮರ್ಥರಾದಾಗ ಬದುಕು ಸಾರ್ಥಕ ಎಂದು ಕಿವಿಮಾತು ಹೇಳಿದರು. ಬಣ್ಣ, ರೂಪ, ಬುದ್ಧಿವಂತಿಕೆಗಳ ನೆಲೆಗಟ್ಟಿನ ತಾರತಮ್ಯ ಭಾವ ಸಲ್ಲದು. ಮನೆಯ ಎಲ್ಲ ಕೆಲಸಗಳಲ್ಲೂ ಇದ್ದೇನೆ ಎಂದು […]

ಆಳ್ವಾಸ್ ಚಿತ್ರಸಿರಿ ವ್ಯಂಗ್ಯಚಿತ್ರಸಿರಿ, ಛಾಯಾಚಿತ್ರಸಿರಿ ಪ್ರಶಸ್ತಿ ಪ್ರದಾನ

Wednesday, November 14th, 2018
alwas

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ 2018 ಅಂಗವಾಗಿ ನಡೆದ 2018ರ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ಹಾಗೂ ವ್ಯಂಗ್ಯಚಿತ್ರಸಿರಿ ರಾಜ್ಯಮಟ್ಟದ ಕಲಾಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ವಿದ್ಯಾಗಿರಿ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಹಿರಿಯ ಚಿತ್ರಕಲಾವಿದ ಗಣೇಶ್ ಸೋಮಯಾಜಿ ಅವರಿಗೆ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿ, ಹಿರಿಯ ಛಾಯಾಚಿತ್ರ ಕಲಾವಿದ ಎಸ್.ತಿಪ್ಪೇಸ್ವಾಮಿ ಮೈಸೂರು ಅವರಿಗೆ ಆಳ್ವಾಸ್ ಛಾಯಾಚಿತ್ರಸಿರಿ 2018 ಪ್ರಶಸ್ತಿ ಹಾಗೂ ಹಿರಿಯ ವ್ಯಂಗ್ಯಚಿತ್ರಕಾರ ಕೆ.ಆರ್ ಸ್ವಾಮಿ ಅವರಿಗೆ ಅಳ್ವಾಸ್ ವ್ಯಂಗ್ಯಚಿತ್ರಸಿರಿ […]

ಯೋಗಾಸನ ಸ್ಪರ್ಧೆ: ಆಳ್ವಾಸ್‍ನ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Monday, October 22nd, 2018
alwas-clg

ಮೂಡುಬಿದಿರೆ: ಕಾರ್ಕಳದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಸಮಗ್ರ ಪ್ರಶಸ್ತಿ ಅದರಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕನ್ನಡ ಮಾಧ್ಯಮ ಐವರು ವಿದ್ಯಾರ್ಥಿಗಳು ಎಲ್ಲ ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸಿ, ನವೆಂಬರ್‍ನಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 14ರ ವಯೋಮಿತಿಯ ಬಾಲಕರ ವಿಭಾಗದ ಗುಂಪು ಯೋಗದಲ್ಲಿ ಆಳ್ವಾಸ್‍ನ ಸಂಜು ಮುತ್ತಪ್ಪ , 17ರ ವಯೋಮಿಯ ಬಾಲಕರ ವಿಭಾಗದಲ್ಲಿ ಅಥ್ಲೇಟಿಕ್ ಯೋಗದಲ್ಲಿ ಮಿಲನ್ ಲೋಕೇಶ್ , ರಿದೇಮಿಕ್ ಯೋಗಾ ಪವನ್ […]

ಮಂಗಳೂರು ವಿ.ವಿ ಕ್ರೀಡಾ ಕೂಟ: ಆಳ್ವಾಸ್ ಚಾಂಪಿಯನ್

Thursday, October 11th, 2018
alwas-clg

ಮೂಡುಬಿದಿರೆ: 38ನೇ ಮಂಗಳೂರು ವಿವಿ ಅಂತರ್‍ಕಾಲೇಜು ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು 44 ಚಿನ್ನ, 29 ಬೆಳ್ಳಿ ಹಾಗೂ 6 ಕಂಚಿನ ಪದಕ ಸಹಿತ ಒಟ್ಟು 79 ಪದಕಗಳನ್ನು ಗಳಿಸುವುದರೊಂದಿಗೆ 533 ಅಂಕಗಳನ್ನು ಪಡೆದು ಸತತ 17ನೇ ಬಾರಿಗೆ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಪುರುಷರ ವಿಭಾಗದಲ್ಲಿ 269 ಅಂಕಗಳಿಸಿದ ಆಳ್ವಾಸ್ ಕಾಲೇಜು ಪುರುಷರ ತಂಡ ಪ್ರಶಸ್ತಿಯನ್ನು ಗಳಿಸಿ ಸೈಂಟ್ ಫಿಲೋಮಿನಾ ಕಾಲೇಜು ಎಸೋಸಿಯೇಷನ್ ಫಲಕವನ್ನು ಪಡೆದುಕೊಂಡಿದೆ. ಮಹಿಳೆಯರ ವಿಭಾಗದಲ್ಲಿ 264 ಅಂಕಗಳನ್ನು ಗಳಿಸಿದ ಆಳ್ವಾಸ್ ಕಾಲೇಜು ತಂಡ ಮಹಿಳಾ […]

‘ಆಳ್ವಾಸ್’ ನಲ್ಲಿ ಸ್ನೇಹ ಕೂಟ ಕಾರ್ಯಕ್ರಮ

Wednesday, October 3rd, 2018
alwasclg

ಮೂಡಬಿದಿರೆ: ಕಾಲೇಜಿನ ಬೆಳವಣಿಗೆಯಲ್ಲಿ ಉಪನ್ಯಾಸಕರ ಪಾತ್ರ ಪ್ರಮುಖವಾಗಿದ್ದು, ಹೊಸ ಯೋಜನೆಗಳನ್ನು ನಿಭಾಯಿಸುವಲ್ಲಿ ಜವಾಬ್ದಾರಿಯುತ ನಡೆ ಅಗತ್ಯ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಅವರು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ “ಸ್ನೇಹ ಕೂಟ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿಯ ವ್ಯಕ್ತಿತ್ವ ತಿಳಿದುಕೊಳ್ಳಲು ಪ್ರತಿಭೆಗಳು ಸಹಕಾರಿಯಾಗಿವೆ. ವರ್ಷವಿಡೀ ವಿದ್ಯಾರ್ಥಿಗಳಿಗೆ ಕಲಿಸುತ್ತಾ, ವೃತ್ತಿನಿರತರಾದ ಉಪನ್ಯಾಸಕರಿಗೆ ತಮ್ಮಲ್ಲಿದ್ದ ಪ್ರತಿಭೆಗಳನ್ನು ಹೊರಹಾಕಲು ಹಾಗೂ ಆತ್ಮೀಯತೆಯಿಂದ ಒಬ್ಬರನ್ನೊಬ್ಬರು ಬೆರೆಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. […]

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಆಳ್ವಾಸ್‍ಗೆ ಅವಳಿ ಪ್ರಶಸ್ತಿ

Saturday, September 29th, 2018
ko-ko-alwas

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ಮಂಗಳೂರು ಹಾಗೂ ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಖೋ ಖೋ ಪಂದ್ಯಾಟದಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಆಳ್ವಾಸ್ ಬಾಲಕರ ತಂಡ ಶ್ರೀ ದುರ್ಗಾಪರಮೇಶ್ವರಿ ಪಿ.ಯು. ಕಾಲೇಜು, ಕಟೀಲು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು. ಆಳ್ವಾಸ್ ಬಾಲಕಿಯರ ತಂಡ ಪರಿಜ್ಞಾನ ಪಿ.ಯು. ಕಾಲೇಜು, ಸೋಮೇಶ್ವರ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆದುಕೊಂಡಿತು.