Blog Archive

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ- 83, ಉಡುಪಿ ಜಿಲ್ಲೆ- 28, ಕಾಸರಗೋಡು – 13

Tuesday, July 7th, 2020
corona-district

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 83 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,359  ಕ್ಕೆ ಏರಿಕೆಯಾಗಿದೆ. ಮಂಗಳವಾರ ಓರ್ವ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು ಜಿಲ್ಲೆಯಲ್ಲಿ ಈವರೆಗೆ 26 ಮಂದಿ ಸಾವನ್ನಪ್ಪಿದ್ದಾರೆ. 83 ಮಂದಿಯ ಪೈಕಿ 48 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, ಇಬ್ಬರಿಗೆ ದ್ವಿತೀಯ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದ್ದರೆ 20 ಐಎಲ್‌ಐ ಹಾಗೂ 1 ಎಸ್‌ಎಆರ್‌ಐ ಪ್ರಕರಣವಾಗಿದೆ. ಇಬ್ಬರು ಚಿಕ್ಕಮಗಳೂರು ಜಿಲ್ಲೆಗೆ ಹೋಗಿ […]

ಕೊರೊನಾ ಪಾಸಿಟಿವ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34, ಉಡುಪಿ ಜಿಲ್ಲೆಯಲ್ಲಿ 40 ಮಂದಿಯಲ್ಲಿ ಪತ್ತೆ

Monday, July 6th, 2020
corona positive

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ  34 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 40 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಸೋಮವಾರದಂದು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಮಂದಿಯಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಒಟ್ಟು 1276 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 584 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 667 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 25 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. […]

ಕೊರೊನಾ ಸೋಂಕು ಪ್ರಕರಣ : ದಕ್ಷಿಣ ಕನ್ನಡ ಜಿಲ್ಲೆ- 147, ಉಡುಪಿ ಜಿಲ್ಲೆ- 45

Sunday, July 5th, 2020
corona mangalore udupi

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ರವಿವಾರ ಒಂದೇ ದಿನ 147 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜೂನ್ 5 ರಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1232ಕ್ಕೆ ಏರಿಕೆಯಾಗಿದೆ. ರವಿವಾರದಂದು ಒಟ್ಟು 378 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು ಈ ಪೈಕಿ 231 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ರವಿವಾರದಂದು  ಆ ಮೂಲಕ 554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 666 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ದ.ಕ. ಜಿಲ್ಲೆಯಲ್ಲಿ ಶನಿವಾರ 49 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ, ಉಡುಪಿ ಜಿಲ್ಲೆಯಲ್ಲಿ 14

Saturday, June 27th, 2020
Corona Virus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ ಸುಮಾರು 49 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ 14 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಶನಿವಾರ 232 ಮಂದಿಯ ಕೊರೊನಾ ಪರೀಕ್ಷಾ ವರದಿ ಲಭ್ಯವಾಗಿದ್ದು, ಈ ಪೈಕಿ 183 ಮಂದಿಯ ವರದಿ ನೆಗೆಟಿವ್ ಆಗಿದೆ. ಜ 49 ಮಂದಿಯ ವರದಿ ಪಾಸಿಟಿವ್ ಎಂದು ದೃಢವಾಗಿದೆ. ದ.ಕ. ಜಿಲ್ಲೆಯಲ್ಲಿ ಸದ್ಯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರು ಸೂಕ್ತ ಮುಂಜಾಗೃತೆ ವಹಿಸಬೇಕಾದ ಅನಿವಾರ್ಯತೆ ಇದೆ. ಯಾವುದೇ ಕಾರಣಕ್ಕೂ ಜನತೆ ಆತಂಕಗೊಳ್ಳಬಾರದು. ಗಾಳಿ […]

ಕೋವಿಡ್ ಸಿದ್ದತೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

Thursday, June 25th, 2020
sslc exam

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 95 ಪರೀಕ್ಷಾ ಕೇಂದ್ರಗಳಲ್ಲಿ 30835 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಇದಕ್ಕಾಗಿ 1585 ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಬಂಟ್ವಾಳ – 5300, ಬೆಳ್ತಂಗಡಿ – 3849, ಮಂಗಳೂರು ಉತ್ತರ – 6584, ಮಂಗಳೂರು ದಕ್ಷಿಣ – 5968, ಮೂಡಬಿದ್ರೆ – 2107, ಪುತ್ತೂರು – 5007, ಸುಳ್ಯ – 2020 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಪಾಡಿ […]

ಕೊರೊನಾ ಪಾಸಿಟಿವ್ ಪ್ರಕರಣ ಜೂನ್ 10 : ದಕ್ಷಿಣ ಕನ್ನಡ ಜಿಲ್ಲೆ-4, ಉಡುಪಿ ಜಿಲ್ಲೆ- 0

Wednesday, June 10th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಂದು ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.  ಉಡುಪಿ ಜಿಲ್ಲೆಯಲ್ಲಿ ಇಂದು  ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಸೋಂಕಿತ ನಾಲ್ವರು ಕೂಡ ಪುರುಷರಾಗಿದ್ದಾರೆ. 29 ಹಾಗೂ 30 ವರ್ಷದ ಯುವಕರು, 40 ಹಾಗೂ 60 ವರ್ಷದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ 29 ವರ್ಷದ ವ್ಯಕ್ತಿ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿಯಾಗಿದ್ದಾರೆ. ಸೌದಿ ಅರೇಬಿಯಾದಿಂದ್ದ ಬಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ಅವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇನ್ನು […]

ಕೊರೊನಾ ಪಾಸಿಟಿವ್ ಜೂನ್ 9: ದಕ್ಷಿಣ ಕನ್ನಡ ಜಿಲ್ಲೆ- 23, ಉಡುಪಿ ಜಿಲ್ಲೆ- 0

Tuesday, June 9th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 9, ಮಂಗಳವಾರ 23 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.  ಇದರಿಂದಾಗಿ ಸೋಂಕಿತರ ಸಂಖ್ಯೆ 218ಕ್ಕೆ ಏರಿಕೆಯಾಗಿದೆ ಸೋಂಕಿತರ ಪೈಕಿ ಪೈಕಿ  ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಮೂವರು ದುಬೈನಿಂದ ಮರಳಿದವರಾಗಿದ್ದಾರೆ. ಉಳಿದ 18 ಮಂದಿ ಸೌದಿಯಿಂದ ಮರಳಿದವರಾಗಿದ್ದಾರೆ. ಈ ಎಲ್ಲಾ 23 ಮಂದಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ 96 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 115 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಜೂನ್ 9ರಂದು ಕೊರೊನಾ ವೈರಸ್ ನ […]

ಕೋವಿಡ್-19 ಪಾಸಿಟಿವ್ : ಸೋಮವಾರ ಉಡುಪಿ ಜಿಲ್ಲೆಯಲ್ಲಿ- 45, ದ.ಕ. ಜಿಲ್ಲೆಯಲ್ಲಿ-3 ಪ್ರಕರಣಗಳು

Monday, June 8th, 2020
corona

ಉಡುಪಿ: ಜಿಲ್ಲೆಯಲ್ಲಿ ಸೋಮವಾರ  45 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ 947ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿದ್ದ ಜನರಿಗೆ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿತ್ತು. ಉಡುಪಿ ಜಿಲ್ಲೆಗೆ ಎಂಟು ಸಾವಿರಕ್ಕೂ ಹೆಚ್ಚು ಮಂದಿ ಮಹಾರಾಷ್ಟ್ರದಿಂದ ಆಗಮಿಸಿದ್ದರು. ಇವರಲ್ಲಿ ಬಹುತೇಕ ಗಂಟಲು ದ್ರವ ಪರೀಕ್ಷೆ ವರದಿ ಜಿಲ್ಲಾಡಳಿತದ ಕೈ ಸೇರಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಲಿದೆ ಎನ್ನಲಾಗಿದೆ. ಜಿಲ್ಲೆಯ ಇಂದಿನ ಎಲ್ಲಾ 44 ಪ್ರಕರಣಗಳು ಮಹಾರಾಷ್ಟ್ರದಿಂದ […]

ಉಡುಪಿ ಜಿಲ್ಲೆಯಲ್ಲಿ ಜೂನ್ 2 ರಂದು 150 ಜನರ ಕರೋನ ವರದಿ ಪಾಸಿಟಿವ್

Tuesday, June 2nd, 2020
corona Udupi

ಉಡುಪಿ : ಜೂನ್ 2 ರ ಮಂಗಳವಾರ ಉಡುಪಿ ಜಿಲ್ಲೆಯಲ್ಲಿ ಅತಿಹೆಚ್ಚು ಕರೋನ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಇಂದು ಮಧ್ಯಾಹ್ನ, ಕಂದಾಯ ಸಚಿವ ಅಶೋಕ ಅವರು 210 ಜನರು ಕರೋನವೈರಸ್ ಸೋಂಕಿನ ಪಾಸಿಟಿವ್ ವರದಿ ಬಂದಿದೆ ಎಂದು ಸುಳಿವು ನೀಡಿದ್ದರು. ಆದರೆ ಸಂಜೆಯ ವೇಳೆಗೆ, ಜಿಲ್ಲಾಡಳಿತದ ಹೊಸ ಮಾಹಿತಿ ಪ್ರಕಾರ ಕೋವಿಡ್ 19 ಗೆ 150 ಜನರ ಪಾಸಿಟಿವ್ ಪ್ರಕರಣಗಳು ಬಂದಿದೆ ಎಂದಿದ್ದಾರೆ, ಈಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ  410 ಕ್ಕೆ ಏರಿಕೆಯಾಗಿದೆ. 627 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ಮಂಗಳವಾರದಂದು ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ […]

ಉಡುಪಿ ಜಿಲ್ಲೆಯಲ್ಲಿ ಸೋಮವಾರ 73 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

Monday, June 1st, 2020
udupi-corona

ಉಡುಪಿ : ಸೋಮವಾರ  ಉಡುಪಿ ಜಿಲ್ಲೆಯಲ್ಲಿ 73 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಪೈಕಿ ಹೆಚ್ಚಿನವರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಸುಮಾರು 37 ಸೋಂಕಿತರ ಮೂಲ ಪತ್ತೆಯಾಗಿಲ್ಲ, ಕೆಲವು ಪ್ರಕರಣಗಳ ಮೂಲ ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ. ಆರೋಗ್ಯ ಇಲಾಖೆ ಅವರ ಸೋಂಕಿನ ಮೂಲ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ. ಇನ್ನು 33 ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಪಾಸಿಟಿವ್ ಕಂಡುಬಂದಿದೆ. ಮೂವರು ದುಬೈನಿಂದ ಬಂದವರಾಗಿದ್ದಾರೆ