Blog Archive

ಭಕ್ತರ ಭಯ ದೂರ ಮಾಡುವ ಅಭಯಗಣಪ

Friday, September 14th, 2018
ganapathi

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಭಯ ದೂರ ಮಾಡುವ ಅಭಯಗಣಪಕ್ಷೇತ್ರದಂತೆ ಅಭಯ ಗಣಪತಿ ದೇವಸ್ಥಾನವೂ ಪ್ರಸಿದ್ಧಿ ಪಡೆದಿದೆ. ನೇಪಾಳಿ ಶೈಲಿಯಲ್ಲಿ ಕಟ್ಟಿರುವ ದೇವಸ್ಥಾನದಲ್ಲಿ 21 ಅಡಿ ಎತ್ತರದ ಏಕಶಿಲಾ ಗಣಪತಿ ವಿಗ್ರಹ ಆಕರ್ಷಕವಾಗಿದೆ. ಭಾದ್ರಪದ ಶುಕ್ಲ ಚೌತಿಯಂದು ಈ ಗಣಪತಿಗೆ ವಿಶೇಷ ಪೂಜೆ ಸಲ್ಲುತ್ತದೆ. ಕುಕ್ಕೆ ಕ್ಷೇತ್ರ ತಲುಪುವ ಕುಮಾರಧಾರಾ – ಕಾಶಿಕಟ್ಟೆ ಮಾರ್ಗಮಧ್ಯೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಪಕ್ಕದಲ್ಲೆ ಈ ಅದ್ಭುತ ಗಣಪತಿ ವಿಗ್ರಹವಿದೆ. ಕುಕ್ಕೆಯ ಭಕ್ತರಾದ ಬೆಂಗಳೂರು ಎಚ್‌.ಡಿ. ಕೋಟೆ ಮೂಲದ ಕೃಷ್ಣಮೂರ್ತಿ […]

ಕುಕ್ಕೆ ಮಠದಲ್ಲಿಯೂ ಸರ್ಪ ಸಂಸ್ಕಾರ ಸೇವೆ ಮಾಡಬಹುದು, ಅದು ಮಾತ್ರ ಶಾಸ್ತ್ರೋಕ್ತ: ಪ್ರಮೋದ್ ಮುತಾಲಿಕ್

Saturday, September 1st, 2018
pramod-muthalik

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ, ಆಶ್ಲೇಷಾ ಪೂಜೆ ಸೇರಿದಂತೆ ನಡೆಯುವ ಸೇವೆಗಳು ಶಾಸ್ತ್ರೋಕ್ತವಲ್ಲ. ಸುಬ್ರಹ್ಮಣ್ಯ ಮಠದಲ್ಲಿ ನಡೆಯುವ ಸೇವೆಗಳು ಮಾತ್ರ ಶಾಸ್ತ್ರೋಕ್ತವಾದವು ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಯಶ್ಚಿತವಾಗಿ ಮಾಡುವ ಸರ್ಪ ಸಂಸ್ಕಾರ, ಆಶ್ಲೇಷಾ ಪೂಜೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕವಾಗಿ ಮಾಡಲಾಗುತ್ತದೆ. ಸಾಮೂಹಿಕವಾಗಿ ಸತ್ಯನಾರಾಯಣ ಪೂಜೆ ಮೊದಲಾದವುಗಳನ್ನು ಮಾಡುವುದು ಜಾಗೃತಿಗಾಗಿ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಡುವ ಸಾಮೂಹಿಕ ಪೂಜೆ ಶಾಸ್ತ್ರೋಕ್ತವಲ್ಲ. ಮಠದಲ್ಲಿ ನಡೆಯುವ ಸೇವೆಗಳು […]

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ನೆರೆ ಪರಿಹಾರ ನಿಧಿಗೆ 2 ಕೋಟಿ ರೂ.

Monday, August 20th, 2018
subramanya

ಸುಬ್ರಹ್ಮಣ್ಯ : ಅತಿವೃಷ್ಟಿ ಕಡಿಮೆಯಾಗಿ ಪ್ರಕೃತಿ ಶಾಂತಗೊಂಡು ಜನರು, ಪಶು ಪಕ್ಷಿ ಸಂಕುಲ ಶಾಂತಿಯುತವಾಗಿ ಸುಖ, ನೆಮ್ಮದಿಯಿಂದ ಜೀವನ ನಡೆಸಲು ಕೃಪೆ ತೋರುವಂತೆ ಕುಕ್ಕೆ ದೇವರ ಸಾನ್ನಿಧ್ಯದಲ್ಲಿ ಭಾನುವಾರ ಪ್ರಾರ್ಥಿಸಲಾಯಿತು. ಈ ಪ್ರಾರ್ಥನೆಯ ಪ್ರಕಾರ ಸುಬ್ರಹ್ಮಣ್ಯ ದೇವರಿಗೆ 108 ಸೀಯಾಳಾಭಿಷೇಕ ಸೇವೆಯನ್ನು ಆ.21ರಂದು ಬೆಳಗ್ಗೆ 5 ಗಂಟೆಗೆ ನಡೆಸಲಾಗುವುದು. ಅಭಿಷೇಕಕ್ಕೆ ಸೀಯಾಳ ಒದಗಿಸುವ ಭಕ್ತರು ಸೋಮವಾರ ಸಂಜೆಯ ಒಳಗೆ ಶ್ರೀ ದೇವಳದ ಕಚೇರಿಗೆ ಸೀಯಾಳ ಒದಗಿಸಬಹುದು ಎಂದು ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ […]

ನಾಡಿನೆಲ್ಲೆಡೆ ಭಕ್ತರಿಂದ ಸಂಭ್ರಮದ ನಾಗರಪಂಚಮಿ ಆಚರಣೆ..!

Wednesday, August 15th, 2018
Nagarapanchami (17)

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗ ದೇವಸ್ಥಾನಗಳಲ್ಲಿ ನಾಗರಪಂಚಮಿಯನ್ನು ಬುಧವಾರ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಿದರು. ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಮುಂಜಾನೆಯೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ನಾಗ ದೇವರಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಗರಪಂಚಮಿಯನ್ನು ಆಚರಿಸಿದರು. ಕುಡುಪು ದೇವಸ್ಥಾನದಲ್ಲಿ  ಪ್ರಧಾನ ಆರ್ಚಕರ ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ಹಾಲು, ಕ್ಷೀರಾ, ತುಪ್ಪ, ಜೇನಿನೊಂದಿಗೆ ಪಂಚಾಮೃತ ಆಭಿಷೇಕವನ್ನು ಮಾಡಿ ವಿಶೇಷ ಪೂಜೆ ನೆರವೇರಿಸಿದರು. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, […]

ಕುಕ್ಕೆ‌ ಸುಬ್ರಹ್ಮಣ್ಯದಲ್ಲಿ ಸಿಎಂ ಕುಮಾರಸ್ವಾಮಿ ತುಲಾಭಾರ ಸೇವೆ..!

Tuesday, August 14th, 2018
kumarswamy-kukke

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ದೇವೇಗೌಡ, ತಾಯಿ ಚೆನ್ನಮ್ಮ, ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಆಗಮಿಸಿದ ಸಿಎಂ ದೇವರ ದರ್ಶನಗೈದು ತುಲಾಭಾರ ಸೇವೆ ನಡೆಸಿದರು. ಒಣದ್ರಾಕ್ಷಿಯಲ್ಲಿ ಒಮ್ಮೆ ತುಲಾಭಾರ ಸೇವೆ ನಡೆಸಿದರೆ ಮತ್ತೊಮ್ಮೆ ಅಕ್ಕಿ ಬೆಲ್ಲ ತೆಂಗಿನಕಾಯಿಯಿಂದ ತುಲಾಭಾರ ಸೇವೆ ನಡೆಸಿದರು.

ಬೆಳ್ತಂಗಡಿ, ಸುಳ್ಯದಲ್ಲಿ ಭಾರಿ ಮಳೆ..!

Thursday, August 9th, 2018
belthangady

ಮಂಗಳೂರು: ಪಶ್ಚಿಮಘಟ್ಟದಲ್ಲಿ ಬುಧವಾರದಿಂದ ಮಳೆ ಸುರಿಯುತ್ತಿದ್ದು ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಬೆಳ್ತಂಗಡಿ, ಸುಳ್ಯದಲ್ಲಿಯೂ ವರುಣನ ಆರ್ಭಟ ಜೋರಾಗಿದೆ. ಭಾರಿ ಮಳೆಯ ಪರಿಣಾಮ ಕುಮಾರಧಾರ, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಮಳೆಯ ಪರಿಣಾಮ ಪುತ್ತೂರು ತಾಲೂಕಿನ ಗುಂಡ್ಯಾ ಸಮೀಪದ ಉದನೆಯಲ್ಲಿ ಸೇತುವೆಯ ಮೇಲೆ ನೀರು ಹರಿಯುತ್ತಿದೆ. ಶಿರಾಡಿ ಗ್ರಾಮದ ಹಲವು ‌ಮನೆಗಳು ಜಲಾವೃತವಾಗಿದ್ದು, ಉಪ್ಪಿನಂಗಡಿಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ‌ ಸಂಪರ್ಕ ಕಲ್ಪಿಸುವ ಹೊಸ್ಮಠ ಸೇತುವೆಯೂ ಮುಳುಗಡೆಯಾಗಿದೆ.

ಚಂದ್ರ ಗ್ರಹಣದ ಹಿನ್ನೆಲೆ..ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ!

Friday, July 27th, 2018
kukke-subramanya

ಮಂಗಳೂರು: ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ 7ರ ನಂತರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇಲ್ಲ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ. ಪ್ರತಿನಿತ್ಯ 7.30ಕ್ಕೆ ನಡೆಯುತ್ತಿದ್ದ ಮಹಾಪೂಜೆಯನ್ನು ಇಂದು 6.30ಕ್ಕೆ ನಿಗದಿಪಡಿಸಲಾಗಿದೆ. 7 ಗಂಟೆ ನಂತರ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಇಂದು ಸಂಜೆ ನಡೆಯಬೇಕಿದ್ದ ಆಶ್ಲೇಷ ಪೂಜೆಯನ್ನು ರದ್ದುಗೊಳಿಸಲಾಗಿದೆ. ಅಷ್ಟೆ ಅಲ್ಲದೆ ದೇವಾಲಯದಲ್ಲಿ ಇಂದು ರಾತ್ರಿ ಅನ್ನಪ್ರಸಾದವಿರುವುದಿಲ್ಲ ಎಂದು […]

ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಅನುಕೂಲಕ್ಕಾಗಿ ಇಂದಿನಿಂದ ಸಂಜೆಯೂ ಆಶ್ಲೇಷಾಬಲಿ ಸೇವೆ..!

Thursday, July 5th, 2018
ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಅನುಕೂಲಕ್ಕಾಗಿ ಇಂದಿನಿಂದ ಸಂಜೆಯೂ ಆಶ್ಲೇಷಾಬಲಿ ಸೇವೆ..!

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಭಕ್ತರ ಅನುಕೂಲಕ್ಕಾಗಿ ಇಂದಿನಿಂದ ಆಶ್ಲೇಷಾ ಬಲಿ ಸೇವೆಯನ್ನು ಸಂಜೆ ವೇಳೆಯಲ್ಲೂ ಆರಂಭಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದೇಗುಲಕ್ಕೆ ಹರಕೆ ಸೇವೆಗಳನ್ನು ಪೂರೈಸಲು ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಪ್ರತಿನಿತ್ಯ ಸುಮಾರು 400-500 ಮಂದಿ ಆಶ್ಲೇಷಾ ಬಲಿ ಸೇವೆ ಸಲ್ಲಿಸುತ್ತಾರೆ. ವಿಶೇಷ ದಿನ ಹಾಗೂ ಸಾರ್ವಜನಿಕ ರಜಾ ದಿನಗಳಲ್ಲಿ ಇದರ ಪ್ರಮಾಣ 1,200ರಿಂದ 1,400ರ ತನಕವೂ ಏರಿಕೆಯಾಗುತ್ತಿದೆ. ಹೀಗಾಗಿ ಸಂಜೆಯೂ ಸೇವೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಮಂಡಳಿ ವರ್ಗ ತಿಳಿಸಿದೆ. ಮಧ್ಯಾಹ್ನ 12.30ರಿಂದ […]

ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಂಬರ್ ಒನ್ ..!

Thursday, June 28th, 2018
subramanya

ಮಂಗಳೂರು: ರಾಜ್ಯದ ಶ್ರೀಮಂತ ದೇಗುಲಗಳ ಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಂಬರ್ ಒನ್ ಸ್ಥಾನದಲ್ಲಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಎರಡನೇ ಸ್ಥಾನದಲ್ಲಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಾಲಯ ತೃತೀಯ ಸ್ಥಾನದಲ್ಲಿದೆ. ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಾಲ್ಕನೇ ಸ್ಥಾನದಲ್ಲಿದೆ. ಕರಾವಳಿ ಜಿಲ್ಲೆಗಳ ದೇಗುಲಗಳು ಮೊದಲ ಸ್ಥಾನದಲ್ಲಿದ್ದು, ಮುಜರಾಯಿ ಇಲಾಖೆ ಈ ಕ್ರೆಡಿಟ್ ಕೊಟ್ಟಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅನಧಿಕೃತ ಪೂಜೆ ವಿರೋದಿಸಿ ಬೈಕ್ ರ‍್ಯಾಲಿ, ಕರಪತ್ರ ಹಂಚಿಕೆ

Saturday, June 16th, 2018
Kukke Subrahmanya

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ನಾಗದೋಷ ಪರಿಹಾರಕ್ಕೆ ಹೆಸರುವಾಸಿಯಾಗಿರುವ ಕ್ಷೇತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಕುಕ್ಕೆ ಕ್ಷೇತ್ರದಲ್ಲಿ ನಡೆಸಲಾಗುವ ಪೂಜೆಗಳನ್ನು ಸಂಪುಟ ನರಸಿಂಹ ಮಠದಲ್ಲೂ ಹಾಗೂ ಅನ್ಯಕಡೆಗಳಲ್ಲಿ ನಡೆಸಲಾಗುತ್ತಿದೆ. ಕ್ಷೇತ್ರದ ಹೆಸರಿನಲ್ಲಿ ಮಠವು ಅಕ್ರಮವಾಗಿ ಸರ್ಪಸಂಸ್ಕಾರ ಪೂಜೆಗಳನ್ನು ನಡೆಸುತ್ತಿದೆ ಎನ್ನುವ ಆರೋಪದ ನಡುವೆ ಇದೀಗ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರ ಹಿತರಕ್ಷಣಾ ವೇದಿಕೆ ಈ ಬಗ್ಗೆ ಜನತೆಗೆ ತಿಳುವಳಿಕೆ ನೀಡುವ ಕುರಿತಾಗಿ ಕ್ಷೇತ್ರದ ಸುತ್ತಮುತ್ತ ಪ್ರದೇಶಗಳಲ್ಲಿ ಬೈಕ್ ರ‍್ಯಾಲಿ ಹಾಗೂ ಕರಪತ್ರಹಂಚುವ ಕಾರ್ಯ ಹಮ್ಮಿಕೊಂಡಿದೆ ಎಂದು ವೇದಿಕೆಯ ಕಾನೂನು ಸಲಹೆಗಾರ […]