Blog Archive

ಆಶಾ ಕಾರ್ಯಕರ್ತೆಯರಿಗೆ 2000 ಟೊಪಿ ಹಸ್ತಾಂತರ 

Saturday, May 2nd, 2020
toppi-vitharane

ಮಂಗಳೂರು :  ಆಶಾ ಕಾರ್ಯಕರ್ತೆಯರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ ವತಿಯಿಂದ ಉಚಿತವಾಗಿ 2,000 ಟೊಪ್ಪಿಗಳನ್ನು (ಕ್ಯಾಪ್ ) ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ ಮತ್ತು ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೆಷನ್ ಅಧ್ಯಕ್ಷ ಶ್ರೀಧರ್ ಕಾಮತ್, ಕಾರ್ಯದರ್ಶಿ ಗಣೇಶ್ ಕಾಮತ್, ಸಂತೋಷ ಕಾಮತ್, ಸಂಜಯ್ ಕಾಮತ್ ಉಪಸ್ಥಿತರಿದ್ದರು.

ದ.ಕ.ಜಿಲ್ಲೆ ಕೊರೋನ ಹಾಟ್‌ಸ್ಪಾಟ್ ಆಗಿರುವುದರಿಂದ ಸಡಿಲಿಕೆ ಇಲ್ಲ

Thursday, April 23rd, 2020
srinivaspoojary

ಮಂಗಳೂರು : ದ.ಕ.ಜಿಲ್ಲೆ ಕೊರೋನ ಹಾಟ್‌ಸ್ಪಾಟ್ ಆಗಿರುವುದರಿಂದ ಯಾವ ರೀತಿ ಮುಂದಿನ ಹೆಜ್ಜೆ ಇರಿಸಬೇಕು ಎಂಬ ಬಗ್ಗೆ ಇಲ್ಲಿಯ ತನಕ ನಿರ್ಧಾರ ಕೈಗೊಳ್ಳಲಾಗಿಲ್ಲ.  ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿ ರಾಜ್ಯ ಸರಕಾರ ಹೊಸ ನಿರ್ದೇಶನಗಳನ್ನು ನೀಡಿದೆ. ಎಪ್ರಿಲ್ 23ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಹದಿನಾರು ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ಕಂಟೈನ್ಮೆಂಟ್ ವಾರ್ಡ್ ಗಳನ್ನು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ […]

ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಸ್ಥಗಿತ : ಕೋಟ ಶ್ರೀನಿವಾಸ ಪೂಜಾರಿ

Saturday, March 28th, 2020
Kota

ಮಂಗಳೂರು : . ದ.ಕ. ಜಿಲ್ಲೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ.  ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವು ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ದ.ಕ. ಜಿಲ್ಲೆಯ ಕಾಸರಗೋಡು, […]

ವೆನ್ಲಾಕ್ ಆಸ್ಪತ್ರೆ ಕೋವಿಡ್-19 ಆಸ್ಪತ್ರೆಯನ್ನಾಗಿ ಮಾರ್ಪಾಡು, ಅಲ್ಲಿದ್ದ ಹೋರ ರೋಗಿಗಳು ಖಾಸಗಿ ಆಸ್ಪತ್ರೆಗೆ ವರ್ಗಾವಣೆ

Thursday, March 26th, 2020
Wenlock Corona

ಮಂಗಳೂರು:  ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿ ಮಾರ್ಪಾಡುಗೊಳಿಸಿ ಇಲ್ಲಿರುವ ಇತರ ಹೋರ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ. ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಈ ಮಾಹಿತಿ ನೀಡಿದ ಉಸ್ತುವಾರಿ ಸಚಿವರು, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಇತರ ರೋಗಿಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಮತ್ತು ಉಚಿತವಾಗಿಯೇ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ. ವೆನ್ಲಾಕ್ ಆಸ್ಪತ್ರೆಯ 250 ಹಾಸಿಗೆಗಳ ಕಟ್ಟಡವನ್ನು ಸಂಪೂರ್ಣವಾಗಿ ಕೋವಿಡ್-19 ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. ಆಸ್ಪತ್ರೆಯ […]

ಚಿಕ್ಕಬಳ್ಳಾಪುರ : ಜಿಲ್ಲಾ ಅರ್ಚಕರು ಮತ್ತು ಆಗಮಿಕರ ಸಮಾವೇಶ ಉದ್ಘಾಟಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

Thursday, January 23rd, 2020
srinivas poojary

ಚಿಕ್ಕಬಳ್ಳಾಪುರ : ಆಲಯಕ್ಕೆ ಬರುವ ಭಕ್ತರಿಗೆ ಧೈರ್ಯ ತುಂಬಿ ಕಳುಹಿಸಬೇಕು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅರ್ಚಕರಿಗೆ ಸಲಹೆ ನೀಡಿದರು. ನಗರದ ಶ್ರೀದೇವಿ ಪ್ಯಾಲೇಸ್‌ನಲ್ಲಿ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರು ಮತ್ತು ಆಗಮಿಕರ ಸಂಘ ಬುಧವಾರ ಆಯೋಜಿಸಿದ್ದ ಜಿಲ್ಲಾ ಅರ್ಚಕರು ಮತ್ತು ಆಗಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಆಲಯಗಳು ದುಃಖ, ದುಮ್ಮಾನ, ಆತಂಕ ನಿವಾರಣೆಯ ಆಧ್ಯಾತ್ಮಿಕ ತಾಣಗಳು. ಜನರು ಹೊಸ ಬದುಕು ಕಟ್ಟಿಕೊಳ್ಳಲು ಆತ್ಮಸ್ಥೈರ್ಯ ಮೂಡಿಸುತ್ತವೆ. ಇದಕ್ಕೆ ಅರ್ಚಕರು ಸಮಸ್ಯೆ ಹೇಳಿಕೊಳ್ಳುವ ಭಕ್ತರಿಗೆ […]

ಕಾಸರಗೋಡಿನಲ್ಲಿ ತುಳುವರು ಕನ್ನಡವನ್ನು ಕಟ್ಟಿ ಬೆಳೆಸಿದ್ದಾರೆ : ಕೋಟ ಶ್ರೀನಿವಾಸ ಪೂಜಾರಿ

Saturday, January 4th, 2020
kasaragodu

ಕಾಸರಗೋಡು : ಕಾಸರಗೋಡಿನ ತುಳು-ಕನ್ನಡಿಗರ ಸ್ನೇಹ ಅನನ್ಯ. ತುಳುವ ನೆಲದವರೇ ಇಲ್ಲಿ ಕನ್ನಡ ಭಾಷೆಯನ್ನು ಕಟ್ಟಿ ಬೆಳೆಸಿದ್ದಾರೆ. ಆದುದರಿಂದಲೇ ಭಾಷೆ ಮತ್ತು ಸಂಸ್ಕೃತಿಗೆ ಪೆಟ್ಟು ಬಿದ್ದಾಗ ನಿರಂತರವಾಗಿ ದಿಟ್ಟತನದಿಂದ ಹೋರಾಟ ಮಾಡುತ್ತಾರೆ. ತುಳು ಕಾವ್ಯಗಳನ್ನು ವಾಚನ ಮತ್ತು ಪ್ರವಚನದ ಮೂಲಕ ಪ್ರಚಾರ ಪಡಿಸುತ್ತಿರುವುದು ತುಳು ಭಾಷೆಯ ಬೆಳವಣಿಗೆಗೆ ಒಂದು ಉತ್ತಮ ವೇದಿಕೆ. ತುಳು ಅಕಾಡೆಮಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ದಕ್ಷಿಣಕನ್ನಡ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ತುಳುವರ್ಲ್ಡ್ ಮತ್ತು ಜಾನಪದ […]

ಜನವರಿ 3ರಿಂದ ಮಂಗಳೂರಿನಲ್ಲಿ ಕರಾವಳಿ ಉತ್ಸವವು ನಡೆಯಲಿದೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

Tuesday, December 17th, 2019
karavali-utsava

ಮಂಗಳೂರು : 2019-20ನೇ ಸಾಲಿನ ಕರಾವಳಿ ಉತ್ಸವವು ಜನವರಿ 3ರಿಂದ ಮಂಗಳೂರಿನಲ್ಲಿ ನಡೆಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಕರಾವಳಿ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಮಂಗಳಾ ಕ್ರೀಡಾಂಗಣ ಹಾಗೂ ಕದ್ರಿ ಉದ್ಯಾನವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ನಾಡಿನ ಸಂಸ್ಕೃತಿ, ಕಲೆ, ಜನಪದ, ಕ್ರೀಡೆಯ ಅತ್ಯುನ್ನತ ಪ್ರದರ್ಶನ ಈ ಕರಾವಳಿ ಉತ್ಸವದಲ್ಲಿ ಪ್ರತಿಬಿಂಬಿತವಾಗಬೇಕು. ಈ ನಿಟ್ಟಿನಲ್ಲಿ ಉತ್ಸವದ ಎಲ್ಲಾ ಉಪಸಮಿತಿಗಳು […]

ಮೆಸ್ಕಾಂ ಹೊರಗುತ್ತಿಗೆ ಗ್ಯಾಂಗ್‌ಮ್ಯಾನ್ ಗಳನ್ನು ಖಾಯಂಗೊಳಿಸುವಂತೆ ಜಯಕರ್ನಾಟಕ ಸಂಘಟನೆ ಮನವಿ

Friday, October 18th, 2019
Jayakarnataka

ಮಂಗಳೂರು : ಮೆಸ್ಕಾಂನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಗ್ಯಾಂಗ್‌ಮ್ಯಾನ್ ಗಳಿಗೆ ಕೆಲಸ ಖಾಯಂಗೊಳಿಸುವಂತೆ ಜಯಕರ್ನಾಟಕ ಸಂಘಟನೆ ಕರ್ನಾಟಕ ಸರಕಾರದ ಉಸ್ತುವಾರಿ ಸಚಿವರಿಗೆ ಗುರುವಾರ ಮಂಗಳೂರು ಜಿಲ್ಲಾಧಿಕಾರಿ ಕಛೇರಿಯ ಸಚಿವರ ಕಛೇರಿಯಲ್ಲಿ ಮನವಿ ಮಾಡಿತು. 2010 ರಿಂದ 2019 ಸೆಪ್ಟೆಂಬರ್ 30 ರ ತನಕ ಮಂಗಳೂರು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುಮಾರು 679 ಗ್ಯಾಂಗ್‌ಮ್ಯಾನ್‌ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಕೆಪಿಟಿಸಿಯಲ್ ಗ್ಯಾಂಗ್‌ಮ್ಯಾನ್ ಗಳನ್ನು ಸ್ಥಳೀಯವಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಮಾಡಿದ್ದು ಕೆಲಸಗಾರರಿಗೆ ಸೇವಾಭದ್ರತೆ ಇಲ್ಲದೆ ದುಡಿಯುತ್ತಿದ್ದಾರೆ, ಅವರ ವೇತನದ ಬಗ್ಗೆ ಯಾವುದೇ […]

ಕೊಲ್ಲೂರು : ಶ್ರೀ ಮೂಕಾಂಬಿಕಾ ಭೋಜನ ಶಾಲೆಯನ್ನು ಉದ್ಘಾಟಿಸಿದ ಕೋಟ ಶ್ರೀನಿವಾಸ ಪೂಜಾರಿ

Thursday, October 3rd, 2019
kolluru

ಕೊಲ್ಲೂರು : ಧಾರ್ಮಿಕ ದತ್ತಿ ಇಲಾಖೆಯ ಶ್ರೀಮಂತ ದೇವಾಲಯಗಳಲ್ಲಿ ಬಡಜನರಿಗೆ ಉಚಿತ ಸಾಮೂಹಿಕ ವಿವಾಹಕ್ಕೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಎರಡನೇ ಶ್ರೀಮಂತ ದೇಗುಲವಾದ ಕೊಲ್ಲೂರಿನಲ್ಲಿ ಸಹ ಈ ನಿಟ್ಟಿನಲ್ಲಿ ಉಚಿತ ಸಾಮೂಹಿಕ ವಿವಾಹ ಏರ್ಪಡಿಸುವ ಬಗ್ಗೆ ಯೋಜನೆ ರೂಪಿಸಲಾಗಿದೆ. ದೇವಸ್ಥಾನಗಳು ಭಕ್ತರ ಇಷ್ಟಾರ್ಥ ಪೂರೈಕೆಯ ಆರಾಧನಾ ಕೇಂದ್ರಗಳಾಗಿರಬೇಕು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ನೂತನವಾಗಿ ನಿರ್ಮಿಸಲಾದ 21 ಕೋಟಿ ರೂ. ವೆಚ್ಚದ ಶ್ರೀ ಮೂಕಾಂಬಿಕಾ ಭೋಜನ […]

ಮೂಡುಬಿದಿರೆಯಲ್ಲಿ ಬೃಹತ್‌ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಉದ್ಘಾಟಿಸಿದ ಕೋಟ ಶ್ರೀನಿವಾಸ ಪೂಜಾರಿ

Thursday, October 3rd, 2019
moodbidri

ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ-ಮೂಡುಬಿದಿರೆ ವತಿಯಿಂದ 150ನೇ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಮೂಡುಬಿದಿರೆಯಲ್ಲಿ ಬೃಹತ್‌ ಜನಜಾಗೃತಿ ಜಾಥಾ ಮತ್ತು ಸಮಾವೇಶ ಬುಧವಾರ ಜರಗಿತು. ಪದ್ಮಾವತಿ ಕಲಾಮಂದಿರದಲ್ಲಿ ನಡೆದ ಸಮಾವೇಶವನ್ನು ಉದ್ಘಾಟಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜವನ್ನು ವ್ಯಸನಮುಕ್ತ, ಪರಿಶ್ರಮಶೀಲ, ಅಭಿವೃದ್ಧಿಯ ಮಾರ್ಗದಲ್ಲಿ ಮುನ್ನಡೆಸುವಲ್ಲಿ ಸರಕಾರಕ್ಕೆ ಮಾರ್ಗದರ್ಶನ ನೀಡುವ ಮಟ್ಟಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಬೆಳೆದು ನಿಂತಿದೆ. ಗಾಂಧೀ […]