Blog Archive

ನಾನಲ್ಲ, ನನ್ನ ಹೆಣವೂ ಸಹ ಬಿಜೆಪಿ ಹತ್ತಿರ ಸುಳಿಯುವುದಿಲ್ಲ: ಡಾ. ಹೆಚ್. ಸಿ. ಮಹದೇವಪ್ಪ

Thursday, July 12th, 2018
mahadevappa

ಮೈಸೂರು: ನಾನಲ್ಲ, ಹೆಣವೂ ಸಹ ಬಿಜೆಪಿ ಹತ್ತಿರ ಸುಳಿಯುವುದಿಲ್ಲ. ಕೋಮುವಾದಿಗಳಿಂದ ನಾನು ಎಂದಿಗೂ ದೂರ ಎಂದು ಮಾಜಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದಿರುವವರು ಬಿಜೆಪಿಗೆ ಹೋಗುತ್ತಾರೆ ಎಂಬ ಪಿತೂರಿ ಮಾಡುತ್ತಿದ್ದಾರೆ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ‌ ಮಾತನಾಡುತ್ತೇನೆ ಎಂದ ಅವರು ಚುನಾವಣೆ ಸೋಲಿನ ನಂತರ ದಿಗ್ಭ್ರಮೆಗೊಳಗಾಗಿದ್ದೆ. ಸೋಲಿನಿಂದ ಆಚೆ ಬರಲು ಒಂದೂವರೆ ತಿಂಗಳು ಬೇಕಾಯಿತು ಎಂದು ಬೇಸರ ಹೊರಹಾಕಿದರು. ದೇಹದ ಅಂಗಾಂಗ ಪುನಶ್ಚೇತಕ್ಕೆ‌ ಒಂದೂವರೆ ತಿಂಗಳಾಯಿತು. […]

ಸರ್ಕಾರಿ ಅನುಮತಿಯಿಲ್ಲದೆ ಆಧಾರ್ ಕಾರ್ಡ್ ತಿದ್ದುಪಡಿ..ಜೆಡಿಎಸ್ ಮುಖಂಡನ ಮನೆಯ ಮೇಲೆ ದಾಳಿ!

Thursday, July 12th, 2018
JDS-Party

ಮಂಗಳೂರು: ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತು  ಪೊಲೀಸರ ಸರ್ಕಾರಿ ಅನುಮತಿಯಿಲ್ಲದೆ ಆಧಾರ್ ಕಾರ್ಡ್ ತಿದ್ದುಪಡಿ ಮಾಡುತ್ತಿದ್ದ ಜೆಡಿಎಸ್ ಮುಖಂಡನೋರ್ವನ ಮನೆಯ ಮೇಲೆ ಬುಧವಾರ ದಾಳಿ ಮಾಡಿದ್ದಾರೆ. ಜೆಡಿಎಸ್ ಮುಖಂಡ ತನ್ನ  ಮನೆಯಲ್ಲಿ ಫ್ರಾನ್ಸಿಸ್ ಪ್ರಶಾಂತ್ ಒಳಮೊಗರು ಎಂಬ ಆಪರೇಟರ್ನನ್ನು ಬಳಸಿಕೊಂಡು ಆಧಾರ್ ತಿದ್ದುಪಡಿ ಮಾಡುತ್ತಿರುವುದು ಕಂಡುಬಂದಿದೆ. ಪ್ರಶಾಂತ್ ಆಧಾರ್ ಕಾರ್ಡ್ ನೋಂದಣಿ ಮಾಡುವ ಬಗ್ಗೆ ತರಬೇತಿ ಪಡೆದಿದ್ದ ಎನ್ನಲಾಗಿದೆ. ದಾಳಿ ವೇಳೆ ಪತ್ತೆಯಾದ ಆಧಾರ್ ತಿದ್ದುಪಡಿಗೆ ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದ.ಕ. ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತ […]

ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ವತಿಯಿಂದ ಬಿ.ಎ.ಮೊಹಿದಿನ್ ರಿಗೆ ಸಂತಾಪ ಸೂಚಕ ಸಭೆ

Tuesday, July 10th, 2018
JDS-office

ಮಂಗಳೂರು: ಮಾಜಿ ಸಚಿವ ಬಿ.ಎ.ಮೊಹಿದಿನ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಸಂತಾಪ ಸೂಚಕ ಸಭೆ ನಡೆಯಿತು. ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಕುಂಞಿ ಮಾತನಾಡಿ ಬಿ.ಎ.ಬಿ.ಎ.ಮೊಹಿದಿನ್ ಅವರು ಹಿರಿಯ ರಾಜಕಾರಣಿ, ಶಿಕ್ಷಣ ತಜ್ಞ, ಅಜಾತಶತ್ರು ಆಗಿದ್ದು ಈ ರಾಜ್ಯದ ಸಣ್ಣ ಕೈಗಾರಿಕೆ ಹಾಗೂ ಉನ್ನತ ಶಿಕ್ಷಣ ಸಚಿವರಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ ಎಂದರು. ಕಾರ್ಯಧ್ಯಕ್ಷ ರಾಮಗಣೇಶ್ ಮಾತನಾಡಿ ಅವರು ಪಕ್ಷದಲ್ಲಿ ಎಲ್ಲಾ ಸರ್ವಧರ್ಮದವರನ್ನು ಸಮಾನತೆಯಿಂದ ಹಾಗೂ ಗೌರವದಿಂದ ಕಾಣುತಿದ್ದರು ಎಂದು […]

ಕುಮಾರಸ್ವಾಮಿ ಮಂಡಿಸಿದ ಬಜೆಟ್ ಜೆ‌ಡಿಎಸ್ ಶಾಸಕರಿಗೆ ಮಂಡಿಸಿದ ಬಜೆಟ್ ಆಗಿದೆ: ಶ್ರೀನಿವಾಸ ಪೂಜಾರಿ

Saturday, July 7th, 2018
kota-srinivas-poojary

ಮಂಗಳೂರು: ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಸರ್ಕಾರ ಮಂಡಿಸಿದ ಬಜೆಟ್ ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದು, ಅದನ್ನು ಅನುಷ್ಠಾನ ಮಾಡುವವರೆಗೆ ಬಿಜೆಪಿ ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳೂರು ಬಿಜೆಪಿ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಜೆಟ್ನಲ್ಲಿ ಹಿಂದಿನ ಸರ್ಕಾರದ ಬಜೆಟ್ ಮುಂದುವರಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಅವರು ಅದನ್ನು ಮಾಡುವ ಬಗ್ಗೆ ಅನುಮಾನವಿದೆ. ಆದರೆ ಬಜೆಟ್ ಅನುಷ್ಠಾನ ಮಾಡುವವರೆಗೆ ಬಿಜೆಪಿ […]

ರಾಜ್ಯದ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೂ ಹೆಚ್ಚಿನ ಗಮನ ನೀಡುತ್ತೇನೆ: ಜಿ.ಟಿ. ದೇವೇಗೌಡ

Friday, June 22nd, 2018
g-t-devegowda

ಬೆಂಗಳೂರು: ನಾನು 8ನೇ ತರಗತಿ ವ್ಯಾಸಂಗ ಮಾಡಿದ್ದರೂ, ನಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿದ್ದೇನೆ. ಹೀಗಾಗಿ ರಾಜ್ಯದ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೂ ಹೆಚ್ಚಿನ ಗಮನ ನೀಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರು ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿ ಪ್ರವೇಶಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಂಟನೇ ತರಗತಿ ವ್ಯಾಸಂಗ ಮಾಡಿದವರು ಉನ್ನತ ಶಿಕ್ಷಣ ಇಲಾಖೆ ನಿರ್ವಹಿಸುತ್ತಾರಾ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಅದನ್ನು ಯಶಸ್ವಿಯಾಗಿ ನಿರ್ವಹಿಸುವ ವಿಶ್ವಾಸವಿದೆ. ಇಂದು ಉನ್ನತ ಶಿಕ್ಷಣ ಇಲಾಖೆಯ […]

ಮೂರು ತಿಂಗಳ ಒಳಗೆ ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ: ನಳಿನ್ ಕುಮಾರ್

Thursday, June 21st, 2018
nalin-kumar

ಸುಳ್ಯ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐಸಿಯುನಲ್ಲಿದೆ. ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತಗೊಂಡಿದೆ. ಮೂರು ತಿಂಗಳ ಒಳಗೆ ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಸುಳ್ಯದ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕುಮಾರಸ್ವಾಮಿ ಮತ್ತು ಪರಮೇಶ್ವರ್‌ ಅವರದ್ದು ಗುರು-ಹಿರಿಯರ ಸಮ್ಮುಖದಲ್ಲಿ ಆದ ಮದುವೆ. ಈಗ ಅವರೊಳಗೆ ಒಳ ಜಗಳ ಆರಂಭವಾಗಿದೆ. ಜಗಳ ವಿಚ್ಛೇದನ ಕೊಡುವ ಹಂತಕ್ಕೆ ಬಂದು ತಲುಪಿದೆ. ಕುಮಾರಸ್ವಾಮಿಯವರು ವಿಚ್ಛೇದನಕ್ಕೆ ಅರ್ಜಿ […]

ಜುಲೈ5ರಂದು ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದ ಬಜೆಟ್ ಮಂಡನೆ?

Wednesday, June 20th, 2018
kumarswamy

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಬಳಿಕ ಬಜೆಟ್ ಮಂಡನೆಗೆ ಹಸಿರು ನಿಶಾನೆ ಪಡೆದಿರುವ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಜುಲೈ ಮೊದಲವಾರ ಜಂಟಿ ಅಧಿವೇಶನ‌ ನಡೆಸಿ ಜು.5ರಂದು ಬಜೆಟ್ ಮಂಡಿಸಿ ಆಡಳಿತಕ್ಕೆ ವೇಗ ನೀಡುವ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಜುಲೈ 4ರಿಂದ 24ವರೆಗೆ ಬಜೆಟ್ ಅಧಿವೇಶನ ನಡೆಸಿ ಹೊಸ ಸರ್ಕಾರದ ಬಜೆಟ್ ಮಂಡಿಸಿ ಅದಕ್ಕೆ ಅನುಮೋದನೆ ಪಡೆಯುವ ಇರಾದೆ ಕುಮಾರಸ್ವಾಮಿಯವರದ್ದಾಗಿದೆ. ಜುಲೈ ಮೊದಲವಾರ ಬಜೆಟ್ ಮಂಡನೆ ಮಾಡುವ ಸಂಬಂಧ ಅಗತ್ಯ ಸಿದ್ಧತೆ ನಡೆಸಿರುವ ಸಿಎಂ, ಬಜೆಟ್ […]

ಖಾತೆ ಹಂಚಿಕೆ ಮುಕ್ತಾಯ…ಇನ್ನು ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ!

Wednesday, June 13th, 2018
kumarswamy

ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಒಂದು ಹಂತಕ್ಕೆ ಮುಗಿದಿದೆ. ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಈ ನಡುವೆ ಕೆಲ ಸಚಿವರ ಅಸಮಾಧಾನದ ಹಿನ್ನೆಲೆಯಲ್ಲಿ, ಖಾತೆಗಳನ್ನು ಬದಲಾವಣೆ ಮಾಡಲು ಸಿಎಂ ಚಿಂತನೆ ನಡೆಸಿದ್ದಾರೆ. ಸಚಿವರ ಜೊತೆ ಮಾತುಕತೆ ನಡೆಸಿದ ಬಳಿಕವೇ ಸಿಎಂ ಖಾತೆ ಬದಲಾವಣೆಗೆ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಉಳಿದಂತೆ ಬೇರೆ ಯಾವುದೇ ಸಚಿವರ ಖಾತೆಗಳಲ್ಲಿ ಯಾವುದೇ […]

ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆಯಿಂದ ಜಯನಗರದಲ್ಲಿ ಬಿಜೆಪಿಗೆ ಹಿನ್ನಡೆ: ಬಿ.ಎಸ್.ಯಡಿಯೂರಪ್ಪ

Wednesday, June 13th, 2018
yedyurappa

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ಕಾರಣ ನಮ್ಮ ಅಭ್ಯರ್ಥಿ ಅಲ್ಪ ಮತಗಳಿಂದ ಪರಾಭವಗೊಳ್ಳುವಂತಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಪ್ರಹ್ಲಾದ್ ಬಾಬು ಕಡಿಮೆ ಅಂತರದಲ್ಲಿ ಸೋತಿದ್ದಾರೆ. ನಮ್ಮ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ರು. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೇಲೆ ಜಯನಗರ ಮತದಾರರು ವಿಶ್ವಾಸ ಇಟ್ಟು ಹೆಚ್ಚು ಮತ ಕೊಟ್ಟಿದ್ದಾರೆ. ಅವರಿಗೆ ಕೃತಜ್ಞತೆ. ಜೆಡಿಎಸ್ ಅಭ್ಯರ್ಥಿ […]

ಕಾಂಗ್ರೆಸ್‌ – ಜೆಡಿಎಸ್‌ ಹಿಂದೂ ವಿರೋಧಿ ನೀತಿ

Thursday, June 7th, 2018
police

ಉಡುಪಿ: ರಾಜ್ಯದ ಹಿಂದಿನ ಸರಕಾರದಲ್ಲಿ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿ ವರ್ತಿಸುತ್ತಿದ್ದರು. ಈಗ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡೂ ಕೂಡ ಒಂದಾಗಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಉಡುಪಿ ಶಾಸಕ ಕೆ. ರಘಪತಿ ಭಟ್‌ ಹೇಳಿದ್ದಾರೆ. ಪೆರ್ಡೂರಿನ ಗೋಸಾಗಾಟ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ಮತ್ತು ಸರಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಜೂ.6ರಂದು ಬಿಜೆಪಿ, ವಿಎಚ್‌ಪಿ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಗೋಸಾಗಾಟ ರಾಜಾರೋಷವಾಗಿ […]