Blog Archive

13 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ರೌಡಿಯ ಬಂಧನ

Friday, February 2nd, 2018
rafik-mangaluru

ಮಂಗಳೂರು: ಕೊಲೆ ಯತ್ನ, ಅಪಹರಣ ಸೇರಿದಂತೆ ಒಟ್ಟು 13 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಇಲ್ಲಿನ ದಕ್ಷಿಣ ರೌಡಿ ನಿಗ್ರಹದಳ ಅಧಿಕಾರಿ ಮತ್ತು ರೌಡಿ ನಿಗ್ರಹದಳದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾಸರಗೊಡು ಜಿಲ್ಲೆಯ ಉಪ್ಪಳ ನಿವಾಸಿ ಮಹಮ್ಮದ್ ರಪೀಕ್ ಯಾನೆ ನಪ್ಪಾಟೆ ರಪೀಕ್(29) ಬಂಧಿತ ಆರೋಪಿ. ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳದ ಸಹಾಯಕ ಪೊಲೀಸ್‌ ಆಯುಕ್ತರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಈ ಆರೋಪಿಯನ್ನು ಕೆಸಿ ರೋಡ್‌ನಲ್ಲಿ ಬಂಧಿಸಲಾಗಿದೆ. ಈತನ ಮೇಲೆ ಮಹಿಳೆಯೋರ್ವಳಿಗೆ ಅವಾಚ್ಯ ಶಬ್ದಗಳಿಂದ […]

ಅಬ್ದುಲ್ ಬಷೀರ್ ಹತ್ಯೆಗೆ ಜೈಲಲ್ಲಿ ಸಂಚು: ಮಂಗಳೂರು ಪೊಲೀಸ್ ಆಯುಕ್ತ

Thursday, January 25th, 2018
bashir

ಮಂಗಳೂರು: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಜನವರಿ 3 ರ ರಾತ್ರಿ ನಡೆದ ಅಬ್ದುಲ್ ಬಷೀರ್ ಅವರ ಹತ್ಯೆಗೆ ಮಂಗಳೂರು ಜೈಲಿನಲ್ಲಿಯೇ ಸಂಚು ರೂಪಿಸಲಾಗಿತ್ತು ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಬುಧವಾರ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಅಬ್ದುಲ್ ಬಷೀರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ತನಿಖೆಗೆ ಒಳಪಡಿಸಿದಾಗ ಈ ಹತ್ಯಾ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರೆಯಿತು ಎಂದು ಅವರು […]

ಗರ್ಭಿಣಿಗೆ ಯಾವುದೋ ಇಂಜೆಕ್ಷನ್‌ ಚುಚ್ಚಲು ಬಂದ ಸಿಬ್ಬಂದಿ… ಮುಂದೇನಾಯ್ತು!

Wednesday, January 24th, 2018
Hospital

ಮಂಗಳೂರು: ಹೆರಿಗೆಗೆಂದು ನಗರ ಬೆಂದೂರ್ವೆಲ್‌ನಲ್ಲಿರುವ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಗರ್ಭಿಣಿಗೆ ಆಸ್ಪತ್ರೆ ಸಿಬ್ಬಂದಿ ಇಂಜೆಕ್ಷನ್‌‌ ಚುಚ್ಚಲು ಯತ್ನಿಸಿರುವ ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ಹಂಝ ಎಂಬವರ ಪತ್ನಿ ಆಯಿಶತ್ ಆರಿಫಾ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜ. 17ರಂದು ಬೆಳಿಗ್ಗೆ 5.30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಆಕೆಯ ತಪಾಸಣೆ ನಡೆಸಿ, ಗ್ಲೂಕೋಸ್ ಹಾಕಿದ ಬಳಿಕ ಹೆರಿಗೆಗೆ ಸಮಯ ಕೊಟ್ಟು ತೆರಳಿದ್ದರು. ಈ ವೇಳೆ ಡ್ರಿಪ್‌ ಹಾಕಿಸಿಕೊಂಡು ಮಲಗಿದ್ದ ಆರಿಫಾ ಅವರ ಬಳಿಗೆ […]

ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ

Friday, January 12th, 2018
yedeyorrappa

ತುಮಕೂರು: ಮುಂದಿನ ಚುನಾವಣೆಯಲ್ಲಿ ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪೊಲೀಸರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡಿದರೆ ನಿಮ್ಮ ಪರಿಸ್ಥಿತಿ ಸರಿ ಇರುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನು ಅವರು ಎಚ್ಚರಿಸಿದ್ದಾರೆ. ಜನ ಚಪ್ಪಾಳೆ ತಟ್ಟಿದ್ದು ಏಕೆ? ಸಿದ್ದರಾಮಯ್ಯಗೆ ಬಿಎಸ್‌ವೈ ಟ್ವೀಟ್ ಬಾಣ ಗುರುವಾರ ತುಮಕೂರಿನ ಶಿರಾದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, “ಮೂರು ನಾಲ್ಕು ತಿಂಗಳ ನಂತರ ನಾನು ಮುಖ್ಯಮಂತ್ರಿಯಾಗಿ ಬರುತ್ತೇನೆ ಎಂಬುದನ್ನು ನಾನು […]

ದೀಪಕ್‌ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಯತ್ನಿಸಿದ ಪೊಲೀಸರಿಗೆ ಸನ್ಮಾನ

Friday, January 12th, 2018
T-R-Suresh

ಮಂಗಳೂರು: ಕಾಟಿಪಾಳ್ಳ ದೀಪಕ್‌ ಕೊಲೆ ಪ್ರಕರಣದಲ್ಲಿ ಕರ್ತವ್ಯ ನಿಷ್ಠೆ ಮೆರೆದ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಪೊಲೀಸ್ ಆಯುಕ್ತರು ಸನ್ಮಾನಿಸಿದರು. ಜ. 3 ರಂದು ನಗರದ ಸುರತ್ಕಲ್‌ನ ಕಾಟಿಪಾಳ್ಳದಲ್ಲಿ ನಡೆದಿದ್ದ ದೀಪಕ್‌ ರಾವ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಆರೋಪಿಗಳನ್ನು ಹಿಡಿಯಲು ಯತ್ನಿಸಲಾಗಿತ್ತು. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಂಜೆ ಎಂಬ ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ ವಾಹನವನ್ನು ತಪಾಸಣೆ ಮಾಡುತ್ತಿದ್ದ ಸಮಯ ಆರೋಪಿಗಳು ಸಂಚರಿಸಿದ ಕಾರನ್ನು ತಡೆಯಲು ಪ್ರಯತ್ನಿಸಿದರು. ಪ್ರಕರಣದ ಆರೋಪಿಗಳ ಪತ್ತೆಗೆ […]

ಸುರತ್ಕಲ್‌ನಲ್ಲಿ ಯುವಕನ ಮೇಲೆ ದಾಳಿ ಪ್ರಕರಣ: ಇಬ್ಬರು ಪೊಲೀಸ್ ವಶಕ್ಕೆ?

Thursday, January 11th, 2018
Mohhammed

ಮಂಗಳೂರು: ಸುರತ್ಕಲ್‌ನಲ್ಲಿ ಜನವರಿ 3ರಂದು ರಾತ್ರಿ ಬಂದರ್ ನಿವಾಸಿ ಮುಹಮ್ಮದ್ ಮುಬಶ್ಶಿರ್(22) ಎಂಬವರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ವಿಶೇಷ ತನಿಖಾ ತಂಡವು ಬುಧವಾರ ರಾತ್ರಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಅವರನ್ನು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ವಶಕ್ಕೆ ಪಡೆಯಲಾದ ಇಬ್ಬರೂ ಸಂಘಪರಿವಾರದ ಕಾರ್ಯಕರ್ತರೆಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ. ಜನವರಿ 3ರಂದು ಮಧ್ಯಾಹ್ನ ಕಾಟಿಪಳ್ಳದಲ್ಲಿ ದೀಪಕ್ ರಾವ್ ಹತ್ಯೆ ನಡೆದಿತ್ತು. […]

ದೀಪಕ್ ರಾವ್ ಹತ್ಯೆ ಪ್ರಕರಣ…ಅರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರು

Thursday, January 11th, 2018
deepak-rao

ಮಂಗಳೂರು: ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳಾದ ನೌಷಾದ್ ಮತ್ತು ಮೊಹಮ್ಮದ್ ಇರ್ಷಾದ್ ಅವರನ್ನು ಇಂದು ಮತ್ತೆ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈಗಾಗಲೇ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸಿರುವುದರಿಂದ ಮತ್ತೆ ಪೊಲೀಸ್ ಕಸ್ಟಡಿ ಕೇಳುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ. ಕಸ್ಟಡಿಯಲ್ಲಿ ತನಿಖೆಯ ವೇಳೆ ಕೆಲವೊಂದು ಮಹತ್ವದ ಸಂಗತಿಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಒಂದು ವಾರ ಕಾಲದ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಮತ್ತೆ […]

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಸಾವು ಪ್ರಕರಣ: ಪೊಲೀಸ್‌ಗೆ ನೊಟೀಸ್

Wednesday, January 10th, 2018
kavya

ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಾಲೆ ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೊಟೀಸ್ ನೀಡಿದೆ. ಕಾವ್ಯಾ ಪೂಜಾರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಮತ್ತು ದಾಖಲೆಗಳ ಸಮೇತ ಇನ್ನು ನಾಲ್ಕು ವಾರಗಳ ಒಳಗೆ ಮಾನವ ಹಕ್ಕು ಆಯೋಗದ ಮುಂದೆ ಹಾಜರಾಗುವಂತೆ ನೊಟೀಸ್‌ನಲ್ಲಿ ಸೂಚಿಸಲಾಗಿದೆ. ಆಳ್ವಾಸ್‌ನಲ್ಲಿ ಓದುತ್ತಿದ್ದ ಕಾವ್ಯಾ ಕಳೆದ ವರ್ಷ ಜುಲೈ 20ರಂದು ತನ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ […]

ನಾಟೆಕಲ್‌: ಪಾನಮತ್ತರಿಂದ ಮಸೀದಿ, ಅಂಗಡಿಗೆ ಹಾನಿ: ಇಬ್ಬರ ಬಂಧನ

Wednesday, January 10th, 2018
Natekal

ಮಂಗಳೂರು: ಮಸೀದಿ ಹಾಗೂ ಅಂಗಡಿಗಳಿಗೆ ಹಾನಿಗೈದು ಗಲಭೆಗೆ ಸಂಚು ರೂಪಿಸಿದ ಇಬ್ಬರನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಗೆ ಕುಮ್ಮಕ್ಕು ನೀಡಿದವರನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ನಾಟೆಕಲ್‌ ವ್ಯಾಪ್ತಿಯ ವರ್ತಕರ ಸಂಘ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸೋಮವಾರ ಕೆಲಹೊತ್ತು ಪ್ರತಿಭಟನೆ ನಡೆಸಿತು. ಸುಳ್ಯದ ಏನೆಕಲ್‌ನ ಯತಿರಾಜ್‌ (23) ಮತ್ತು ಬೀದಿಗುಡ್ಡೆಯ ನಿತಿನ್‌(25) ದಾಂಧಲೆ ನಡೆಸಿ ಪೊಲೀಸರ ವಶದಲ್ಲಿರುವವರು. ಬೈಕ್‌ನಲ್ಲಿ ಆಗಮಿ ಸಿದ್ದ ಇವರು ಎರಡು ಬೇಕರಿ, ಒಂದು ಮಟನ್‌ ಸ್ಟಾಲ್‌, ಸೆಲೂನ್‌ […]

ಪ್ರತೀಕಾರ ದಾಳಿಯ ಭಯ, ಸಂಜೆಯಾಗುತ್ತಿದ್ದಂತೆ ಮಂಗಳೂರು ಸ್ತಬ್ಧ

Tuesday, January 9th, 2018
Mangaluru

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಎರಡು ಹತ್ಯೆ ಪ್ರಕರಣಗಳು ಜನರನ್ನು ಬೆಚ್ಚಿಬೀಳಿಸಿವೆ. ಅಮಾಯಕರಿಬ್ಬರು ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಳಿಕ ಮತ್ತೆ ನಗರದಲ್ಲಿ ಪ್ರತಿಕಾರದ ದಾಳಿಗಳ ಭೀತಿ ಆವರಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸಂಜೆಯಾಗುತ್ತಿದ್ದಂತೆ ಸ್ಥಬ್ಧವಾಗುತ್ತಿದೆ. ಕತ್ತಲಾಗುತ್ತಿದ್ದಂತೆ ಜನರು ಮನೆ ಸೇರಿಕೊಳ್ಳುತ್ತಿದ್ದು ಮಂಗಳೂರಿನ ರಸ್ತೆಗಳಲ್ಲಿ ರಾತ್ರಿ ಹೊತ್ತು ಅಘೋಷಿತ ಬಂದ್ ಜಾರಿಯಲ್ಲಿರುತ್ತದೆ. ಮತೀಯ ದ್ವೇಷದ ಎಲ್ಲಾ ಕೊಲೆಗಳ ಮರು ತನಿಖೆಗೆ ಮುನೀರ್ ಕಾಟಿಪಳ್ಳ ಒತ್ತಾಯ ಮೊಬೈಲ್ ಕರೆನ್ಸಿ ಮತ್ತು ಸಿಮ್ ಕಾರ್ಡ್ ಮಾರಾಟ ಮಾಡಿಕೊಂಡಿದ್ದ ದೀಪಕ್ ರಾವ್ ಅವರನ್ನು […]