Blog Archive

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಸಿಯೂಟ ಕಾರ್ಯಕರ್ತರ ಪ್ರತಿಭಟನೆ

Tuesday, January 21st, 2020
bisi-uta-karyakartaru

ಬೆಂಗಳೂರು : ಕನಿಷ್ಠ ವೇತನ, ಬಿಸಿಯೂಟ ತಯಾರಿಕೆಯಲ್ಲಿ ಖಾಸಗಿ ಹಸ್ತಕ್ಷೇಪ ಕೈಬಿಡುವಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಸಿಯೂಟ ತಯಾರಿಕರು ಎರಡು ದಿನದ ಬೃಹತ್ ಪ್ರತಿಭಟನೆಗೆ ಬೀದಿಗಿಳಿದಿದ್ದಾರೆ. ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಹಾಗೂ ಸಿಐಟಿಯುಸಿ ಸಂಘಟನೆಯಿಂದ ಪ್ರತಿಭಟನೆ ನೇತೃತ್ವ ವಹಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಬಿಸಿಯೂಟ ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ಮೆರವಣಿಗೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1 […]

ಮಂಗಳೂರು : ವುಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Saturday, January 11th, 2020
pratibhatane

ಮಂಗಳೂರು : ವುಮೆನ್ ಇಂಡಿಯಾ ಮೂವ್ಮೆಂಟ್ ದ.ಕ ಜಿಲ್ಲಾ ಸಮಿತಿಯ ವತಿಯಿಂದ ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ತಿರಸ್ಕರಿಸಿ ಮತ್ತು ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಮಂಗಳೂರಿನ ಟೌನ್ ಹಾಲ್ ಮುಂಭಾಗ ಶನಿವಾರ ಬೆಳಗ್ಗೆ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭ ಡಬ್ಲ್ಯೂಐಎಂ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಂ, ಡಬ್ಲ್ಯೂಐಎಂ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಸಾಮಾಜಿಕ‌ ಹೋರಾಟಗಾರ್ತಿ ನಝ್ಮಾ, ಲೇಖಕಿ ಜ್ಯೋತಿ ಗುರುಪ್ರಸಾದ್, ಎನ್‌ಡಬ್ಯುಎಫ್ ರಾಷ್ಟ್ರೀಯ ಸಮಿತಿ ಸದಸ್ಯೆ ದಿಲ್‌ದಾರ್, ಎಸ್ಕೆಎಸ್ಸೆಂನ ಮುಝಾಹಿದಾ, ಸಿಎಫ್‌ಐನ ಅಮ್ರೀನ್‌, ಲೇಖಕಿ […]

ಕಾರ್ಮಿಕ ನೀತಿ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ಕೊಡಗು ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ

Thursday, January 9th, 2020
madikeri

ಮಡಿಕೇರಿ : ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದವು. ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಮಡಿಕೇರಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡು ಬೇಡಿಕೆಯನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ರಾಷ್ಟ್ರೀಯ ಸಮಾನ […]

ಕಾರ್ಮಿಕ ವರ್ಗದ ಒಗ್ಗಟ್ಟಿನ ಪ್ರತಿಭಟನೆ : ಕೊಡಗಿನ ಜನಜೀವನಕ್ಕೆ ತೊಂದರೆ ನೀಡದ ಮುಷ್ಕರ

Thursday, January 9th, 2020
bank

ಮಡಿಕೇರಿ : ಕೇಂದ್ರ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಮತ್ತು ರಾಷ್ಟ್ರ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕಾರ್ಮಿಕರ 18 ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿದವು. ಮುಷ್ಕರಕ್ಕೆ ಜಿಲ್ಲೆಯ ಹತ್ತಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿದ್ದವಾದರೂ, ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಖಾಸಗಿ ಬಸ್‌ಗಳು, ಆಟೋ ರಿಕ್ಷಾಗಳು ಎಂದಿನಂತೆ ಸಂಚರಿಸಿದವು. ಆದರೆ […]

ಎನ್‌ಆರ್‌ಸಿ, ಸಿಎಎ ಕಾಯ್ದೆ ವಿರುದ್ಧ ಮಡಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ

Friday, January 3rd, 2020
CPIM

ಮಡಿಕೇರಿ : ಕೇಂದ್ರ ಸರ್ಕಾರದ ಎನ್‌ಆರ್‌ಸಿ ಮತ್ತು ಸಿಎಎ ಕಾಯ್ದೆಯನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕಾಯ್ದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಡಾ.ಇ.ರ.ದುರ್ಗಾಪ್ರಸಾದ್, ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ಮೂಲ ಆಶಯಗಳಿಗೆ ವಿರೋಧವಾಗಿದ್ದು, ದೇಶದ ಐಕ್ಯತೆಗೆ ಧಕ್ಕೆ ತಂದರುವಂತಾಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಅನುಸರಿಸುತ್ತಿರುವ […]

ಮಡಿಕೇರಿ : ಡಿ.31 ರಂದು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Thursday, December 26th, 2019
manjunath

ಮಡಿಕೇರಿ : ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆ ವಿರುದ್ಧ ಡಿ.30 ಕ್ಕೆ ಬದಲಾಗಿ ಡಿ.30 ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ಅಂದು ಬೆಳಗ್ಗೆ10.30 ಗಂಟೆಗೆ ಸಮಾವೇಶಗೊಂಡು ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಪತ್ರಿಕಾ ಪ್ರಕಟಣೆ […]

ಮುಸ್ಲಿಂ ಜಮಾಅತ್‌ಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ : ಕೇಂದ್ರದ ನಿಲುವಿಗೆ ಖಂಡನೆ

Wednesday, December 25th, 2019
Protest

ಮಡಿಕೇರಿ : ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಮತ್ತು ಪೌರತ್ವ ನೋಂದಣಿ(ಎನ್‌ಆರ್‌ಸಿ)ಯನ್ನು ವಿರೋಧಿಸಿ ಹಾಗೂ ಮಂಗಳೂರು ಗೋಲಿಬಾರ್ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದಿಂದ ನಗರದ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದ ಕಾರ್ಯಾಧ್ಯಕ್ಷ ಪಿ.ಎಂ. ಖಾಸಿಂ ಮತ್ತು ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾಸ್ಟರ್ ಅವರ ನೇತೃತ್ವದಲ್ಲಿ ನಗರದ ಗಾಂಧಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರು ’ರಿಜೆಕ್ಟ್ ಸಿಎಎ, ಬಾಯ್‌ಕಾಟ್ […]

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಪ್ರತಿಭಟನೆ

Monday, December 23rd, 2019
Protest

ಮಡಿಕೇರಿ : ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಬೆಂಬಲಿತ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ, ಎನ್‌ಆರ್‌ಸಿ ಮತ್ತು ಸಿಎಎ ಸಂವಿಧಾನ ಬಾಹಿರ ಕಾಯ್ದೆಯಾಗಿದ್ದು, ಯಾವುದೇ ಕಾರಣಕ್ಕೂ ಅನುಷ್ಠಾನಗೊಳಿಸಬಾರದೆಂದು ಒತ್ತಾಯಿಸಿದರು. […]

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಒತ್ತಾಯ : ಬಾಣಾವರದಲ್ಲಿ ಪ್ರತಿಭಟನೆ

Wednesday, December 18th, 2019
somavarapete

ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಬಾಣಾವರ ವ್ಯಾಪ್ತಿಯ ಸಿದ್ದಲಿಂಗಪುರ, ಸಂಗಯ್ಯನಪುರ, ಬಸರಿಗುಪ್ಪೆ, ಅಳಿಲುಗುಪ್ಪೆ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಡಿವಾಣ ಹಾಕುವಂತೆ ಆಗ್ರಹಿಸಿ ಸಾರ್ವಜನಿಕರು ಬಾಣಾವರ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು. 12 ಕಾಡಾನೆಗಳ ಹಿಂಡು ಈ ಭಾಗದಲ್ಲಿ ಬೀಡುಬಿಟ್ಟಿದ್ದು, ಜನವಸತಿ ಪ್ರದೇಶದಲ್ಲಿಯೇ ಸಂಚರಿಸುತ್ತಿವೆ. ಗ್ರಾಮಸ್ಥರ ಕೃಷಿ ಫಸಲು ನಷ್ಟಗೊಳಿಸುತ್ತಿವೆ. ಕಳೆದ ವಾರ ಅರಣ್ಯ ರಕ್ಷಕನ ಮೇಲೆಯೇ ಧಾಳಿ ನಡೆಸಿದೆ. ಇದರೊಂದಿಗೆ ರಸ್ತೆ, ಹೊಲಗಳಿಗೆ ತೆರಳುವ ಕೃಷಿಕರ ಮೇಲೂ ಧಾಳಿ ನಡೆಸುತ್ತಿವೆ. ಆನೆಗಳನ್ನು ಕಾಡಿಗಟ್ಟುವಂತೆ ಹಲವಷ್ಟು ಬಾರಿ ಮನವಿ […]

ಬಂಟ್ವಾಳ : ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ

Tuesday, December 17th, 2019
bantwal

ಬಂಟ್ವಾಳ : ರಾಷ್ಟ್ರೀಯ ಪೌರತ್ವ ಕಾಯ್ದೆ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಕಾಂಗ್ರೆಸ್ ನಾಯಕ ಮತ್ತು ನ್ಯಾಯವಾದಿ ಸುಧೀರ್ ಕುಮಾರ್ ರವರು, ರಾಷ್ಟ್ರ ಪೌರತ್ವ ತಿದ್ದುಪಡಿ ಕಾಯ್ದೆ ಎನ್ನುವುದು ಬಿಜೆಪಿಯ ಮತಗಳಿಕೆಯ ಕಾನೂನೇ ಹೊರತು ದೇಶದ ಅಭಿವೃದ್ಧಿಗಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ಒಂದು ಸಮುದಾಯವನ್ನು ವಿಭಜಿಸುವ ಗಲಭೆ ಪೀಡಿತ ಹಿಂಸಾ ಮಾತೃ ಭೂಮಿಯಾಗಲಿದೆ. ನಮಗೆ ಹಿಟ್ಲರ್ ಭಾರತ ಬೇಕಾಗಿಲ್ಲ. ಗಾಂಧೀ ಪ್ರೇರಿತ ಭಾರತ […]