Blog Archive

ಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ ಹತ್ತು ವರ್ಷ ಜೈಲು ಮತ್ತು 10,000 ರೂ. ದಂಡ

Tuesday, September 24th, 2019
aprapte

ಮಂಗಳೂರು : ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ , ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣದಲ್ಲಿ ಬಂಟ್ವಾಳ ತಾಲ್ಲೂಕು ಸಜಿಪಮುನ್ನೂರು ಶಾರದಾನಗರ ನಿವಾಸಿ ಸಂತೋಷ್ (34) ಎಂಬಾತನಿಗೆ ನಗರದ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 10,000 ದಂಡ ವಿಧಿಸಿ ಮಂಗಳೂರಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ( ಪೋಕ್ಸೋ ) ಸೋಮವಾರ ತೀರ್ಪು ನೀಡಿದೆ. 14 ವರ್ಷದ ಬಾಲಕಿಯೂ ಅಂಗಡಿಗೆ ಹೋಗುತ್ತಿದ್ದಾಗ, […]

ಬಂಟ್ವಾಳ : ಜಿಲ್ಲಾ ಎಸ್.ಪಿ ಕಚೇರಿ ಸ್ಥಳಾಂತರಗೊಳ್ಳಲಿ; ಬಿ.ರಮಾನಾಥ ರೈ

Monday, September 16th, 2019
bantwal

ಬಂಟ್ವಾಳ : ಜಿಲ್ಲಾ ಎಸ್.ಪಿ.ಕಚೇರಿ ಮಂಗಳೂರಿನಿಂದ ಪುತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಪ್ರಸ್ತಾವ ಇದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿಗಳಿಗೆ ಬಂಟ್ವಾಳವೇ ಕೇಂದ್ರ ಸ್ಥಾನವಾಗಿರುವುದರಿಂದ ಬಂಟ್ವಾಳಕ್ಕೆ ಎಸ್ಪಿ ಕಚೇರಿಯನ್ನು ಸ್ಥಳಾಂತರಿಸಲಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಪಿ ಅವರ ಕಚೇರಿ ಪೂತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಚರ್ಚೆಯಾಗುತ್ತಿವೆ. ಹಾಗಾಗಿ ಬಂಟ್ವಾಳದಲ್ಲಿ ಎಸ್ಪಿ ಕಚೇರಿಯಾಗಲಿ. ಅಲ್ಲದೆ ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿಗಳಿಗೆ ಬಂಟ್ವಾಳವೇ […]

ಬಂಟ್ವಾಳ : ಅಕ್ರಮ ಮರಳು ಸಾಗಾಟ ವಿರುದ್ಧ ಕಾರ್ಯಾಚರಣೆ : ಐದು ಲಾರಿಗಳು ವಶ

Saturday, September 14th, 2019
laari

ಬಂಟ್ವಾಳ : ಅಕ್ರಮ ಮರಳು ಸಾಗಾಟದ ಲಾರಿಗಳ ವಿರುದ್ಧ ಶುಕ್ರವಾರ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ನೇತೃತ್ವದ ತಂಡ ದಾಳಿ ನಡೆಸಿ 5 ಲಾರಿಗಳನ್ನು ವಶಪಡಿಸಿ ಪೊಲೀಸರಿಗೆ ಹಸ್ತಾಂತರಿಸಿದೆ. ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮರಳುಗಳನ್ನು ರಾತ್ರಿ ವೇಳೆ ಹೊರ ಜಿಲ್ಲೆಗಳಿಗೆ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲು ಲಾರಿಗಳಲ್ಲಿ ತುಂಬಿಸಿ ಪರವಾನಿಗೆ ರಹಿತ ಸಾಗಿಸುತ್ತಿದ್ದ ಲಾರಿಗಳನ್ನು ತಡೆಯಲಾಗಿತ್ತು. ಪಾಣೆಮಂಗಳೂರು ನರಹರಿ ಬಳಿಯಲ್ಲಿ ಎರಡು ಲಾರಿ, ಮಾರ್ನಬೈಲುನಲ್ಲಿ ಒಂದು ಲಾರಿ, ಚೇಲೂರಿನಲ್ಲಿ ಒಂದು ಹಾಗೂ […]

ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಕಾಂಗ್ರೆಸಿಗರಿಂದ ಬೃಹತ್ ಪಾದಯಾತ್ರೆ ಪ್ರತಿಭಟನೆ

Wednesday, September 11th, 2019
paadayatre

ಬಂಟ್ವಾಳ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಆಗ್ರಹಿಸಿ ಬಂಟ್ವಾಳ ಕಾಂಗ್ರೆಸ್ ವತಿಯಿಂದ ಬುಧವಾರ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಪ್ರತಿಭಟನೆ ನಡೆಯಿತು. ಮೆಲ್ಕಾರ್ ಜಂಕ್ಷನ್ ನಿಂದ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ಬಿ.ಸಿ.ರೋಡ್ ಮಿನಿ ವಿಧಾನಸೌಧದ ವರೆಗೆ ಪಾದಾಯಾತ್ರೆಯ ಮೂಲಕ ಆಗಮಿಸಿ ಹೆದ್ದಾರಿ ದುರಸ್ತಿಗಾಗಿ ತಹಶೀಲ್ದಾರ್ ಅವರ ಮೂಲಕ ಸರಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿ.ಪಂ, ತಾ.ಪಂ ಸದಸ್ಯರು, ಕಾಂಗ್ರೆಸ್ ನ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು […]

ದರೋಡೆಗೆ ಹೊಂಚು ಹಾಕುತ್ತಿದ್ದ ಐವರ ಬಂಧನ

Wednesday, September 4th, 2019
bantwal

ಬಂಟ್ವಾಳ : ದರೋಡೆಗೆ ಹೊಂಚು ಹಾಕುತ್ತಿದ್ದ ಐವರು ಆರೋಪಿಗಳನ್ನು ಮಂಚಿ ಗ್ರಾಮದ ಮಂಚಿ ಕಟ್ಟೆ ಎಂಬಲ್ಲಿ ಸೆ.೦4ರ ಬುಧವಾರದಂದು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗೋಳ್ತಮಜಲು ನಿವಾಸಿ ಉಮ್ಮರ್ ಫಾರೂಕ್ (26), ಮಂಗಿಳಪದವಿನ ಮಹಮ್ಮದ್ ಅಬೂಬಕ್ಕರ್ (21), ಬಂಟ್ವಾಳದ ಅಬ್ದುಲ್ ಖಾದರ್ (40), ಗೋಳ್ತಮಜಲು ನಿವಾಸಿ ಮೊಹಮ್ಮದ್ ರಮೀಜ್ (22) , ಬಂಟ್ವಾಳದ ಇಬ್ರಾಹಿಂ ಖಲೀಲ್ (24) ಎಂದು ಗುರುತಿಸಲಾಗಿದೆ. ಮಂಚಿ ಗ್ರಾಮದ ಮಂಚಿ ಕಟ್ಟೆಯ ರಸ್ತೆಯ ಬದಿಯಲ್ಲಿ ಅನುಮಾನಾಸ್ಪದವಾಗಿ ಇವರುಗಳು ನಿಂತುಕೊಂಡಿದ್ದು, ಇವರನ್ನು ವಿಚಾರಿಸಿದಾಗ […]

ಶ್ರೀ ಕ್ಷೇತ್ರ ಪಣೋಲಿಬೈಲು ಕ್ಷೇತ್ರದ ಪ್ರಧಾನ ಅರ್ಚಕ ಬಾಬು ಮೂಲ್ಯ ನಿಧನ

Monday, August 12th, 2019
panolibail

ಬಂಟ್ವಾಳ : ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ಬಾಬು ಮೂಲ್ಯ(92) ಭಾನುವಾರ ಅಪರಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕೃಷಿ ಕುಟುಂಬದಿಂದ ಬಂದ ಇವರು “ಕಾರ್ನಿಕೊದ ಗಗ್ಗರ ಸೇವೆ” ಹಾಗೂ ಅಗೇಲು ಸೇವೆಗೆ ಖ್ಯಾತಿಯಾಗಿದ್ದ ಶ್ರೀ ಕ್ಷೇತ್ರ ಪನೋಲಿಬೈಲಿನಲ್ಲಿ ತಮ್ಮ 30 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿದ್ದಾರೆ. ಶ್ರೀ ಕ್ಷೇತ್ರದ ಅರ್ಚಕನಾಗಿ ತನ್ನ ವೃತ್ತಿ ಜೀವನದಲ್ಲಿ ನಿಸ್ವಾರ್ಥವಾದ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ಯು.ರಾಜೇಶ್ […]

ಬಂಟ್ವಾಳದ ನೆರೆ ಪೀಡಿತ ಪ್ರದೇಶಗಳಿಗೆ ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಭೇಟಿ

Saturday, August 10th, 2019
Nalin-Bantwal

ಬಂಟ್ವಾಳ: ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹಾಗೂ ಅಧಿಕಾರಿಗಳೊಂದಿಗೆ ಶನಿವಾರ ಬಂಟ್ವಾಳದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಶನಿವಾರ ಸಂಜೆ ಸಿಎಂ ಅವರು ಬಂಟ್ವಾಳಕ್ಕೆ ಆಗಮಿಸುತ್ತಾರೆ ಎಂದು ಹೇಳಲಾಗಿತ್ತಾದರೂ ಬಳಿಕ ಸಿಎಂ ಅವರ ದ.ಕ.ಜಿಲ್ಲಾ ಪ್ರವಾಸ ರದ್ದುಗೊಂಡಿತ್ತು. ಇಂದು(ಆ. 10ರಂದು) ಸಂಜೆ 4.30ಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಲಿದ್ದಾರೆ. ಬಂಟ್ವಾಳ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರವಿವಾರ […]

ಬಂಟ್ವಾಳ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಬಂಟ್ವಾಳ ತಹಶೀಲ್ದಾರ್ ಭೇಟಿ

Thursday, August 8th, 2019
Bantwala-DC

ಬಂಟ್ವಾಳ:  ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮಂಗಳೂರು ಆಯುಕ್ತ ರವಿ ಚಂದ್ರ ನಾಯಕ್ ಹಾಗೂ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್.ಬೇಟಿ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳಿಗೆ ಗುರುವಾರ ಭೇಟಿ  ನೀಡಿ ಪರಿಶೀಲನೆ ನಡೆಸಿ ದರು. ಬಂಟ್ವಾಳ, ಬಡ್ಡಕಟ್ಟೆ, ಜಕ್ರಿಬೆಟ್ಟು, ಪಾಣೆಮಂಗಳೂರು , ಆಲಡ್ಕ, ಕಂಚಿಕಾರ್ ಪೇಟೆ ಮುಂತಾದ ಪ್ರದೇಶಗಳಿಗೆ ಬೇಟಿ ನೀಡಿ ಅಲ್ಲಿ ನ ನಿವಾಸಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವುದೇ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಂಪರ್ಕ ಮಾಡುವಂತೆ ತಿಳಿಸಿದರು. ಮಳೆ ಕಡಿಮೆಯಾಗಿದ್ದರೂ  ನೇತ್ರಾವತಿ ನದಿಯಲ್ಲಿ ನೀರು ಉಕ್ಕಿ […]

ಬಂಟ್ವಾಳ : ವೈರಲ್ ಆದ ಅಡಿಕೆ ಮರ ಹತ್ತುವ ಬೈಕ್ ವಿಡಿಯೋ

Tuesday, June 11th, 2019
areca

ಬಂಟ್ವಾಳ :  ಬೈಕ್ ಮಾದರಿಯ ಯಂತ್ರದ ಮೂಲಕ ಅಡಿಕೆ ಮರ ಹತ್ತಿ ಕಾಯಿ ಕೀಳುವ ಬೈಕ್ ಬಂಟ್ವಾಳ ತಾಲೂಕಿನ ಪಣೋಲಿಬೈಲ್ ಸಮೀಪದ ಕೋಮಾಲಿ ಎಂಬಲ್ಲಿ  ಮರ ಹತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೋಮಾಲಿ ಎಂಬಲ್ಲಿರುವ ಪ್ರಗತಿಪರ ಕೃಷಿಕ ಗಣಪತಿ ಭಟ್ ಅವರು ನಿರ್ಮಿಸಿ ಪ್ರಾಯೋಗಿಕವಾಗಿ ತನ್ನ ಮನೆಯ ಸದಸ್ಯರು ಅದರಲ್ಲೂ ಮಹಿಳೆಯರು ಇದನ್ನು ಬಳಸಿದ ಸಂದರ್ಭ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಈಗ ಕೃಷಿಕರ ವಲಯದಲ್ಲಿ ವೈರಲ್ ಆಗಿದೆ. ಈ ಬೈಕ್ ಮೂಲಕ ಯಾರ […]

ಬಂಟ್ವಾಳ ಇಂದು ಹಸೆಮಣೆ ಏರುವ ಹೊಸ ಜೋಡಿಗಳಿಂದ ಮತದಾನ

Thursday, April 18th, 2019
Mundadi

ಬಂಟ್ವಾಳ  : ಬಂಟ್ವಾಳದಲ್ಲಿ ಬೆಳಿಗ್ಗೆ 11 ರ ವೇಳೆಗೆ 33.89 ಶೇಕಡಾ ಮತದಾನವಾಗಿದ್ದು, ಮತದಾರರು ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ.  ಇಂದು ಮದುವೆಯಾಗುವ ನವಜೋಡಿ ಬೆಳಗ್ಗೆ ಓಟ್ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ಸುಭಾಸ್ ನಗರದ ಬೇಂಕೆ ನಿವಾಸಿ ಅಶೋಕ್ ಪುಷ್ಪಲತಾ ಅವರ ಪುತ್ರಿ ಪ್ರತಿಜ್ಞಾ ಅವರು ಬೇಂಕ್ಯೆ ಸರಕಾರಿ ಶಾಲೆಯ ಮತಗಟ್ಟೆಯಲ್ಲಿ ಚಲಾಯಿಸಿದ್ದಾರೆ. ಅದಲ್ಲದೆ, ಮದುಮಗ ಸುಮಿತ್ ಪೂಜಾರಿ ಅವರು ತನ್ನ ಬಾವಿ ಪತ್ನಿ ಪ್ರತಿಜ್ಞಾ ಅವರ ಜೊತೆ ಪೊಳಲಿ ಸರಕಾರಿ ಶಾಲೆಯ ಮತಗಟ್ಟೆಗೆ ತೆರಳಿ ಮತಚಲಾಯಿಸಿದರು. […]