Blog Archive

ಲಾಕ್ಡೌನ್ ಕಟ್ಟು ನಿಟ್ಟಾಗಿ ಜಾರಿಗೆ ಪೊಲೀಸರಿಗೆ ಸೂಚನೆ

Saturday, May 22nd, 2021
Bommai

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯದಲ್ಲಿ ವಿಸ್ತರಣೆ ಯಾಗಿರುವ ಲಾಕ್‍ಡೌನ್‍ನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೋಲಿಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿಗಳು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ 3- 4 ದಿನಗಳ ಕಾಲ ನಿರಂತರವಾಗಿ ಲಾಕ್ಡೌನ್ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ […]

ಎರಡನೇ ಹಂತದ ಲಾಕ್ ಡೌನ್ ಮೇ 24 ರಿಂದ ಜೂನ್ 7ರ ವರೆಗೆ ವಿಸ್ತರಿಸಿದ ಸರಕಾರ

Friday, May 21st, 2021
BS Yedyurappa

ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯ ಎರಡನೇ ಹಂತದ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ದಿನಗಳ ಕಾಲ ವಿಸ್ತರಿಸಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಬಳಿಕ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು. ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಮೇ 24 ರಿಂದ ಜೂನ್ 7ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಹಿಂದೆ ಜಾರಿಗೊಳಿಸಿರುವ ಮಾರ್ಗಸೂಚಿಯೇ ಅನ್ವಯವಾಗಲಿದೆ ಎಂದು ಸಿಎಂ ಬಿ.ಎಸ್. […]

ಕೋವಿಡ್-19 ರ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ : ಬಿ ಎಸ್ ಯಡಿಯೂರಪ್ಪ

Saturday, May 15th, 2021
BS Yediturappa

ಬೆಂಗಳೂರು : ಕೋವಿಡ್-19 ರ ಮೊದಲನೇ ಅಲೆಗಿಂತಲೂ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ. ಅಲ್ಲದೆ, ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಹೆಚ್ಚಿನ ಒತ್ತಡ ಹೇರಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಲ್ಲಿ ಇಂದು ಅಭಿಪ್ರಾಯಪಟ್ಟರು. ಕೋವಿಡ್ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ವೈದ್ಯರೊಂದಿಗೆ ವೀಡಿಯೋ ಸಂವಾದ ನಡೆಸಿ ವೈದ್ಯರ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದರಲ್ಲದೆ, ವೈದ್ಯರು ಸೇವೆಯಲ್ಲಿ […]

ಶಿಕ್ಷಣ, ಸಂಘಟನೆ ಮತ್ತು ಹೋರಾಟ ಡಾ.ಅಂಬೇಡ್ಕರ್ ಶೋಷಿತರಿಗಾಗಿ ನೀಡಿದ 3 ಮಂತ್ರಗಳು

Wednesday, April 14th, 2021
yedyurappa

ಬೆಂಗಳೂರು : ಡಾ.ಬಿ.ಆರ್. ಅಂಬೇಡ್ಕರ್ ಅವರ ಸಾಧನೆ ನವ ಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದೆ. ಸಮಾನತೆಯ ಸಮಾಜಕ್ಕಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದಂತ ಮೂರು ಮಂತ್ರಗಳನ್ನು ಅವರು ಶೋಷಿತರ ವರ್ಗಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಇಂದು ಬೆಳಿಗ್ಗೆ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಬಳಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ […]

ನೂತನ ಸಚಿವ ಎಸ್​.ಅಂಗಾರ ಅವರಿಗೆ ಮಂಗಳೂರಿನಲ್ಲಿ ಸ್ವಾಗತ

Friday, January 15th, 2021
sAngara

ಮಂಗಳೂರು: ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಚಿವ ಎಸ್.ಅಂಗಾರ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದರು. ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಅವರು ಸ್ವಾಗತಿಸಿದರು. ನೂತನ ಸಚಿವರು ವಿಮಾನ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಹೂವಿನ ಹಾಕಿ  ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಸ್ವಾಗತಿಸಿದರು .  ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಮಾನಾಥ್ ಕೊಟ್ಯಾನ್,   ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ […]

ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ

Thursday, December 24th, 2020
yedyurappa

ಬೆಂಗಳೂರು: ಬ್ರಿಟನ್  ದೇಶದಲ್ಲಿ  ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಲು  ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ. “ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ […]

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಿದ್ದಗೊಂಡ ಮಂಗಳೂರು ನಗರ

Wednesday, November 4th, 2020
BJP Executive

ಮಂಗಳೂರು  :  ನ. 5ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಮಹತ್ವದ ಸಭೆಗೆ ಮಂಗಳೂರು  ಸರ್ವ ರೀತಿಯಿಂದ ಸಿದ್ಧಗೊಂಡಿದೆ. ನಗರದೆಲ್ಲೆಡೆ ಬಿಜೆಪಿ ಬಂಟಿಂಗ್ಸ್‌ ಹಾಗೂ ಧ್ವಜಗಳನ್ನು ಮತ್ತು ಬಣ್ಣದ ಬೆಳಕುಗಳನ್ನು  ಅಳವಡಿಸಲಾಗಿವೆ. ನಗರದ ಎಂ.ಜಿ. ರಸ್ತೆಯ ವ್ಯಾಪ್ತಿಯಲ್ಲಿ ಬಿಜೆಪಿ ಬಂಟಿಂಗ್ಸ್‌, ವಿವಿಧ ಮುಖ್ಯ ರಸ್ತೆಗಳಲ್ಲಿ ಬಿಜೆಪಿ ಧ್ವಜಗಳನ್ನು ಅಳವಡಿಸಲಾಗಿವೆ. ಸಭೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಹಿತ ಬಿಜೆಪಿಯ ಅಗ್ರಗಣ್ಯ ನಾಯಕರ ಭಾವಚಿತ್ರಗಳ ಬ್ಯಾನರ್‌ಗಳನ್ನು ಅಳವಡಿಸಲಾಗಿವೆ. ನಗರದ ವಿವಿಧ ವೃತ್ತಗಳನ್ನು ಅಲಂಕರಿಸಲಾಗಿವೆ. […]

ನೂತನ ಪ್ರವಾಸೋದ್ಯಮ ನೀತಿಯು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 

Sunday, September 27th, 2020
Tourism day

ಬೆಂಗಳೂರು : ನೂತನ ಪ್ರವಾಸೋದ್ಯಮ ನೀತಿಯು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ತಿಳಿಸಿದರು. ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಪ್ರವಾಸೋದ್ಯಮ ನೀತಿ 2020-25 ರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿಯ ಗುರಿ ಸಾಧಿಸಬೇಕಾದರೆ ಸಮರ್ಪಕ ರೂಪುರೇಷೆಗಳು ಹಾಗೂ ಯೋಜನೆಗಳನ್ನು ಒಳಗೊಂಡ ಒಂದು ನೀತಿಯನ್ನು ರೂಪಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಪ್ರವಾಸೋದ್ಯಮದ ಸಮಗ್ರ […]

ಏ.20ರಿಂದ ಲಾಕ್ ಡೌನ್ ಸಡಿಲಿಕೆ ಇಲ್ಲ : ಯಥಾಸ್ಥಿತಿ ಮುಂದುವರಿಕೆ

Saturday, April 18th, 2020
Yedyurappa

ಬೆಂಗಳೂರು: ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಲಾಕ್ ಡೌನ್ ಸಡಿಲಿಕೆ ನಿಯಮವನ್ನು ಸರ್ಕಾರ ವಾಪಾಸ್ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಟ್ವೀಟ್ ಮಾಡಿದ್ದಾರೆ. ಕಂಟೇನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದುಕೊಂಡಿದ್ದು, ಏ.20ರಿಂದ ಯಥಾಸ್ಥಿತಿ ಮುಂದುವರೆಯಲಿದೆ. ಏಪ್ರಿಲ್ 20ರ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ(ಐಟಿ, ಬಿಟಿ) ಶೇ. 33ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ನೀಡಲಾಗಿದ್ದ ಅವಕಾಶವನ್ನು ಕೂಡಾ […]

ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿ ಎಸ್ ಯಡಿಯೂರಪ್ಪರವರಲ್ಲಿ ಮನವಿ

Wednesday, December 25th, 2019
srinivas-naik

ಮಂಗಳೂರು : ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಬುಧವಾರ ಭೇಟಿಯಾಗಿ ಮನವಿ ಸಲ್ಲಿಸಿದರು . ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್,ಉಡುಪಿ ಚಿಕ್ಕ ಮಗಳೂರು ಸಂಸದೆ ಶೋಭಾ ಕರಂದ್ಲಾಜೆ ,ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್,ಜಿಲ್ಲಾಧಿಕಾರಿ […]