Blog Archive

ಎ.27ಕ್ಕೆ ಬಂಟ್ವಾಳದಲ್ಲಿ ರಾಹುಲ್ ಗಾಂಧಿಯಿಂದ ಪ್ರಚಾರ: ರಮಾನಾಥ ರೈ

Tuesday, April 24th, 2018
Ramanath-rai

ಮಂಗಳೂರು: ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎ.27ರಂದು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ಮಂಗಳೂರಿನಲ್ಲಿರುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈ, ಎ.27ರಂದು ಬೆಳಗ್ಗೆ ಬಂಟ್ವಾಳಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಬಿ.ಸಿ.ರೋಡ್ ಸಮೀಪದ ಜೋಡುಮಾರ್ಗ ಉದ್ಯಾನವನದಲ್ಲಿ ನಡೆಯುವ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದರು. ಚುನಾವಣಾ ಟಿಕೆಟ್ ಹಂಚಿಕೆಗೆ ಸಂಬಂಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ […]

ಸತತ 8ನೇ ಬಾರಿ ನಾಮಪತ್ರ ಸಲ್ಲಿಸಲಿರುವ ರಮಾನಾಥ ರೈ

Thursday, April 19th, 2018
ramanath-rai

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹಳ ಕುತೂಹಲ ಮೂಡಿಸಿರುವ ಕ್ಷೇತ್ರ ಬಂಟ್ವಾಳದಲ್ಲಿ ರಾಜ್ಯ ಅರಣ್ಯ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ ಸತತ 8ನೇ ಬಾರಿ ನಾಮಪತ್ರ ಸಲ್ಲಿಸಲಿದ್ದಾರೆ. ಗುರುವಾರ ಬೆಳಗ್ಗೆ ಬಂಟ್ವಾಳದ ಕೆಎಸ್ಆರ್ ಟಿಸಿ ಬಳಿ ಇರುವ ಕಾಂಗ್ರೆಸ್ ಪ್ರಚಾರ ಸಮಿತಿ ಕಚೇರಿಯಿಂದ ಕಾಲ್ನಡಿಗೆ ಮೂಲಕ ತೆರಳಿ ಬಿ.ಸಿ ರೋಡ್ ನ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ರಮಾನಾಥ ರೈ ಅವರ ವಿಶೇಷತೆ ಅಂದರೆ ಒಂದೇ […]

ರಾಜ್ಯದಿಂದ ಲೆಕ್ಕ ಕೇಳಲು ನರೇಂದ್ರ ಮೋದಿ ಚಕ್ರವರ್ತಿಯಲ್ಲ: ರಮಾನಾಥ ರೈ

Monday, March 26th, 2018
ramanath-rai

ಮಂಗಳೂರು: ರಾಜ್ಯ ಸರಕಾರದಿಂದ ಲೆಕ್ಕ ಕೇಳಲು ನರೇಂದ್ರ ಮೋದಿ ಚಕ್ರವರ್ತಿಯಲ್ಲ. ಲೆಕ್ಕ ಕೊಡೋಕೆ ನಾವೇನು ಸಾಮಂತ ರಾಜರುಗಳಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲೆಕ್ಕ ಕೊಡುವ ಪದ್ಧತಿ ಇಲ್ಲ ಎಂದು ತಿಳಿಸಿದರು. ರೈ ಚಕ್ರವರ್ತಿಗೆ ಸಾಮಂತರಸರು ಮಾತ್ರ ಲೆಕ್ಕ ಕೊಡಬೇಕಷ್ಟೆ. ಪ್ರಧಾನಿ ನರೇಂದ್ರ ಮೋದಿ ದೇಶದ ಚಕ್ರವರ್ತಿಯಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಮಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜನಾಶೀರ್ವಾದ […]

ಯೋಗಿ ಆಟ ಕರ್ನಾಟಕದಲ್ಲಿ ನಡೆಯಲ್ಲ: ರಮಾನಾಥ ರೈ

Friday, March 16th, 2018
ramanath-rai

ಮಂಗಳೂರು: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ತನ್ನ ಸ್ಟಾರ್ ಪ್ರಚಾರಕ ಎಂದು ಬಿಂಬಿಸುತ್ತಾ ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಅವರನ್ನು ಬಳಸಿಕೊಂಡು ಮತ ಪಡೆಯಲು ನಿರ್ಧರಿಸಿದೆ. ಆದರೆ, ಈಗ ಆದಿತ್ಯನಾಥ್ ಅವರು ಮುಗ್ಗರಿಸಿ ಬಿದ್ದಿದ್ದಾರೆ. ಬಿಜೆಪಿಯ ಸ್ಟಾರ್ ಪ್ರಚಾರಕ ಇನ್ನು ಸುಲಭದಲ್ಲಿ ಏಳೋದು ಕಷ್ಟ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಲೇವಡಿ ಮಾಡಿದರು. ಪುತ್ತೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂವತ್ತು ವರ್ಷಗಳಿಂದ ಬಿಜೆಪಿಯನ್ನೇ ಗೆಲ್ಲಿಸುತ್ತಾ ಬಂದಿರುವ ಮತ್ತು ಯೋಗಿ […]

ಮುಸ್ಲಿಂ ಸಮುದಾಯಕ್ಕಿಲ್ಲ ಮೇಯರ್‌ ಸ್ಥಾನ, ಸಚಿವ ರೈ ವಿರುದ್ದ ಆಕ್ರೋಶ

Friday, March 9th, 2018
muslims

ಮಂಗಳೂರು: ಗುರುವಾರ ಮಂಗಳೂರಿನ ನೂತನ ಮೇಯರ್ ಆಗಿ ಕಾಂಗ್ರಿಸ್ ನ ಭಾಸ್ಕರ್ ಮೊಯ್ಲಿ ಆಯ್ಕೆಯಾಗಿದ್ದಾರೆ. ಆದರೆ ಮೇಯರ್ ಸ್ಥಾನಕ್ಕೆ ಮುಸ್ಲಿಂ ಸಮುದಾದಾಯದವರನ್ನು ಆಯ್ಕೆ ಮಾಡದಿರುವುದಕ್ಕೆ ಕೈ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೇಯರ್ ಸ್ಥಾನ ಕೈ ತಪ್ಪುತ್ತಿದ್ದಂತೆ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಮಂಗಳೂರು ಮೇಯರ್ ಆಯ್ಕೆಯಾಗುತ್ತಿದ್ದಂತೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ರಮಾನಾಥ್ ರೈ ವಿರುದ್ದ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕಿದ್ದು, ಸಚಿವ ರೈ ಮುಸ್ಲಿಂ […]

ನಾವು ನಿಜವಾದ ರಾಮ ಭಕ್ತರು: ರಮಾನಾಥ ರೈ

Wednesday, March 7th, 2018
ramanath-rai

ಮಂಗಳೂರು: ಸುರಕ್ಷಾ ಯಾತ್ರೆಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಗೆ ಮಂಗಳೂರಿನಲ್ಲಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರು ಜನ ದಡ್ಡರೆಂದು ತಿಳಿದಿದ್ದಾರೆ. ಆದ್ರೆ ಈ ರಾಜ್ಯದ ಸಾಮರಸ್ಯ ಶಕ್ತಿಯೇ ಜನರು. ಬಿಜೆಪಿಯವರು ಕಾಂಗ್ರೆಸ್ ಮುಕ್ತ ಅನ್ನುತ್ತಾರೆ. ನಾವು ಈ ರಾಜ್ಯದಲ್ಲಿ ಹಸಿವು ಮುಕ್ತ, ಋಣಮುಕ್ತ ಕಾರ್ಯಕ್ರಮ ಮಾಡಿದ್ದೇವೆ ಎಂದು ಸಚಿವರು ಹೇಳಿದರು. ಜಿಲ್ಲೆಯ ಯಾರಿಂದ ಸಾಮರಸ್ಯಕ್ಕೆ ತೊಡಕು ಎಂಬುದಕ್ಕೆ‌ ಅಂಗೈ ಹುಣ್ಣಿಗೆ‌ ಕನ್ನಡಿ ಬೇಕಿಲ್ಲ. ಜನಸುರಕ್ಷಾ ಯಾತ್ರೆ ಮಾಡಲು ಯಾವ ನೈತಿಕತೆ ಇದೆ. ಮಾನ-ಮರ್ಯಾದೆ […]

ಸಾಮರಸ್ಯಕ್ಕಾಗಿ ಶಾಸಕ ಮೊಯ್ದೀನ್ ಬಾವಾ 10 ದಿನಗಳ ಪಾದಯಾತ್ರೆ

Monday, March 5th, 2018
mohiuddin-bava

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಪಾದಯಾತ್ರೆ ಬಿರುಸಾಗಿದೆ. ಒಂದೆಡೆ ಬಿಜೆಪಿ ಬೆಂಗಳೂರು ಮತ್ತು ಕರಾವಳಿಯಲ್ಲಿ ಪಾದಯಾತ್ರೆ ನಡೆಸುತ್ತಿದ್ದರೆ ಇತ್ತ ಕಾಂಗ್ರೆಸ್ ನಾಯಕರು ಕೂಡ ಮನೆ ಮನೆ ಸುತ್ತಲು ಮುಂದಾಗಿದ್ದಾರೆ. ಹೀಗೆ ಕಾಂಗ್ರೆಸ್ ಕಡೆಯಿಂದ ಪಾದಯಾತ್ರೆಗೆ ಹೊರಟಿರುವವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯ್ದೀನ್ ಬಾವಾ. ಶಾಸಕ ಬಾವಾರ ನಡೆ-ಸಾಮರಸ್ಯದ ಕಡೆ’ ಹೆಸರಿನಲ್ಲಿ ಅವರು ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಇದೇ ಬರುವ ಮಾರ್ಚ್ 7 ರಿಂದ 10 ದಿನಗಳ ಸೌಹಾರ್ದ ನಡಿಗೆಯನ್ನು ಅವರು […]

ಸರ್ಕಾರಿ ಕಾರ್ಯಕ್ರಮ ದುರ್ಬಳಕೆ ಆರೋಪ: ಕೇಸ್‌ ದಾಖಲಿಸಲು ಅನುಮತಿಗೆ ಮನವಿ

Friday, March 2nd, 2018
government

ಮಂಗಳೂರು: ಸರ್ಕಾರಿ ಸಮಾರಂಭ ಹಮ್ಮಿಕೊಂಡು ರಾಜಕೀಯ ಉದ್ದೇಶಕ್ಕೆ ಬಳಸುವ ರಾಜಕೀಯ ನಾಯಕರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಶಶಿಧರ ಶೆಟ್ಟಿ ರಾಜ್ಯಪಾಲರನ್ನು ವಿನಂತಿಸಿ, ದಾಖಲೆ ಪತ್ರಗಳನ್ನು ನೀಡಿದ್ದಾರೆ. ಕಳೆದ ವರ್ಷ ಅ. 22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಸರ್ಕಾರಿ ಸಮಾರಂಭ ಹಮ್ಮಿಕೊಂಡು ಆ ಸಮಾರಂಭವನ್ನು ಪಕ್ಷದ ಉದ್ದೇಶಕ್ಕೆ ಬಳಸಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಿಆರ್‌ಪಿಸಿ ಸೆಕ್ಷನ್ 197ರ ಅಡಿಯಲ್ಲಿ ಸ್ವಯಂ ಆಗಿ ಕೇಸು ದಾಖಲಿಸಬೇಕು. […]

ಟೀಕಾಕಾರರಿಗೆ ತಿರುಗೇಟು ನೀಡಲು ಹೋಗಿ ಅನಿವಾಸಿ ಭಾರತೀಯರನ್ನು ಅವಹೇಳನ ಮಾಡಿದ ಸಚಿವ ಯು ಟಿ ಖಾದರ್

Wednesday, February 28th, 2018
disspointed

ಮಂಗಳೂರು: ಪುತ್ತೂರು ಸಮೀಪದ ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿ ಸಂಸ್ಥೆಯಲ್ಲಿ ಫೆ.3ರಂದು ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಸಚಿವ ಯು.ಟಿ.ಖಾದರ್ ಅವಹೇಳನಕಾರಿ ಪದ ಬಳಕೆ ಮಾಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅದೇ ಭಾಷಣದಲ್ಲಿ ಖಾದರ್ ಕೊಲ್ಲಿ ರಾಷ್ಟ್ರಗಳಲ್ಲಿ ದುಡಿಯಲು ಹೋಗುವವರನ್ನು ಅವಮಾನಿಸಿದ್ದಾರೆ ಎಂಬ ದೂರು ವ್ಯಾಪಕವಾಗಿ ಕೇಳಿ ಬಂದಿದೆ. ಈ ಬಗ್ಗೆ ಕಳೆದ ಮೂರು ದಿನದಿಂದ ಸಚಿವ ಖಾದರ್ ಪರ ಮತ್ತು ವಿರೋಧವಾಗಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಹಾಗೂ ಆಡಿಯೊ ಹರಿದಾಡುತ್ತಿವೆ. ಹಿರಿಯ ಧಾರ್ಮಿಕ ಮತ್ತು ಸಾಮಾಜಿಕ […]

‘ಕಲ್ಲಡ್ಕ ಶಾಲೆಗೆ ಅನುದಾನ ನಿಲ್ಲಿಸಿದ್ದಕ್ಕೆ ಮೂಕಾಂಬಿಕೆ ಕೃಪೆಯಿದೆ’

Wednesday, February 28th, 2018
ramanath-rai

ಮಂಗಳೂರು: ಕಲ್ಲಡ್ಕದ ಶಾಲೆಗೆ ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಬಿಸಿಯೂಟದ ಅನುದಾನ ಕಡಿತಗೊಳಿಸಿದ್ದು ನಾನೇ. ಆ ಕೆಲಸ ಮಾಡಿದ್ದಕ್ಕೆ ನನಗೆ ಕೊಲ್ಲೂರು ಮೂಕಾಂಬಿಕೆಯ ಕೃಪೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಮರ್ತನೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ. ರೋಡ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಕಲ್ಲಡ್ಕ ಶಾಲೆಗಳಿಗೆ ಅನುದಾನ ಕಡಿತಗೊಳಿಸಿದ ವಿಚಾರವನ್ನು ಸಮರ್ಥಿಸಿಕೊಂಡರು ರಮಾನಾಥ ರೈ. ದೇವಸ್ಥಾನದ ಹುಂಡಿಗೆ ಭಕ್ತರು ಹಾಕುತ್ತಿದ್ದ ಹಣ ಕೇವಲ ಎರಡು ಶಾಲೆಗೆ […]