Blog Archive

ಕಟೀಲು ದೇವರನ್ನು ಅವಹೇಳನ ಮಾಡುವ ಮೂಲಕ ಕೋಮುವಾದ ಹಾಗೂ ಭಯೋತ್ಪಾದನೆ ಬಿತ್ತುವ ಕೆಲಸವಾಗುತ್ತಿದೆ: ಬಿ. ಎಸ್. ಯಡಿಯೂರಪ್ಪ

Tuesday, September 6th, 2016
B-S-Yeddyurappa

ಮಂಗಳೂರು: ಕಟೀಲು ದೇವರನ್ನು ಅವಹೇಳನ ಮಾಡುವ ಮೂಲಕ ಕೋಮುವಾದ ಹಾಗೂ ಭಯೋತ್ಪಾದನೆ ಬಿತ್ತುವ ಕೆಲಸವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು. ಇಂದು ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಹಿಂದೂ ನಾಯಕರ ಹತ್ಯೆಯಾಗುತ್ತಿದೆ. ಹಿಂದೂ ದೇವರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ಇಷ್ಟಾದರೂ ಸರ್ಕಾರ ತಪ್ಪಿತಸ್ಥರ ಮೇಲೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಕಟೀಲು ದೇವಿಯ ಬಗ್ಗೆ […]

ಕರ್ನಾಟಕ ಅಲ್ಪಸಂಖ್ಯಾತರ ಆಯೋಗಕ್ಕೆ ರಾಜ್ಯ ಸರ್ಕಾರವು ನ್ಯಾಯಾಂಗ ಅಧಿಕಾರ ನೀಡಿದೆ: ಬಲ್ಕೀಸ್ ಬಾನು

Thursday, August 18th, 2016
Balkis-Banu

ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಆಯೋಗಕ್ಕೆ ರಾಜ್ಯ ಸರ್ಕಾರವು ನ್ಯಾಯಾಂಗ ಅಧಿಕಾರ ನೀಡಿದೆ ಎಂದು ಆಯೋಗದ ಅಧ್ಯಕ್ಷೆ ಬಲ್ಕೀಸ್ ಬಾನು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಇತರೆ ಆಯೋಗಗಳಿಗೆ ಈ ಅಧಿಕಾರವಿದ್ದರೂ ಅಲ್ಪಸಂಖ್ಯಾತರ ಆಯೋಗಕ್ಕೆ ಇರಲಿಲ್ಲ. ಈ ಬಗ್ಗೆ ಇತ್ತೀಚೆಗೆ ಸರ್ಕಾರ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ನೀಡಿ ಆದೇಶ ಹೊರಡಿಸಿದೆ. ಇದರಿಂದ ಅಗತ್ಯಬಿದ್ದವರಿಗೆ ಸಮನ್ಸ್ ಸೇರಿದಂತೆ ಸಿವಿಲ್ ಅಧಿಕಾರವನ್ನು ಆಯೋಗವು ಹೊಂದಲಿದೆ ಎಂದು ಹೇಳಿದರು. ಅಲ್ಪಸಂಖ್ಯಾತರ ಶಾಲೆಗಳ ಪ್ರಮಾಣಪತ್ರ ನೀಡುವಲ್ಲಿ ಸಮಸ್ಯೆಗಳುಂಟಾಗಿರುವುದು ತನ್ನ ಗಮನಕ್ಕೆ ಬಂದಿದೆ. ಅಲ್ಪಸಂಖ್ಯಾತರ […]

ಅಕ್ರಮಕ್ಕೆ ಅಡ್ಡಿಯಾದ ಅಧಿಕಾರಿಗೆ ರಜೆ ಸಜೆ!

Thursday, March 6th, 2014
Siddaramaiah

ಬೆಂಗಳೂರು: ರಜೆ ಬೇಕೆ, ಪ್ರಾಮಾಣಿಕವಾಗಿ ಕೆಲಸ ಮಾಡಿ! ರಾಜ್ಯ ಸರ್ಕಾರ ಪ್ರಾರಂಭಿಸಿರುವ ನೂತನ ‘ರಜಾ ಭಾಗ್ಯ’ ಯೋಜನೆಯ ಪ್ರಥಮ ಷರತ್ತಿದು! ಕಾಂಗ್ರೆಸ್ ಪ್ರಣಾಳಿಕೆ ಅಥವಾ ಬಜೆಟ್‌ನಲ್ಲಿ ಘೋಷಿಸದೇ ಅನುಷ್ಠಾನಕ್ಕೆ ತಂದಿರುವ ವಿನೂತನ ಯೋಜನೆ!! ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಭ್ರಷ್ಟಾಚಾರ ನಿಗ್ರಹದ ರೀತಿಯಿದು! ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಒಂದು ದಿನ ರಜೆ ಸಿಗುವುದೇ ದೊಡ್ಡ ಮಾತು. ಆದರೆ ಒಬ್ಬ ಹಿರಿಯ ಹಾಗೂ ಪ್ರಾಮಾಣಿಕ […]

ಮಹಾಯುದ್ಧ ಆರಂಭ 9 ಹಂತಗಳಲ್ಲಿ ಸಂಸತ್ ಚುನಾವಣೆ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

Thursday, March 6th, 2014
Lok-Shaba

ನವದೆಹಲಿ: ವಿಶ್ವದ ಅತಿದೊಡ್ಡ ಚುನಾವಣಾ ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗ ಚಾಲನೆ ನೀಡಿದ್ದು, ಒಂಬತ್ತು ಹಂತದ ಮತದಾನದ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 1ರಿಂದ ಅಸ್ತಿತ್ವಕ್ಕೆ ಬರಬೇಕಿರುವ ಹದಿನಾರನೇ ಲೋಕಸಭೆಗೆ 543 ಸದಸ್ಯರನ್ನು  81.4 ಕೋಟಿ ಜನರು ಆಯ್ಕೆ ಮಾಡಲಿದ್ದಾರೆ. ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ಚುನಾವಣಾ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಇನ್ನು ಮುಂದೆ ಕೇಂದ್ರ ಅಥವಾ ರಾಜ್ಯ ಸರ್ಕಾರ ಮನಸೋ ಇಚ್ಛೆ ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ. ಏಪ್ರಿಲ್ 7ರಿಂದ ಆರಂಭವಾಗುವ ಮತದಾನ ಪ್ರಕ್ರಿಯೆ ಒಂಬತ್ತು ಹಂತಗಳಲ್ಲಿ ನಡೆಯಲಿದೆ. ಲೋಕಸಭಾ […]

ಕೃಷ್ಣಾ; ಸುಪ್ರೀಂಗೆ ಮೊರೆ

Wednesday, February 19th, 2014
Siddaramaiah

ಬೆಂಗಳೂರುಃ ಕೃಷ್ಣಾ ನದಿ ನೀರು ಹಂಚಿಕೆ ವಿಷಯದಲ್ಲಿ ಕೃಷ್ಣಾ ಜಲವಿವಾದ ನ್ಯಾಯಾಧಿಕರಣ ಮುಂದುವರಿದ ವರದಿಯಲ್ಲಿ ನೀಡಿರುವ ಕೆಲವು ಸ್ಪಷ್ಟೀಕರಣ ಹಾಗೂ ಮಾರ್ಪಾಡುಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನ್ಯಾಯಾಧಿಕರಣದ ತೀರ್ಪಿನ ನಂತರ ರಾಜ್ಯ ಸರ್ಕಾರ ಕಾನೂನು ಮತ್ತು ತಾಂತ್ರಿಕ ಪರಿಣಿತರೊಂದಿಗೆ ಚರ್ಚೆ ನಡೆಸಿದ ನಂತರ ವಿಶೇಷ ಅನುಮತಿಗೆ ಸುಪ್ರೀಂಕೋರ್ಟ್‌ಗೆ ಹೋಗುವುದು ಸೂಕ್ತ ಎಂಬ ಸಲಹೆ ಬಂದಿದೆ. ಹೀಗಾಗಿ ಅರ್ಜಿ ಸಲ್ಲಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದರು. ಕೃಷ್ಣಾ […]

ಕೃಷ್ಣಾ ನ್ಯಾಯಾಧೀಕರಣ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ

Tuesday, February 18th, 2014
Siddaramaiah

ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2013 ನವೆಂಬರ್ 29 ರಂದು ಕೃಷ್ಣಾ ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಮಂಗಳವಾರ ನಿರ್ಧರಿಸಿದೆ. ಹಿರಿಯ ವಕೀಲ ನಾರಿಮನ್ ಅವರ ಸಲಹೆಯಂತೆ ಕೃಷ್ಟಾ ನ್ಯಾಯಾಧೀಕರಣ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಪಾಡು ಮಾಡುವ ಅಗತ್ಯತೆ ಇದ್ದು, ಈ ಸಂಬಂಧ ಸ್ಪಷ್ಟಿಕರಣಕ್ಕಾಗಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ ತೀರ್ಪಿಗೆ […]

ಕೆಂಪೇಗೌಡ ಬಡಾವಣೆ 5000 ನಿವೇಶನ ಹಂಚಿಕೆಗೆ ಬಿಡಿಎ ಶೀಘ್ರ ಅರ್ಜಿ ಆಹ್ವಾನ

Saturday, February 8th, 2014
siddaramaiah

ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜಧಾನಿ ಜನತೆಗೆ ನಿವೇಶನ ಭಾಗ್ಯ ದೊರಕಿಸಲು ತೀರ್ಮಾನಿಸಿದೆ. ಬಿಡಿಎ ನಿರ್ಮಿಸುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ 5000 ನಿವೇಶನ ಹಂಚಿಕೆ ಮಾಡಲು ಮಾರ್ಚ್ ಅಂತ್ಯದೊಳಗೆ ಅರ್ಜಿ ಅಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಬಿಡಿಎ ನಿರ್ಮಿಸಿದ ವಿವಿಧ ಪ್ರಮುಖ ರಸ್ತೆಗಳ ಕೆಳ ಸೇತುವೆಗಳನ್ನು ಶುಕ್ರವಾರ ಉದ್ಘಾಟಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಡಿಎ ಕಳೆದ 10 ವರ್ಷಗಳಿಂದ ನಗರದ ಜನತೆಗೆ ನಿವೇಶನ ನೀಡಿಲ್ಲ. ಇನ್ನುಮುಂದೆ ಹೀಗಾಗ ಬಾರದೆಂದು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ […]

ಹಿರಿಯ ನಾಯಕರ ಸಲಹೆ ಮೇರೆಗೆ ಜಿಲ್ಲೆಯ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸಲಾಗುವುದು : ಯು.ಟಿ.ಖಾದರ್

Monday, May 20th, 2013
UT Khader

ಮಂಗಳವಾರ : ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯ ಸರ್ಕಾರದ ನೂತನ ಸಚಿವ ಯು.ಟಿ.ಖಾದರ್ ರವರನ್ನು ಪಕ್ಷದ ಮುಖಂಡರು, ಅಪಾರ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮೇಲೆ ನಂಬಿಕೆ ಇಟ್ಟು ಸಚಿವ ಸ್ಥಾನದ ಜವಾಬ್ದಾರಿಯನ್ನು ನೀಡಿದ್ದು, ಈ ಹುದ್ದೆಯನ್ನು ಸಮರ್ಪಕವಾಗಿ ಮತ್ತು ಪ್ರಾಮಾಣಿಕನಾಗಿ ನಿರ್ವಹಿಸುವುದಾಗಿ ಅವರು ಹೇಳಿದರು. ಜೊತೆಗೆ ಹಿರಿಯ ನಾಯಕರ ಸಲಹೆ ಪಡೆದು ಜಿಲ್ಲೆಯ ಅಭಿವೃದ್ಧಿಗೆ ಶಕ್ತಿಮೀರಿ […]

1964 ರ ಗೋ ಹತ್ಯೆ ಕಾಯ್ದೆಯನ್ನು ಜಾರಿಗೆ ತಂದಲ್ಲಿ ಗೋ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಬಹುದು: ಬಿ.ಮಂಜುನಾಥ ಮಂಡ್ಯ

Saturday, May 18th, 2013
Manjunath Mandya

ಮಂಗಳೂರು : ಹೊಸದಾಗಿ ಅಧಿಕಾರಕ್ಕೆ ಬಂದ  ಕಾಂಗ್ರೆಸ್ ಸರ್ಕಾರವು ಗೋ ಹತ್ಯೆ ನಿಷೇದ ಕಾಯ್ದೆಯನ್ನು ಹಿಂದೆ ಪಡೆಯುವ ಉದ್ದೇಶ ಹೊಂದಿದ್ದು ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಬಿ.ಮಂಜುನಾಥ್ ಮಂಡ್ಯ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯ ಸರ್ಕಾರವು ಗೋ ಹತ್ಯೆ ಕಾಯ್ದೆಯನ್ನು ಹಿಂದೆ ಪಡೆದಿದೆ ಮತ್ತು ಮಠಗಳಿಗೆ ನೀಡಿದ್ದ ದೇಣಿಗೆಯನ್ನು ಹಿಂಪಡೆದಿದೆ. ಇದು ಬಹುಸಂಖ್ಯಾತರಾದ ಹಿಂದೂಗಳ ಭಾವನೆಗೆ ದಕ್ಕೆಯುಂಟು ಮಾಡುವ ಅಲ್ಪಸಂಖ್ಯಾತರನ್ನು […]