Blog Archive

ರಸ್ತೆ ಸುರಕ್ಷಾ ಪ್ರಾಧಿಕಾರದ ಕಟ್ಟುನಿಟ್ಟಿನ ಕ್ರಮ

Wednesday, February 7th, 2018
traffic-police

ಮಂಗಳೂರು: ವಾಹನ ಚಾಲನೆ ಮಾಡುವಾಗ ರಸ್ತೆ ಅಪಘಾತ ತಡೆಯುವ ನಿಟ್ಟಿನಲ್ಲಿ ರಸ್ತೆ ಸುರಕ್ಷಾ ಪ್ರಾಧಿಕಾರ ಕಟ್ಟು ನಿಟ್ಟಿನ ಕಾನೂನು ಜಾರಿಗೆ ತರುತ್ತಿದೆ. ಅದಕ್ಕೆ ಹೊಸ ಸೇರ್ಪಡೆ ಎಂಬಂತೆ ಸುರಕ್ಷೆಯ ದೃಷ್ಟಿಯಿಂದ ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್‌ ರೋಡ್‌ ಸೇಫ್ಟಿ ಕಮಿಟಿಯನ್ನು ರಚನೆ ಮಾಡಿತ್ತು. ಈ ಕಮಿಟಿಯ ಪ್ರಕಾರ ಸಂಚರಿಸುವ ವಾಹನಗಳು ಸಾರಿಗೆ ನಿಯಮವನ್ನು ಚಾಚೂ ತಪ್ಪದೆ ಪಾಲಿಸಲೇಬೇಕು. ಇಲ್ಲವಾದರೆ ಚಾಲಕನ ಮೇಲೆ ಸಾರಿಗೆ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬಹುದು. ಈ ನಿಯಮದ ಪ್ರಕಾರ ವಾಹನ ಚಾಲನೆಯ […]

ಮಂಗಳೂರಿನಲ್ಲೂ ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ವಿರೋಧ

Thursday, January 25th, 2018
padmavath

ಮಂಗಳೂರು: ದೇಶಾದ್ಯಂತ ಇಂದು ತೆರೆ ಕಾಣಲಿರುವ ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ಮಂಗಳೂರಿನಲ್ಲಿಯೂ ರಾಜಸ್ಥಾನ ಮೂಲದ ರಜಪೂತ ಸಮುದಾಯದಿಂದ ವಿರೋಧ ವ್ಯಕ್ತವಾಗಿದೆ. ರಜಪೂತ್ ಕರಣಿ ಸೇನಾದ ಮಂಗಳೂರು ಸಮಿತಿಯ ಪದಾಧಿಕಾರಿಗಳು ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ನಗರ ಪೊಲೀಸ್ ಕಮಿಷನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿನ ಚಿತ್ರಮಂದಿರಗಳಲ್ಲಿ ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಆದರೆ ಈ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದನ್ನು ಪೊಲೀಸ್ ಕಮಿಷನರ್ ಅವರು ಸಮಿತಿಯ […]

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಗಾಯನ ವಿವಾದಕ್ಕೆ ತೆರೆ

Tuesday, January 9th, 2018
National-Anthem

ನವದೆಹಲಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಗಾಯನ ವಿವಾದಕ್ಕೆ ತೆರೆ ಬಿದ್ದಿದೆ. ಇನ್ಮುಂದೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಚಿತ್ರಮಂದಿರಗಳಲ್ಲಿನ ಯಾವುದೇ ಚಲನಚಿತ್ರ ಪ್ರಸಾರವಾಗುವುದಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಗಾಯನ ಕಡ್ಡಾಯವಾಗಿತ್ತು. ಆದರೆ, ಈ ಬಗ್ಗೆ ತೀವ್ರ ಪರ-ವಿರೋಧ ಚರ್ಚೆ ನಡೆದ ಹಿನ್ನಲೆಯಲ್ಲಿ ಸುಪ್ರೀಂ ತನ್ನ ಆದೇಶದಲ್ಲಿ ಬದಲಾವಣೆ ಮಾಡಬೇಕೆಂದು ಕೇಂದ್ರ ಸರ್ಕಾರ ಮನವಿ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿ ಪರಿಗಣಿಸಿದ ಸರ್ವೋಚ್ಛ ನ್ಯಾಯಾಲಯ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಮತ್ತು ಆಗ ಪ್ರೇಕ್ಷಕರು ಎದ್ದು […]

ಬಾರ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಸ್ಪಂದಿಸಿದ ಜಿಲ್ಲಾಧಿಕಾರಿ

Friday, December 22nd, 2017
commissioner

ಮಂಗಳೂರು: ಇಲ್ಲಿನ ಕುಂಟಿಕಾನ ಶಾಲೆಯ ಬಳಿಯೇ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆದಿರುವುದರ ವಿರುದ್ಧ ವಿದ್ಯಾರ್ಥಿಗಳು ಹಾಗೂ ಶಾಲಾ ಆಡಳಿತ ಮಂಡಳಿ ನಡೆಸಿದ ಹೋರಾಟಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸ್ಪಂದಿಸಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಯಾವುದೇ ತಂಬಾಕು ಅಥವಾ ಅಮಲು ಪದಾರ್ಥಗಳ ಮಾರಾಟ, ಜಾಹೀರಾತು ಹಾಕುವುದನ್ನು ನಿಷೇಧಿಸಲಾಗಿದೆ. ಆದರೆ ಇಷ್ಟಾದರೂ ಶಾಲೆಗೆ ಕೇವಲ 80 ಮೀಟರ್ ವ್ಯಾಪ್ತಿಯಲ್ಲಿ ಬಾರ್ ಆ್ಯಂಡ್ ರೆಸ್ಟೊರೆಂಟ್‌‌ಗೆ ಅನುಮತಿ ನೀಡಲಾಗಿತ್ತು. ಇದನ್ನು ವಿರೋಧಿಸಿ ಸೈಂಟ್ ಆ್ಯನ್ಸ್ ಶಾಲೆಯ ಆಡಳಿತ ಮಂಡಳಿ […]

ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ :ಸುಪ್ರೀಂ ಕೋರ್ಟ್

Friday, October 13th, 2017
rohingya muslims

ನವದೆಹಲಿ: ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಕಾಲವಕಾಶ ನೀಡಿರುವ ಸುಪ್ರೀಂ ಕೋರ್ಟ್, ನವೆಂಬರ್ 21ರ ಮುಂದಿನ ವಿಚಾರಣೆವರೆಗೂ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರನ್ನು ದೇಶದಿಂದ ಗಡಿಪಾರು ಮಾಡದಂತೆ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರ ಗಡಿಪಾರು ವಿಷಯಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದ್ದು, ಮಾನವೀಯ ಮೌಲ್ಯಗಳು ನಮ್ಮ ಸಂವಿಧಾನದ ಆಧಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಮುಗ್ಧ ಮಕ್ಕಳು ಮತ್ತು ಮಹಿಳೆಯರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ […]

ಪದವೀಧರ ಕ್ಷೇತ್ರದ ಚುನಾವಣೆ ನಡೆಸುವಾಗಲೂ ಹೊಸದಾಗಿ ಮತದಾರರ ನೋಂದಣಿ ನಡೆಸಬೇಕು :ಭೋಜೇಗೌಡ

Friday, October 13th, 2017
JDS

ಮಂಗಳೂರು: ಜೆಡಿಎಸ್ ರಾಜ್ಯ ವಕ್ತಾರ ಭೋಜೇಗೌಡ ಮುಂದಿನ ಜೂನ್‌ನಲ್ಲಿ ನಡೆಯಲಿರುವ ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಗೆ ಶಿಕ್ಷಕ, ಪದವೀಧರ ಮತದಾರರ ನೋಂದಣಿಗೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು  ಆಗ್ರಹಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ, ಪ್ರತಿ ಬಾರಿ ಶಿಕ್ಷಕರ ಪದವೀಧರ ಕ್ಷೇತ್ರದ ಚುನಾವಣೆ ನಡೆಸುವಾಗಲೂ ಹೊಸದಾಗಿ ಮತದಾರರ ನೋಂದಣಿ ನಡೆಸಬೇಕು. ಕಳೆದ ಅವಧಿಯಲ್ಲಿ ತಾನು ಸ್ಪರ್ಧಿಸಿದಾಗ ಒಂದೂವರೆ ಲಕ್ಷದಷ್ಟು ಶಿಕ್ಷಕ ಪದವೀಧರರ ಪೈಕಿ ಮತದಾರರಾಗಿ […]

ಬಾಳಿಗಾ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ನರೇಶ್ ಶೆಣೈಗೆ ನೋಟಿಸ್

Tuesday, November 29th, 2016
Naresh-shenoy

ಮಂಗಳೂರು: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಬಾಳಿಗಾ ಕುಟುಂಬ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಸ್ವೀಕರಿಸಿದೆ. ಈ ಸಂಬಂಧ ಸುಪ್ರೀಂ ನರೇಶ್ ಶೆಣೈಗೆ ನೋಟಿಸ್ ಜಾರಿ ಮಾಡಿದೆ. ಬಾಳಿಗಾ ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ ನರೇಶ್ ಶೆಣೈಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಬಾಳಿಗಾ ಅವರ ತಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು ಸುಪ್ರೀಂ ಅರ್ಜಿ ಸ್ವೀಕರಿಸಿ, […]

ಶರಿಯತ್ ಕಾನೂನಿಗೆ ಅನ್ಯಾಯವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಮಸೂದ್ ಎಚ್ಚರಿಕೆ

Friday, October 28th, 2016
musilm-organisations

ಮಂಗಳೂರು: ಇಸ್ಲಾಂ ಧರ್ಮದ ಶರಿಯತ್ ಕಾನೂನಿನ ಬಗ್ಗೆ ಹಸ್ತಕ್ಷೇಪ ಮಾಡಿ ತ್ರಿವಳಿ ತಲಾಕ್‍ನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್‌ ಸಲ್ಲಿಸಿರುವುದು ಸರಿಯಲ್ಲ ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್. ಮೊಹಮ್ಮದ್ ಮಸೂದ್ ಆಕ್ಷೇಪ ವ್ಯಕ್ತಪಡಿಸಿದರು. ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಿಯತ್ ಕಾನೂನಿಗೆ ಅನ್ಯಾಯವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ ಅವರು, ಸರ್ಕಾರ ಇದಕ್ಕೆಲ್ಲ ಅವಕಾಶ ಮಾಡಿಕೊಡಬಾರದು ಎಂದರು. ನಮ್ಮ ಸಂವಿಧಾನ ಧಾರ್ಮಿಕ […]

ಕಾವೇರಿ ನದಿ ನೀರು ಪ್ರಕರಣ ನಾಳೆ ವಿಚಾರಣೆ: ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮ

Thursday, September 29th, 2016
kaveri

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧದ ಪ್ರಕರಣ ನಾಳೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಚಿತ್ರಕಲಾ ಪರಿಷತ್‌‌ನಲ್ಲಿ ಸುಧ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ನಮಗೆ ಈ ಬಾರಿ ನ್ಯಾಯ ಸಿಗುವ ಭರವಸೆ ಇದೆ. ಕೇಂದ್ರ ಸರ್ಕಾರ ಕರೆದ ಸಭೆಯಲ್ಲಿ ಸಿಎಂ ಭಾಗವಹಿಸಿದ್ದಾರೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡುತ್ತದೆ. ಕೇಂದ್ರ ಸರ್ಕಾರಕ್ಕೂ ವಸ್ತು ಸ್ಥಿತಿ […]

ಸೆ. 30 ರ ವರೆಗೆ 6000 ಕ್ಯೂಸೆಕ್ ನೀರು: ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಕನ್ನಡ ಪರ ಸಂಘಟನೆಗಳ ಉಗ್ರ ಪ್ರತಿಭಟನೆ

Wednesday, September 28th, 2016
kaveri-protest

ಮೈಸೂರು: ಸೆ. 30 ರ ವರೆಗೆ ನಿತ್ಯ 6000 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಮಂಗಳವಾರ ನಗರದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಉಗ್ರ ಪ್ರತಿಭಟನೆ ನಡೆಸಿದವು. ನಗರದ ನ್ಯಾಯಾಲಯದ ಎದುರು ಕನ್ನಡ ಚಳವಳಿಗಾರರ ಸಂಘದಿಂದ ಖಾಲಿ ತಟ್ಟೆ, ಪಾತ್ರೆ, ಲೋಟಗಳನ್ನಿಡಿದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಮ್ಮ ರಾಜ್ಯದ ಶತ್ರುವಿನಂತೆ ವರ್ತಿಸುತ್ತಿದ್ದಾರೆ. ಕಾವೇರಿ ಭಾಗದ ಜಲಾಶಯಗಳಲ್ಲಿ ಕುಡಿಯಲು ನೀರಿಲ್ಲ. ಆದರೂ ಸುಪ್ರೀಂ ಕೋರ್ಟ್‌ ಮೂಲಕ ಸಾಂಬಾ ಬೆಳೆಗೆ ನೀರು ಕೇಳುತ್ತಿರುವುದು […]