Blog Archive

ಮಂಗಳೂರು ಮಹಾನಗರಪಾಲಿಕೆ ಮತ್ತು ಉಡುಪಿ ನಗರ ಸಭೆ ಕಾಂಗ್ರೆಸ್ ತೆಕ್ಕೆಗೆ, ಬಿಜೆಪಿ ಹೀನಾಯ ಸೋಲು

Monday, March 11th, 2013
MCC Election Winners

ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದ್ದು, ಮಾರ್ಚ್ 7 ರಂದು ನಡೆದ 60 ವಾರ್ಡ್ ಗಳ ಫಲಿತಾಂಶ  ಮಾರ್ಚ್ 11 ರಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಹೊರಬಿದ್ದಿದೆ. ಮಂಗಳೂರು ಮಹಾನಗರಪಾಲಿಕೆ ಕಾಂಗ್ರೆಸ್ 35, ಬಿಜೆಪಿ 20, ಜೆಡಿಎಸ್-2, ಸಿಪಿಐಯು-1, ಪಕ್ಷೇತರ-1. ಪುತ್ತೂರು ಒಟ್ಟು  27, ಘೋಷಿತ-27. ಬಿಜೆಪಿ-12, ಕಾಂಗ್ರೆಸ್-15, ಜೆಡಿಎಸ್-1. ಮೂಡಬಿದ್ರೆ ಒಟ್ಟು 23 ಸ್ಥಾನಗಳು ಘೋಷಿತ 23 ಸ್ಥಾನಗಳು. ಬಿಜೆಪಿ-5, ಕಾಂಗ್ರೆಸ್-14, ಜೆಡಿಎಸ್-3, ಸಿಪಿಐಯಂ -1. ಬಂಟ್ವಾಳ ಒಟ್ಟು 23 […]

ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಲಿದೆ : ಪಾಲೆಮಾರ್‌

Tuesday, March 5th, 2013
Krishna J Palemar

ಮಂಗಳೂರು : ಮಂಗಳೂರುಮಹಾನಗರ ಪಾಲಿಕೆಯ ಕಳೆದ ಚುನಾವಣೆಯಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಪ್ರಥಮ ಬಾರಿಗೆ  ಮತದಾರರು ಅವಕಾಶ ನೀಡಿದ್ದು ಅದನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡ ಬಿಜೆಪಿ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಕಾಲಿಕ ಸರ್ವಶ್ರೇಷ್ಠ ಅಭಿವೃದ್ಧಿಯನ್ನು ಸಾಧಿಸಿದೆ. ಆದ್ದರಿಂದ ಜನತೆ ಈ ಬಾರಿಯೂ ಬಿಜೆಪಿಗೆ ಪ್ರಚಂಡ ಬಹುಮತ ನೀಡಲಿದ್ದಾರೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ – ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೆಮಾರ್‌ ಹೇಳಿದರು. ಸೋಮವಾರ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಸ್ತೆ ನೀರು, ವಿದ್ಯುತ್‌, ಒಳಚರಂಡಿ […]

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಆಡಳಿತಾವಧಿಯಲ್ಲಿ ಸಾಕಾರಗೊಂಡಿದೆ : ಡಿ.ವಿ.ಎಸ್

Friday, March 1st, 2013
BJP Election Campaign

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣಾ ಹಿನ್ನಲೆಯಲ್ಲಿ ಮಂಗಳೂರು ಪುರಭವನದಲ್ಲಿ ಗುರುವಾರ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಅಭಿಯಾನವನ್ನು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ ೨೫ ವರ್ಷಗಳಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಕೇವಲ ೫ ವರ್ಷಗಳಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಸಾಕಾರಗೊಂಡಿದೆ, ಕಳೆದ ೫ ವರ್ಷಗಳ ಆಡಳಿತದಲ್ಲಿ ಬಿಜೆಪಿ ರೂಪಾಯಿ ೫೨೦ ಕೋಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಹಿಂದಿನ ೨೫ ವರ್ಷಗಳ ಆಡಳಿತಾವಧಿಯಲ್ಲಿ ಕಾಂಗ್ರೆಸ್ […]

ರಾಜ್ಯದಲ್ಲಾಗಲೀ, ಸ್ಥಳೀಯ ಸಂಸ್ಥೆಗಳಲ್ಲಾಗಲೀ ಅಧಿಕಾರದಲ್ಲಿರುವ ಅರ್ಹತೆಯನ್ನು ಬಿಜೆಪಿ ಕಳೆದುಕೊಂಡಿದೆ : ಜನಾರ್ಧನ ಪೂಜಾರಿ

Thursday, February 28th, 2013
BJP in polls

ಮಂಗಳೂರು : ರಾಜ್ಯದಲ್ಲಿ 5 ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಪಕ್ಷವು ಇನ್ನು ಮುಂದೆ ಅಧಿಕಾರದಲ್ಲಿರುವ ಹಕ್ಕನ್ನು ಕಳೆದುಕೊಂಡಿದ್ದು, ಈ ಸರ್ಕಾರದಲ್ಲಿರುವ ಬಹಳಷ್ಟು ಮಂತ್ರಿಗಳು ಒಂದಲ್ಲ ಒಂದು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ, ಈ ಮೂಲಕ ಬಿಜೆಪಿಯು ರಾಜ್ಯದಲ್ಲಾಗಲೀ, ಸ್ಥಳೀಯ ಸಂಸ್ಥೆಗಳಲ್ಲಾಗಲೀ ಅಧಿಕಾರದಲ್ಲಿರುವ ಅರ್ಹತೆಯನ್ನು ಕಳೆದುಕೊಂಡಿದೆ ಎಂದು ಕೇಂದ್ರ ಸರ್ಕಾರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಆರೋಪಿಸಿದರು. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ,  ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿದ್ದು, […]

ಬಿಜೆಪಿ :ಶಾಸಕ ಸ್ಥಾನಕ್ಕೆ ಬಿ ಎಸ್ ವೈ ರಾಜೀನಾಮೆ

Friday, November 30th, 2012
Yeddyurappa resignation

ಬೆಂಗಳೂರು :ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಮೂಡಿದ್ದ ಕುತೂಹಲಗಳಿಗೆ ಕೊನೆಗೂ ತೆರೆ ಎಳೆದಿದ್ದಾರೆ. ಸುಮಾರು 40 ವರ್ಷಗಳ ಕಾಲ ಭಾರೀ ಪರಿಶ್ರಮ ಪಟ್ಟು ತಾನೇ ಕಟ್ಟಿದ ಮನೆಯಿಂದ ಯಡಿಯೂರಪ್ಪ ಹೊರ ನಡೆದಿದ್ದಾರೆ. ಮಧ್ಯಾಹ್ನ 1.00 ಗಂಟೆಯ ಸುಮಾರಿಗೆ ವಿಧಾನಸೌಧಕ್ಕೆ ತೆರಳಿದ ಯಡಿಯೂರಪ್ಪ ಸ್ಪೀಕರ್ ಬೋಪಯ್ಯಗೆ ತನ್ನ ರಾಜೀನಾಮೆಯನ್ನು ಸಲ್ಲಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡುವುದಕ್ಕೂ ಮುನ್ನ ಯಡಿಯೂರಪ್ಪ ಫ್ರೀಡಂ ಪಾರ್ಕ್ ನಲ್ಲಿ ತನ್ನ […]

ಕರಾವಳಿಯಲ್ಲಿ ಗರಿಕೆದರಿದ ಯಡ್ಡಿ ಪಕ್ಷ ಕುಂದಾಪುರದಲ್ಲಿ ಹಾಲಾಡಿ ಶೆಟ್ಟರಿಗೆ ಮಣೆ

Saturday, November 24th, 2012
Yadyurappa & Halaadi

ಮಂಗಳೂರು :ರಾಜ್ಯದ ಬಿಜೆಪಿ ಪಕ್ಷದ ಭವಿಷ್ಯ ಸಧ್ಯಕ್ಕಂತೂ ನೆಟ್ಟಗೆ ಇಲ್ಲ ಎನ್ನುವ ಮಾತುಗಳೇ ಜಾಸ್ತಿಯಾಗಿ ಕೇಳಿಸಿಕೊಳ್ಳಲು ಆರಂಭವಾಗಿದೆ. ಕಾರಣ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿಯನ್ನು ಬಿಟ್ಟು ತನ್ನದೇ ಹೊಸ ಪಕ್ಷ ಕೆಜೆಪಿಯನ್ನು ಕಟ್ಟಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗಾಗಲೇ ಹೊಸ ಪಕ್ಷ ಘೋಷಣೆ ಮಾಡಿರುವ ಯಡಿಯೂರಪ್ಪರ ನೂತನ ಪಕ್ಷದ ರಾಜಾಧ್ಯಕ್ಷರಾಗಿ ಬಿಜೆಪಿಯಿಂದ ಹೊರಹಾಕಲ್ಪಟ್ಟ ಧನಂಜಯ ಕುಮಾರ್ ನೇಮಕವಾದ ಬೆನ್ನಲ್ಲೇ ರಾಜ್ಯದ ನಾನಾ ಕಡೆ ಕೆಜೆಪಿ ಪಕ್ಷಕ್ಕೆ ನಾಯಕರ ಹುಡುಕಾಟ ಶುರುವಾಗಿದೆ. ಅದರಲ್ಲೂ ಮುಖ್ಯವಾಗಿ ಡಿಸೆಂಬರ್ ತಿಂಗಳ 9ರಂದು […]

ಇದು ಕರಾವಳಿ “ಪೊಲಿ’ಟಿಕ್ಸ್”!

Tuesday, November 13th, 2012
Karavali Politics

ಮಂಗಳೂರು :2013ರಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾ ಮತ್ತು 2014ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಪ್ರಮುಖ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಈಗಾಗಲೆ ಮಂಗಳೂರಿನಲ್ಲಿ ತನ್ನ ಚುನಾವಣಾ ಕಸರತ್ತು ಆರಂಭಿಸಿದೆ. ಅಕ್ಟೋಬರ್ 18ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳೂರಿಗೆ ಆಗಮಿಸಿ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುವಂತೆ ಮಾಡಿದ್ದಾರೆ. ರಾಜ್ಯ ಬಿಜೆಪಿ ಸರಕಾರವನ್ನು ಕಿತ್ತೊಗೆಯುವಂತೆ ಕರೆ ನೀಡಿದ್ದಾರೆ. ಸೋನಿಯಾರ ಮಂಗಳೂರು ಭೇಟಿಯ ಸಂಪೂರ್ಣ ಹೊಣೆ […]

ಸೀಲಿಂಗ್‌ ಫ್ಯಾನ್‌ ಹಿಡಿದು ಬೀದಿಗಿಳಿದ ಶ್ರೀರಾಮುಲು

Thursday, November 17th, 2011
Sri Ramulu

ಬಳ್ಳಾರಿ: ಇಷ್ಟು ದಿನ ಬಿಜೆಪಿಯಲ್ಲಿದ್ದು  ಇದೀಗ ಬಳ್ಳಾರಿ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀರಾಮುಲು ತಮ್ಮ ಚಿಹ್ನೆ‌ ಸೀಲಿಂಗ್‌ ಫ್ಯಾನ್‌ ಹಿಡಿದು ಪ್ರಚಾರ ನಡೆಸಲು  ಬೀದಿಗಿಳಿದಿದ್ದಾರೆ. ಬಳ್ಳಾರಿ  ಜನರಿಗೆ ಶ್ರೀರಾಮುಲು ಅಂದರೆ ಬಿಜೆಪಿ ಹಾಗೂ ಕಮಲ ಎಂದರೆ ರಾಮುಲು ಎಂಬಾಂತಾಗಿತ್ತು. ಹೀಗಾಗಿ ಹಳ್ಳಿಗಾಡಿನ ಜನರಿಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ರಾಮುಲು ಮತದಾರರಿಗೆ ತನ್ನ  ಚುನಾವಣಾ ಪ್ರಚಾರದಲ್ಲಿ ತಿಳಿಸಿದರು. ಬುಧವಾರ ಮೋಕಾ, ಯರಗುಡಿ, ಬೆಣಕಲ್ಲು, ಸಿಂಧವಾಳ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ […]

ಬಿಜೆಪಿಯ ದಕ್ಷಿಣ ಭಾರತದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ ಪದತ್ಯಾಗ

Friday, July 29th, 2011
cm Yeddyurappa/ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪವಾದ ಬಳಿಕ ಹುದ್ದೆ ತೊರೆಯುವಂತೆ ಹೈಕಮಾಂಡ್‌ನಿಂದ ಸೂಚನೆ ಬಂದ ಬಳಿಕ ಅವರು ಮೊದಲ ಬಾರಿ ಮೌನ ಮುರಿದು ಪಕ್ಷದ ನಿರ್ದೇಶನಕ್ಕೆ ಮಣಿದು ಭಾನುವಾರ (ಜು.31)ರಂದು ಪದತ್ಯಾಗ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಶೂನ್ಯದಿಂದ ಕಟ್ಟಿ ಬೆಳೆಸಿದ್ದೇನೆ ಮತ್ತು ಭವಿಷ್ಯದಲ್ಲಿ ಕೂಡ ಪಕ್ಷಕ್ಕಾಗಿ ದುಡಿಯಲು ಸಿದ್ಧ ಎಂದು ಹೇಳಿದ್ದಾರೆ. ತಾನು ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದು, ಆಷಾಢ ಮಾಸವು ಜು.30ರಂದು ಕೊನೆಗೊಳ್ಳುತ್ತದೆ. ಅದರ ಬಳಿಕ ಆ.31ರಂದು ರಾಜೀನಾಮೆ ನೀಡುವುದಾಗಿ […]

ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ಭವ್ಯ ಪೂಜಾರ್ತಿ

Friday, February 11th, 2011
ಮಂಗಳೂರು ತಾಲೂಕು ಪಂಚಾಯತ್

ಮಂಗಳೂರು : ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ಭವ್ಯ ಪೂಜಾರ್ತಿ ಯವರು ಆಯ್ಕೆಯಾಗಿರುತ್ತಾರೆ. ಇವರು ಕಲ್ಲಮುಂಡ್ಕೂರು ತಾಲೂಕು ಪಂಚಾಯತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು, ಪದವೀಧರರಾಗಿದ್ದಾರೆ. ತಾಲೂಕುಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಭವ್ಯಾ ಪೂಜಾರ್ತಿಯವರು 19 ಮತಗಳನ್ನು ಪಡೆದು, ಕಾಂಗ್ರೆಸ್ನ ಸುರೇಖಾ ಚಂದ್ರಹಾಸ್ ರವರನ್ನು 1 ಮತದ ಅಂತರದಿಂದ ಸೋಲಿಸಿದರು. ಸುರೇಖಾ ಚಂದ್ರಹಾಸ್ರವರು 18 ಮತಗಳನ್ನು ಪಡೆದಿದ್ದರು. ಹಾಗೆಯೇ ಮಂಗಳೂರು ತಾಲೂಕು ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ವಿಜಯಲಕ್ಷ್ಮಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಇವರು […]