Blog Archive

ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು

Tuesday, January 4th, 2011
ಜಿಲ್ಲಾ ಮತ್ತು ತಾಲೂಕ ಪಂಚಾಯತ್ ಚುನಾವಣೆ ಫಲಿತಾಂಶ

ಬೆಂಗಳೂರು : ಎರಡು ಹಂತದಲ್ಲಿ ನಡೆದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸುವ ಮೂಲಕ ಆಡಳಿತಾರೂಢ ಬಿಜೆಪಿಯ ಕಡೆ ಮತದಾರ ಒಲವು ತೋರಿಸಿದ್ದಾನೆ ಬಿಜೆಪಿಯ ಭದ್ರಕೋಟೆ  ಬಳ್ಳಾರಿಯಲ್ಲಿ ಮತ್ತು ಉತ್ತರ ಕನ್ನಡದಲ್ಲಿ ಬಿಜೆಪಿ ಬಹುತೇಕ ಹಿಂದೆ ಬಿದ್ದಿದೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಶಿವಮೂಗ್ಗದಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಯಡಿಯೂರಪ್ಪ ಮುಖಭಂಗವನ್ನು ತಪ್ಪಿಸಿಕೊಂಡಿದ್ದಾರೆ. ರಾಮನಗರ, ಹಾಸನ, ತುಮಕೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಜೆಡಿಎಸ್, ಬೆಂಗಳೂರು ಗ್ರಾಮಾಂತರ, ಬೆಂಗಳೂರು […]

ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜಯಭೇರಿ

Tuesday, January 4th, 2011
ದ.ಕ.ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆ ಫಲಿತಾಂಶ

ಮಂಗಳೂರು : ಡಿ.31ರಂದು ನಡೆದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ಚುನಾವಣೆಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು , ದಕ್ಷಿಣ ಕನ್ನಡ ಮತ್ತು ಉಡುಪಿಯ ಜಿ.ಪಂ., ತಾ.ಪಂ. ಕ್ಷೇತ್ರಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ ಮೇಲುಗೈ ಸಾಧಿಸಿದೆ ಇಂದು ಬೆಳಿಗ್ಗೆ ಮತ ಎಣಿಕೆ ಮುಗಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ 24 ಸ್ಥಾನಗಳನ್ನು  ತನ್ನದಾಗಿಸಿಕೊಂಡಿದೆ, ಕಾಂಗ್ರೆಸ್ 11 ಸ್ಥಾನಗಳನ್ನು ಪಡೆಯಿತು. ಬಂಟ್ವಾಳದಲ್ಲಿ ಜಿ.ಪಂ. ಕ್ಷೇತ್ರದಲ್ಲಿ 6ಸ್ಥಾನಗಳಲ್ಲಿ ಬಿಜೆಪಿ ,ಕಾಂಗ್ರೆಸ್ 3 ಸ್ಥಾನಗಳನ್ನು ಗಳಿಸಿದೆ. ಗೋಳ್ತಮಜಲು ಕ್ಷೇತ್ರದಲ್ಲಿ […]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಇಲ್ಲ: ದೇವೇಗೌಡ

Friday, December 10th, 2010
ದೇವೇಗೌಡ

ಬೆಂಗಳೂರು  : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ  ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು. ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ […]

ಅಲ್ಪ ಸಂಖ್ಯಾತ ಆಯೋಗದ ನೂತನ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭ

Saturday, November 27th, 2010
ಅಲ್ಪ ಸಂಖ್ಯಾತ ಆಯೋಗದ ನೂತನ ಅಧ್ಯಕ್ಷರಾಗಿ ಅನ್ಪರ್ ಮಾಣಿಪ್ಪಾಡಿ

ಮಂಗಳೂರು: ಅಲ್ಪ ಸಂಖ್ಯಾತ ಆಯೋಗದ ನೂತನ ಅಧ್ಯಕ್ಷರಾಗಿ ಅನ್ಪರ್ ಮಾಣಿಪ್ಪಾಡಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಿ ಸಂಘನಿಕೇತನಕ್ಕೆ ಬೇಟಿ ನೀಡಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರು ಆಯೋಜಿಸಿದ ಅಭಿನಂದನಾ ಸಭೆಯಲ್ಲಿ ಪಾಲ್ಗೊಂಡರು. ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು ಅಲ್ಪ ಸಂಖ್ಯಾತರಿಗೆ ಅನ್ಯಾಯವಾದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದರು. ರಾಜ್ಯ ಬಿಜೆಪಿ ಸರಕಾರ ಅಲ್ಪ ಸಂಖ್ಯಾತರ ರಕ್ಷಣೆಗೆ ಸಂಪೂರ್ಣ ಬದ್ದವಾಗಿದೆ. ಅಲ್ಪ ಸಂಖ್ಯಾತರಿಗೆ ಬಿಜೆಪಿ ಮೇಲಿರುವ ಅಪನಂಬಿಕೆಯನ್ನು ಅಧಿಕಾರಿಗಳು ಮನವರಿಕೆ ಮಾಡಬೇಕು ಎಂದರು. ಅಲ್ಪ […]

ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

Tuesday, September 21st, 2010
ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

ಬೆಂಗಳೂರು : ಚಿಕ್ಕಮಗಳೂರು ಶಾಸಕರಾಗಿ ಮೂರು ಬಾರಿ ಆಯ್ಕೆಯಾಗಿದ್ದ ಶಾಸಕ ಸಿ.ಟಿ.ರವಿ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಗೊಂಡಿದೆ. ಚಿಕ್ಕಮಗಳೂರಿನಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಕೂಡ ಯಾವುದೇ ಬೆಲೆ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ಸಿ.ಟಿ.ರವಿ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಇಂದು ಬೆಳಿಗ್ಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ಪುನಾರಚನೆ ಕುರಿತಾಗಿ ಹೈಕಮಾಂಡ್ ಜೊತೆ ಮಾತುಕತೆ […]