Blog Archive

ಜಿಲ್ಲೆಯಲ್ಲಿನ ಮಾದಕ ವಸ್ತುಗಳ ಮಾರಾಟ ಜಾಲದ ವಿರುಧ್ಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಶ್ರೀ ರಾಮ ಸೇನೆ ಆಗ್ರಹ

Wednesday, February 6th, 2013
Sri Rama Sene

ಮಂಗಳೂರು : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಜಾಲದಿಂದಾಗಿ ಜಿಲ್ಲೆಯಲ್ಲಿನ ಅನೇಕ ಅಮಾಯಕ ವಿಧ್ಯಾರ್ಥಿಗಳು ಈ ಪಿಡುಗಿಗೆ ಬಲಿಯಾಗುತ್ತಿದ್ದರೂ  ಜಿಲ್ಲಾಡಳಿತ ಈ ಜಾಲದ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ, ಜಿಲ್ಲಾಡಳಿತ ಈ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ರಾಮ ಸೇನೆ ಜಿಲ್ಲಾ ಸಂಚಾಲಕ ಕುಮಾರ್ ಮಾಲೆಮಾರ್ ಒತ್ತಾಯಿಸಿದರು. ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲವು ಬೃಹತ್ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಈ ಜಾಲಗಳು  ಸ್ಥಳೀಯ ಕಾಲೇಜುಗಳನ್ನು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿದೆ. ಈ […]

ವಾಯುಮಾಲಿನ್ಯ ನಿಯಂತ್ರಿಸುವಲ್ಲಿ ಪ್ರತಿಯೊಬ್ಬರೂ ಮಹತ್ತರ ಜವಾಬ್ದಾರಿ ವಹಿಸಬೇಕು : ಜಿಲ್ಲಾಧಿಕಾರಿ

Wednesday, November 9th, 2011
Pollution control

ಮಂಗಳೂರು :  ದ.ಕನ್ನಡ ಜಿಲ್ಲಾಡಳಿತ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿ ಮಂಗಳವಾರ ನಗರದಲ್ಲಿ ಆಯೋಜಿಸಿದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ  ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ| ಎನ್‌.ಎಸ್‌. ಚನ್ನಪ್ಪ ಗೌಡ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ಪರಿಸರ ಮಾಲಿನ್ಯ ತಡೆಯುವಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸಬೇಕು. ವಾಯುಮಾಲಿನ್ಯದಿಂದ ಜಗತ್ತಿನಲ್ಲಿ 2.5 ಲಕ್ಷ ಮಂದಿ ಸಾವಿಗೀಡಾಗುತ್ತಿದ್ದಾರೆ. ವಾಯುಮಾಲಿನ್ಯ ನಿಯಂತ್ರಿಸುವಲ್ಲಿ ಪ್ರತಿಯೊಬ್ಬರೂ ಮಹತ್ತರ ಜವಾಬ್ದಾರಿ ವಹಿಸಬೇಕು ಎಂದು ಚನ್ನಪ್ಪ ಗೌಡ ಹೇಳಿದರು. ಪರಿಸರ ಮಾಲಿನ್ಯದಿಂದ ಜಾಗತಿಕ ತಾಪಮಾನ ಕೂಡಾ ಗಣನೀಯವಾಗಿ […]

ಮುಖ್ಯಮಂತ್ರಿ ತವರಿನಲ್ಲಿ ಕನ್ನಡ ನುಡಿ ತೇರು ಜಾಗೃತಿ ಜಾಥಾಕ್ಕೆ ಚಾಲನೆ

Thursday, October 13th, 2011
Kannada Nudi Teru At Sullia

ಸುಳ್ಯ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ದ.ಕ ಮತ್ತು ಉಡುಪಿ ಜಿಲ್ಲಾಡಳಿತ ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ಸುಳ್ಯದಲ್ಲಿ ಬುಧವಾರ ಆಯೋಜಿಸಲಾದ ಕನ್ನಡ ನುಡಿ ತೇರು ಜಾಗೃತಿ ಜಾಥಾಕ್ಕೆ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಚಾಲನೆ ನೀಡಿದರು. ಕನ್ನಡ ಭಾಷೆ, ಗಡಿನಾಡು ಅಭಿವೃದ್ಧಿಗೆ ಸರಕಾರ ಅನುದಾನ ನೀಡಲಿದ್ದು, 250 ಕೋಟಿ ರೂಪಾಯಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನೀಡಲಾಗಿದೆ , ಗಡಿನಾಡ ಪ್ರದೇಶದಲ್ಲಿ ಕನ್ನಡ ಶಾಲೆಯ ಉಳಿವಿಗಾಗಿ 10 ಮಕ್ಕಳಿಗಿಂತ ಕಡಿಮೆ ಇದ್ದ ಶಾಲೆಗಳನ್ನು ಮುಚ್ಚುದೆ ಗ್ರಾಮೀಣ […]

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ

Tuesday, January 25th, 2011
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಮಂಗಳೂರು ನಗರ ಪೊಲೀಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಆಯೋಜಿಸಿದ 22ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು.  ಕಾರ್ಯಕ್ರಮವನ್ನು ಮಾಹೆ ವಿಶ್ವ ವಿದ್ಯಾ ನಿಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎಂ.ಹೆಗ್ಡೆ  ಉದ್ಘಾಟಿಸಿದರು. ಬಳಿಕ ಮಾತನಾಡಿದ ಕುಲಪತಿಗಳಾದ ಡಾ.ಬಿ.ಎಂ.ಹೆಗ್ಡೆ  ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸುವುದರಿಂದ ಅಫಘಾತಗಳನ್ನು ಕಡಿಮೆ ಮಾಡಬಹುದು, ವಿದ್ಯಾರ್ಥಿಗಳಿಗೆ  ಈ  ಬಗ್ಗೆ  ಶಾಲೆಯಲ್ಲಿ ಶಿಕ್ಷಣ ನೀಡುವುದರಿಂದಲೂ ಅಫಘಾತಗಳ ಬಗ್ಗೆ ಹೆಚ್ಚಿನ ಅರಿವು […]

ಮಂಗಳೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

Monday, September 27th, 2010
ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮಂಗಳೂರು: ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಪಣಂಬೂರ್ ಬೀಚ್  ಅಭಿವೃದ್ಧಿ ಯೋಜನಾ ಸಂಸ್ಥೆ ಹಾಗೂ ಮಂಗಳೂರು ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋಧ್ಯಮ ದಿನಾಚರಣೆ 2010ನ್ನು ಇಂದು ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಪ್ರವಾಸೋಧ್ಯಮ ಮತ್ತು ಜೈವಿಕ ವೈವಿಧ್ಯತೆ ಎಂಬ ಸಂದೇಶದೊಂದಿಗೆ ಆಚರಿಸಲ್ಪಟ್ಟ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ತೀರ ಪ್ರದೇಶವನ್ನು ಹೊಂದಿರುವ […]