Blog Archive

ಮಂಗಳೂರು ಹಿಂಸಾತ್ಮಕ ಘಟನೆಯ ಮಾಹಿತಿ ಪಡೆಯಲು ಬಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

Saturday, December 21st, 2019
Yediyurappa Mangaluru

ಮಂಗಳೂರು : ಗುರುವಾರ ನಡೆದ  ಹಿಂಸಾತ್ಮಕ ಘಟನೆ ಮಾಡಲು ಕಾರಣವಾದವರ ಬಗ್ಗೆ ಮತ್ತು ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿರುವ ಘಟನೆ ಸಂಬಂಧ ಸಮಗ್ರವಾದ ವರದಿ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶನಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿವರ ಕೇಳಿದ್ದೇನೆ. ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಲು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ನಿರ್ದೇಶನ ನೀಡಿದ್ದೇನೆ […]

ಮುಂದಿನ ಮೂರೂವರೆ ವರ್ಷ ದೇವರ ಆಶೀರ್ವಾದದಿಂದ ನಾನೇ ಮುಖ್ಯಮಂತ್ರಿ : ಬಿ.ಎಸ್. ಯಡಿಯೂರಪ್ಪ

Tuesday, November 19th, 2019
BSY

ಬೆಂಗಳೂರು : ಮುಂದಿನ ಮೂರೂವರೆ ವರ್ಷಗಳ ಕಾಲ ದೇವರ ಆಶೀರ್ವಾದದಿಂದ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಉಪ ಚುನಾವಣೆ ಬಳಿಕ ಸರ್ಕಾರ ಪತನವಾಗಲಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ವೈ, ಅವರು ಹಾಗೆ ಹೇಳಿದ್ದು ಸಂತೋಷ. ದೇವರ ಹಾಗೂ ಜನರ ಆಶೀರ್ವಾದದಿಂದ ಮುಂದಿನ ಅವಧಿಯನ್ನು ಪೂರೈಸುತ್ತೇನೆ. ರಾಜ್ಯವನ್ನು ಅಭಿವೃದ್ಧಿ ಮಾಡುತ್ತೇನೆ. ಮಾಜಿ ಸಿಎಂ ಕುಮಾರಸ್ವಾಮಿ ಅಥವಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಈ […]

ರಾಜ್ಯಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡುವ ವಿಶ್ವಾಸವಿದೆ : ಬಿ.ಎಸ್. ಯಡಿಯೂರಪ್ಪ

Friday, October 4th, 2019
BSY

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗಾಗಲೇ ಎಲ್ಲಾ ಕೇಂದ್ರ ಸಚಿವರ ಜೊತೆಗೂ ಮಾತುಕತೆ ನಡೆಸಿದ್ದೇನೆ. ಇನ್ನು 3-4 ದಿನಗಳಲ್ಲಿ ಪರಿಹಾರ ಬಿಡುಗಡೆಯಾಗಲಿದೆ. ದೇಶದ ನೆರೆ ಪೀಡಿತ ಯಾವುದೇ ರಾಜ್ಯಗಳಿಗೂ ಇನ್ನೂ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ಬೊಕ್ಕಸ ಇನ್ನೂ ಖಾಲಿಯಾಗಿಲ್ಲ. ಖಾಲಿಯಾಗಿದ್ದರೆ ಪರಿಹಾರ ನೀಡಲು ಸಾಧ್ಯವಾಗುತ್ತಿರಲಿಲ್ಲ. ರಾಜ್ಯಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ […]

150ನೇ ಗಾಂಧಿ ಜನ್ಮದಿನಾಚರಣೆ : ಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ

Wednesday, October 2nd, 2019
BSY

ಬೆಂಗಳೂರು : 150ನೇ ಗಾಂಧಿ ಜಯಂತಿ ಆಚರಣೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಖ್ಯಸ್ಥಿಕೆಯಲ್ಲಿ ವಿಧಾನಸೌಧ– ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್. ವಿಶ್ವನಾಥ, ಬಿಬಿಎಂಪಿ ನೂತನ ಮೇಯರ್ ಗೌತಮ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.  

ಮಂಗಳೂರು ನಗರ ದಕ್ಷಿಣಕ್ಕೆ 65 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ : ವೇದವ್ಯಾಸ್ ಕಾಮತ್

Wednesday, September 25th, 2019
kamath

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 65 ಕೋಟಿ ಅನುದಾನವನ್ನು ಕ್ಷೇತ್ರದ ವಿವಿಧ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕರು, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯನ್ನು ಕರ್ನಾಟಕ ರಾಜ್ಯ ಸರಕಾರದಿಂದ 2018-19 ರಿಂದ 2023-24ನೇ ಸಾಲಿಗೆ ಅನುಷ್ಠಾನಗೊಳಿಸಲು ಮಂಗಳೂರು ಮಹಾನಗರ ಪಾಲಿಕೆಗೆ 125 ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಹೆಚ್ಚುವರಿ ಕಾಮಗಾರಿಗಳನ್ನು ಹೊರತುಪಡಿಸಿ 105 […]

ಉತ್ತರಕನ್ನಡ : ನೆರೆಹಾನಿ ವೀಕ್ಷಣೆ ರದ್ದುಗೊಳಿಸಿದ ಸಿಎಂ; ಸಂತ್ರಸ್ತರ ಆಕ್ರೋಶ

Saturday, August 31st, 2019
uttara-kannada

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ನೆರೆಹಾನಿ ವೀಕ್ಷಣೆಗೆ ಆಗಮಿಸಬೇಕಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಸ‌ ರದ್ದಾಗಿದ್ದು, ಇದೀಗ ರೈತರ ಹಾಗೂ ನೆರೆ ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಎಡಬಿಡದೆ ಮಳೆ ಸುರಿಯುತ್ತಿದ್ದು, ಎಲ್ಲೆಡೆ ಮೋಡ ಕವಿದ ವಾತಾವರಣವಿದೆ. ಈ ಕಾರಣದಿಂದ ಶಿವಮೊಗ್ಗದಿಂದ ಹೆಲಿಕಾಪ್ಟರ್ ಮೂಲಕ ಕಾರವಾರ ಬಂದು ಹಾವೇರಿಗೆ ತೆರಳಬೇಕಿದ್ದ ಸಿಎಂ ಉತ್ತರಕನ್ನಡ ಪ್ರವಾಸ ರದ್ದಾಗಿ ಕೇವಲ ಹಾವೇರಿಗೆ ಮಾತ್ರ ತೆರಳಲಿದ್ದಾರೆ. ಆದರೆ, ಕಳೆದ 15 ದಿನಗಳ ಹಿಂದೆ ಸುರಿದ ಭಾರಿ […]

ರಾಜ್ಯದ 16 ಜಿಲ್ಲೆಗಳ 80 ತಾಲೂಕು ಪ್ರವಾಹ ಪೀಡಿತ : ಬಿ ಎಸ್ ಯಡಿಯೂರಪ್ಪ

Saturday, August 10th, 2019
Yediyurappa-150-----

ಬೆಂಗಳೂರು : ರಾಜ್ಯದ 16 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂ ಕು ಎಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಗೃಹ ಕಚೇರಿ ಕೃಷ್ಞಾದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ 6000 ಕೋಟಿ ರೂ. ನಷ್ಟದ ಅಂದಾಜು ಮಾಡಿದ್ದು, 3000 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಧಾನಿ ರಾಜ್ಯಕ್ಕೆ ಕಳುಹಿಸಿದ್ದು, ವಸ್ತು ಸ್ಥಿತಿ ಅವಲೋಕಿಸಲಿದ್ದಾರೆ. ರಾಷ್ಟ್ರೀಯ ವಿಪತ್ತು ಘೋಷಣೆ ಬಗ್ಗೆ ಇನ್ನು ಎರಡು […]

ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ

Friday, July 26th, 2019
yedyurappa

ಬೆಂಗಳೂರು : ರಾಜ್ಯದ 19 ಮುಖ್ಯ ಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪನವರು  ರಾಜ್ಯಪಾಲರಿಂದ ಶುಕ್ರವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು ಪ್ರಮಾಣವಚನ ಸ್ವೀಕರಿಸಿ, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿರುವ ಯಡಿಯೂರಪ್ಪ, ತಮ್ಮ ನೇತೃತ್ವದ ಸರ್ಕಾರದ ಮೊದಲ ನಿರ್ಣಯಗಳನ್ನು ತಿಳಿಸಿದ್ದಾರೆ. ಜು.29 ಕ್ಕೆ ಬಹುಮತ ಸಾಬೀತುಪಡಿಸುವುದಾಗಿ ನೂತನ ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದಿಂದಲೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ […]

ಉಡಾಫೆ ಉತ್ತರ ಕೊಟ್ಟರೆ ನಮ್ಮ ಹೋರಾಟ ಮುಂದುವರಿಯುತ್ತದೆ: ಬಿ.ಎಸ್. ಯಡಿಯೂರಪ್ಪ

Friday, December 7th, 2018
yedyurappa

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ನಾವು ಸರ್ಕಾರಕ್ಕೆ ಸಹಕಾರ ಕೊಡುತ್ತೇವೆ. ಆದರೆ ಸರಿಯಾಗಿ ಉತ್ತರ ಕೊಡದೇ ಉಡಾಫೆ ಉತ್ತರ ಕೊಟ್ಟರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಸಾಲಮನ್ನಾ ವಿಚಾರದಲ್ಲಿ ಸಿಎಂ ಶೋ ಕೊಡುತ್ತಾ ಓಡಾಡುತ್ತಿದ್ದಾರೆ. ಬೆಳಗಾವಿ ಅಧಿವೇಶನದ ಆರಂಭದ ದಿನ ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿ ಕೆಲ ಕಾಲ ಮುಂದೂಡಲಾಗುತ್ತದೆ. ನಾವು ಅಂದು ಒಂದು‌ ಲಕ್ಷ ಜನ ರೈತರನ್ನು ಸೇರಿಸಿ ಹೋರಾಟ […]

ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸದಿದ್ದರೆ ಬಿಜೆಪಿಯಿಂದ ಉಗ್ರ ಹೋರಾಟ: ಬಿ.ಎಸ್. ಯಡಿಯೂರಪ್ಪ

Monday, November 19th, 2018
yedyurappa

ಬೆಂಗಳೂರು: ಇಂದಿನ ರೈತರ ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಬರದೇ ಇದ್ದರೆ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಉಗ್ರ ಹೋರಾಟ‌ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸ ಧವಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳಗಾರರ ಸಮಸ್ಯೆ ವಿಕೋಪಕ್ಕೆ‌ ಹೋಗಿದೆ. ಸಾಲಮನ್ನಾ ಘೋಷಣೆ ಆದರೂ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಮನ್ನಾ ಮಾಡ್ತೀನಿ ಅಂತ ರಾಜಕೀಯ ದೊಂಬರಾಟ ಮಾಡಿದ ಮುಖ್ಯಮಂತ್ರಿಗಳೇ ರೈತರ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದರು. […]