Blog Archive

ಸಾಲ ಮನ್ನಾ ಘೋಷಣೆಗೆ ನಾನು ಈಗಲೂ ಬದ್ಧ, ಹಿಂದೆ ಸರಿಯುವ ಮಾತೇ ಇಲ್ಲ: ಕುಮಾರಸ್ವಾಮಿ

Tuesday, June 19th, 2018
kumarswamy

ಬೆಂಗಳೂರು: ಸಾಲ ಮನ್ನಾ ಘೋಷಣೆಗೆ ನಾನು ಈಗಲೂ ಬದ್ಧ. ಸಾಲಮನ್ನಾದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಈ ವಿಷಯದಲ್ಲಿ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ನನ್ನ ಪ್ರಯತ್ನ ಮಾಡಿದ್ದೇನೆ. ಆದ್ರೆ, ಅವರು ಮಾಡೇ ಬಿಡ್ತಾರೆ ಅಂತ ತಿಳಿದುಕೊಂಡಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು. ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಹೆಚ್‌ಡಿಕೆ ಸಂವಾದ ನಡೆಸಿದರು. ಈ ವೇಳೆ, ಮೊದಲ ವಾರದಲ್ಲಿ ಬಜೆಟ್ ಮಂಡಿಸುವ ಬಗ್ಗೆ ಸಿಎಂ ಸುಳಿವು ನೀಡಿದರು. ರಾಹುಲ್ ಗಾಂಧಿ ಅವರ ಸಲಹೆಗಳನ್ನ […]

ಕಾಂಗ್ರೆಸ್‌‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ!

Tuesday, June 19th, 2018
rahul-gandhi

ನವದೆಹಲಿ: ಕಾಂಗ್ರೆಸ್‌‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇವತ್ತು 48ನೇ ವಸಂತಕ್ಕೆ ಕಾಂಗ್ರೆಸ್‌‌ನ ಯುವರಾಜ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಹುಲ್‌ ಗಾಂಧಿ ಅವರಿಗೆ ಇದು ಮೊದಲ ಜನ್ಮದಿನದ ಸಂಭ್ರಮವಾಗಿದೆ. ಪ್ರಧಾನಿ ಮೋದಿ, ರಾಜಕಾರಣಿಗಳು ಮತ್ತು ಕಾಂಗ್ರೆಸ್‌ನ ನಾಯಕರು ರಾಗಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಜನ್ಮದಿನದ ಶುಭಾಶಯಗಳು. ದೀರ್ಘಾಯಸ್ಸು ಮತ್ತು ಆರೋಗ್ಯಕ್ಕಾಗಿ ನಾನು […]

ಸಮ್ಮಿಶ್ರ ಸರ್ಕಾರದ ಕೊಡುಗೆ – ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ 1.75ರಷ್ಟು ಹೆಚ್ಚಳಕ್ಕೆ ಸಮ್ಮತಿ

Monday, June 18th, 2018
Kumara Swamy

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವ ನೇತೃತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಆರು ಲಕ್ಷ ನೌಕರರ ಮೂಲ ವೇತನದಲ್ಲಿ ಶೇ 1.75ರಷ್ಟು ಹೆಚ್ಚಳ ಶಿಫಾರಸಿಗೆ ಸಮ್ಮತಿ ಸಿಕ್ಕಿದೆ. ಹಣಕಾಸು ಖಾತೆ ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದು ಆ ವೇಳೆ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಹೆಚ್ಚಳವು ಜನವರಿ 1, 2018ರಿಂದ ಪೂರ್ವಾನ್ವಯವಾಗಲಿದೆ. ಈ ಸೌಲಭ್ಯವು ರಾಜ್ಯ […]

ಯಾವುದೇ ನಾಯಕರ ಮನೆ ಬಾಗಿಲಿಗೆ ಹೋಗಿ ಸಚಿವ ಮಾಡಿ ಅಂತ ಕೇಳಿಲ್ಲ: ರಾಮಲಿಂಗಾರೆಡ್ಡಿ

Wednesday, June 13th, 2018
ramlinga-reddy

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾದ ಹಿನ್ನೆಲೆ ರಾಮಲಿಂಗಾರೆಡ್ಡಿ ಮತ್ತು ಸೌಮ್ಯಾ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಮೊದಲಿಗೆ ಎಲ್ಲ ಕಾರ್ಯಕರ್ತರಿಗೂ ಧನ್ಯವಾದ ಸಲ್ಲಿಸಿದರು. ಈ ವೇಳೆ ರಾಮಲಿಂಗಾರೆಡ್ಡಿ ಮಾತನಾಡಿ, ಎಲ್ಲ ಪಕ್ಷಗಳು ಗೆಲ್ಲುವ ದೃಷ್ಟಿಯಿಂದ ಅಭ್ಯರ್ಥಿ ಹಾಕ್ತಾರೆ. ನಾವು ಗೆಲ್ಲುವ ಉದ್ದೇಶದಿಂದ ಸ್ಪರ್ಧೆ ಮಾಡಿದ್ವಿ ಅಂತ ಹೇಳಿದರು. ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಹಾಗೂ ಜಯನಗರ ಕ್ಷೇತ್ರದ ಪ್ರತಿ ಕಾಂಗ್ರೆಸ್ ನಾಯಕರಿಗೆ, ಸ್ಥಳೀಯ ಕಾರ್ಪೋರೇಟರ್‌ಗೆ ಧನ್ಯವಾದಗಳನ್ನ ತಿಳಿಸಿ, ಕೊಟ್ಟ ಆಶ್ವಾಸನೆ ಈಡೇರಿಸುತ್ತೇವೆ. ನಮ್ದೇ ಸಮೀಶ್ರ ಸರ್ಕಾರ […]

‘ರೈತರ ಬಗ್ಗೆ ಅಪ್ಪ-ಮಕ್ಕಳಿಗೆ ಕಾಳಜಿ ಇದ್ದರೆ ಕಾಂಗ್ರೆಸ್‌ಗೆ ಸಾಲಮನ್ನಾ ಷರತ್ತು ವಿಧಿಸಬೇಕಿತ್ತು’

Saturday, June 9th, 2018
yedyurappa

ಬೆಂಗಳೂರು: ರೈತರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಅಪ್ಪ-ಮಕ್ಕಳು ಸಾಲಮನ್ನಾ ಮಾಡುವ ಷರತ್ತನ್ನು ಕಾಂಗ್ರೆಸ್ ಮುಂದಿಡಬೇಕಿತ್ತು. ಅದರ ಬದಲು ಅಧಿಕಾರ ಉಳಿಸಿಕೊಳ್ಳಲು ಬೇಕಾದ ಷರತ್ತು ಹಾಕಿದ್ದಾರೆ ಎಂದು ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರಂ ಪಕ್ಷದ ಕಚೇರಿಯಲ್ಲಿ ನಡೆದ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು. ಅಪ್ಪ-ಮಕ್ಕಳಿಗೆ ನಿಜವಾಗಲೂ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ರೈತರ ಸಾಲಮನ್ನಾ ಮಾಡಿದರೆ ಮಾತ್ರ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದು ಕಾಂಗ್ರೆಸ್‌ಗೆ […]

ಶಾಸಕ ಯು.ಟಿ.ಖಾದರ್ ಅವರಿಗೆ ಸಚಿವ ಸ್ಥಾನ ಖಚಿತ

Wednesday, June 6th, 2018
u-t-kader

ಮಂಗಳೂರು: ಸಚಿವ ಸಂಪುಟ ರಚನೆ ಹಿನ್ನೆಲೆಯಲ್ಲಿ ಸ್ಥಾನಗಳ ಹಂಚಿಕೆ ಬಗ್ಗೆ ಕುತೂಹಲ ಮೂಡಿರುವ ನಡುವೆಯೇ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಗೆ ಸಚಿವ ಸ್ಥಾನ ಖಚಿತಗೊಂಡಿದೆ ಎನ್ನಲಾಗಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವ ಸಂಪುಟ ರಚನೆ ತೀವ್ರ ಕುತೂಹಲ ಸೃಷ್ಟಿಸಿತ್ತು. ಈ ಹಿಂದಿನ ಕಾಂಗ್ರೆಸ್ ಸರಕಾರದಲ್ಲಿದ್ದ ಹಲವು ಘಟಾನುಘಟಿಗಳು ಸಚಿವ ಸ್ಥಾನದಿಂದ ವಂಚಿತರಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಅಲ್ಲದೆ ಯು.ಟಿ. ಖಾದರ್ ರಿಗೆ ಸಚಿವ ಸ್ಥಾನ ಈ ಬಾರಿ ಸಿಗುವುದು ಸುಲಭದ […]

ಸಿಎಂ ಜನತಾ ದರ್ಶನ… ವಿಕಲಚೇತನನಿಗೆ ಸ್ಪಾಟಲ್ಲೇ ನೌಕರಿ ಭರವಸೆ ನೀಡಿದ್ರು ಹೆಚ್‌ಡಿಕೆ

Monday, June 4th, 2018
kumarswamy

ಬೆಂಗಳೂರು: ಜನತಾ ದರ್ಶನಕ್ಕೆ ಬರುವ ಜನರಿಂದ ಮಾಹಿತಿ ಪಡೆಯಲು ಒಂದು ತಂಡ ರಚನೆಯಾಗಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜನತಾ ದರ್ಶನಕ್ಕಾಗಿ ತಂಡ ರಚಿಸಿದ್ದು, ಇನ್ನು ಮುಂದೆ ಈ ತಂಡ ಜನತಾ ದರ್ಶನಕ್ಕೆ ಬರುವ ಜನರಿಂದ ಮಾಹಿತಿ ಪಡೆಯಲಿದೆ. ಸಿಎಂ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣ ಆವರಣದಲ್ಲಿ ಇಂದು ಜನತಾ ದರ್ಶನದ ತಂಡ ರಚಿಸಿದ್ದು, ಸಮಸ್ಯೆ ಹೇಳಿಕೊಂಡು ಬರುವವರ ಮಾಹಿತಿ ಪಡೆಯುವುದು ಈ ತಂಡದ ಕೆಲಸವಾಗಿದೆ. ಸಿಎಂ ಜನತಾ ದರ್ಶನಕ್ಕೂ ಮುನ್ನ ಸಮಸ್ಯೆ ಏನು? ಯಾವ ಊರು? ಇನ್ನಿತರ […]

ಕುಮಾರಸ್ವಾಮಿ ಪೂರ್ಣಾವಧಿ ಸಿಎಂ ಆಗಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ: ಐವನ್ ಡಿಸೋಜ

Monday, June 4th, 2018
ivan-dsouza

ಮಂಗಳೂರು: ಕುಮಾರಸ್ವಾಮಿ ಪೂರ್ಣಾವಧಿ ಸಿಎಂ ಆಗಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ. ನಮ್ಮ ಪೂರ್ಣ ಸಹಮತ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ‌ ಐವನ್ ಡಿಸೋಜ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ. ಯಾವುದೇ ಅಸಮಾಧಾನ ಇಲ್ಲ. ಸಮ್ಮಿಶ್ರ ಸರ್ಕಾರ ದೃಢವಾಗಿರಬೇಕು, ನಾಯಕತ್ವ ಗಟ್ಟಿಯಾಗಿರಬೇಕು ಎಂಬ ನೆಲೆಯಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ ಎಂದರು. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿದ್ದೇವೆ. ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇಂದು ಹೆಚ್‌ಡಿಕೆ ಭೇಟಿ ಮಾಡಲಿರುವ ಕಮಲ್ ಹಾಸನ್

Monday, June 4th, 2018
kamal-hassan

ಬೆಂಗಳೂರು: ತಮಿಳುನಾಡಿನ ಹಿರಿಯ ನಟ, ರಾಜಕಾರಣಿ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11.30 ರ ಸುಮಾರಿಗೆ ಕುಮಾರಸ್ವಾಮಿ ಅವರು ಕಮಲ್ ಹಾಸನ್ ಭೇಟಿ ಮಾಡಲಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ. ಕರ್ನಾಟಕದಲ್ಲಿ ತಮಿಳು ಚಿತ್ರ ಬಿಡುಗಡೆಗೆ ಅಡ್ಡಿ ವಿಚಾರ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ವಿಚಾರವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೂ ಆಗಮಿಸಿದ್ದ ಕಮಲ […]

ಸಿಎಂ ಹೆಚ್‌ಡಿಕೆ ಅನುಭವಿ ರಾಜಕಾರಣಿ, ಕೇಂದ್ರದಿಂದ ನಿರೀಕ್ಷೆಯಷ್ಟು ಕೆಲಸವಾಗಿಲ್ಲ: ಪೇಜಾವರ ಶ್ರೀ

Friday, June 1st, 2018
pejawar-swamii

ಉಡುಪಿ: ಸಿಎಂ ಕುಮಾರಸ್ವಾಮಿ ಅನುಭವಿ ರಾಜಕಾರಣಿ. ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ ಎಂದು ಪೇಜಾವರ ಶ್ರೀಗಳು ಹಾರೈಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವದ ವಿಕೃತಿ. ರಾಜಕಾರಣಿಗಳು ರೆಸಾರ್ಟ್, ಆಪರೇಷನ್‌ನಲ್ಲಿ ತಲ್ಲೀನರಾಗಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ನೈತಿಕತೆ ಹೊಂದಿಲ್ಲ. ಗೊಂದಲ ನಿರ್ಮಾಣವಾದ್ರೆ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಬೇಡ. ಸರ್ವ ಪಕ್ಷ ಸರ್ಕಾರ ಜಾರಿಗೆ ಬರಬೇಕು. ಅಂತಹ ಪ್ರಯೋಗ ರಾಜ್ಯದಲ್ಲಿ ನಡೆಯಬೇಕು. ಆದರ್ಶ ಮಂತ್ರಿ ಮಂಡಲ ರಚನೆಯಾಗಲಿ ಎಂದರು. ವಿರೋಧ ಪಕ್ಷ ಮುಕ್ತ ಸರ್ಕಾರ […]