Blog Archive

ಉಡುಪಿ ಜಿಲ್ಲೆಯಲ್ಲಿ ಜೂ.7ರ ವರೆಗೆ ಮದುವೆಗೆ ಅನುಮತಿ ಇಲ್ಲ

Monday, May 24th, 2021
Udupi-DC

ಉಡುಪಿ :   ಮೇ 25ರಿಂದ ಜೂ.7ರ ವರೆಗೆ  ಉಡುಪಿ ಜಿಲ್ಲೆಯಲ್ಲಿ ಮದುವೆಗೆ ಅನುಮತಿ ನೀಡುವುದಿಲ್ಲ. ಈವರೆಗೆ ಅನುಮತಿ ನೀಡಿದ ಮದುವೆಗಳು ಮಾತ್ರ ನಡೆಯಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರೊಂದಿಗೆ ನಡೆಸಿದ ವೀಡಿಯೊ ಕಾನ್ಫರೆನ್ಸ್ ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮದುವೆಯಿಂದ ಕೊರೋನ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ.  ಮದುವೆ ಆಗಲು ನಿರ್ಧಾರ ಮಾಡಿದವರು ಅದನ್ನು ಮುಂದೂಡಬೇಕು. ಸಾರ್ವಜನಿಕರು ಸಹಕಾರ ನೀಡಬೇಕು. ಈ […]

ಧಾರವಾಡ: ಸಂಪೂರ್ಣ ಲಾಕ್‌ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ- ಡಿಸಿ

Friday, May 21st, 2021
Nithish Pateel

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ನಾಳೆ (ಮೇ 22ರ) ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಿ, ಕೋವಿಡ್ ತಡೆಗಟ್ಟುವುದಕ್ಕಾಗಿ ಲಾಕ್‌ಡೌನ್ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿನಂತಿಸಿದರು. ಅವರು ಇಂದು ಸಂಜೆ ಧಾರವಾಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ವರ್ಚವಲ್ ಆನ್‍ಲೈನ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಲಾಕ್‌ಡೌನ್ ಅವಧಿಯ ಎರಡು ದಿನ ಬೆಳಿಗ್ಗೆ 6ರಿಂದ 8 ಗಂಟೆಯವರೆಗೆ ನಾಗರಿಕರು ತಮ್ಮ […]

ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಟಗ್ ಬೋಟಿನ ಎಲ್ಲಾ 9 ಜನರ ರಕ್ಷಣೆ

Monday, May 17th, 2021
Tug boat Rescue

ಮಂಗಳೂರು  : ಭಾರತೀಯ ಜನತಾ ಪಾರ್ಟಿಯ ರಾಜ್ಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳೀನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರೊಂದಿಗೆ ಕೋಸ್ಟಲ್ ಗಾರ್ಡ್ ಡಿ. ಐ.ಜಿ ಶ್ರೀ ಎಸ್.ಬಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ ಸಮುದ್ರದ ಪ್ರಕ್ಷುಬ್ಧತೆಯಿಂದ ಕಾಪು ಲೈಟ್ ಹೌಸ್ ನಿಂದ ಸುಮಾರು ಐದು ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಮಂಗಳೂರಿನ ಎಂಆರ್ […]

ದಿಲ್ಲಿಗೆ ಹೋಗಿ ಏನ್ ಮಾಡ್ತಿಯಾ?: ಯೋಗೇಶ್ವರ್ ಮೇಲೆ ರೇಣುಕಾಚಾರ್ಯ ಗರಂ

Friday, May 14th, 2021
Renukacharya

ದಾವಣಗೆರೆ: ಸಚಿವ ಸಿ. ಪಿ. ಯೋಗೇಶ್ವರ್ ವಿರುದ್ಧ ವಾಗ್ದಾಳಿ ಮತ್ತೆ ಮುಂದುವರೆಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಸೋತರೂ ಮಂತ್ರಿ ಮಾಡಿದ್ದಕ್ಕೆ ದೆಹಲಿಯಲ್ಲಿ ಲಾಬಿ ಮಾಡ್ತೀಯಾ‌. ಯಾರೋ ಒಬ್ಬರು ಲಾಬಿ ಮಾಡಿದಾಕ್ಷಣ ಸಿಎಂ ಬದಲಾವಣೆ ಮಾಡ್ತಾರಾ. ಕೊರೊನಾ ಸಂಕಷ್ಟ ಇರುವ ಕಾರಣಕ್ಕೆ ರಾಜಕಾರಣ ಬೇಡ ಅಂತಾ ಸುಮ್ಮನಿದ್ದೇನೆ. ಇದೆಲ್ಲಾ ಮುಗಿದ ಮೇಲೆ ಮಾತನಾಡ್ತೇನೆ ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣದ ಜನರು ಕುಡಿಯಲು ನೀರಿಲ್ಲ, ವೆಂಟಿಲೇಟರ್, ಆಕ್ಸಿಜನ್ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶ

Thursday, May 13th, 2021
Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದ್ದು, ಈಗಾಗಲೇ ಸರಕಾರ ಹೊರಡಿಸಿರುವ ಮೇ 10ರಿಂದ ಮೇ 24ರ ತನಕದ ಲಾಕ್ ಡೌನ್ ಮುಂದುವರೆಯಲಿದೆ. ಆ ಮಾರ್ಗಸೂಚಿಯೇ ಮುಂದುವರೆಯಲಿದೆ. ಅದನ್ನು ಹೊರತು ಪಡಿಸಿ ಉಳಿದಂತೆ ಯಾವುದೇ ಪ್ರತ್ಯೇಕ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಹಾಗೂ ರವಿವಾರದಂದು ಬೆಳಗ್ಗೆ 9 […]

ಆಕ್ಸಿಜನ್ ಕೊರತೆಯನ್ನು ನೀಗಿಸಲು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್

Monday, April 26th, 2021
Mangalore DC

ಮಂಗಳೂರು : ಆಕ್ಸಿಜನ್ ಕೊರತೆಯನ್ನು ನೀಗಿಸಲು  ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಹಾಗೂ ಸಕಾಲದಲ್ಲಿ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದಿಸಲು ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸದಾಗಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಬಗ್ಗೆ ಯೋಜನೆ ರೂಪಿಸಲಾಗಿದೆ. ಮುಂದಿನ 50 […]

ಕೇವಲ ಫೋಟೋಕ್ಕಾಗಿ ಮಾತ್ರ ಮಾಸ್ಕನ್ನು ತೆಗೆದು ಹಾಕಿಕೊಂಡಿದ್ದೆ : ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪಷ್ಟನೆ

Saturday, April 24th, 2021
G Jagadeesha

ಉಡುಪಿ : ಜಿಲ್ಲಾಧಿಕಾರಿ ಜಿ ಜಗದೀಶ್ ಮಾಸ್ಕ್ ಧರಿಸಿದೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಕುರಿತು ಸ್ಪಷ್ಟನೆ ನೀಡಿದ್ದು. ಕೇವಲ ಫೋಟೋಕ್ಕಾಗಿ ಮಾತ್ರ ಮಾಸ್ಕನ್ನು ತೆಗೆದು ಹಾಕಿಕೊಂಡಿದ್ದೇನೆ ಎಂದಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಮಾಸ್ಕ್ ಹಾಕಬೇಕಿಲ್ಲ. ನನ್ನ ಮನೆಯ ಪಕ್ಕದಲ್ಲೇ ಕಾರ್ಯಕ್ರಮಿದ್ದದ್ದು. ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕಾರಿಯವರ ಮಗಳ ಕಾರ್ಯಕ್ರಮವಾಗಿತ್ತು.  ನಾಲ್ಕು ಮನೆಯ ಕುಟುಂಬಸ್ಥರು ಹೆಚ್ಚು ಕಮ್ಮಿ 20 ಮಂದಿ ಅದರಲ್ಲಿ ಭಾಗಿಯಾಗಿದ್ದರು. ನಾನು ಊಟಕ್ಕೂ ನಿಲ್ಲದೆ, ಐದಾರು ನಿಮಿಷವಷ್ಟೇ ಇದ್ದು ಹೊರಟೆ . ಕೇವಲ ಫೋಟೋಕ್ಕಾಗಿ ಮಾತ್ರ ಮಾಸ್ಕನ್ನು ತೆಗೆದು ಹಾಕಿಕೊಂಡಿದ್ದೇನೆ. ಸೀಮಿತ […]

ಕೊರೋನ 2ನೇ ಅಲೆ : ಮಂಗಳೂರಿನಲ್ಲಿ 144 (3) ಸೆಕ್ಷನ್ ಜಾರಿ

Tuesday, March 30th, 2021
KV Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ. ಮಾರ್ಚ್‌ 29ರಿಂದಲೇ  ದ.ಕ. ಜಿಲ್ಲೆಯಲ್ಲಿ 144(3) ಸೆಕ್ಷನ್‌ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ […]

ಕೇರಳದಲ್ಲಿ ಕೊರೋನ ಉಲ್ಬಣ ಜಿಲ್ಲೆಗೆ ಆಗಮಿಸುವ ಜನರಿಗೆ ತಪಾಸಣೆಗೊಳಪಡಸಲು ಕ್ರಮ

Monday, February 8th, 2021
KV Rajendra

ಮಂಗಳೂರು : ಪಕ್ಕದ ರಾಜ್ಯ ಕೇರಳದಲ್ಲಿ ಕೊರೋನ ಉಲ್ಬಣ ವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಆಗಮಿಸುವ ಅಲ್ಲಿನವರನ್ನು ಸೂಕ್ತ ತಪಾಸಣೆಗೊಳಪಡಿಸಿ ಜಿಲ್ಲೆಯಲ್ಲಿ ಕೊರೋನ ಹರಡದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆಯುಷ್ ಕಚೇರಿಯಲ್ಲಿ ಇಂದು ಪೊಲೀಸ್ ಆಯುಕ್ತರು, ಡಿಎಚ್‌ಒ ಜತೆ ನಡೆಸಲಾದ ತುರ್ತು ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗೆ ಡಾ. ರಾಜೇಂದ್ರ ಈ ಪ್ರತಿಕ್ರಿಯೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ಕೆಲಸ ಕಾರ್ಯ, ಕಾಲೇಜುಗಳಿಗಾಗಿ ಕೇರಳದಿಂದ ಕರ್ನಾಟಕಕ್ಕೆ ಬರುವುದರಿಂದ ಕೋವಿಡ್ ಅನ್‌ಲಾಕ್ ಮಾರ್ಗಸೂಚಿಗಳನ್ನು […]

ಏಕಾಏಕಿ ಸಾಲಗಾರರ ಆಸ್ತಿ ಜಪ್ತಿ ಮಾಡಲು ಆದೇಶಿಸುವುದು ಕಾನೂನಿಗೆ ವಿರೋಧವಾಗಿದೆ

Sunday, January 10th, 2021
pucl

ಮಂಗಳೂರು  : ಆರ್.ಬಿ. ಐ ವರದಿ ಪ್ರಕಾರ ಕಳೆದ ಹಣ ಕಾಸು ವರ್ಷದಲ್ಲಿ ದೇಶದಲ್ಲಿ 1.80 ಲಕ್ಷ ಕೋಟಿ ರೂಪಾಯಿ ವಂಚನೆ ಸೃಷ್ಟಿಯಾಗಿದ್ದು,ಸರ್ಫೆಸಿಯ ಕಾನೂನು ಪ್ರಕಾರ ಬ್ಯಾಂಕ್ ವಸೂಲಾತಿ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು ಸಮರ್ಪಕ ಪ್ರೊಸೀಡಿಂಗ್ಸ್ ನಡೆಸದೆ ಏಕಾಏಕಿ ಸಾಲಗಾರರ ಆಸ್ತಿ ಜಪ್ತಿ ಮಾಡಲು ಆದೇಶಿಸುವುದು ಕಾನೂನಿಗೆ ವಿರೋಧವಾಗಿದೆ. ಮುಂದೆ ಜಿಲ್ಲಾಧಿಕಾರಿಗಳು ಇಂತಹ ಪ್ರಕರಣಗಳಲ್ಲಿ, ಬ್ಯಾಂಕ್ ಗಳ ವಸೂಲಾತಿ ಅರ್ಜಿ ಆದೇಷಗಳಲ್ಲಿ,ಬ್ಯಾಂಕ್ ಸಲ್ಲಿಸುವ ದಾಖಲೆಗಳು ಸಮರ್ಪಕ ವಾಗಿದೆಯೆ ಎಂದು ಕೂಲಂಕಷ ತನಿಖೆ ನಡೆಸಿ ಮತ್ತು ಸಾಲಗಾರರಿಗೆ ನಿರ್ಧಿಷ್ಟ ವಿಧದ […]