Blog Archive

ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಇಬ್ಬರು ಬಲಿ

Wednesday, July 1st, 2020
corona-death

ಮಂಗಳೂರು : ಬುಧವಾರ ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಇಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು 51 ವರ್ಷದ ಬೆಂಗ್ರೆ ನಿವಾಸಿ ಮತ್ತು 31 ವರ್ಷದ ಭಟ್ಕಳ ‌ನಿವಾಸಿ ಎಂದು ಗುರುತಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಕೊರೋನದಿಂದ ಸಾವಿಗೀಡಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಬೆಂಗ್ರೆ ನಿವಾಸಿ, ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ 51 ವರ್ಷದ ಸೋಂಕು ಪೀಡಿದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮತ್ತೋರ್ವ ಯುವಕನನ್ನು 31 ವರ್ಷದ ಭಟ್ಕಳ ‌ನಿವಾಸಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಮೂರು ಕೋವಿಡ್ ಸೋಂಕಿತ ಸಾವು

Sunday, June 28th, 2020
covid death

ಮಂಗಳೂರು : ಜೋಕಟ್ಟೆ ನಿವಾಸಿ 51ರ ಹರೆಯದ ಮಹಿಳೆ ಸಾವನ್ನಪ್ಪಿದ್ದು ಅವರ  ಗಂಟಲ ದ್ರವ ಪರೀಕ್ಷೆಯಲ್ಲಿ ಕೋವಿಡ್-19 ಪಾಸಿಟಿವ್ ವರದಿ ಬಂದಿದೆ. ಮಹಿಳೆ ಅನಾರೋಗ್ಯ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಭಾನುವಾರ ಜೂನ್ 28ರ ಬೆಳಗ್ಗೆ ಸುರತ್ಕಲ್ ನಿವಾಸಿ 31ರ ಹರೆಯದ ಯುವಕ ಹಾಗೂ ಬಂಟ್ವಾಳ ನಿವಾಸಿ ವೃದ್ಧೆ ಮೃತಪಟ್ಟಿದ್ದು ಈ ಮೂಲಕ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಸೋಂಕಿತರ ಸಾವಿನ ಸಂಖ್ಯೆ 13ಕ್ಕೇರಿದೆ. ಜೋಕಟ್ಟೆ ಸಮೀಪದ ನಿವಾಸಿ ಮಹಿಳೆ ಟಿಬಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 12 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆ

Monday, June 22nd, 2020
DK-corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 12 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು  ಜೂನ್ 22, ಸೋಮವಾರ ವರದಿಯಾಗಿದೆ. ಹೊಸ ಪ್ರಕರಣಗಳ ಪೈಕಿ 11 ಮಂದಿ ವಿದೇಶದಿಂದ ಮರಳಿದವರಾಗಿದ್ದಾರೆ. ಒಬ್ಬರ ಪಾಸಿಟಿವ್ ಪ್ರಕರಣ ಐ ಎಲ್ ಐ ಎಂದು ಗುರುತಿಸಲಾಗಿದೆ. 7  ಪುರುಷರಲ್ಲಿ ಸೋಂಕು ದೃಢಪಟ್ಟರೆ,  45 ವರ್ಷದ ಓರ್ವ ಮಹಿಳೆಯಲ್ಲೂ ಪಾಸಿಟಿವ್ ಕಂಡುಬಂದಿದೆ. ಇಬ್ಬರು ಯುವಕರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ನಡುವೆ ಸೋಮವಾರದಂದು 257 ಮಂದಿಯ ವರದಿ ನೆಗೆಟಿವ್ ಬಂದಿದೆ.  ಹನ್ನೆರಡು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ […]

ದಕ್ಷಿಣ ಕನ್ನಡ ಜಿಲ್ಲೆ ಭಾನುವಾರ ಏಳು ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

Monday, June 22nd, 2020
Dk Corona

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಭಾನುವಾರ, ಜೂನ್ 21ರಂದು  ಏಳು ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ರೋಗಿ ಸಂಖ್ಯೆ 6619 ವ್ಯಕ್ತಿಯ ಸಂಪರ್ಕದಿಂದ ಇಬ್ಬರಲ್ಲಿ ಸೋಂಕು ದೃಢಪಟ್ಟಿದ್ದರೆ. ಮೂವರು ಕುವೈಟ್ ನಿಂದ ಮರಳಿದವರಾಗಿದ್ದಾರೆ. ಇನ್ನುಳಿದಂತೆ ಪುತ್ತೂರಿನ ಒಬ್ಬರಿಗೆ ಐಎಲ್ ಐನಿಂದ ಸೋಂಕು ದೃಢಪಟ್ಟರೆ, ಬೆಳ್ತಂಗಡಿ ನಿವಾಸಿಯೊಬ್ಬರಿಗೆ ಎಸ್ ಆರ್ ಐನಿಂದ ಸೋಂಕು ತಗುಲಿದೆ. ಭಾನುವಾರ ಉಡುಪಿ ಜಿಲ್ಲೆ ಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಇನ್ನು ಉಡುಪಿ ಜಿಲ್ಲೆಯಲ್ಲಿ 12 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. […]

ಕೊರೊನಾ ಪಾಸಿಟಿವ್ ಪ್ರಕರಣ ಜೂನ್ 10 : ದಕ್ಷಿಣ ಕನ್ನಡ ಜಿಲ್ಲೆ-4, ಉಡುಪಿ ಜಿಲ್ಲೆ- 0

Wednesday, June 10th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಂದು ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.  ಉಡುಪಿ ಜಿಲ್ಲೆಯಲ್ಲಿ ಇಂದು  ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಸೋಂಕಿತ ನಾಲ್ವರು ಕೂಡ ಪುರುಷರಾಗಿದ್ದಾರೆ. 29 ಹಾಗೂ 30 ವರ್ಷದ ಯುವಕರು, 40 ಹಾಗೂ 60 ವರ್ಷದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ 29 ವರ್ಷದ ವ್ಯಕ್ತಿ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿಯಾಗಿದ್ದಾರೆ. ಸೌದಿ ಅರೇಬಿಯಾದಿಂದ್ದ ಬಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ಅವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇನ್ನು […]

ಕೊರೊನಾ ಪಾಸಿಟಿವ್ ಜೂನ್ 9: ದಕ್ಷಿಣ ಕನ್ನಡ ಜಿಲ್ಲೆ- 23, ಉಡುಪಿ ಜಿಲ್ಲೆ- 0

Tuesday, June 9th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 9, ಮಂಗಳವಾರ 23 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.  ಇದರಿಂದಾಗಿ ಸೋಂಕಿತರ ಸಂಖ್ಯೆ 218ಕ್ಕೆ ಏರಿಕೆಯಾಗಿದೆ ಸೋಂಕಿತರ ಪೈಕಿ ಪೈಕಿ  ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಮೂವರು ದುಬೈನಿಂದ ಮರಳಿದವರಾಗಿದ್ದಾರೆ. ಉಳಿದ 18 ಮಂದಿ ಸೌದಿಯಿಂದ ಮರಳಿದವರಾಗಿದ್ದಾರೆ. ಈ ಎಲ್ಲಾ 23 ಮಂದಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ 96 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 115 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಜೂನ್ 9ರಂದು ಕೊರೊನಾ ವೈರಸ್ ನ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಹೊಸ ಕೋವಿಡ್-19 ಪ್ರಕರಣಗಳು

Monday, June 1st, 2020
dakshina-kannada-corona

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ. ಸೋಮವಾರ ನಾಲ್ಕು ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ನಾಲ್ಕು ಸೋಂಕು ಪ್ರಕರಣಗಳ ಪೈಕಿ ಓರ್ವ ಗುಜರಾತ್ ನಿಂದ ಬಂದವರಾಗಿದ್ದು ಮತ್ತೊಬ್ಬರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದವರು. ಉಳಿದ ಇಬ್ಬರ ಸೋಂಕು ಮೂಲದ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ. 45 ವರ್ಷದ ‌ಮಹಿಳೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 50 ವರ್ಷದ ಪುರುಷ ಗುಜರಾತ್ ರಾಜ್ಯದಿಂದ ಬಂದವರಾಗಿದ್ದಾರೆ. 24 ವರ್ಷದ ಯುವತಿ ಮತ್ತು 27 ವರ್ಷದ ಯುವಕನ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 14 ಕರೋನವೈರಸ್ ಪಾಸಿಟಿವ್ ಪ್ರಕರಣ ಪತ್ತೆ

Saturday, May 30th, 2020
dk covid--19

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ  14 ಕರೋನವೈರಸ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 11 ಪುರುಷರು ಮತ್ತು 3 ಮಹಿಳೆಯರ ಪಾಸಿಟಿವ್ ವರದಿ ಬಂದಿದೆ. ಇವುಗಳ ಪೈಕಿ ದಕ್ಷಿಣ ಕನ್ನಡದಲ್ಲಿ 13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದವರಾಗಿದ್ದರೆ, ಒಂದು ಪ್ರಕರಣ ಸೋಮೇಶ್ವರ ಗ್ರಾಮದ ಪಿಲಾರ್ ದಾರಂದ ಬಾಗಿಲುವಿನಲ್ಲಿ ವರದಿಯಾಗಿದೆ. 17 ವರ್ಷದ ಬಾಲಕನಿಗೆ ಪಾಸಿಟಿವ್ ಬಂದಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ದ.ಕ ಒಟ್ಟು 75 ಸಕ್ರಿಯ ಪ್ರಕರಣಗಳಿವೆ ಇದರೊಂದಿಗೆ ಜಿಲ್ಲೆಯಲ್ಲಿ 119  ಪಾಸಿಟಿವ್ ಪ್ರಕರಣಗಳಿವೆ, ಅದರಲ್ಲಿ 73 […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆಯ ವೇಳೆಗೆ 24 ಹೊಸ ಕೋವಿಡ್ ಪ್ರಕರಣ ದೃಢ

Thursday, May 28th, 2020
corona-virus

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆಯ ಆರೋಗ್ಯ ಇಲಾಖೆ ಯ ವರದಿಯಲ್ಲಿ ಮತ್ತೆ 18 ಜನರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಜಿಲ್ಲೆಯ ಈಗಿನ 18 ಸೇರಿದಂತೆ ಇಂದಿನ ಎಲ್ಲಾ 24 ಮಂದಿ ಸೋಂಕಿತರು ಮಹಾರಾಷ್ಟ್ರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರು ಆಗಿದ್ದಾರೆ. ಇವರಿಗೆ ನಿಗಧಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಶತಕದ ಅಂಚಿಗೆ ತಲುಪಿದೆ. ಜಿಲ್ಲೆಯಲ್ಲಿ ಒಟ್ಟು 97 […]

ಇಬ್ಬರು ಮಕ್ಕಳು ಸೇರಿ, ದಕ್ಷಿಣ ಕನ್ನಡ ಜಿಲ್ಲೆಯ11 ಮಂದಿಯಲ್ಲಿ ಕೊರೊನಾ ಸೋಂಕು

Wednesday, May 27th, 2020
Mangalore Covid

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  11 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇಂದು ದೃಢವಾದ 11 ಮಂದಿಯಲ್ಲಿ 10 ಮಂದಿ ಮಹಾರಾಷ್ಟ್ರ ಹಾಗೂ ಒಬ್ಬರು ಗುಜರಾತ್ ರಾಜ್ಯದಿಂದ ಹಿಂತಿರುಗಿದವರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಬುಧವಾರದ ಆರೋಗ್ಯ ಇಲಾಖೆಯ ಬೆಳಗ್ಗಿನ ಬುಲೆಟಿನ್ ಪ್ರಕಾರ  3, 11, ವರ್ಷದ ಮಕ್ಕಳಿಗೂ ಸೋಂಕು ತಗುಲಿದೆ. ಇದಲ್ಲದೆ 36, 59,17, 45, 37 ಮಹಿಳೆ ಹಾಗೂ 35, 46, 39 ವರ್ಷದ ಪುರುಷರಲ್ಲಿ ಸೋಂಕು […]