Blog Archive

ಪರಮಹಂಸದಂತೆ ಎತ್ತರಕ್ಕೆ ಏರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ

Tuesday, August 17th, 2021
Dr Raj

ಬೆಂಗಳೂರು : ಡಾ: ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಸರಸ್ವತಿಯ ಪಾವಿತ್ರ್ಯತೆಯನ್ನು ಹೊಂದಿ ಪರಮಹಂಸದಂತೆ ಬಹಳ ಎತ್ತರಕ್ಕೆ ಏರಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಶೈಕ್ಷಣಿಕ ಆ್ಯಪ್ ನ್ನು ಇಂದು ಅವರು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. 21 ನೇ ಶತಮಾನ ಜ್ಞಾನವಂತರಿಗೆ ಸೇರಿದ್ದು. ಜ್ಞಾನಕ್ಕೆ ಬೆಲೆ ಹಾಗೂ ಬಲ ಬಂದಿದೆ. ಜ್ಞಾನದ ಕ್ಷೇತ್ರಕ್ಕೆ ಡಾ:ರಾಜ್ ಕುಮಾರ್ ಅವರ ಆಪ್ ದೊಡ್ಡ ಕೊಡುಗೆ ನೀಡಿದೆ ಎಂದ […]

ಫಲಿತಾಂಶ ಮತ್ತು ಕಾರ್ಯಾನುಷ್ಠಾನ ಕೇಂದ್ರಿತ ಸರ್ಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sunday, August 15th, 2021
Manik Sha

ಬೆಂಗಳೂರು : ನನ್ನ ಸರ್ಕಾರ ಫಲಿತಾಂಶ ಮತ್ತು ಕಾರ್ಯಾನುಷ್ಠಾನ ಕೇಂದ್ರಿತವಾಗಿರಲಿದೆ. ಸಮಾಜದ ಕೊನೆಯ ಹಂತದವರೆಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಲು ಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದರು. 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದಿನಾಂಕ 15-8-2021ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ನಾಡಿನ ಜನತೆಗೆ ನೀಡಿದ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. “ಅಭಿವೃದ್ಧಿ ಅಂದರೆ ಅಂಕಿ-ಅಂಶಗಳಲ್ಲ. ನಾಡಿನ ಪ್ರತಿಯೊಂದು ಕುಟುಂಬ, ಪ್ರತಿಯೊಬ್ಬ ವ್ಯಕ್ತಿಯ ಬದುಕು ಹಸನಾಗಬೇಕು. ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿಯೊಂದಿಗೆ ಆರೋಗ್ಯ, […]

ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ

Sunday, August 15th, 2021
Basavaraja Bommai

ಬೆಂಗಳೂರು :  ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ, […]

ರಾಜ್ಯದ ಮುನ್ನಡೆಯ ಬಗ್ಗೆ ಸರ್ಕಾರದ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sunday, August 15th, 2021
basavaraja Bommai

ಬೆಂಗಳೂರು :  “75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸೌಭಾಗ್ಯ ಒದಗಿಬಂದಿದೆ. ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲೇ ಮಾದರಿಯಾಗಿದೆ. 75 ವರ್ಷ ನಡೆದು ಬಂದ ದಾರಿ, ಇನ್ನೂ ನಡೆಯಬೇಕಾದ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ. ನಮ್ಮ ಸರ್ಕಾರ ಕೂಡ ಅದೇ ದಿಕ್ಕಿನಲ್ಲಿ ಚಿಂತನೆ ಮಾಡುತ್ತಿದೆ”- ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ […]

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Friday, August 13th, 2021
Bommai-Udupi

ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ  ಪಲಿಮಾರು ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಶ್ವೇಶ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸಚಿವರಾದ ಡಾ: ಕೆ.ಸುಧಾಕರ್, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಉಡುಪಿಯಲ್ಲಿ ಜಿಲ್ಲಾಡಳಿತದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷ್ಣನ ದರ್ಶನಕ್ಕಾಗಿ ಸಣ್ಣವನಿದ್ದಾಗ ಉಡುಪಿಗೆ ಆಗಮಿಸುತ್ತಿದ್ದೆ. ಆದರೆ, ಕಳೆದ ಬಾರಿ ಎಲ್ಲರು ಸೇರಿ ಉಡುಪಿ ಜಿಲ್ಲೆಯ ಉಸ್ತುವಾರಿ […]

ದ.ಕ. ಜಿಲ್ಲಾ ಪಂಚಾಯತ್‍ನಲ್ಲಿ ಮುಖ್ಯಮಂತ್ರಿಗಳಿಂದ ಕೋವಿಡ್ ಪರಿಶೀಲನಾ ಸಭೆ

Thursday, August 12th, 2021
Bommai-Progress-Meeting

ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಗಸ್ಟ್ 12ರ ಗುರುವಾರ ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ […]

ಉರ್ವಸ್ಟೋರ್‌ನ ದೇರೆಬೈಲ್ ನಲ್ಲಿ ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ

Thursday, August 12th, 2021
Ambedkar-Bhavana

ಮಂಗಳೂರು : ದ.ಕ. ಜಿಲ್ಲಾಡಳಿತ, ಜಿಪಂ, ಮಂಗಳೂರು ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ  ಉರ್ವಸ್ಟೋರ್‌ನ ದೇರೆಬೈಲ್ ಅಂಗಡಿಗುಡ್ಡೆಯಲ್ಲಿ ನಿರ್ಮಾಣಗೊಂಡ  ನೂತನ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಟ್ಟಡ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.12 ರ ಗುರುವಾರ ಲೋಕಾರ್ಪಣೆ ಮಾಡಿದರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮೀನುಗಾರಿಕೆ ಹಾಗೂ ಬಂದರು ಸಚಿವ ಅಂಗಾರ ಎಸ್.   ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. […]

ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

Thursday, August 12th, 2021
Wenlock ICU

ಮಂಗಳೂರು : ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ  32 ಬೆಡ್ ಸೌಲಭ್ಯವುಳ್ಳ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.12 ರ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ […]

ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ

Thursday, August 12th, 2021
Bommai Mangaluru

ಮಂಗಳೂರು :- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13 ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12 ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.  ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ […]

ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಿಎಂ

Monday, August 9th, 2021
CM Mysuru

ಮೈಸೂರು : ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರು  ಉಪಸ್ಥಿತರಿದ್ದರು.