Blog Archive

ಹಿಂದೂ ದೇವತೆಗಳ ಅವಹೇಳನ : ಶಾಸಕ ಮುರುಗೇಶ ನಿರಾಣಿ ಹೇಳಿದ್ದೇನು

Wednesday, July 22nd, 2020
murugesh Nirani

ಬೆಂಗಳೂರು: ತಮ್ಮ ವಾಟ್ಸ್‌ ಅಪ್‌ ಮೂಲಕ ಹಿಂದೂ ದೇವ ದೇವತೆಗಳ ಅವಹೇಳನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುರುಗೇಶ ನಿರಾಣಿ ಕ್ಷಮೆಯಾಚಿಸಿದ್ದಾರೆ. ಅವಹೇಳನ ಮಾಡಲಾದ ಸಂದೇಶದ ಸ್ಕ್ರೀನ್‌ ಶಾಟ್‌ ನ್ನು ಕೆಲ ಸುದ್ದಿವಾಹಿನಿಗಳು ಪ್ರಸಾರ ಮಾಡಿದ್ದವು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.‌ ಸುರೇಶಕುಮಾರ್‌ ಅವರು ವಾಟ್ಸ್‌ ಅಪ್‌ ಗ್ರುಪ್‌ ನಲ್ಲಿ ಪೋಸ್ಟ್‌ ನೋಡಿ ಗ್ರುಪ್‌ ನಿಂದ ಎಕ್ಸಿಟ್‌ ಆಗಿದ್ದಾರೆ. ಮಾಜಿ ಸಚಿವರೂ ಆಗಿರುವ ಶಾಸಕ ನಿರಾಣಿ ಈ ಸಂಬಂಧ ಸಾರ್ವಜನಿಕರ ಕ್ಷಮೆಯಾಚಿಸುವ […]

ಕಾಂಗ್ರೆಸ್ ಬಿಜೆಪಿ ಮೈತ್ರಿ ಮಾಡಿಕೊಂಡು ಕಲಬುರಗಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಹೀಗೆ !

Tuesday, July 14th, 2020
Rukmini-Bhimashankar

ಕಲಬುರಗಿ: ಕಾಂಗ್ರೆಸ್ ಬಿಜೆಪಿಗರ ಕಚ್ಚಾಟ ಪ್ರತಿದಿನ ಇದ್ದದೇ ಬಿಡಿ, ಆದರೆ ಇದೆಲ್ಲವನ್ನು ಮರೆತು ಇಬ್ಬರು ನಾಯಕರು ಪ್ರೀತಿಗೆ ಶಕ್ತಿ ರಾಜಕೀಯಕ್ಕಿಂತಲೂ ಹೆಚ್ಚಿನ ಶಕ್ತಿ ಇದೆ ಎಂದು ತೋರಿಸಿಕೊಟ್ಟಿದ್ದಾರೆ. ಅಫಜಲಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ತಮ್ಮ ರಾಜಕೀಯವನ್ನು ಮೀರಿ ಇಬ್ಬರೂ ಕೂಡಾ ವಿವಾಹ ಬಂಧನಕ್ಕೊಳಗಾಗಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಮಠದಲ್ಲಿ ಇಂದು ನಡೆದ ಸರಳ ವಿವಾಹದಲ್ಲಿ ದಂಪತಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಫಜಲಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷ ಭೀಮಾಶಂಕರ್ ಹೊನ್ನಿಕೇರಿ […]

ಅಡ್ಯಾರ್ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ

Saturday, July 11th, 2020
Yaqub Adyar

ಬಂಟ್ವಾಳ : ಅಡ್ಯಾರ್ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರೊಬ್ಬರ ಮೇಲೆ ದುಷ್ಕರ್ಮಿಗಳ ತಂಡ ಮಾರಣಾತಿಕ ಹಲ್ಲೆ ನಡೆಸಿದ ಘಟನೆ  ಅಡ್ಯಾರ್ ಸಮೀಪ  ಶುಕ್ರವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ, ಅಡ್ಯಾರ್ ಪದವು ನಿವಾಸಿ ಯಾಕೂಬ್ ಎಂದು ಗುರುತಿಸಲಾಗಿದೆ. ಶುಕ್ರವಾರ  ರಾತ್ರಿ 9 ಗಂಟೆಯ ಸುಮಾರಿಗೆ ಅಡ್ಯಾರ್ ಸಮೀಪ ತಂಡವೊಂದು ಯಾಕೂಬ್ ಮೇಲೆ ದಾಳಿ ನಡೆಸಿದೆಯೆನ್ನಲಾಗಿದೆ. ತಂಡದಲ್ಲಿದ್ದವರಲ್ಲಿ ಒಬ್ಬ ವ್ಯಕ್ತಿ ಯಾಕೂಬ್ ಅವರಿಗೆ ಪರಿಚಯಸ್ಥನಾಗಿದ್ದು ಕೆಲವು ವರ್ಷಗಳ ಹಿಂದೆ ಆತ ಅಡ್ಯಾರ್ ಪದವಿನಲ್ಲಿ ವಾಸವಿದ್ದು ಪ್ರಸಕ್ತ ಮಂಗಳೂರಿನಲ್ಲಿ ವಾಸವಿದ್ದಾನೆ […]

ಸಿದ್ದರಾಮಯ್ಯ ಬಿಜೆಪಿಗೆ ಬರ್ತಾರಾ, ಹಾಗಂತ ಸಿಟಿ ರವಿ ಹೇಳಿದ್ದೇಕೆ

Monday, June 1st, 2020
ct-ravi

ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ಸಿ ಟಿ ರವಿ ಅವರು ಭಾರತೀಯ ಜನತಾ ಪಕ್ಷಕ್ಕೆ ಆಹ್ವಾನಿಸಿದ್ದಾರೆ! ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಹೊಗಳಬೇಕಂದರೆ ಅವರು ಬಿಜೆಪಿಗೆ ಬರಬೇಕು. ಕಾಂಗ್ರೆಸ್ ನಲ್ಲಿದ್ದು ಬಿಜೆಪಿ ಹೊಗಳಿದರೆ ಅಧಿಕಾರಕ್ಕೆ ಸಂಚಕಾರ ಬರುತ್ತದೆ. ಆ ಸತ್ಯ ಅವರಿಗೂ ಗೊತ್ತಿದೆ, ಹಾಗಾಗಿ ಬಿಜೆಪಿಯನ್ನು ಹೊಗಳಲ್ಲ. ಅವರು ಬಿಜೆಪಿಗೆ ಬಂದ ದಿನ ಖಂಡಿತ ಹೊಗಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯನ್ನು ಬಹಳ ಟೀಕೆ ಮಾಡಿದವರು ನಮ್ಮ ದಾರಿ ಹಿಡಿದಿದ್ದಾರೆ. ಎಸ್.ಎಂ. […]

ಬಿಜೆಪಿ ಪ್ರಮುಖರೊಂದಿಗೆ ಕೇಂದ್ರ ಸಚಿವ ಜೋಶಿ ಸಂವಾದ

Tuesday, May 26th, 2020
prahalada-joshi

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮೆ.25 ಸೋಮವಾರ ನವದೆಹಲಿಯಿಂದ ಧಾರವಾಡದ ವಿಭಾಗದ ಬಿಜೆಪಿ ಪ್ರಮುಖರೊಂದಿಗೆ ವೀಡಿಯೋ ಕಾನ್ಫರೆನ್ಸ ಮುಖಾಂತರ ಸಂವಾದದಲ್ಲಿ ಪಾಲ್ಗೊಂಡರು. ಸಂವಾದದಲ್ಲಿ ಆತ್ಮ ನಿರ್ಭರ ಭಾರತ ಕುರಿತಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಹಿನ್ನೆಲೆಯಲ್ಲಿ ದೇಶದ ನಾಗರಿಕರಿಗಾಗಿ ಅವರು ಬಿಡುಗಡೆ ಮಾಡಿದ 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಕುರಿತು ಕೂಡಾ ಆಗುತ್ತಿರುವ ಚಟುವಟಿಕೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಸಂವಾದದ ನೇತೃತ್ವವನ್ನು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಅವರು ವಹಿಸಿದ್ದರು. […]

ಬಿಜೆಪಿಗೆ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಭೋಪಾಲ್ ನಲ್ಲಿ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ

Saturday, March 14th, 2020
BJP

ಭೋಪಾಲ್: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಈಗಾಗಲೇ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ ನಡೆಸಿ ತಮ್ಮ ತಾಕತ್ತು ಪ್ರದರ್ಶಿಸಿದ್ದಾರೆ. ಆದರೆ ಸಿಂಧಿಯಾ ಬಿಜೆಪಿ ಮಡಲಿಲ್ಲಿರುವುದನ್ನು ಸಹಿಸದ ಕಾಂಗ್ರೆಸ್, ಮೇಲ್ನೋಟಕ್ಕೆ ಅವರ ವಿರುದ್ಧ ಪಿತೂರಿ ನಡೆಸುತ್ತಿರುವಂತೆ ತೋರುತ್ತಿದೆ. ಸಿಂಧಿಯಾ ಬಿಜೆಒಪಿ ಸೇರಿದ ಮರುದಿನವೇ ಅವರ ವಿರುದ್ಧದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿದ್ದು ಇದಕ್ಕೆ ಸಾಕ್ಷಿ. ಇಷ್ಟೇ ಅಲ್ಲ ಸಿಂಧಿಯಾ ರೋಡ್ ಶೋ ವೇಳೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ […]

ಮಧ್ಯಪ್ರದೇಶ ಸರ್ಕಾರ ಉರುಳಿಸಲು ಬಿಜೆಪಿಗೆ ಆಸಕ್ತಿಯಿಲ್ಲ : ಬಿಜೆಪಿ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್

Tuesday, March 10th, 2020
shivaraj-singh-chawhan

ಭೋಪಾಲ್ : ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜ್ಯದ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಸಿನ ಆಂತರಿಕ ವಿಚಾರ, ಈ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಸಿಎಂ ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಸಕ್ತಿ ಹೊಂದಿಲ್ಲ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ಜಗಳದಿಂದಾಗಿ ಸರ್ಕಾರ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ ಎಂದು ಅವರು ತಿಳಿಸಿದರು. ಮಧ್ಯಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಹಠಾತ್‌ ಬೆಳವಣಿಗೆಯಲ್ಲಿ […]

ಬಿಎಸ್​ ಯಡಿಯೂರಪ್ಪ ಮೂರು ವರ್ಷ ಅಧಿಕಾರ ನಡೆಸಲಿ : ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾರೈಕೆ

Wednesday, February 19th, 2020
devengowda

ಬೆಂಗಳೂರು : ಯಡಿಯೂರಪ್ಪ ಮೂರು ವರ್ಷಗಳು ಅಧಿಕಾರ ನಡೆಸಲಿ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾರೈಸಿದ್ದಾರೆ. ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ರಚನೆಯಾಗಿರುವ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಮೂರು ವರ್ಷಗಳ ಪೂರ್ಣಾವಧಿ ಅಧಿಕಾರ ನಡೆಸಲಿ ಎಂಬುದು ನಮ್ಮ ಹಾರೈಕೆ. ಇದರಿಂದ ನಮಗೆ ಪಕ್ಷ ಕಟ್ಟಲು ಅವಕಾಶ ಸಿಗುತ್ತದೆ ಎಂದು ಹೇಳಿದರು. ಮೈತ್ರಿ ಸರ್ಕಾರ ಪತನದ ಬಳಿಕ ಜಿಟಿಡಿ ಅವರು ಯಡಿಯೂರಪ್ಪ ಮನೆಗೆ ಹೋಗಿದ್ದಾರೆ. ಕ್ಷೇತ್ರದ ಕೆಲಸ ಮಾಡಲು ಉಪಮುಖ್ಯಮಂತ್ರಿಗಳ ನೆರವು ಬೇಕೆಂದಿದ್ದಾರೆ. ಅವರು ಕಾಂಗ್ರೆಸ್ಗೆ ಹೋಗುತ್ತಾರೋ, […]

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ : ಸಂಸದೆ ಶೋಭಾ ಕರಂದ್ಲಾಜೆ

Saturday, February 8th, 2020
shobha

ಚಿಕ್ಕಮಗಳೂರು : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಶನಿವಾರ ನಗರಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಅಶಾಂತಿ ಸೃಷ್ಟಿಸಿ ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದರು. ದೆಹಲಿ ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವಪೌರತ್ವ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ಜನರನ್ನು ಹಣ ಕೊಟ್ಟು ಕರೆ ತಂದಿದ್ದಾರೆ ಎಂದರು. ಜಿಲ್ಲೆಯಲ್ಲಿ ಕರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ […]

ಬಿಜೆಪಿಯಲ್ಲಿ ಮೂಲ, ವಲಸಿಗ ಎಂಬುದೇ ಇಲ್ಲ : ಶ್ರೀರಾಮುಲು ಸ್ಪಷ್ಟನೆ

Thursday, February 6th, 2020
sriramulu

ಮಡಿಕೇರಿ : ಸಚಿವ ಸಂಪುಟ ಪುನರ್ ರಚನೆ ಕಸರತ್ತಿನ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಮುಖ್ಯಮಂತ್ರಿಗಳು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಮರ್ಥರಿದ್ದಾರೆ. ಈ ಮೊದಲೇ ಭರವಸೆ ನೀಡಿದ್ದಂತೆ ಗೆದ್ದ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಮೂಲ ಅಥವಾ ವಲಸಿಗ ಎಂಬುದೆಲ್ಲಾ ಬಿಜೆಪಿಯಲ್ಲಿ ಇಲ್ಲವೇ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.