Blog Archive

ಹೆಲಿಕಾಪ್ಟರ್ ಬಾಡಿಗೆ ಹಣ ವಿಚಾರ: ಬಿಎಸ್‌ವೈಗೆ ಹೆಚ್‌ಡಿಕೆ ತಿರುಗೇಟು

Thursday, June 7th, 2018
yedyurappa

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ವಿಧಾನಸಭೆ ಪ್ರತಿಪಕ್ಷ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಂದ ಹೆಲಿಕಾಪ್ಟರ್ ಬಾಡಿಗೆ ಹಣ ಕಟ್ಟಿಸಿಕೊಳ್ಳುವಷ್ಟು ದರಿದ್ರ ರಾಜ್ಯ ಸರ್ಕಾರಕ್ಕೆ ಬಂದಿಲ್ಲವೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಂದ ನಮಗೆ ಯಾವುದೇ ಪತ್ರ ಬಂದಿಲ್ಲ. ಸರ್ಕಾರದ ಹಣ ದುಂದು ವೆಚ್ಚ ಆಗಬಾರದು ಎಂದು ಹೆಲಿಕಾಪ್ಟರ್ ಪ್ರಯಾಣದ ವೆಚ್ಚವನ್ನು ಉಲ್ಲೇಖಿಸಲಾಗಿತ್ತು. ತಾವು ದೆಹಲಿಗೆ ವಿಶೇಷ ವಿಮಾನದಲ್ಲಿ ಹೋಗಿ ಬಂದಿದ್ದರೆ 40 ಲಕ್ಷ ರೂ. ಖರ್ಚಾಗುತ್ತಿತ್ತು. ಆದರೆ, ಸಾಮಾನ್ಯ […]

ಕಾಂಗ್ರೆಸ್‌ನ್ನು ಮುಗಿಸಲು ಅಪ್ಪ- ಮಕ್ಕಳು ಸಂಚು ಮಾಡಿದ್ದಾರೆ: ಬಿ.ಎಸ್‌. ಯಡಿಯೂರಪ್ಪ

Wednesday, June 6th, 2018
yedeyurappa

ಮೈಸೂರು: ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಅಪ್ಪ- ಮಕ್ಕಳ ಸಂಚು ಮಾಡಿದ್ದಾರೆ ಎಂದು ಜೆಡಿಎಸ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ನಗರದ ಪ್ರೆಸಿಡೆಂಟ್ ಹೊಟೇಲ್‌ನಲ್ಲಿ ಮಾತನಾಡಿದ ಅವರು, ಹೊಂದಾಣಿಕೆ ರಾಜಕೀಯದ ಮೂಲಕ ಕಾಂಗ್ರೆಸ್ ಮುಗಿಸಲು ಸಂಚು ರೂಪಿಸಿದ್ದಾರೆ. ಈ ಅಪ್ಪ-ಮಕ್ಕಳ ಸಂಚಿಗೆ ಕಾಂಗ್ರೆಸ್ ಬಲಿಯಾಗಲಿದೆ ಎಂದು ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಹೆಸರನ್ನು ಹೇಳದೆಯೇ ಟೀಕಿಸಿದರು. ಜೆಡಿಎಸ್‌ನ್ನು ಟೀಕಿಸಿದ ಬಿಎಸ್‌ವೈ ಕಾಂಗ್ರೆಸ್‌ ಬಗ್ಗೆ ಮೃದು ಧೋರಣೆ ತೋರಿದರು. ಕುಮಾರಸ್ವಾಮಿ ಬಜೆಟ್ ಮಂಡಿಸುವುದನ್ನ ಕಾದು ನೋಡೋಣ. ಒಂದು, […]

ಕುಮಾರಸ್ವಾಮಿಯವರಿಂದ ರಾಜ್ಯದ ಜನತೆಗೆ ಅವಮಾನ: ಬಿ.ಎಸ್. ಯಡಿಯೂರಪ್ಪ

Monday, May 28th, 2018
yedyurappa

ಬೆಂಗಳೂರು: ನಾನು ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ. ಜನತೆಯ ಮುಲಾಜಿನಲ್ಲಿಇಲ್ಲ ಎಂದು ಹೇಳುವ ಮೂಲಕ ನಾಡಿ ೬.೫ ಕೋಟಿ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ವೈ, ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮೇಗೌಡ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು. ಬಳಿಕ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಎಸ್ವೈ, ಕುಮಾರಸ್ವಾಮಿ ಅವರು ತನ್ನ ಹೇಳಿಕಯ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಅಪಮಾನ ಮಾಡಿದ್ದಾರೆ. ಭಾರತದ ಇತಿಹಾಸಲ್ಲಿ ಯಾವ ಮುಖ್ಯಮಂತ್ರಿ ಕೂಡ […]

ಮೇ 28ರ ಕರ್ನಾಟಕ ಬಂದ್ ಯಶಸ್ವಿಯಾಗಬೇಕು: ಶಾಸಕರಿಗೆ ಬಿಎಸ್ವೈ ಸೂಚನೆ

Friday, May 25th, 2018
B-S-Yedeyurappa

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡದೇ ಇರುವ ಹಿನ್ನೆಲೆಯಲ್ಲಿ ಕರೆ ನೀಡಿರುವ ಸ್ವಯಂಘೋಷಿತ ಬಂದ್ ನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತನ್ನ ಪಕ್ಷದ ಎಲ್ಲಾ ಶಾಸಕರಿಗೆ ಸೂಚನೆ ರವಾನಿಸಿರುವ ಬಿಎಸ್ವೈ, ರಾಜ್ಯದ ಪ್ರತೀ ಜಿಲ್ಲೆ, ಪ್ರತೀ ತಾಲೂಕುಗಳಲ್ಲಿ ಬಂದ್ ಆಗಬೇಕು. ನಮಗೆ ಅಧಿಕಾರ ಇಲ್ಲದೇ ಹೋದರೂ ಪರವಾಗಿಲ್ಲ. ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ರೈತರಿಗೆ ಸೂಕ್ತ ನ್ಯಾಯ ದೊರಕಬೇಕು. […]

ಬಿಎಸ್‌ವೈ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು: ಬಂದ್‌ಗೆ ಬಗ್ಗುವುದಿಲ್ಲ ಎಂದು ಎದುರೇಟು

Friday, May 25th, 2018
yedeyurappa-bandh

ಬೆಂಗಳೂರು: ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಇಂದು ಸದನದಲ್ಲಿ ವಿಶ್ವಾತಮತ ಗೊತ್ತುವಳಿ ಮಂಡಿಸಿದರು. ಕೇಂದ್ರ ಸರ್ಕಾರ ಯಾವ ರೀತಿ ಸುಳ್ಳು ದಾಖಲೆ ನಿರ್ಮಾಣ ಮಾಡಿದಾರೆ. ಕೇಂದ್ರ ಸರ್ಕಾರದ ಯಾವುದೇ ಬೆದರಿಕೆಗಳಿಗೆ ನಾನು ಬಗ್ಗುವುದಿಲ್ಲ. ಕೇಂದ್ರ ಸರ್ಕಾರ ಗೂಟ ಹೊಡೆದುಕೊಂಡು ಇರ್ತಾರಾ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಮನಸ್ಸಿಗೆ ಆಘಾತವಾಗಿದೆ. ನಾನು ಸುಮ್ಮ ಸುಮ್ಮನೇ ಮತ ಪಡೆಯಲು ಈ ಕಾರ್ಯಕ್ರಮ ಜಾರಿಗೆ ತರಲು ಯೋಚಿಸಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ನಾಯಕರು ಜೈಲಿಗೆ ಹೋಗ್ತಾರೆ ಎಂಬ ಭಯದಿಂದ ಜೆಡಿಎಸ್‌ ಬೆಂಬಲ […]

ಬಹುಮತ ಸಾಬೀತುಪಡಿಸುವಲ್ಲಿ ಬಿಎಸ್‌ವೈ ವಿಫಲರಾಗ್ತಾರೆ: ರೇವಣ್ಣ

Friday, May 18th, 2018
revanna

ಬೆಂಗಳೂರು: ನನಗೆ ವಿಶ್ವಾಸವಿದೆ, ಬಹುಮತ ಸಾಬೀತುಪಡಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಫಲರಾಗುತ್ತಾರೆ ಎಂದು ಶಾಸಕ ಹೆಚ್.ಡಿ.ರೇವಣ್ಣ ಹೇಳಿದರು. ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಮತ ಸಾಬೀತು ಮಾಡಿ ನಾವು ಸರ್ಕಾರವನ್ನು ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಳೆ ಬಹುಮತ ಸಾಬೀತು ಪಡಿಸಲು ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಯಾವುದೇ ಶಾಸಕರು ಅವರೊಂದಿಗೆ ಹೋಗುವುದಿಲ್ಲ ಎಂದು ಹೇಳಿದರು. ಕುಮಾರಸ್ವಾಮಿಯವರು ಆಗಮಿಸಿದ ವೇಳೆ ಅವರನ್ನು ಮಾತನಾಡಿಸಲು ಮುಂದಾದಾಗ, ಈಗಾಗಲೇ ಸುಪ್ರೀಂಕೋರ್ಟ್ ತೀರ್ಪಿನ […]

ಸುಪ್ರೀಂಕೋರ್ಟ್‌ ಆದೇಶ ಪಾಲಿಸುತ್ತೇವೆ: ಸಿಎಂ ಬಿಎಸ್‌ವೈ

Friday, May 18th, 2018
b-s-yedeyurappa

ಬೆಂಗಳೂರು: ಸುಪ್ರಿಂ ಕೋರ್ಟ್ ಆದೇಶ ಪಾಲಿಸಲು ನಾವು ಬದ್ಧವಾಗಿದ್ದೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ನಾಳೆ ವಿಧಾನಸಭೆ ಅಧಿವೇಶನ ಕರೆಯಲಾಗುವುದು. ಅಧಿವೇಶನ ಕರೆಯುವ ಸಲುವಾಗಿ ಸಚಿವ ಸಂಪುಟ ಸಭೆ ನಡೆಸುತ್ತೇನೆ ಎಂದಿದ್ದಾರೆ. ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಸಂಖ್ಯೆಯ ಶಾಸಕರ ಬಲ ಹೊಂದಿದ್ದೇವೆ. ನಾವು ವಿಶ್ವಾಸಮತ ಸಾಧಿಸುತ್ತೇವೆ. ಯಾವುದೇ ಅನುಮಾನವಿಲ್ಲ. ಇಷ್ಟೊಂದು ರಾಜಕೀಯ ಹೈಡ್ರಾಮಾ ನಡುವೆಯೂ ನಾವು ವಿಶ್ವಾಸಮತ ಸಾಬೀತುಪಡಿಸುತ್ತೇವೆ ಎಂದಿದ್ದಾರೆ. ಸುಪ್ರಿಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸುಪ್ರಿಂ ಕೋರ್ಟ್ ನೀಡಿದ […]

6 ದಿನಗಳಲ್ಲಿ ಮನೆಗೆ ಹೋಗಲಿರುವ ಸಿಎಂ ಬಗ್ಗೆ ಮಾತನಾಡಲ್ಲ: ಬಿಎಸ್‌ವೈ

Monday, May 7th, 2018
yedeyurappa

ಕೊಪ್ಪಳ: ಇನ್ನು ಕೇವಲ ಆರು ದಿನಗಳಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಮನೆಗೆ ಹೋಗುವವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಯೋಗ್ಯತೆ ಇದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಬೇಕಿತ್ತು. ಆದರೆ, ಬಾದಾಮಿಗೆ ಯಾಕೆ ಬಂದು ಸ್ಪರ್ಧಿಸಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ ಎಂದರು. ನಾನು ಗೆಲ್ಲುತ್ತೇನೆ, ನಾನೇ […]

ಪ್ರಮಾಣವಚನ ಸ್ವೀಕರಿಸಿದ ಬಳಿಕ ರೈತರ ಸಾಲಮನ್ನಾ: ಬಿಎಸ್‌ವೈ

Wednesday, May 2nd, 2018
yedeyurappa

ಶಿವಮೊಗ್ಗ: ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ನಿರ್ಧಾರವಾಗಿ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‌‌ಗಳಲ್ಲಿನ ಬೆಳೆ ಸಾಲಮನ್ನಾ ಮಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು. ಪ್ರೆಸ್ ಟ್ರಸ್ಟ್‌ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನೀರಾವರಿಗೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡಲಿದ್ದು, 1 ಲಕ್ಷ ಕೋಟಿ ರೂ. ಹಣ ನಿಗದಿ ಮಾಡುತ್ತೇವೆ ಎಂದರು. ಬಿಜೆಪಿ ಪ್ರಣಾಳಿಕೆಯನ್ನು ಮೇ4 ರಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುವುದು. ಪ್ರಣಾಳಿಕೆ ಬಿಡುಗಡೆಯಾದ ಮೇಲೆ ಕನಿಷ್ಠ ಶೇ.3 ರಷ್ಟು ಬಿಜೆಪಿ […]

ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ : ದ.ಕ , ಉಡುಪಿಯಲ್ಲಿ ಕುತೂಹಲ

Monday, April 9th, 2018
bjp list

ಬೆಂಗಳೂರು : ಬಿಜೆಪಿ ಮೂರು ಸುತ್ತಿನ ಸಮೀಕ್ಷೆ ನಂತರ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿದೆ. ತನ್ನ 72 ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ. ಈಗಾಗಲೇ ಜೆಡಿಎಸ್ ಪಕ್ಷ 126 ಅಭ್ಯರ್ಥಿಗಳ ಅಧಿಕೃತ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಇನ್ನೂ ತನ್ನ ಪಟ್ಟಿ ಪ್ರಕಟಿಸಿಲ್ಲ. ಪ್ರಧಾನಿ ಮೋದಿ ನೇತೃತ್ವದ ಚುನಾವಣಾ ಸಮಿತಿ ಭಾನುವಾರದಂದು ಸಭೆ ಸೇರಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಂಡಿದೆ. ನವದೆಹಲಿಯಲ್ಲಿ ಜೆ.ಪಿ ನಡ್ಡಾ ಅವರು ಸುದ್ದಿಗೋಷ್ಠಿ ನಡೆಸಿ, ಅಧಿಕೃತವಾಗಿ ಪಟ್ಟಿ ಪ್ರಕಟಿಸಿದರು. ದೆಹಲಿಯ […]