Blog Archive

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

Saturday, July 31st, 2021
Bommai-Meets-Nirmala-Seetharaman

ನವದೆಹಲಿ :  ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ […]

ಮುಖ್ಯಮಂತ್ರಿ ದೆಹಲಿ ಪ್ರವಾಸ: ಪ್ರಧಾನಿ, ಕೇಂದ್ರ ಸಚಿವರ ಭೇಟಿ

Friday, July 30th, 2021
Bommai Sha

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಹಾಗೂ ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿಯವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ […]

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಪ್ರಧಾನಿಗೆ ಮನವಿ

Friday, July 30th, 2021
Bommai-Modi-Meet

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿಯವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ […]

ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಭೇಟಿ

Thursday, July 29th, 2021
Bommai

ಅಂಕೋಲಾ : ಮುಖ್ಯಮಂತ್ರಿ ಬಸವರಾಜ.ಎಸ್. ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಿದರು. ಜುಲೈ 23 ರಂದು ಜಿಲ್ಲೆಯಲ್ಲಿ ಧಾರಕಾರ ಮಳೆಯಾದ ಪರಿಣಾಮ ಪ್ರವಾಹ ಪರಿಸ್ಥಿತಿ ಎದುರಾಗಿತ್ತು ಕಾಳಿ, ಗಂಗಾವಳಿ, ಅಘನಾಶಿನಿ ಸೇರಿದಂತೆ ನದಿಗಳು ಉಕ್ಕಿ ಹರಿದ ಪರಿಣಾಮ ಹಲವಾರು ಮನೆಗಳು .ಹಾನಿಗೊಳಗಾಗಿರುವುದಲ್ಲದೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ತಾಲ್ಲೂಕು ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು, ನೆರೆ ಪರಿಹಾರ ವೀಕ್ಷಣೆಗೆ ತೆರಳಿ ಮೊದಲಿಗೆ ಗುಡ್ಡ ಕುಸಿತದಿಂದ ಹಾನಿಗೊಳಗಾದ ಕಳಚೆ ಗ್ರಾಮವನ್ನು ಪರಿಶೀಲಿಸಿದರು. […]

ಹುಬ್ಬಳ್ಳಿ ಧಾರವಾಡ ನಗರ ಅಭಿವೃದ್ಧಿಗೆ ಪ್ರಾಶಸ್ತ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, July 29th, 2021
bommai

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಷೇಶ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳುವ ಮುನ್ನ ವಿಮಾನ ನಿಲ್ದಾಣದ‌ ಬಳಿ ಮಾಧ್ಯಮ‌ದವರೊಂದಿಗೆ ಮಾತನಾಡಿದರು. ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ ಸ್ನೇಹಿತರ ಬಳಗ ಇಲ್ಲಿದೆ. ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ […]

ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, July 29th, 2021
Bommai

ಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು. ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ ,ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ […]

ವೆಚ್ಚ ಕಡಿತ, ಕಡತ ವಿಲೇವಾರಿ ಅಭಿಯಾನಕ್ಕೆ ಮುಖ್ಯಮಂತ್ರಿಗಳ ಸೂಚನೆ

Thursday, July 29th, 2021
Basavaraja-Bommai

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದರು. ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ಅವರ ಮಾರ್ಗದರ್ಶನದಲ್ಲಿ, ಶಾಸಕಾಂಗ ಪಕ್ಷ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೆಲ್ಲರೂ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಪೂರ್ಣಪ್ರಮಾಣದ ಸಚಿವ ಸಂಪುಟವನ್ನು ಶೀಘ್ರದಲ್ಲಿಯೇ ರಚಿಸಲಾಗುವುದು ಎಂದ ಅವರು ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗಬಾರದು ಎಂಬ ದೃಷ್ಟಿಯಿಂದ ಇಂದು ಸಚಿವ ಸಂಪುಟ ಸಭೆ ಹಾಗೂ […]

ವಿಶ್ವಾಸಾರ್ಹ, ದಕ್ಷ, ಪಾರದರ್ಶಕ ಆಡಳಿತ: ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಲಹೆ

Wednesday, July 28th, 2021
Bommai

ಬೆಂಗಳೂರು : ವಿಶ್ವಾಸಾರ್ಹ, ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಆಡಳಿತ ಒಂದು ನಿರಂತರ ಪ್ರಕ್ರಿಯೆ. ಅದು ಎಂತಹ ಪರಿಸ್ಥಿತಿಯಲ್ಲೂ ಅನಿರ್ಬಂಧಿತವಾಗಿ ಕಾರ್ಯನಿರ್ವಹಿಸಬೇಕು. ರಾಜ್ಯದ ಜನತೆಗೆ ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತ ಕೊಡುವ ದಿಟ್ಟ ತೀರ್ಮಾನ ಕೈಗೊಂಡಿದ್ದೇನೆ. ಇದನ್ನು ಅನುಷ್ಠಾನ ಮಾಡುವುದು […]

ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ ಬಸವರಾಜ ಬೊಮ್ಮಾಯಿ ಕರ್ನಾಟಕ ಮುಖ್ಯಮತ್ರಿಯಾಗಿ ನೇಮಕ

Tuesday, July 27th, 2021
Basavaraja-Bommai

ಬೆಂಗಳೂರು : ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಸಭೆಯ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದನ್ನು ಬಿಜೆಪಿ ನಾಯಕರು ಘೋಷಿಸಿದ್ದಾರೆ. 2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಎಸ್ಆರ್ ಬೊಮ್ಮಾಯಿ-ಚೆನ್ನಮ್ಮ ಅವರ ಪುತ್ರ. 1960 ರ ಜ.28 ರಂದು ಜನಿಸಿದ […]

ಬಿ.ಎಸ್. ಯಡಿಯೂರಪ್ಪ ರಾಜಿನಾಮೆ : ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ

Tuesday, July 27th, 2021
Rajappa

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಯುವಕನೊಬ್ಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರಿಂದ ತೀವ್ರ ಬೇಸರಗೊಂಡ ಅಭಿಮಾನಿಯೊಬ್ಬ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ  ಮಂಗಳವಾರ ಮುಂಜಾನೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಚಿಕ್ಕನಾಗಪ್ಪ ಎಂಬವರ ಪುತ್ರ ರವಿ(ರಾಜಪ್ಪ) (35) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ತೀರಾ ಬೇಸರದಿಂದ ಇದ್ದ ರವಿ […]