Blog Archive

ಬರೋಬ್ಬರಿ 18 ವರ್ಷಗಳ ನಂತರ ತುಂಬಿದ ಕೆರೆ

Wednesday, June 27th, 2018
river

ಮೈಸೂರು: ಒಣಗಿ ಬರಡಾಗಿದ್ದ ಕೆರೆಯನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸಿಕೊಳ್ಳಬೇಕೆಂದು ಗ್ರಾಮಸ್ಥರು ತೀರ್ಮಾನ ಕೈಗೊಂಡಿದ್ದರು. ಆದರೆ ಅವರ ತೀರ್ಮಾನವನ್ನೇ ತಲೆಕೆಳಗಾಗುವಂತೆ ಬತ್ತಿದ್ದ ಕೆರೆಯ ಒಡಲು ತುಂಬುವಷ್ಟು ನೀರು ಬಂದಿದೆ. ಹೌದು, ನಂಜನಗೂಡು ತಾಲೂಕಿನ ಹುರ ಗ್ರಾಮದ ಮುಂಭಾಗದಲ್ಲಿರುವ ಕೆರೆ ಕಳೆದ 18 ವರ್ಷಗಳಿಂದ ತುಂಬಿರಲಿಲ್ಲ. ಆದರೆ ಮೂರು ವರ್ಷಗಳಿಂದ ನೀರು ಬತ್ತಿದ್ದ ಪರಿಣಾಮ ಈ ಕೆರೆಯ ಮೇಲೆ ಭೂ ಮಾಫಿಯಾದವರ ಕಣ್ಣು ಒಂದು ಕಡೆಯಾದರೆ, ಮತ್ತೊದೆಡೆ ಸಾರ್ವಜನಿಕರ ಒಳಿತಿಗಾಗಿ ಬಳಸಿಕೊಳ್ಳಬೇಕು ಎಂದು ಗ್ರಾಮಸ್ಥರು ತೀರ್ಮಾನಿಸಿದ್ದರು. ಆದರೆ ಇವರಿಬ್ಬರ ಲೆಕ್ಕಾಚಾರವನ್ನು […]

2019ರಲ್ಲಿ ಮಾತ್ರವಲ್ಲ, 2029ರವರೆಗೂ ಮೋದಿ ಗೆಲ್ಲಬೇಕು: ಎಸ್.ಎಲ್. ಭೈರಪ್ಪ

Friday, June 22nd, 2018
s-l-bairappa

ಮೈಸೂರು: 2019ರಲ್ಲಿ ಮಾತ್ರವಲ್ಲ, 2024 ಮತ್ತು 2029ರಲ್ಲೂ ನರೇಂದ್ರ ಮೋದಿ ಗೆಲ್ಲಲೇಬೇಕು. ಇಲ್ಲವಾದರೆ ಈ ದೇಶ ಉದ್ಧಾರವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅಭಿಪ್ರಾಯಪಟ್ಟರು. ಇಂದು ಸಂಸದ ಪ್ರತಾಪ್ ಸಿಂಹ ಅವರು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರನ್ನ ಭೇಟಿ ಮಾಡಿ, ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಪುಸ್ತಕ ನೀಡಿದರು. ಜೊತೆಗೆ ಮೈಸೂರಿಗೆ ಕೇಂದ್ರ ಸರ್ಕಾರ ನೀಡಿರುವ ಪ್ರತಿಯೊಂದು ಯೋಜನೆ ಬಗ್ಗೆ ಸಾಹಿತಿಗಳಿಗೆ ಸಂಸದರು ಮಾಹಿತಿ ನೀಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಾಹಿತಿ ಎಸ್.ಎಲ್ […]

ವಾರದೊಳಗೆ 30 ಶಾಸಕರಿಗೆ ನಿಗಮ-ಮಂಡಳಿ‌ ಸ್ಥಾನ‌: ಸಿದ್ದರಾಮಯ್ಯ

Friday, June 15th, 2018
siddaramaih

ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿ ಸ್ಥಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಮುಂದಿನ ಒಂದು ವಾರದೊಳಗೆ ಸಿಎಂ ಹಾಗೂ ಉಪ ಮುಖ್ಯಮಂತ್ರಿಗಳು ಚರ್ಚಿಸಿ 30 ಶಾಸಕರನ್ನು ನೇಮಕ ಮಾಡಲಿದ್ದಾರೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಆದರೆ ಕೆಲ ಶಾಸಕರು ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿರುವುದರಿಂದ ಅವರ ಓಲೈಕೆಗೂ ತೆರೆಯಲ್ಲಿ ಕಸರತ್ತು ನಡೆಯುತ್ತಿದೆ. ಈ ನಡುವೆ ನಿಗಮ-ಮಂಡಳಿ‌ ಸ್ಥಾನಕ್ಕೆ ತೃಪ್ತರಾಗುತ್ತಾರಾ ಎಂಬುವುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್‌ನ್ನು ಮುಗಿಸಲು ಅಪ್ಪ- ಮಕ್ಕಳು ಸಂಚು ಮಾಡಿದ್ದಾರೆ: ಬಿ.ಎಸ್‌. ಯಡಿಯೂರಪ್ಪ

Wednesday, June 6th, 2018
yedeyurappa

ಮೈಸೂರು: ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಅಪ್ಪ- ಮಕ್ಕಳ ಸಂಚು ಮಾಡಿದ್ದಾರೆ ಎಂದು ಜೆಡಿಎಸ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ನಗರದ ಪ್ರೆಸಿಡೆಂಟ್ ಹೊಟೇಲ್‌ನಲ್ಲಿ ಮಾತನಾಡಿದ ಅವರು, ಹೊಂದಾಣಿಕೆ ರಾಜಕೀಯದ ಮೂಲಕ ಕಾಂಗ್ರೆಸ್ ಮುಗಿಸಲು ಸಂಚು ರೂಪಿಸಿದ್ದಾರೆ. ಈ ಅಪ್ಪ-ಮಕ್ಕಳ ಸಂಚಿಗೆ ಕಾಂಗ್ರೆಸ್ ಬಲಿಯಾಗಲಿದೆ ಎಂದು ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಹೆಸರನ್ನು ಹೇಳದೆಯೇ ಟೀಕಿಸಿದರು. ಜೆಡಿಎಸ್‌ನ್ನು ಟೀಕಿಸಿದ ಬಿಎಸ್‌ವೈ ಕಾಂಗ್ರೆಸ್‌ ಬಗ್ಗೆ ಮೃದು ಧೋರಣೆ ತೋರಿದರು. ಕುಮಾರಸ್ವಾಮಿ ಬಜೆಟ್ ಮಂಡಿಸುವುದನ್ನ ಕಾದು ನೋಡೋಣ. ಒಂದು, […]

ಮಾತು ತಪ್ಪಿದರೆ ಕುಮಾರಸ್ವಾಮಿಗೆ ತಕ್ಕ ಪಾಠ: ರೈತ ಸಂಘ ಎಚ್ಚರಿಕೆ

Wednesday, May 23rd, 2018
formers

ಮೈಸೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹೆಚ್‌‌. ಡಿ. ಕುಮಾರಸ್ವಾಮಿ, ಮಾತು ತಪ್ಪದೇ ರೈತರ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿವೆ. ನ್ಯಾಯಾಲಯದ ಮುಂಭಾಗವಿರುವ ಪಾರ್ಕ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕೃಷಿಕರು, ಜೆಡಿಎಸ್ ಪಕ್ಷಕ್ಕೆ ಮತದಾರರು ಬಹುಮತ ನೀಡದೇ ಇರಬಹುದು. ಆದರೆ, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡವರು ರಾಜ್ಯದ ರೈತರ ಹಿತದೃಷ್ಟಿಯಿಂದ ಸಾಲ ಮನ್ನಾಕ್ಕೆ ಎಲ್ಲ ಸಹಕಾರ ನೀಡುತ್ತಾರೆ. ಎಲ್ಲರ ಸಹಕಾರ ಪಡೆದು ರೈತರ ಸಾಲ ಮಾಡಬೇಕು ಎಂದು […]

ಇಂದು ವರುಣಾದಲ್ಲಿ ಶಾ, ಚಾಮುಂಡೇಶ್ವರಿಯಲ್ಲಿ ಚಾಲೆಂಜಿಂಗ್‌ ಸ್ಟಾರ್‌ ಪ್ರಚಾರ

Saturday, May 5th, 2018
amith-shah

ಮೈಸೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರ ರಂಗೇರುತ್ತಿದ್ದು, ರಾಷ್ಟ್ರ ನಾಯಕರು, ಸಿನಿಮಾ ನಟರು ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಇಂದು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪರ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಪ್ರಚಾರಕ್ಕಿಳಿಯಲಿದ್ದಾರೆ. ಇಂದು ಮೈಸೂರಿನ ವರುಣಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರೋಡ್ ಶೋ ಮತ್ತು ಬಹಿರಂಗ ಸಭೆ ನಡೆಲಿದ್ದಾರೆ. ನಂತರ ಜಿಲ್ಲೆಯ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಹಾಗೂ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ […]

ರಾಜಮಾತೆ ಪ್ರಮೋದಾದೇವಿ ಜೊತೆ ಅಮಿತ್ ಶಾ ಗುಪ್ತ ಮಾತುಕತೆ

Friday, March 30th, 2018
amit-shah

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರ ಜೊತೆ ಗುಪ್ತ ಮಾತುಕತೆ ನೆಡಿಸಿದ್ದು, ಮುಂದಿನ ಚುನಾವಣೆಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ಅವರನ್ನ ರಾಜವಂಶಸ್ಥರು ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಸುಮಾರು 30 ನಿಮಿಷಗಳ ಕಾಲ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಜೊತೆ ಅರಮನೆಯೊಳಗಿರುವ ದೇವಾಲಯದಲ್ಲಿ ಅಮಿತ್ ಶಾ ಗುಪ್ತವಾಗಿ ಮಾತುಕತೆ ನಡೆಸಿದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುವಂತೆ ಮನವಿ ಮಾಡಿದ್ದಾರೆ […]

ಅಮಿತ್ ಶಾ ಗೆ ನನ್ನ ಕಂಡರೆ ಭಯವಿದೆ : ಸಿದ್ದರಾಮಯ್ಯ

Thursday, March 29th, 2018
siddaramaih

ಮೈಸೂರು: ಅಮಿತ್ ಶಾ ಗೆ ನನ್ನನ್ನು ಕಂಡರೆ ಭಯವಿದೆ. ಹಾಗಾಗಿ ನಾನೂ ಹೋದಲೆಲ್ಲ ಅವರು ಹಿಂಬಾಲಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾ ಯಾವ ಮಠಕ್ಕಾದರೂ ಹೋಗಲಿ, ಎಲ್ಲಿಗೆ ಬೇಕಾದರೂ ಹೋಗಲಿ. ಅದು ಅವರ ವೈಯಕ್ತಿಕ ಸ್ವಾತಂತ್ರ್ಯ. ಆ ಬಗ್ಗೆ ನಾನೂ ಏನನ್ನು ಹೇಳುವುದಿಲ್ಲ. ಅಮಿತ್ ಶಾ ನನ್ನನ್ನು ಅಹಿಂದು ಎಂದು ಹೇ‌ಳಿದ್ದಾರೆ. ಆದರೆ ಮಿತ್ ಶಾ ಜೈನ ಧರ್ಮದವರು. ಅವರು ಹಿಂದೂನಾ ಅಥವಾ […]

ಪ್ರೀತಿಸುತ್ತಿದ್ದ ಹುಡುಗಿ ಮದುವೆಯಾಗುವಂತೆ ಒತ್ತಡ ಹೇರಿದ್ದಕ್ಕೆ ಮನನೊಂದ ಯುವಕ ನೇಣಿಗೆ ಶರಣು!

Friday, March 23rd, 2018
deepak

ಮೈಸೂರು: ಪ್ರೀತಿಸುತ್ತಿದ್ದ ಹುಡುಗಿ ಮದುವೆಯಾಗುವಂತೆ ಒತ್ತಡ ಹೇರಿದ್ದಕ್ಕೆ ಮನನೊಂದ ಯುವಕ ನೇಣಿಗೆ ಶರಣಾಗಿದ್ದಾನೆ. ಕ್ಯಾತಮಾರನಹಳ್ಳಿಯ ದೀಪಕ್ (23) ಎಂಬಾಥನೇ ಆತ್ಮಹತ್ಯೆ ಮಾಡಿಕೊಂಡವ. ದೀಪಕ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಹುಡುಗಿಯ ಮನೆಯವರಿಗೆ ಗೊತ್ತಾಗಿತ್ತು. ನೀನು ಪ್ರೀತಿಸುತ್ತಿರುವ ಹುಡುಗನನ್ನೇ ಮದುವೆಯಾಗು ಎಂದು ಯುವತಿಗೆ ಅವಳ ಮನೆಯವರು ಒಪ್ಪಿಗೆ ನೀಡಿದ್ದರು. ಈ ವಿಚಾರವನ್ನ ಯುವತಿ ದೀಪಕ್‌ಗೆ ತಿಳಿಸಿ, ಮದುವೆಯಾಗೋಣ ಎಂದು ಒತ್ತಾಯಿಸಿದ್ದಳು. ಆದರೆ ಈಗಲೇ ಮದುವೆ ಬೇಡ ಎಂದು ದೀಪಕ್ ನಿರಾಕರಿಸಿದ್ದ ಎನ್ನಲಾಗಿದೆ. ಇದರಿಂದ ಯುವತಿಯ ಪೋಷಕರು […]

ಚುನಾವಣಾ ರಣತಂತ್ರ… ಸಿದ್ದರಾಮಯ್ಯ ತವರಲ್ಲಿ ಮೋದಿ ಯಾತ್ರೆಗೆ ಸಜ್ಜು

Saturday, February 10th, 2018
narendra-modi

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಫೆ.19ರಂದು ಪ್ರಧಾನಿ ನರೇಂದ್ರ ಮೋದಿ ದಿನವಿಡೀ ಕಾಯ೯ಕ್ರಮಗಳಲ್ಲಿ ಭಾಗವಹಿಸುವ ಮೂಲಕ ಮೈಸೂರು ಭಾಗದಲ್ಲಿ ರಣತಂತ್ರ ರೂಪಿಸಲು ಸಜ್ಜಾಗಿದ್ದಾರೆ. ಅಂದು ಬೆಳಿಗ್ಗೆ ಮೊದಲಿಗೆ ನಗರದ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಜೋಡಿ ಹಳಿಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಮೈಸೂರಿಂದ ಉತ್ತರ ಕರ್ನಾಟಕಕ್ಕೆ ನೇರ ಸಂಪರ್ಕ ಕಲ್ಪಿಸುವ ಹಾಗೂ ಸಂಚಾರಕ್ಕೆ ನೆರವಾಗುವಂತ ರೈಲಿಗೆ ಚಾಲನೆ ನೀಡಲಿದ್ದಾರೆ. ಆ ನಂತರ ಕೆ.ಆರ್.ಎಸ್ ರಸ್ತೆಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಇಎಸ್‍ಐ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. […]