Blog Archive

ನರೇಂದ್ರ ಮೋದಿ ಹಿಂಸಾಚಾರವನ್ನು ವಿರೋಧಿಸಿದರೆ, ಶಿಷ್ಯರು ಹಿಂಸಾಚಾರ ನಡೆಸುತ್ತಿದ್ದಾರೆ

Thursday, December 7th, 2017
Rai

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಧರ್ಮದ ಹಿಂಸಾಚಾರವನ್ನು ವಿರೋಧಿಸುವುದಾಗಿ ಹೇಳಿದರೆ, ಅವರ ಶಿಷ್ಯರು ಧರ್ಮದ ಹೆಸರಿನಲ್ಲಿ ಹಿಂಸೆಗೆ ಪ್ರಚೋದಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ರಾಜ್ಯ ಬಿಜೆಪಿ ಮುಖಂಡರನ್ನು ಟೀಕಿಸಿದ್ದಾರೆ. ಮೋದಿಯವರ ಶಿಷ್ಯರು ಧರ್ಮ, ದೇವರು, ದೇಶಪ್ರೇಮದ ಹೆಸರಿನಲ್ಲಿ ಹಿಂಸಾಚಾರ ನಡೆಸುತ್ತಿದ್ದಾರೆ. ಇಂತಹ ಶಿಷ್ಯರಿಗೆ ಎಂದಿಗೂ ಜನಸಾಮಾನ್ಯರು ಮಣೆ ಹಾಕಬಾರದು ಎಂದರು. ಈ ನಿಟ್ಟಿನಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಕಾನೂನಿಗಿಂತ ಮೇಲೆ ಹೋಗಿದ್ದಾರೆ. ಸಂಸದರಿಗೆ ಕಾನೂನು ಎಂಬುದು ತಿಳಿಯದಿದ್ದರೆ ಸಾಮಾನ್ಯರ ಕಥೆ ಏನು ಎಂದು […]

ಮಂಗಳೂರಿನಲ್ಲಿ ಸರ್ಕಾರಿ ಡಿಜಿಟಲ್ ಫಲಕಕ್ಕೆ ಸಚಿವ ರಮಾನಾಥ ರೈ ಚಾಲನೆ

Wednesday, November 29th, 2017
Vartha-Elake

ಮಂಗಳೂರು : ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮತ್ತು ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ಥಾಪಿಸಿರುವ ಡಿಜಿಟಲ್ ಎಲ್‍ಇಡಿ ಫಲಕವನ್ನು ಸಚಿವ ಬಿ. ರಮಾನಾಥ ರೈ ಮಂಗಳವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜನಸಾಮಾನ್ಯರು ಈ ಯೋಜನೆಗಳ ಪ್ರಯೋಜನ ಪಡೆಯಲು ಅರಿವು ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಾರ್ತಾ ಇಲಾಖೆಯು […]

ಸಿದ್ದರಾಮಯ್ಯ ಅವರನ್ನು ಮೂರ್ಖ ಎಂದು ಕರೆದಿರುವ ಯಡಿಯೂರಪ್ಪ ಅವರ ಹೇಳಿಕೆ ಖಂಡನೀಯ: ರೈ

Saturday, November 11th, 2017
ramanath rai

ಮಂಗಳೂರು :ಮುಖ್ಯ ಮಂತ್ರಿ ಸಿದ್ಧರಾಮಯ್ಯ ವಿರುದ್ಧ ಯಡಿಯೂರಪ್ಪ ಅವರು ಸಡಿಲ ಭಾಷೆ ಬಳಸಿರುವುದು ಅರಣ್ಯ ಸಚಿವರ ಸಿಟ್ಟಿಗೆ ಕಾರಣ. ಬಿಜೆಪಿ ನಾಯಕ ಯಡಿಯೂರಪ್ಪ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕಿಡಿ ಕಾರಿದ್ದಾರೆ. ರಮಾನಾಥ ರೈ ‘ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೂರ್ಖ ಎಂದು ಕರೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆ ಖಂಡನೀಯ. ಮುಂಬರುವ ದಿನಗಳಲ್ಲಿ ಯಾರು ಮೂರ್ಖರು ಎಂಬುದನ್ನು ದಕ್ಷಿಣ ಕನ್ನಡ ಜಿಲ್ಲೆಯ ಪ್ರಜ್ಞಾವಂತ ಜನರೇ ಉತ್ತರ […]

ಮಂಗಳೂರು-ಬಂಟ್ವಾಳದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

Monday, October 23rd, 2017
Bantwal

ಮಂಗಳೂರು: ಸಚಿವ ರಮಾನಾಥ ರೈ  ಕೈ-ಬಾಯಿ ಶುದ್ಧವಾಗಿಟ್ಟುಕೊಂಡ ಮಾನವೀಯತೆ ಹೊಂದಿರುವ ರಾಜಕಾರಣಿ.  ಅವರು ಓರ್ವ ಸಜ್ಜನ ರಾಜಕಾರಣಿ.  ಕೋಮುವಾದವನ್ನು ಅವರು ಮಾಡಿಲ್ಲ, ಮುಂದೆನೂ ಮಾಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳೂರು-ಬಂಟ್ವಾಳದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತಮಾಡಿದ ಅವರು, ಕೋಮುವಾದ‌ ಮಾಡುವವರು ವಿನಾ ಕಾರಣ ಅವರ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಆದರೆ, ರೈ ಎಲ್ಲರೂ ಅನುಸರಿಸಬೇಕಾದ ಆದರ್ಶ ರಾಜಕಾರಣಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದಿಗಳ ಕಾಟ ಜಾಸ್ತಿ ಆಗಿದೆ. ಆಕ್ರೋಶ ಭರಿತರಾಗಿ […]

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ :ರಮಾನಾಥ ರೈ

Thursday, October 19th, 2017
Ramanath rai

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಒಟ್ಟು 252.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅ. 22ರಂದು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರೈ, ಈಗಾಗಲೇ ಪೂರ್ಣಗೊಂಡಿರುವ ಒಟ್ಟು ರೂ. 148.29 ಕೋಟಿಯ ಯೋಜನೆಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಲಿದ್ದು, 104.21 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದರು. ಒಟ್ಟು ರೂ. 252.50 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ […]

ಮಾದಕ ದ್ರವ್ಯ ಜಾಲ ನಿಗ್ರಹಕ್ಕೆ ಸೂಕ್ತ ಕ್ರಮ : ರಮಾನಾಥ ರೈ

Thursday, October 12th, 2017
Drug control

ಮಂಗಳೂರು : ಮಾದಕ ದ್ರವ್ಯ ಜಾಲ ನಿಗ್ರಹಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮಾದಕ ದ್ರವ್ಯ ಜಾಲ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸೃಷ್ಟಿಯಾದುದಲ್ಲ. ಅದಕ್ಕೆ ಹಲವು ವರ್ಷದ ಇತಿಹಾಸವಿದೆ. ಅದನ್ನು ನಿಗ್ರಹಿಸಲು ಪೊಲೀಸ್ ಇಲಾಖೆ ತನ್ನದೇ ಆದ ರೀತಿಯಲ್ಲಿ ಕಾರ್ಯಾಚರಿಸುತ್ತಿದ್ದೇವೆ. ಜಿಲ್ಲೆಯಲ್ಲಿ […]

ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸ್ಥಾನಕ್ಕೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವಿರೋಧ ಆಯ್ಕೆ

Tuesday, October 10th, 2017
rajendra kumar

ಮಂಗಳೂರು: ಜಾತಿ, ಧರ್ಮ, ಭಾಷೆಯನ್ನು ಮೀರಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಪೈಪೋಟಿ ಇದ್ದರೂ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಹಕಾರ ಮಾರಾಟ ಮಹಾಮಂಡಳದ ಅವರೇ ಆ ಸ್ಥಾನಕ್ಕೆ ಸಮರ್ಥರು ಎಂಬುದು ಸಾಬೀತಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ನೆರವೇರಿಸಿ ಅವರು ಮಾತನಾಡಿದರು. ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಕೇಂದ್ರ […]

ಮುತಾಲಿಕ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ :ರಮಾನಾಥ ರೈ

Monday, October 9th, 2017
ramanath rai

ಮಂಗಳೂರು: ಪ್ರಮೋದ್ ಮುತಾಲಿಕ್ ಒಬ್ಬ ದಾರಿಹೋಕ. ಆತನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಕಿಡಿ ಕಾರಿದರು. ಭಾರತ ಹಿಂದೂ ರಾಷ್ಟ್ರವಾಗಿಯೇ ಉಳಿಯುತ್ತದೆ ಎಂದ ಪ್ರಮೋದ್ ಮುತಾಲಿಕ್ ಪ್ರತಿ ಹಿಂದೂ ಕುಟುಂಬ ರಕ್ಷಣೆಗೆ ತಲವಾರ್ ಹೊಂದಿರಬೇಕು ಎಂಬ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ವಿರುದ್ಧ ಇಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಗೆ ಯಾರು ಹಿಂದೂ ಧರ್ಮದ ಪಾರುಪತ್ಯ […]

ಸಂತೋಷದಿಂದಿದ್ದಾಗ ಮಾತ್ರ ಮನುಷ್ಯನ ಆಯಸ್ಸು ವೃದ್ಧಿ: ರಮಾನಾಥ ರೈ

Thursday, October 5th, 2017
elders

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಮಾನಸಿಕವಾಗಿ ಸಂತೋಷದಿಂದಿದ್ದಾಗ ಮಾತ್ರ ಮನುಷ್ಯನ ಆಯಸ್ಸು ಹೆಚ್ಚಾಗುತ್ತದೆ ಎಂದು ಕಾರ್ಯಕ್ರಮದಲ್ಲಿ  ತಿಳಿಸಿದರು. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ಜರಗಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2017 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವನು ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಅದರಲ್ಲೂ ಪ್ರಕೃತಿದತ್ತವಾಗಿ ಲಭಿಸುವ ಆಹಾರ ಪದ್ಧತಿಯನ್ನು ಬಳಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. ಶಿಸ್ತುಬದ್ಧ ಜೀವನಕ್ಕೆ ಮತ್ತು ಆರೋಗ್ಯ ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಮೂಲದ ಔಷಧಗಳನ್ನು ಬಳಕೆ ಮಾಡಿಕೊಳ್ಳಬೇಕು. ಹೆಚ್ಚಾಗಿ ಗಿಡ […]

ಹುಲಿವೇಷದ ತಮಟೆಯ ನಾದಕ್ಕೆ ಹೆಜ್ಜೆ ಹಾಕಿದ ರಮಾನಾಥ ರೈ

Tuesday, October 3rd, 2017
Ramanatha rai

ಬೆಂಗಳೂರು: ವನ್ಯಜೀವಿ ಸಪ್ತಾಹದ ಅಂಗವಾಗಿ ಲಾಲ್‍ಬಾಗ್‍ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುಲಿವೇಷ ಕುಣಿತ ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹುಲಿ ವೇಷಧಾರಿಗಳು ಕುಣಿಯುತ್ತಿದ್ದರೆ ಅಲ್ಲಿದ್ದ ರಾಜ್ಯದ ಅರಣ್ಯ ಸಚಿವ ರಮಾನಾಥ ರೈ ಕೂಡ ಹುಲಿವೇಷದ ತಮಟೆಯ ನಾದಕ್ಕೆ ಹುಲಿಗಳೊಂದಿಗೆ ಹೆಜ್ಜೆ ಹಾಕಿದರು. 63ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಕಬ್ಬನ್‍ಪಾರ್ಕ್‍ನಿಂದ ಲಾಲ್‍ಬಾಗ್ ವರೆಗೆ ವಾಕಥಾನ್ ಆಯೋಜಿಸಲಾಗಿತ್ತು. ಮೊದಲೇ ಅಜಾನುಬಾಹು ಆಗಿರುವ ರಮಾನಾಥ ರೈ ಅವರು ಹುಲಿಯ ಮಾಡಿಕೊಂಡು ಮುಖವನ್ನು ಹುಲಿಯಂತೆ ಮಾಡಿಕೊಂಡು ಅರಚುತ್ತಾ ಹುಲಿವೇಷ ತಂಡದೊಂದಿಗೆ ಕುಣಿದು ಸಂತೋಷಪಟ್ಟರು. ಈ ಮೊದಲು […]