ಉಡುಪಿ , ಮಂಗಳೂರು ಪೊಲೀಸ್ ಅಧಿಕಾರಿಗಳ ವರ್ಗಾವಣೆ
Thursday, February 21st, 2019ಉಡುಪಿ : ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಲಕ್ಷ್ಮಣ ನಿಂಬರ್ಗಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೆಯೇ, ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಸರಕಾರ ನಿಯುಕ್ತಿಗೊಳಿಸಿದೆ. ಲಕ್ಷ್ಮಣ ನಿಂಬರ್ಗಿ ಅವರನ್ನು ಬೆಂಗಳೂರಿನ ಪೊಲೀಸ್ ವಯರ್ ಲೆಸ್ ಎಸ್.ಪಿ.ಯಾಗಿ ವರ್ಗಾವಣೆಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ನೂತನ ಎಸ್.ಪಿ.ಯಾಗಿ ನೇಮಕಗೊಂಡಿರುವ ನಿಶಾ ಜೇಮ್ಸ್ ಅವರು 2013ನೇ ಸಾಲಿನ ಐ.ಪಿ.ಎಸ್. ಅಧಿಕಾರಿಯಾಗಿದ್ದು, ಬೆಂಗಳೂರಿನಲ್ಲಿ ಕೆ.ಎಸ್.ಆರ್.ಪಿ.ಯ ನಾಲ್ಕನೇ ಬೆಟಾಲಿಯನ್ ನ ಕಮಾಂಡೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳೂರು […]