Blog Archive

ಮಳೆಹಾನಿ ಪರಿಹಾರದ ಅನುದಾನ ಖಾಸಗಿ ಬ್ಯಾಂಕ್‌ನಲ್ಲಿಟ್ಟ ಪ್ರಕರಣ : ಸಿಐಡಿ ತನಿಖೆಗೆ ಕಾಂಗ್ರೆಸ್ ಆಗ್ರಹ; : ಜಿ.ಪಂ ಸಭೆಯಿಂದ ಹೊರ ನಡೆದ ಸದಸ್ಯರು

Thursday, November 7th, 2019
madikeri

ಮಡಿಕೇರಿ : ಪ್ರಾಕೃತಿಕ ವಿಕೋಪದ ಪರಿಹಾರ ಕಾಮಗಾರಿಗಳಿಗೆ ಬಿಡುಗಡೆಯಾದ 21 ಕೋಟಿ ರೂ. ಅನುದಾನವನ್ನು ಜಿಲ್ಲಾ ಪಂಚಾಯ್ತಿ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಶ್ರೀಕಂಠಯ್ಯ ಅವರು ನಿಯಮ ಬಾಹಿರವಾಗಿ ಖಾಸಗಿ ಬ್ಯಾಂಕ್‌ನಲ್ಲಿಟ್ಟಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಜಿ.ಪಂ ಕಾಂಗ್ರೆಸ್ ಸದಸ್ಯರು ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಿಂದ ಹೊರ ನಡೆದ ಪ್ರಸಂಗ ನಡೆಯಿತು. ನೂತನ ಜಿಲ್ಲಾ ಪಂಚಾಯ್ತಿ ಭವನದ ಸಭಾಂಗಣದಲ್ಲಿ ಜಿ.ಪಂ ಅಧ್ಯಕ್ಷ ಬಿ.ಎ. ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಮಳೆಹಾನಿ […]

ಡಿಕೆಶಿಗೆ ಜಾಮೀನು : ಕೊಡಗು ಕಾಂಗ್ರೆಸ್‌ನಿಂದ ದೇವಾಲಯದಲ್ಲಿ ಪೂಜೆ

Thursday, October 24th, 2019
kodagu

ಮಡಿಕೇರಿ : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಸಂಭ್ರಮಾಚರಿಸಿತು. ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಾಗೂ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಮೂಲಕ ಜನಪ್ರಿಯ ಪಕ್ಷವೆನಿಸಿಕೊಂಡ ಕಾಂಗ್ರೆಸ್‌ನ್ನು ನೇರವಾಗಿ […]

ಗುಜರಾತ್​ ಉಪಚುನಾವಣೆಯ ಮತ ಎಣಿಕೆ : ತಲಾ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್, ಬಿಜೆಪಿ

Thursday, October 24th, 2019
gujarat

ಅಹಮದಾಬಾದ್ : ಗುಜರಾತ್ನ ಆರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಗುರುವಾರ ಪ್ರಕಟವಾಗುತ್ತಿದ್ದು, ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ತಲಾ ಮೂರರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುನ್ನಡೆ ಕಾಯ್ದುಕೊಂಡಿವೆ. ಪಟನ್ ಜಿಲ್ಲೆಯ ರಾಧಾನ್ಪುರ ಕ್ಷೇತ್ರದಲ್ಲಿ ಒಬಿಸಿ ನಾಯಕ ಬಿಜೆಪಿ ಅಭ್ಯರ್ಥಿ ರಘು ದೇಸಾಯಿ ಕಾಂಗ್ರೆಸ್ನ ಅಲ್ಪೇಶ್ ಠಾಕೂರ್ ವಿರುದ್ಧ 3,000 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಅರಾವಳಿಯ ಬಯಾಡ್ನಲ್ಲಿ ಬಿಜೆಪಿ ಅಭ್ಯರ್ಥಿ ಧವಲಸಿಂಗ್ ಝಲಾ ಅವರು ಕಾಂಗ್ರೆಸ್ ಅಭ್ಯರ್ಥಿ […]

ಸಂಸದೆ ಸುಮಲತಾ ವಿರುದ್ಧ ಕಾಂಗ್ರೆಸ್​ ಮುಖಂಡರ ಆಕ್ರೋಶ

Thursday, October 10th, 2019
sumalatha

ಮಂಡ್ಯ : ಸ್ವಾಭಿಮಾನದ ಹೆಸರಲ್ಲಿ ಮಂಡ್ಯ ಸಂಸದೆಯಾದ ಸುಮಲತಾ ಅವರ ನಡೆಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ಕಿಡಿಕಾರಿದ್ದಾರೆ. ಬುಧವಾರ ಸಕ್ಕರೆ ನಾಡಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ಕಾಂಗ್ರೆಸ್ ಮುಖಂಡರ ಆಕ್ರೋಶ ಮುಂದುವರಿದಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ, ಸುಮಲತಾ ಅವರಿಗೆ ಗೆಲ್ಲುವ ಮೊದಲು ಕಾಂಗ್ರೆಸ್ ಕಚೇರಿ ಗೊತ್ತಿತ್ತು. ಆಗ ಕಚೇರಿಗೆ ಬಂದು ಕಾರ್ಯಕರ್ತರಲ್ಲಿ ಸೆರಗೊಡ್ಡಿ ಮತ ಭಿಕ್ಷೆ ಬೇಡಿಕೊಳ್ಳುವಾಗ ಗೊತ್ತಿತ್ತು. ಈಗ […]

ಎರಡು ದಿನಗಳಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ

Tuesday, September 24th, 2019
siddaramayya

ಹುಬ್ಬಳ್ಳಿ : ಉಪಚುನಾವಣೆಗೆ ನಾವು ಸಿದ್ಧರಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಪಕ್ಷಾಂತರಿಗಳನ್ನು ಮತದಾರರು ಯಾವತ್ತೂ ಕ್ಷಮಿಸುವುದಿಲ್ಲ. ಉಪಚುನಾವಣೆಯಲ್ಲಿ ನಾವು 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಅವರು ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು. ಮೈಸೂರು, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ […]

ಉಪ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ

Saturday, September 21st, 2019
congress

ಬೆಂಗಳೂರು : ರಾಜ್ಯದ 17 ರ ಪೈಕಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಿರುಸುಗೊಂಡಿದೆ. ಮಸ್ಕಿ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಹೊರತುಪಡಿಸಿ ಉಳಿದ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ ಪಾಲಿಗೆ ಈ ಕ್ಷೇತ್ರಗಳ ಗೆಲುವು ಅತ್ಯಂತ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಚುನಾವಣೆ ಘೋಷಣೆಗೆ ಮುನ್ನವೇ ಸಾಕಷ್ಟು ಸಿದ್ಧತೆ ನಡೆಸಿರುವ ರಾಜಕೀಯ ಪಕ್ಷಗಳು ಇದೀಗ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಇನ್ನಷ್ಟು ಚುರುಕಾಗಿ ಕಾರ್ಯ ನಿರ್ವಹಣೆ ಆರಂಭಿಸಲಿವೆ. 17 […]

ಡಿಕೆಶಿ ಬಂಧನ : ಕೆಲವೆಡೆ ಪ್ರತಿಭಟನೆ, ಬಸ್‌ಗೆ ಬೆಂಕಿ

Wednesday, September 4th, 2019
bus

ರಾಮನಗರ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಅವರನ್ನು ಅಕ್ರಮ ಹಣ ಸಾಗಾಟ ಆರೋಪದ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸಿದ ಪ್ರಕರಣವನ್ನು ಖಂಡಿಸಿ ರಾಮನಗರ, ಕನಕಪುರ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಡಿ ಕೆ ಶಿವಕುಮಾರ್‌ ಅವರ ಅಭಿಮಾನಿಗಳು ಬುಧವಾರ ಬೆಳಿಗ್ಗೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಸಚಿವ ಡಿ ಕೆ ಶಿವಕುಮಾರ್‌ ಅವರ ಬಂಧನವನ್ನು […]

ಸುರತ್ಕಲ್ ಟೋಲ್ ಗೇಟ್ ಸುಂಕ : ಕಾಂಗ್ರೆಸ್ ನಿಂದ ಬಿಜೆಪಿ ಪಕ್ಷದ ಶಾಸಕರಿಗೆ ಸಂಸದರಿಗೆ ಛೀಮಾರಿ

Tuesday, July 16th, 2019
Surathkal Toll

ಸುರತ್ಕಲ್ : ಸುರತ್ಕಲ್ ಟೋಲ್ ಗೇಟ್ ನಲ್ಲಿ ಸ್ಥಳೀಯ ಖಾಸಗಿ ವಾಹನಗಳಿಗೆ ಟೋಲ್ ವಿಧಿಸಿರುವುದನ್ನು ವಿರೋಧಿಸಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು . ಸುರತ್ಕಲ್ ಟೋಲ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೂಳೂರಿನಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿದೆ. ಸುಮಾರು 9 ತಿಂಗಳ ಮುಂಚಿತವಾಗಿ ಟೋಲ್ ಗೇಟ್ ನ ಬಗ್ಗೆ ಅಹೋರಾತ್ರಿ ಧರಣಿ ನಡೆಸಿದ್ದೇವೆ. ಆದರೆ ಬಿಜೆಪಿಯವರು ಈಗ ಪ್ರತಿಭಟನೆಯ ನೆಪದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ […]

ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದರು

Monday, April 15th, 2019
Vijayasankalpa

ಮಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮತ್ತಿತರ ಪಕ್ಷಗಳು ವಂಶೋದಯದ ಬಗ್ಗೆಯೇ ಗಮನವನ್ನು ಕೇಂದ್ರೀಕರಿಸಿವೆ. ಆದರೆ ಬಿಜೆಪಿಯು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾ ನತೆಯ ಲಾಭ ದೊರೆಯಬೇಕೆಂಬ ಅಂತ್ಯೋದಯದ ತಣ್ತೀವನ್ನು ಹೊಂದಿದೆ. ವಂಶೋ ದಯದವರು ಅವರ ಕುಟುಂಬದ ಹಿತಾಸಕ್ತಿ ಯನ್ನೇ ನೋಡಿಕೊಳ್ಳುವರು. ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಬಿಜೆಪಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ಅವರ ಕುಟುಂಬಿಕರನ್ನು ಮಾತ್ರ ಅಧಿಕಾರಕ್ಕೆ ತರಲು ಯತ್ನಿಸುವರು ಎಂದರು. ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ […]

ಕಾಂಗ್ರೆಸ್ ನಿಂದ  ಎಸ್ ಡಿಪಿಐ ಪಕ್ಷಕ್ಕೆ  ಹಾರಿದ ಇಸ್ಮಾಯಿಲ್ ಶಾಫಿ

Friday, March 22nd, 2019
safi babbukatte

  ಮಂಗಳೂರು : ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ (ರಿ) ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಎಸ್ ಡಿಪಿಐ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಹಿಂದಿನ ಚುನಾವಣೆ ವೇಳೆ ಸಚಿವ ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ, ಮುನ್ನೂರು ಗ್ರಾಮದ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿ ಯುಟಿ ಖಾದರ್ ರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಶಾಫಿ ಬಬ್ಬುಕಟ್ಟೆಯವರು ಉಳ್ಳಾಲ ಬ್ಲಾಕ್ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇಷ್ಟೆಲ್ಲಾ ಅರ್ಹತೆ , ಸಾಮರ್ಥ್ಯ ಇದ್ದರೂ ಕಾಂಗ್ರೆಸ್ ಪಕ್ಷ […]