Blog Archive

ಕುಕ್ಕೆ:ಚಂಪಾಷಷ್ಠಿ ಸಾಂಗವಾಗಿ ನಡೆದ ಎಡೆಸ್ನಾನ ಸೇವೆ

Tuesday, December 15th, 2015
Ede Snana

ಸುಬ್ರಹಣ್ಯ: ಚಂಪಾಷಷ್ಠಿ ಜಾತ್ರ ದಿನವಾದ ಮಂಗಳವಾರ ಚೌತಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ 124 ಮಂದಿ ಎಡೆಸ್ನಾನ ಸೇವೆಗೈದರು. ದೇವಳದ ಪೂಜೆಯ ಬಳಿಕ ಪ್ರಸಾದವನ್ನು ಗೋವುಗಳಿಗೆ ತಿನ್ನಲು ಕೊಟ್ಟು ನಂತರ ಆ ಎಲೆಯ ಮೇಲೆ ಭಕ್ತರು ಹೊರಾಂಗಣದಲ್ಲಿ ಉರುಳು ಸೇವೆ ನಡೆಸುವ ಮೂಲಕ ಎಡೆಸ್ನಾನ ಹರಕೆ ಸಲ್ಲಿಸಿದರು. ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತ ವೆ.ಮೂ. ಎಸ್ ರಾಜಗೋಪಾಲ ಹಾಗೂ ಪಾಂಚರಾತ್ರ ಪಂಡಿತ ವೆ.ಮೂ. ವಿಜಯಕುಮಾರ್ ಅವರು ಸ್ಥಳದಲ್ಲಿದ್ದು ಎಡೆಸ್ನಾನದ ಕುರಿತು ಮಾರ್ಗದರ್ಶನ ನೀಡಿದರು. ಮಧ್ಯಾಹ್ನ ಮಹಾಪೂಜೆ ಬಳಿಕ ದೇವಳದ […]

ಚಲನಚಿತ್ರ ನಟ ಅರ್ಜುನ್ ಸರ್ಜ ಕುಟುಂಬಸ್ಥರಿಂದ ಕುಕ್ಕೆಯಲ್ಲಿ ಸೇವೆ ಸಲ್ಲಿಕೆ

Thursday, November 5th, 2015
Arjun Sharja

ಸುಬ್ರಹ್ಮಣ್ಯ: ಬಹು ಭಾಷಾ ನಟ ಅರ್ಜುನ್ ಸರ್ಜ ಹಾಗೂ ಕುಟುಂಬಸ್ಥರು ಬುಧವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಹಾಗೂ ವಿಶೇಷ ಪೂಜೆ ಸಲ್ಲಿಸಿ ತೆರಳಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಕನ್ನಡ ಬಹು ನಿರೀಕ್ಷಿತ ಚಲನಚಿತ್ರ ಗೇಮ್ ಇದೇ ತಿಂಗಳ 27 ರಂದು ರಾಜ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ತಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದು ಮನೀಷಾ ಕೊಯಿರಾಲ ನಾಯಕಿಯಾಗಿ ಅಭಿನಯಿಸಿದ್ದಾರೆ.ಖ್ಯಾತ ನಿರ್ಮಾಪಕ ಎ ಎಮ್ ಆರ್ ರಮೇಶ ಈ ಚಿತ್ರ […]

ಮಡೆ ಸ್ನಾನವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ : ಶಿವರಾಮು

Thursday, December 5th, 2013
K-S-Shivaram

ಮಂಗಳೂರು : ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಡೆ ಸ್ನಾನವನ್ನು ವಿರೋಧಿಸಿ ಮತ್ತು ಈ ಕೂಡಲೇ ರಾಜ್ಯ ಸರ್ಕಾರ ಈ ಸಂಪ್ರದಾಯಕ್ಕೆ ತಡೆ ನೀಡ ಬೇಕೆಂದು ಒತ್ತಾಯಿಸಿ ಬರುವ ಡಿಸೆಂಬರ್ 7ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ  ಬುಧವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದ್ದಾರೆ. ಶಿವರಾಮು ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಸಂಪ್ರದಾಯ, ನಂಬಿಕೆಯ ಹೆಸರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಇತರೆ ದೇವಸ್ಥಾನಗಳಲ್ಲಿ ನಡೆಯುತ್ತಿರುವ ಮಡೆ ಸ್ನಾನ ಅಮಾನವೀಯವಾಗಿದೆ. […]

ಮಡೆಸ್ನಾನ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Wednesday, December 19th, 2012
Made Snana

ಮಂಗಳೂರು :ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಡೆಸ್ನಾನ ಸೇವೆಗೆ ಸಂಬಧಿಸಿ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಮಡೆಸ್ನಾನವನ್ನು ಬೆಂಬಲಿಸುತ್ತಿದ್ದ ವರ್ಗದ ಕಾನೂನು ಹೋರಾಟ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಈ ಹಿಂದೆ ಕೆಲ ಪ್ರಗತಿಪರ ಹೋರಾಟಗಾರರು ಹಾಗೂ ಬುದ್ಧಿಜಿವಿಗಳು ಈ ಪದ್ಧತಿಯನ್ನು ವಿರೋಧಿಸಿದ್ದರು ಮತ್ತು ನಿಷೇಧಿಸುವಂತೆ ಕೇಳಿಕೊಂಡಿದ್ದರು ಅಲ್ಲದೆ ಇತ್ತೀಚೆಗಷ್ಟೇ ಮಡೆಸ್ನಾನವನ್ನು ತಾತ್ಕಾಲಿಕವಾಗಿ ನಿಷೇಧಿಸುವಂತೆ ಹೈಕೋರ್ಟ್ ನಿಂದ ಆದೇಶ ತರುವಲ್ಲಿ ಯಶಸ್ವಿಯಾಗಿದ್ದರು. ಆದರೆ ರಾಜ್ಯ ಹೈಕೋರ್ಟ್ ನೀಡಿದ ಆದೇಶದ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಿಸಂಭ್ರಮದ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಮಾಪನ

Thursday, December 1st, 2011
subrahmanya champasashti

ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬುಧವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಸಂಭ್ರಮದಿಂದ ಚಂಪಾಷಷ್ಠಿ ಬ್ರಹ್ಮರಥೋತ್ಸವ ನಡೆಯಿತು. ಬೆಳಗ್ಗೆ ಬ್ರಹ್ಮರಥದಲ್ಲಿರಿಸಲಾದ ಉತ್ಸವಮೂರ್ತಿಗೆ ದೇವಳದ ಪ್ರಧಾನ ಅರ್ಚಕ ವೆ|ಮೂ| ಬಿ. ಕೇಶವ ಜೋಗಿತ್ತಾಯ ಮತ್ತು ರಾಜೇಶ್‌ ಭಟ್‌ ಆರತಿ ಬೆಳಗಿದರು. ಸಾಲಂಕೃತ ಪಾಲಕಿಯಲ್ಲಿ ಸುಬ್ರಹ್ಮಣ್ಯ ದೇವರು ಹಾಗೂ ಉಮಾಮಹೇಶ್ವರ ದೇವರ ಉತ್ಸವಮೂರ್ತಿಯನ್ನು ಇರಿಸಿ ದೇವಳದ ಹೊರಾಂಗಣದಲ್ಲಿ ಪ್ರದಕ್ಷಿಣೆ ಬಂದು ಬಳಿಕ ಉಮಾಮಹೇಶ್ವರ ದೇವರನ್ನು ಪಂಚಮಿ ರಥದಲ್ಲಿ, ಸುಬ್ರಹ್ಮಣ್ಯ ದೇವರನ್ನು ಬ್ರಹ್ಮರಥದಲ್ಲಿರಿಸಲಾಯಿತು. ಆರತಿ ಬೆಳಗಿದ ಅನಂತರ ರಥದ ಮೇಲಿಂದ […]