Blog Archive

ಸಾಲಮನ್ನಾ ಘೋಷಿಸಿ ಇಲ್ಲವೇ ರಾಜೀನಾಮೆ ನೀಡಿ: ಯಡಿಯೂರಪ್ಪ

Wednesday, May 30th, 2018
yedeyurappa

ಬೆಂಗಳೂರು: ಬುಧವಾರದೊಳಗಾಗಿ ಸಾಲಮನ್ನಾ ಘೋಷಣೆ ಮಾಡದೇ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿಯಲ್ಲಿ ನೀಡಿದ್ದ ಹೇಳಿಕೆಯಂತೆ ಕುಮಾರಸ್ವಾಮಿ ನಡೆದುಕೊಳ್ಳಬೇಕು, ಸಾಲಮನ್ನಾ ಘೋಷಿಸಬೇಕು ಇಲ್ಲವೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೋರಾಟದ ಪರಿಣಾಮವಾಗಿ ಸಿಎಂ ಕುಮಾರಸ್ವಾಮಿ ರೈತ ಮುಖಂಡರ ಸಭೆ ಕರೆದಿದ್ದಾರೆ. 15 ದಿನಗಳಲ್ಲಿ ಸಣ್ಣ ರೈತರ ಸಾಲಮನ್ನಾ ಬಗ್ಗೆ ಮಾತನಾಡಿದ್ದಾರೆ. ಕುಮಾರಸ್ವಾಮಿ ನೀವು ಹೇಳಿದ್ದು ಏನು? ರೈತರ ವಿಚಾರದಲ್ಲಿ ದೊಂಬರಾಟ ಮಾಡುತ್ತಿದ್ದೀದರಾ? […]

ಜನತೆಗೆ ಕೊಟ್ಟ ಮಾತಿನಂತೆ ರೈತರ ಸಾಲಮನ್ನಾ ಮಾಡುವ ವಿಷಯದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ: ಕುಮಾರಸ್ವಾಮಿ

Wednesday, May 30th, 2018
cm-kumarswamy

ಬೆಂಗಳೂರು: ನಾಡಿನ ಜನತೆಗೆ ಕೊಟ್ಟ ಮಾತಿನಂತೆ ರೈತರ ಸಾಲಮನ್ನಾ ಮಾಡುವ ವಿಷಯದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್‌ ಹಾಗೂ ನಮ್ಮ ನೇತೃತ್ವದ ಸಹಭಾಗಿತ್ವದಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು. ಬೆಂಗಳೂರಿನಲ್ಲಿ ರೈತ ನಾಯಕರು ಹಾಗೂ ಪ್ರತಿಪಕ್ಷಗಳ ಸಭೆ ಕರೆದು ಸಾಲ ಮನ್ನಾ ಕುರಿತು ಚರ್ಚಿಸುತ್ತಿದ್ದು, ಸಭೆ ಉದ್ದೇಶಿಸಿ ಸಿಎಂ ಮಾತನಾಡುತ್ತಿದ್ದಾರೆ. ರೈತರ ಸಾಲಮನ್ನಾ ಮಾಡುತ್ತೋ ಇಲ್ಲವೋ ಎಂಬ ಗೊಂದಲವಿತ್ತು. ಈ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದ್ದು, ಸರ್ಕಾರ […]

ಕುಮಾರಸ್ವಾಮಿಯವರಿಂದ ರಾಜ್ಯದ ಜನತೆಗೆ ಅವಮಾನ: ಬಿ.ಎಸ್. ಯಡಿಯೂರಪ್ಪ

Monday, May 28th, 2018
yedyurappa

ಬೆಂಗಳೂರು: ನಾನು ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ. ಜನತೆಯ ಮುಲಾಜಿನಲ್ಲಿಇಲ್ಲ ಎಂದು ಹೇಳುವ ಮೂಲಕ ನಾಡಿ ೬.೫ ಕೋಟಿ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ವೈ, ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮೇಗೌಡ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು. ಬಳಿಕ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಎಸ್ವೈ, ಕುಮಾರಸ್ವಾಮಿ ಅವರು ತನ್ನ ಹೇಳಿಕಯ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಅಪಮಾನ ಮಾಡಿದ್ದಾರೆ. ಭಾರತದ ಇತಿಹಾಸಲ್ಲಿ ಯಾವ ಮುಖ್ಯಮಂತ್ರಿ ಕೂಡ […]

ಉಡುಪಿಯಲ್ಲಿ ಬಿಜೆಪಿ ಪ್ರತಿಭಟನಾ ಮೆರವಣಿಗೆ

Monday, May 28th, 2018
protest

ಉಡುಪಿ: ಜೆಡಿಎಸ್ ಮೈತ್ರಿ ಸರಕಾರ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿ ಮಾತು ತಪ್ಪಿದೆ ಎಂದು ಆರೋಪಿಸಿ ಸೋಮವಾರ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜೋಡುಕಟ್ಟೆಯಿಂದ ಸರ್ವಿಸ್ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಮುಖ್ಯಮಂತ್ರಿಯಾದ ಬಳಿಕ ಕುಮಾರಸ್ವಾಮಿ ಚುನಾವಣೆಗೆ ಮೊದಲು ನೀಡಿದ ಪ್ರಮುಖ ಭರವಸೆ ಗಳಲ್ಲಿ ಒಂದಾದ ರೈತರ ಸಾಲಮನ್ನಾ ಮಾಡದೆ ವಚನ ಭ್ರಷ್ಟರಾಗಿದ್ದಾರೆ. ಆದುದರಿಂದ ರೈತರ ಸಾಲಮನ್ನಾ ತಕ್ಷಣವೇ ಮಾಡುವ ಮೂಲಕ ರೈತರಿಗೆ ನ್ಯಾಯ ಸಿಗಬೇಕು ಎಂಬ […]

ರಾಜ್ಯದ ಜನರ ಮುಲಾಜಿನಲ್ಲಿಲ್ಲ ಎಂದಿರುವ ಸಿಎಂ ಕ್ಷಮೆ ಕೇಳಬೇಕು: ಆರ್.ಅಶೋಕ್

Monday, May 28th, 2018
r-ashok

ಬೆಂಗಳೂರು: ಜೆಡಿಎಸ್ ಶಾಸಕರನ್ನು ಗೆಲ್ಲಿಸಿರುವ 38 ಕ್ಷೇತ್ರದ ಜನ ನಮ್ಮ ರಾಜ್ಯದವರೇ ಹೊರತು ಬೇರೆ ರಾಜ್ಯದವರಲ್ಲ. ಹೀಗಾಗಿ ಸಿಎಂ ಕುಮಾರಸ್ವಾಮಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆಗ್ರಹಿಸಿದ್ದಾರೆ. ಆರ್‌ಆರ್‌ ನಗರದ ಜಾಲಹಳ್ಳಿ ವಿಲೇಜ್ ಮತಗಟ್ಟೆ 22ರಲ್ಲಿ ಮತದಾನದ ಬಳಿಕ ಮಾತನಾಡಿದ ಅವರು, ನಾನು ರಾಜ್ಯದ ಜನತೆ ಮುಲಾಜಿನಲ್ಲಿ ಇಲ್ಲ ಬದಲಿಗೆ ಕಾಂಗ್ರೆಸ್‌ನ ಮುಲಾಜಿನಲ್ಲಿದ್ದೇನೆ ಎಂಬ ಸಿಎಂ ಹೇಳಿಕೆಗೆ ಅಶೋಕ್ ತಿರುಗೇಟು ನೀಡಿದರು. ನಾನು ಮತದಾನ ಮಾಡಿದ್ದೇನೆ. ಎಲ್ಲರೂ ತಮ್ಮ ಹಕ್ಕನ್ನ ಚಲಾಯಿಸಿ. […]

ರಾಮನಗರ ಉಪ ಚುನಾವಣೆ, ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್..!

Saturday, May 26th, 2018
yogishwar

ರಾಮನಗರ: ರಾಮನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರ ಎದುರು ಸೋತಿದ್ದ ಸಿಪಿ ಯೋಗೇಶ್ವರ್ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರ ಪ್ರಾಬಲ್ಯ ಹೆಚ್ಚಿದ್ದು ಸಿಪಿ ಯೋಗೀಶ್ವರನ್ನು ಕಳೆದುಕೊಳ್ಳುವುದು ಬೇಡ ಎಂಬ ಉದ್ದೇಶದಿಂದ ಯೋಗೇಶ್ವರ್‌ಗೆ ಮತ್ತೊಂದು ಅವಕಾಶವನ್ನು ಬಿಜೆಪಿ ನೀಡಿದೆ. ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಎದುರು ಸೋಲನ್ನನುಭವಿಸಿದ್ದರು. ರಾಮನಗರದಲ್ಲೂ ಚುನಾವಣೆಗೆ ಸ್ಪರ್ಧಿಸಿದ್ದ ಕುಮಾರಸ್ವಾಮಿ ಅವರು ಅಲ್ಲಿ ಗೆದ್ದ ನಂತರ ಚನ್ನಪಟ್ಟಣದ ಸ್ಥಾನ ಉಳಿಸಿಕೊಂಡು ರಾಮನಗರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು […]

ನಾನೇನು ಸನ್ಯಾಸಿಯಲ್ಲ, ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಪುಟ್ಟರಾಜು

Saturday, May 26th, 2018
puttaraju

ಬೆಂಗಳೂರು: ನಾನೇನು ಸನ್ಯಾಸಿಯಲ್ಲ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ಜೆಡಿಎಸ್ ಶಾಸಕ ಸಿ.ಎಸ್‌‌.ಪುಟ್ಟರಾಜು ತಮ್ಮ ಸಚಿವ ಸ್ಥಾನದ ಇಂಗಿತ ವ್ಯಕ್ತಪಡಿಸಿದ್ದಾರೆ. ಇಂದು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ತಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು. ಇದೇ ವೇಳೆ ಬಿಜೆಪಿ ನಾಯಕರಿಗೆ ಟಾಂಗ್‌‌ ನೀಡಿದ ಅವರು, ಬಿಜೆಪಿಯವರಿಗೆ ಹೆದರಿ ನಾವು ಸಾಲಮನ್ನಾ ಬಗ್ಗೆ ತೀರ್ಮಾನ ಮಾಡುತ್ತಿಲ್ಲ. […]

ವಿಧಾನಸಭಾಧ್ಯಕ್ಷರಾಗಿ ಕಾಂಗ್ರೆಸ್‍ನ ಕೆ.ಆರ್.ರಮೇಶ್‍ಕುಮಾರ್ ಆಯ್ಕೆ

Friday, May 25th, 2018
speaker

ಬೆಂಗಳೂರು : ರಾಜ್ಯ ವಿಧಾನಸಭಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‍ನ ಕೆ.ಆರ್.ರಮೇಶ್‍ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸುರೇಶ್‍ಕುಮಾರ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ರಮೇಶ್‍ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದು, ಆದರೆ ಈ ಚುನಾವಣೆಯಲ್ಲಿ ಬಿಜೆಪಿಯ ಸುರೇಶ್‍ಕುಮಾರ್ ಅವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮಂಡಿಸದೇ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ರಮೇಶ್‍ಕುಮಾರ್ ನೂತನ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ರಮೇಶ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ […]

ಬಿಎಸ್‌ವೈ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು: ಬಂದ್‌ಗೆ ಬಗ್ಗುವುದಿಲ್ಲ ಎಂದು ಎದುರೇಟು

Friday, May 25th, 2018
yedeyurappa-bandh

ಬೆಂಗಳೂರು: ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಇಂದು ಸದನದಲ್ಲಿ ವಿಶ್ವಾತಮತ ಗೊತ್ತುವಳಿ ಮಂಡಿಸಿದರು. ಕೇಂದ್ರ ಸರ್ಕಾರ ಯಾವ ರೀತಿ ಸುಳ್ಳು ದಾಖಲೆ ನಿರ್ಮಾಣ ಮಾಡಿದಾರೆ. ಕೇಂದ್ರ ಸರ್ಕಾರದ ಯಾವುದೇ ಬೆದರಿಕೆಗಳಿಗೆ ನಾನು ಬಗ್ಗುವುದಿಲ್ಲ. ಕೇಂದ್ರ ಸರ್ಕಾರ ಗೂಟ ಹೊಡೆದುಕೊಂಡು ಇರ್ತಾರಾ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಮನಸ್ಸಿಗೆ ಆಘಾತವಾಗಿದೆ. ನಾನು ಸುಮ್ಮ ಸುಮ್ಮನೇ ಮತ ಪಡೆಯಲು ಈ ಕಾರ್ಯಕ್ರಮ ಜಾರಿಗೆ ತರಲು ಯೋಚಿಸಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ನಾಯಕರು ಜೈಲಿಗೆ ಹೋಗ್ತಾರೆ ಎಂಬ ಭಯದಿಂದ ಜೆಡಿಎಸ್‌ ಬೆಂಬಲ […]

2ನೇ ಬಾರಿಗೆ ಸ್ಪೀಕರ್‌ ಸ್ಥಾನ ಅಲಂಕರಿಸಿದ ರಮೇಶ್‌ ಕುಮಾರ್‌

Friday, May 25th, 2018
ramesh-kumar

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿ ಕಾಂಗ್ರೆಸ್ ಪಕ್ಷದ ಕೆ.ಆರ್.ರಮೇಶ್ ಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಅವರು ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆ ಕಲಾಪ ಮಧ್ಯಾಹ್ನ 12.20ರ ಸುಮಾರಿಗೆ ಆರಂಭವಾಗುತ್ತಿದ್ದಂತೆಯೇ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು, ಸ್ಪೀಕರ್ ಸ್ಥಾನಕ್ಕೆ ಸುರೇಶ್ ಕುಮಾರ್ ಅವರನ್ನು ಸೂಚಿಸುತ್ತಿಲ್ಲ ಎಂದು ಹೇಳಿದರು. ಅದಕ್ಕೆ ಸಮ್ಮತಿ ಇರುವುದಾಗಿ ಸುರೇಶ್ […]