Blog Archive

ಕೋವಿಡ್-19 ಸೋಂಕು : ಐಸಿಎಸ್ಇ ದ್ವಿತೀಯ ಪಿಯು ಪರೀಕ್ಷೆ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ

Thursday, March 19th, 2020
parikshe

ನವದೆಹಲಿ : ಕೋವಿಡ್-19 ಸೋಂಕು ರೋಗ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಐಸಿಎಸ್ ಇ ಬೋರ್ಡ್ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಗುರುವಾರ ಮುಂದೂಡಿದೆ. ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡಲಾಗಿದೆ ಎಂದು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ ಸಿಇ) ಚೀಫ್ ಎಕ್ಸಿಕ್ಯೂಟಿವ್ ಗೇರೈ ಅರ್ಥೂನ್ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಈಗಾಗಲೇ ಸಿಬಿಎಸ್ ಇ ವೇಳಾಪಟ್ಟಿ ಘೋಷಿಸಿತ್ತು. ಆದರೆ ಕೋವಿಡ್-19 ವೈರಸ್ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಪರೀಕ್ಷೆ ಮುಂದೂಡಲಾಗಿದೆ. […]

ಕೋವಿಡ್​-19 ಕಟ್ಟೆಚ್ಚರ : ಇಂದಿನಿಂದ ತಪಾಸಣೆ ಕಾರ್ಯ ಆರಂಭ

Thursday, March 19th, 2020
tapasane

ಮಂಗಳೂರು : ಕೊರೊನಾ ವೈರಸ್ ಭೀತಿ ಹಿನ್ನೆಲೆ ಕೇರಳ- ಕರ್ನಾಟಕದ ಗಡಿಭಾಗದಲ್ಲಿ ಇಂದಿನಿಂದ ತಪಾಸಣೆ ಕಾರ್ಯ ಆರಂಭವಾಗಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ಗಡಿಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರು ಮತ್ತು ಕೇರಳ ಗಡಿಭಾಗವಾದ ತಲಪಾಡಿಯಲ್ಲಿ ಬಸ್ ಮತ್ತು ಖಾಸಗಿ ವಾಹನದಲ್ಲಿ ಮಂಗಳೂರಿಗೆ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ಪ್ರಯಾಣಿಕರ ತಾಪಮಾನ ತಪಾಸಣೆ ಮಾಡಲಾಗುತ್ತಿದ್ದು, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದರೆ ರೋಗಿಗಳನ್ನು ಮಂಗಳೂರು ಆಸ್ಪತ್ರೆಗೆ ಕಳಿಸಲಾಗುತ್ತಿದೆ.  

ಕೋವಿಡ್-19 ವೈರಸ್ ಕಳವಳ : ಇಂದು ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ

Thursday, March 19th, 2020
modi

ನವದೆಹಲಿ : ಕೋವಿಡ್-19 ಭಾರತದಲ್ಲಿ ತನ್ನ ಕಬಂಧಬಾಹುವನ್ನು ಚಾಚುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದ್ದು ದೇಶದ ಜನರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಬುಧವಾರ ತಜ್ಞರು ಮತ್ತು ವೈದ್ಯಾಧಿಕಾರಿಗಳ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಸೋಂಕು ತಡೆಗಟ್ಟುವ ಮಾರ್ಗೋಪಾಯಗಳು, ಹಾಗೂ ಜನರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕಾ ಕ್ರಮಗಳ […]