Blog Archive

ಪ್ರಮಾಣವಚನಕ್ಕೂ ಮುನ್ನ ಹೆಚ್‌ಡಿಕೆ ಕುಟುಂಬದಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ

Tuesday, May 22nd, 2018
kumardevegowda

ಮೈಸೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ನಾಡ ಅಧಿ ದೇವತೆ ಚಾಮುಂಡೇಶ್ವರಿಗೆ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಸಂಜೆ 4.30ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣ ಸ್ವೀಕರಿಸುವ ಸಮಾರಂಭ ನಿಗದಿಯಾಗಿದ್ದು, ಇದಕ್ಕೂ ಮುನ್ನ ನಾಡ ಅಧಿ ದೇವತೆ ಚಾಮುಂಡಿ ತಾಯಿಗೆ ಬೆಳಗ್ಗೆ 8.45ರ ಶುಭ ಲಗ್ನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಲಲಿತ್ ಮಹಲ್ ಹೆಲಿಪ್ಯಾಡ್‌‌ಗೆ ಆಗಮಿಸಲಿರುವ ಕುಮಾರಸ್ವಾಮಿ, ನಂತರ ಅಲ್ಲಿಂದ ನೇರವಾಗಿ ನಾಡ ಅಧಿ ದೇವತೆ ಶ್ರೀ ಚಾಮುಂಡೇಶ್ವರಿಯತ್ತ ಪ್ರಯಾಣ ಬೆಳೆಸಲಿದ್ದಾರೆ. […]

ರೈತರ ಸಾಲ ಮನ್ನಾ ವಿಷಯ..ಧರ್ಮಸ್ಥಳದಲ್ಲಿ ಹೆಚ್‌ಡಿಕೆ ಗೊಂದಲದ ಹೇಳಿಕೆ..!

Tuesday, May 22nd, 2018
kumarswamy

ಮಂಗಳೂರು: ನನ್ನ ತಂದೆಯವರು ಧರ್ಮಸ್ಥಳ ಕ್ಷೇತ್ರದ ಭಕ್ತರು. ನನಗೆ ದೇವರ ಅನುಗ್ರಹ ಇದೆ. ಸಮ್ಮಿಶ್ರ ಸರ್ಕಾರಕ್ಕೆ ದೈವ ಪ್ರೇರಣೆ ಇದೆ. ಹಾಗಾಗಿ ದೇವರ ದರ್ಶನ ಮತ್ತು ಗುರು ಹಿರಿಯ ಆಶೀರ್ವಾದ ಪಡೆಯುತ್ತಿದ್ದೇನೆ ಎಂದು ನಿಯೋಜಿತ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ನಾಡಿನ‌ ನಿರೀಕ್ಷೆಗಳ ಬಗ್ಗೆ ದೇವರ ಬಳಿ ಪ್ರಾರ್ಥನೆ ಮಾಡಿರುವೆ. ನಾಡಿನಲ್ಲಿ ರೈತರಿಗೆ ಉತ್ತಮವಾದ ಮಳೆ-ಬೆಳೆ ಬಂದು ನಾಡಿನ ಸಮಸ್ಯೆಗಳು ಪರಿಹಾರವಾಗಬೇಕೆಂದು ದೇವರಲ್ಲಿ ಕೇಳಿಕೊಂಡಿದ್ದೇನೆ ಎಂದರು. ಕಾಂಗ್ರೆಸ್ ಮತ್ತು […]

ಜನಾದೇಶ ಕಾಂಗ್ರೆಸ್‌ಗೆ ವಿರುದ್ಧವಾಗಿದ್ದರೂ ಜೆಡಿಎಸ್ ನೊಂದಿಗೆ ಆತುರವಾಗಿ ಮೈತ್ರಿ : ಅಮಿತ್ ಶಾ

Monday, May 21st, 2018
Amith sha

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನಾದೇಶ ಕಾಂಗ್ರೆಸ್‌ಗೆ ವಿರುದ್ಧವಾಗಿತ್ತು. ಅದಕ್ಕಾಗಿಯೇ ಜೆಡಿಎಸ್ ನೊಂದಿಗೆ ಆತುರವಾಗಿ ಮೈತ್ರಿ ಮಾಡುಲು ಒಪ್ಪಿಕೊಂಡಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲನ್ನು ಗೆಲುವೆಂದು ಬಿಂಬಿಸಲು ಕಾಂಗ್ರೆಸ್‌ ಹೊಸ ದಾರಿಯನ್ನು ಈ ರೀತಿಯಾಗಿ ಕಂಡುಕೊಂಡಿದೆ ಎಂದು ಹೇಳಿದರು. ಹೆಚ್ಚಿನ ಎಲ್ಲ ಸಚಿವರು ಸೋತ ಹೊರತಾಗಿಯೂ ತಾವು ಸಂಭ್ರಮಿಸುತ್ತಿರುವುದು ಯಾಕೆ ಎಂಬುದನ್ನು ಕಾಂಗ್ರೆಸ್‌ನವರು ರಾಜ್ಯದ ಜನತೆಗೆ ವಿವರಿಸಲಿ ಎಂದು ಶಾ ಹೇಳಿದರು. ‘ಕೇವಲ […]

ಜೆಡಿಎಸ್ ಪ್ರಜಾ ವಿರೋಧಿ ಪ್ರಜಾಪ್ರಭುತ್ವ ಎಷ್ಟು ಸರಿ?

Monday, May 21st, 2018
kumara swamy

ಮಂಗಳೂರು : ಕೇವಲ 37 ಸೀಟುಗಳನ್ನು ಗೆದ್ದುಕೊಂಡಿರುವ ಜೆಡಿಯಸ್, ಕಾಂಗ್ರೆಸ್ಸ್ ಬೆಂಬಲಕೊಡುತ್ತೇನೆ ಎಂದ ಮಾತ್ರಕ್ಕೆ ರಾಜ್ಯಭಾರಮಾಡವುದುದು ಎಷ್ಟು ಸರಿ. ಅಷ್ಷಕ್ಕೂ ಕಾಂಗ್ರೆಸ್ಸ್‌ಗಾಗಲಿ, ಜೆಡಿಯಸ್‌ಗಾಗಲೀ ಮತದಾರರು ಸ್ಪಷ್ಟ ಬಹುಮತ ನೀಡಿಲ್ಲ. ಚುನಾವಣಾ ಪೂರ್ವ ಮೈತ್ರಿಯಂತೂ ಮಾಡಿಕೊಂಡೇ ಇರಲಿಲ್ಲಿ. ಈಗ ನಡೆಯುತ್ತಿರುವುದು ಮತದಾರರಿಗೆ ಒಪ್ಪಿಗೆ ಇಲ್ಲದೆ ಎರಡು ಪಕ್ಷಗಳು ಸೇರಿ ಅಧಿಕಾರಕ್ಕಾಗಿ ಮಾಡುತ್ತಿರುವ ಪ್ರಜಾ ವಿರೋಧಿ ಕೆಲಸ ಎಂಬುದು ಜನತೆಗೆ ಸ್ಪಷ್ಟವಾಗಿದೆ. ಸಿದ್ದರಾಮಯ್ಯ 1999 ರಲ್ಲಿ  ದೇವೆಗೌಡರ ಜ್ಯಾತ್ಯಾತೀತ ಜನತಾದಳ ಪಕ್ಷಕ್ಕೆ ಸೇರಿ ಆ  ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು. 2004 ರಲ್ಲಿ ಕಾಂಗ್ರೆಸ್-ಜೆಡಿಎಸ್ […]

ವಿಶ್ವಾಸಮತ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ

Saturday, May 19th, 2018
bjp-bless

ಮಂಗಳೂರು: ರಾಜ್ಯದ ನೂತನ ಸರಕಾರ ರಚನೆಗೆ ವಿಶ್ವಾಸಮತ ಯಾಚನೆಯ ಹೈಡ್ರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ರಾಜ್ಯದ ನೂತನ ಮುಖ್ಯಮಂತ್ರಿ ಬಿ ಎಸ್ .ಯಡಿಯೂರಪ್ಪ ಅವರು ಬಹುಮತ ಸಾಬೀತು ಪಡಿಸುವ ವಿಶ್ವಾಸದಲ್ಲಿದ್ದಾರೆ. ಈ ನಡುವೆ ಬಿಜೆಪಿ ಕಾರ್ಯಕರ್ತರು ಬಹುಮತ ಸಾಬೀತು ಯಶಸ್ವಿಯಾಗಲಿ ಎಂದು ದೇವರ ಮೊರೆ ಹೋಗಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ಬಹುಮತ ಸಾಬೀತುಪಡಿಸುವಂತಾಗಬೇಕು ಎಂದು ಬಿಜೆಪಿ ಕಾರ್ಯಕರ್ತರು ಪುತ್ತೂರಿನಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದರು. ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆ ಮುಖಂಡ […]

3 ದಿನದ ಮುಖ್ಯಮಂತ್ರಿ ಶ್ರೀಯುತ ಯಡಿಯೂರಪ್ಪನವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ: ಸಿದ್ದರಾಮಯ್ಯ

Saturday, May 19th, 2018
congress

ಬೆಂಗಳೂರು: ರಾಜ್ಯ ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ರಾಜಕಾರಣಿಗಳು ಮತ್ತು ಜನರ ಕುತೂಹಲ, ಉದ್ವೇಗ ಹೆಚ್ಚಾಗಿದೆ. ಆದರೆ, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರ ಅಧಿಕಾರದ ಅವಧಿ ಇಂದೇ ಮುಕ್ತಾಯವಾಗಲಿದೆ. ಅವರು ಮೂರು ದಿನಗಳ ಮಟ್ಟಿಗಿನ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕಲಾಪ ಆರಂಭಕ್ಕೂ ಮುನ್ನ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಹುಮತವಿಲ್ಲದೆಯೇ ಸಂವಿಧಾನ ಬಾಹಿರವಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ನಾಡಿನ ಮತದಾರರ ಆಶಯಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ. ಇಂದು ಸಂಜೆ ಜನಾಭಿಪ್ರಾಯಕ್ಕೆ ಜಯ ದೊರೆಯಲಿದೆ ಎಂಬ ವಿಶ್ವಾಸವಿರುವುದಾಗಿ ಹೇಳಿಕೊಂಡಿದ್ದಾರೆ. […]

ವಿಧಾನಸಭೆಯ ಸದ್ಯದ ಮ್ಯಾಜಿಕ್ ನಂಬರ್ 110…!

Saturday, May 19th, 2018
siddaramaih

ಬೆಂಗಳೂರು: ವಿಧಾನಸಭೆಯಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಮಸ್ಕಿ ಶಾಸಕ ಪ್ರತಾಪ್ ಗೌಡ ಗೈರಾದ ಹಿನ್ನೆಲೆಯಲ್ಲಿ ಮ್ಯಾಜಿಕ್ ಸಂಖ್ಯೆ 110ಕ್ಕೆ ಇಳಿದಿದೆ. ಬಿಜೆಪಿ ಕಡೆಯಿಂದ ಎಲ್ಲಾ 104 ಸದಸ್ಯರಿದ್ದಾರೆ. ಕಾಂಗ್ರೆಸ್‌ನ 78 ಸದಸ್ಯರ ಪೈಕಿ 76 ಮಂದಿ ಉಪಸ್ಥಿತರಿದ್ದಾರೆ. ಜೆಡಿಎಸ್‌ನ 37 ಶಾಸಕರ ಪೈಕಿ 36 ಮಂದಿ ಇದ್ದಾರೆ. ಇವರ ಒಟ್ಟು ಸದಸ್ಯರ ಸಂಖ್ಯೆ 38 ಆಗಿದ್ದರೂ, ಕುಮಾರಸ್ವಾಮಿ ಎರಡು ಕ್ಷೇತ್ರದಲ್ಲಿ ಗೆದ್ದಿರುವ ಕಾರಣ ಇವರ ಶಾಸಕರ ಬಲ 37. ಇಂದು ಎಲ್ಲರೂ ಹಾಜರಾಗುತ್ತಿದ್ದು, ಹೆಚ್.ಡಿ. […]

ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ, ಕಾಂಗ್ರೆಸ್ ನಲ್ಲೂ ಯಾವುದೇ ಸಮಸ್ಯೆ ಇಲ್ಲ: ಕುಮಾರಸ್ವಾಮಿ

Saturday, May 19th, 2018
kumaraswamy

ಬೆಂಗಳೂರು: ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಕಾಂಗ್ರೆಸ್ ನಲ್ಲೂ ಯಾವುದೇ ಸಮಸ್ಯೆ ಇಲ್ಲ. ಎಲ್ಲ ಶಾಸಕರು ಒಗ್ಗಟ್ಟಿನಿಂದ ಇದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಎಸ್ ಯಡಿಯೂರಪ್ಪ ವಿಶ್ವಾಸ ಮತ ಯಾಚನೆಯಲ್ಲಿ ಸೋಲುತ್ತಾರೆ ಎಂದು ಕುಮಾರಸ್ವಾಮಿ ನುಡಿದರು. ಪ್ರತಿಯೊಬ್ಬರಿಗೂ ಆಶಾವಾದ ಇದ್ದೇ ಇರುತ್ತದೆ. ಸಂಜೆ 4 ಗಂಟೆಯವರೆಗೆ ಬಿಜೆಪಿ ನಾಯಕರು ನಮ್ಮ ಶಾಸಕರಿಗಾಗಿ ಗಾಳ ಹಾಕುತ್ತಾರೆ. ಅವರು ಆಶಾವಾದ ಹೊಂದಿರುವುದು ತಪ್ಪಲ್ಲ ಎಂದರು. ಮಾಜಿ ಮುಖ್ಯ ಮಂತ್ರಿ […]

ನೂತನ ಸರಕಾರದ ವಿಶ್ವಾಸ ಮತ ಯಾಚನೆ, ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

Saturday, May 19th, 2018
vidhana-soudha

ಮಂಗಳೂರು: ಬೆಂಗಳೂರಿನ ವಿಧಾನ ಸೌಧದಲ್ಲಿ ನಾಳೆ ನೂತನ ಸರಕಾರದ ವಿಶ್ವಾಸ ಮತ ಯಾಚನೆ ನಡೆಯಲಿದೆ . ಈ ಕುರಿತು ದೇಶಾದ್ಯಂತ ಭಾರೀ ಕುತುಹಲ ವ್ಯಕ್ತವಾಗಿದೆ. ಈ ವಿಶ್ವಾಸ ಮತ ಯಾಚನೆಯ ಬಿಸಿ ಮಂಗಳೂರಿಗೂ ತಟ್ಟಿದೆ. ರಾಜ್ಯದಲ್ಲಿ ನಾಳೆ ಹೊಸ ಸರಕಾರ ವಿಶ್ವಾಸ ಮತ ಯಾಚನೆ ಕಸರತ್ತು ನಡೆಯುವ ಸಂದರ್ಭ ಮಂಗಳೂರಿನಲ್ಲಿ ರಾಜಕೀಯ ಘರ್ಷಣೆಯಾಗುವ ಆತಂಕದ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಾಳೆ ಮುಂಜಾನೆ ಯಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಂಗಳೂರು […]

ಕಾಂಗ್ರೆಸ್‌‌‌-ಜೆಡಿಎಸ್‌ ಮೈತ್ರಿ ಪ್ರಜಾಪ್ರಭುತ್ವ ವಿರೋಧಿ: ನಳಿನ್ ಕುಮಾರ್ ಕಟೀಲ್

Saturday, May 19th, 2018
nalin-kumar

ಮಂಗಳೂರು: ಚುನಾವಣೆಯ ಸಂದರ್ಭದಲ್ಲಿ ವೈಯಕ್ತಿಕ ಮತ್ತು ಸೈದ್ಧಾಂತಿಕವಾಗಿ ವಿರೋಧ ಮಾಡಿ ಈಗ ಅಧಿಕಾರ ಮಾಡಲು ಯತ್ನಿಸುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್‌ನ್ನು ರಾಜ್ಯದ ಜನ ತಿರಸ್ಕರಿಸಿದ್ದಾರೆ. ಬಿಜೆಪಿಗೆ ಜನಾಶೀರ್ವಾದ ಇದ್ದು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು. ಅಪ್ಪನಾಣೆ ಹಾಕಿಕೊಂಡವರು ಈಗ ಒಂದಾಗಿದ್ದು, ಸಿದ್ದರಾಮಯ್ಯರಿಗೆ ಅಪ್ಪನ ಮೇಲೆ ನಂಬಿಕೆ ಇಲ್ಲದಂತಾಗಿದೆ ಎಂದು ಲೇವಡಿ ಮಾಡಿದರು.