‘ರಾಜೀವ್’ ಹಂತಕರ ಬಿಡುಗಡೆಗೆ ಪ್ರಧಾನಿ ಆಕ್ಷೇಪ
Thursday, February 20th, 2014ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡದಂತೆ ತಮಿಳುನಾಡು ಸಿಎಂಗೆ ಒತ್ತಾಯಿಸಿದ್ದಾರೆ. ಅಲ್ಲದೆ ತಾವು ತೆಗೆದುಕೊಂಡಿರುವ ನಿರ್ಧಾರವನ್ನು ಹಿಂಪಡೆಯುವಂತೆ ಜಯಲಲಿತಾಗೆ ಪ್ರಧಾನಿ ಆಗ್ರಹಿಸಿದ್ದಾರೆ. ಮಾಜಿ ಪ್ರಧಾನಿ ಅವರನ್ನು ಹತ್ಯೆ ಮಾಡಿರುವುದು ಸಣ್ಣ ವಿಷಯವಲ್ಲ. […]