Blog Archive

ಸರ್ಕಿಟ್‌ ಹೌಸ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Monday, August 22nd, 2016
Amit-against-protest

ಮಂಗಳೂರು: ಗೋರಕ್ಷಣೆಯ ಹೆಸರಿನಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಂದು ನಗರಕ್ಕೆ ಆಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಂಗಿದ್ದ ಸರ್ಕಿಟ್‌ ಹೌಸ್ ಮುಂದೆ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗೋ ಮಾತೆಯ ಹೆಸರಿನಲ್ಲಿ ನಕಲಿ ಗೋರಕ್ಷಕರು ಅಮಾಯಕರನ್ನು ಹತ್ಯೆ ಮಾಡುತ್ತಿದ್ದಾರೆ. ಶಾಂತಿ, ನೆಮ್ಮದಿಯಿಂದ ಇದ್ದ ಅವಿಭಜಿತ ದಕ್ಷಿಣ ಕನ್ನಡ […]

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Wednesday, August 10th, 2016
Motamma

ಮಂಗಳೂರು: ನರಭಕ್ಷಕರಾಗಿ, ಗೋಮುಖ ವ್ಯಾಘ್ರರಂತೆ ದಲಿತರ ಚರ್ಮ ಸುಲಿಯುತ್ತಿರುವ ಸಂಘ ಪರಿವಾರಕ್ಕೆ ದಲಿತರ ಮೇಲೆ ಹಲ್ಲೆ ಮಾಡಲು ಅಧಿಕಾರ ಕೊಟ್ಟವರು ಯಾರು ಎಂದು ಕಾಂಗ್ರೆಸ್ ಹಿರಿಯ ಮುಖಂಡೆ ಮೋಟಮ್ಮ ಪ್ರಶ್ನಿಸಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪ್ರಶ್ನಿಸಿದ ಮೋಟಮ್ಮ, ಧರ್ಮ, ಜಾತಿ, ಭಾಷೆ ಎಲ್ಲವನ್ನೂ ಬದಿಗಿಟ್ಟು ಎಲ್ಲರನ್ನೂ ಸಮನಾಗಿ ರಕ್ಷಿಸುವ ಕಾರ್ಯವನ್ನು ಕೇಂದ್ರ ಸರ್ಕಾರ ಮರೆತಿದೆ. ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹೆಚ್ಚಿದೆ. […]

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಿರಾಕರಿಸಿದ ಜಿಲ್ಲಾಧಿಕಾರಿ

Friday, January 22nd, 2016
DC Ibrahim

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ, ಪ್ರತಿಭಟನೆ ಮಾಡಲೆಂದೇ ನಾಲ್ಕು ಸ್ಥಳಗಳನ್ನು ಗೊತ್ತುಮಾಡಿ ವಾರದೊಳಗೆ ಸೂಚನೆ ಹೊರಡಿಸುವುದಾಗಿ ಮಾಹಿತಿ ನೀಡಿದ್ದಾರೆ. ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿ ಸಂಘಟನೆಗಳು, ಸಾರ್ವಜನಿಕರು ಒಂದು ನಿರ್ದಿಷ್ಟ ಜಾಗದಲ್ಲಿ ಪ್ರತಿಭಟನೆ ನಡೆಸಲು ಸಹಕಾರಿಯಾಗುವಂತೆ ನಗರದ ಕೇಂದ್ರ ಸ್ಥಾನದಲ್ಲಿ ನಾಲ್ಕು ಪ್ರದೇಶಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು. ನೆಹರೂ ಮೈದಾನದ ಕ್ರಿಕೆಟ್ ಪೆವಿಲಿಯನ್‌ ಬಳಿ ಸಣ್ಣದಾದ ಪ್ರದೇಶ, ನೆಹರೂ ಮೈದಾನದ (ಫುಟ್ಬಾಲ್‌) ಹಿಂಬದಿಯ ಟೆಂಪೋ ನಿಲುಗಡೆ ಸ್ಥಳ, […]

ಕೇಂದ್ರ ಸರಕಾರದ ಬೆಲೆಯೇರಿಕೆ ವಿರುದ್ದ ಕುಂಬಳೆಯಲ್ಲಿ ಕಾಂಗ್ರೆಸ್ಸ್ ಪ್ರತಿಭಟನೆ

Tuesday, January 12th, 2016
congress Protest

ಕುಂಬಳೆ: ನರೇಂದ್ರಮೋದಿಯವರ ನೇತೃತ್ವದ ಕೇಂದ್ರ ಸರಕಾರ ನೀಡಿರುವ ಆಶ್ವಾಸನೆಗಳನನು ಹುಸಿಗೊಳಿಸಿ ಜನದ್ರೋಹ ಕಾರ್ಯತಂತ್ರಗಳನ್ನು ಹೆಣೆದು ಜನ ಸಾಮಾನ್ಯರ ಬದುಕನ್ನು ಹತಾಶೆಗೆ ತಳ್ಳುತ್ತಿದೆಯೆಂದು ಜಿಲ್ಲಾ ಕಾಂಗ್ರೆಸ್ಸ್ ಉಪಾಧ್ಯಕ್ಷ ಹಕೀಂ ಕುನ್ನಿಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಡಲ ಕಾಂಗ್ರೆಸ್ಸ್ ನೇತೃತ್ವದಲ್ಲಿ ಕೇಂದ್ರ ಸರಕಾರದ ಬೆಲೆಯೇರಿಕೆ ಕ್ರಮಗಳ ವಿರುದ್ದ ಮಂಗಳವಾರ ಕುಂಬಳೆ ಅಂಚೆ ಕಚೇರಿಗೆ ನಡೆಸಿದ ಪ್ರತಿಭಟನೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮೋದಿ ಜನರನ್ನು ಮರುಳುಗೊಳಿಸುವ ಹೇಳಿಕೆಗಳನ್ನಷ್ಟೇ ನೀಡುತ್ತಿದ್ದಾರೆ. ಕಾರ್ಯಕ್ಷಮತೆಯ ಯಾವುದೇ ಯೋಜನೆಗಳನ್ನು ಜನ ಸಾಮಾನ್ಯರಿಗೆ ನೀಡುವಲ್ಲಿ ವಿಫಲವಾಗಿದೆಯೆಂದು ಅವರು ಟೀಕಿಸಿದರು. ಮಂಡಲ […]

ಗೋಸಂರಕ್ಷಣೆಗಾಗಿ ಜು. 13 ರಂದು ಕರಾವಳಿ ಜಿಲ್ಲೆಗಳ ಬೃಹತ್‌ ಪ್ರತಿಭಟನೆ

Thursday, July 9th, 2015
VHP Rally

ಮಂಗಳೂರು : ಗೋಹತ್ಯೆ, ಗೋ ಕಳ್ಳ ಸಾಗಾಟ, ಪ್ರಕರಣಗಳನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌, ಗೋಸಂರಕ್ಷಣಾ ಸಮಿತಿ ವತಿಯಿಂದ ಕರಾವಳಿ ಜಿಲ್ಲೆಗಳ ಬೃಹತ್‌ ಪ್ರತಿಭಟನೆ ಜು. 13ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ವಿಹಿಂಪ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್‌, ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಗೋಹತ್ಯೆ, ದನಗಳ ಸರಣಿ ಕಳ್ಳತನ, ಹಿಂಸಾತ್ಮಕ ರೀತಿಯ ಸಾಗಾಟದಂತಹ ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಿವೆ. ಗುಡ್ಡದಲ್ಲಿ ಮೇಯಲು ಬಿಟ್ಟ ದನಗಳು ಸುರಕ್ಷಿತವಾಗಿ ಮರಳುತ್ತವೆ ಎಂಬ ನಂಬಿಕೆ ಇಲ್ಲದಾಗಿದೆ. ಹಟ್ಟಿಯಲ್ಲಿ […]

ಆಟೋ ದರ : ರಿಕ್ಷಾ ಚಾಲಕರ ಸಂಘದ ಪ್ರತಿಭಟನೆ

Wednesday, February 18th, 2015
Auto Protest

ಮಂಗಳೂರು : ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಕನಿಷ್ಟ ಮೀಟರ್ ದರವನ್ನು 20 ರೂಪಾಯಿಗೆ ಇಳಿಸಿರುವ ಜಿಲ್ಲಾಧಿಕಾರಿಗಳ ನಿರ್ಧಾರದಿಂದ ಆಟೋ ಚಾಲಕ ತೊಂದರೆಯಾಗಿದೆ. ಆಟೋ ದರವನ್ನು 20 ರಿಂದ 25 ಕ್ಕೆ ಏರಿಸಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದ ರಿಕ್ಷಾ ಚಾಲಕರ ಸಂಘ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಗೇಟಿನ ಮುಂಬಾಗ ಪ್ರತಿಭಟನೆ ನಡೆಸಿತು. ತೈಲ ಬೆಲೆಗಳಲ್ಲಿ ಗಣನೀಯ ಇಳಿಕೆಯಾಗಿದ್ದರೂ ಬಿಡಿ ಭಾಗ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ. ಅಲ್ಲದೆ ಹೋಟೇಲು ಚಾ, ತಿಂಡಿಗಳ ಬೆಲೆಯಲ್ಲಿಯೂ ಇಳಿಮುಖವಾಗಿಲ್ಲ, […]

ನಿವೇಶನರಹಿತರಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪ್ರತಿಭಟನೆ

Monday, October 13th, 2014
cpim protest

ಮಂಗಳೂರು : ಅಜಿ೯ದಾರರಿಗೆ ಮನೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ನೇತೃತ್ವದಲ್ಲಿ ನಿವೇಶನರಹಿತರು ಮಂಗಳೂರು ಮಹಾನಗರ ಪಾಲಿಕೆಯೆದುರು ಅ13 ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಕಾರರು ಜ್ಯೋತಿ ವೃತ್ತದಿಂದ ಪಾಲಿಕೆಯವರೆಗೆ ಮೆರವಣಿಗೆ ನಡೆಸಿದರು. ಈಗಾಗಲೇ ನೀಡಿರುವ ಅಜಿ೯ಗಳನ್ನು ನಿವೇಶನರಹಿತರ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಿಪಿಐ(ಎಂ) ನಗರ ಕಾರ್ಯದಶಿ೯ ಸುನೀಲ್ ಕುಮಾರ್ ಬಜಾಲ್, ಮಾತನಾಡಿಪ್ರತಿ ವರ್ಷ ಭೂರಹಿತರಿಗೆ ಭೂಮಿ ನೀಡಬೇಕೆಂದಿದ್ದರೂ, ಕಳೆದ 20 ವರ್ಷಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ತುಂಡು ಭೂಮಿ ನೀಡದೆ ಬಡಜನರಿಗೆ ವಂಚಿಸಲಾಗಿದೆ ಎಂದು […]

ಎಂಆರ್‌ಪಿಎಲ್ ಸಲ್ಫರ್, ಕೋಕ್ ಘಟಕಗಳನ್ನು ಮುಚ್ಚಲು ಜೋಕಟ್ಟೆ ನಾಗರಿಕರ ಪ್ರತಿಭಟನೆ

Friday, October 10th, 2014
Jokatte Protest

ಮಂಗಳೂರು: ಎಂಆರ್‌ಪಿಎಲ್ ಕಂಪೆನಿಯ ಸರ್ವಾಧಿಕಾರಿ ಧೋರಣೆ ವಿರುದ್ಧ, ಸಲ್ಫರ್, ಕೋಕ್ ಘಟಕಗಳನ್ನು ಮುಚ್ಚಲು ಆಗ್ರಹಿಸಿ ನಾಗರಿಕ ಹೋರಾಟ ಸಮಿತಿ ಜೋಕಟ್ಟೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಅ1o ರಂದು ಪ್ರತಿಭಟನೆ ನಡೆಸಿತು. ಕ್ಲಾಕ್ ಟವರ್ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಮೆರವಣಿಗೆಯಲ್ಲಿ ಬಂದ ನಾಗರಿಕ ಹೋರಾಟ ಸಮಿತಿಯ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಎಂಆರ್‌ಪಿಎಲ್ ಕಂಪೆನಿಯ ಮೂರನೇ ಹಂತದ ಸ್ಥಾವರ ಸ್ಥಾಪನೆಯಾದ ನಂತರ ಗಂಭೀರ ಸಮಸ್ಯೆಗಳು ಆರಂಭವಾಗಿದೆ. ಎಂಆರ್‌ಪಿಎಲ್ ನಮ್ಮ […]

ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ

Monday, February 10th, 2014
Congress-JDS

ಮೂಡಿಗೆರೆ: ಜೆಡಿಎಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ  ಘೋಷಣೆ ಕೂಗಿದ ಹಿನ್ನಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸೋಮವಾರ ಬೆಳಿಗ್ಗೆ ಘರ್ಷಣೆ ನಡೆದಿದೆ. ಭೂಮಿ ಒತ್ತುವರಿ ತೆರವು ವಿರೋಧಿಸಿ ಮೂಡಿಗೆರಿ ತಾಲೂಕು ಬಲಿಗೆ ಎಂಬ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಜೆಡಿಎಸ್ ಕಾರ್ಯಕರ್ತರು ತಮ್ಮ ಘೋಷಣೆ ಮುಂದುವರೆಸಿದ […]

ದಿಢೀರ್ ಪ್ರತಿಭಟನೆ: ಆಸ್ಪತ್ರೆ ವೈದ್ಯನ ಬಂಧನ

Saturday, February 8th, 2014
Fast-to-protest

ಬಂಟ್ವಾಳ: ಬಿ.ಸಿ.ರೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ತುಂಬು ಗರ್ಭಿಣಿ ಚಂಚಲಾಕ್ಷಿ ಹಾಗೂ ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾವಿರಾರು ಸಾರ್ವಜನಿಕರು ಶುಕ್ರವಾರ ಸಂಜೆ ಆಸ್ಪತ್ರೆ ಮುಂಭಾಗ ದಿಢೀರನೆ ಪ್ರತಿಭಟನೆ ನಡೆಸಿದರು. ಮುಂದೆ ನಡೆಯಬಹುದಾದ ಅಪಾಯವನ್ನು ತಪ್ಪಿಸಲು ಪೊಲೀಸರು ಆಸ್ಪತ್ರೆ ವೈದ್ಯನನ್ನು ಬಂಧಿಸಿದ್ದಾರೆ. ಆಕ್ರೋಶಿತ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಆಸ್ಪತ್ರೆಯ ವಠಾರದಲ್ಲಿ ಜಮಾಯಿಸಿ ವೈದ್ಯನ ಬಂಧನಕ್ಕೆ ಬಂಟ್ವಾಳ ನಗರ ಪೊಲೀಸರು ವಿಳಂಬ ಧೋರಣೆ ಅನುಸರಿಸಿದ್ದಾರೆಂದು ಆರೋಪಿಸಿ ಧಿಕ್ಕಾರ ಕೂಗಿದರು. ಈ ಹಂತದಲ್ಲಿ ಆಸ್ಪತ್ರೆ ವಠಾರದೊಳಗೆ ಉದ್ವಿಗ್ನ […]