Blog Archive

ಬೆಳ್ತಂಗಡಿಯಲ್ಲಿ ರಸ್ತೆಗೆ ಮರಬಿದ್ದು ವಾಹನ ಸಂಚಾರ ಸ್ಥಗಿತ!

Friday, July 20th, 2018
belthangady

ಬೆಳ್ತಂಗಡಿ: ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಬೆಳ್ತಂಗಡಿ ಪೇಟೆಯಲ್ಲಿ ಇಂದು ಬೆಳಗ್ಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇಲ್ಲಿನ ವಾಣಿ ಕಾಲೇಜಿನ ಸಮೀಪ ಈ ಘಟನೆ ನಡೆದಿದೆ. ಇದರಿಂದ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಪೊಲೀಸರು ಮರವನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಭಾರಿ ಮಳೆ..ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ‌ ಘೋಷಣೆ..!

Friday, July 20th, 2018
belthandady

ಮಂಗಳೂರು: ಪಶ್ಚಿಮಘಟ್ಟದ ತಪ್ಪಲಲ್ಲಿರುವ ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿರುವುದರಿಂದ ತಾಲೂಕಿನ ಶಾಲೆಗಳಿಗೆ ರಜೆ‌ ಘೋಷಿಸಲಾಗಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೂ ಭಾರೀ ಸಮಸ್ಯೆ ಉಂಟಾಗಿದೆ. ಹೀಗಾಗಿ ಬೆಳ್ತಂಗಡಿ ತಹಶೀಲ್ದಾರ್ ಮದನ್ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ಇಂದಿರಾ ಕ್ಯಾಂಟೀನ್​ಗಳು ಮಂಜೂರು..!

Friday, July 13th, 2018
indira-canteen

ಮಂಗಳೂರು: ಒಂದು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು ಮತ್ತೊಂದು ಸರ್ಕಾರ ಅಧಿಕಾರಕ್ಕೆ ಬಂದ ನಂತರ ನೆನೆಗುದಿಗೆ ಬೀಳುತ್ತವೆ ಎಂಬ ಸಾರ್ವಜನಿಕರ ಮಾತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರಕರಣ ಸಾಕ್ಷಿಯಾಗುತ್ತಿದೆ. ನೆನೆಗುದಿಗೆ ಬಿದ್ದ ಅಂತಹ ಯೋಜನೆಗಳ ಪಟ್ಟಿಯಲ್ಲಿ ಈಗ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್ ಕೂಡ ಸೇರ್ಪಡೆಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ಇಂದಿರಾ ಕ್ಯಾಂಟೀನ್ಗಳು ಮಂಜೂರಾಗಿದ್ದವು. ಆದರೆ ಇದೀಗ ಕಾರ್ಯಾಚರಿಸುತ್ತಿರುವುದು 5 ಕ್ಯಾಂಟೀನ್ಗಳು ಮಾತ್ರ. ಮಂಜೂರಾದ 10 […]

ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ‌ ಭಾರೀ ಮಳೆ..ಹವಾಮಾನ ಇಲಾಖೆಯಿಂದ ಎಚ್ಚರ!

Wednesday, July 11th, 2018
karavali

ಮಂಗಳೂರು: ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿರಾಮ ಪಡೆದಿದ್ದ ಮಳೆರಾಯ ಮತ್ತೆ ಅಬ್ಬರಿಸತೊಡಗಿದ್ದಾನೆ . ಎರಡು ದಿನಗಳಿಂದ ಕರಾವಳಿಯಲ್ಲಿ ಮುಂಗಾರು ಕ್ಷೀಣಗೊಂಡಿತ್ತು. ಆದರೆ ಇಂದು ಮಳೆ ಅಬ್ಬರ ಮತ್ತೇ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾನೆಯಿಂದ ಜಡಿ ಮಳೆ ಆರಂಭಗೊಂಡಿದೆ. ಪರಿಣಾಮ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಮಂಗಳೂರಿನಾದ್ಯಂದ ಮಳೆ ಸುರಿಯುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದ ಘಟನೆಗಳು […]

ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ…11 ದಿನಗಳಲ್ಲಿ 3 ಕೆ.ಜಿ. ತೂಕ ಇಳಿಸಿಕೊಂಡ ಸಿದ್ದರಾಮಯ್ಯ!

Wednesday, June 27th, 2018
siddaramaih

ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಯಲಯದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 11 ದಿನಗಳಲ್ಲಿ 3 ಕೆ.ಜಿ. ತೂಕ ಇಳಿಸಿಕೊಂಡಿದ್ದಾರೆ. 12 ದಿನಗಳ ಪ್ರಕೃತಿ ಚಿಕಿತ್ಸೆಗಾಗಿ ದಾಖಲಾಗಿರುವ ಸಿದ್ದರಾಮಯ್ಯ ಇಂದು ಕೊನೆಯ ದಿನದ ಚಿಕಿತ್ಸೆ ಪಡೆಯಲಿರುವ ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ಚಿಕಿತ್ಸಾಲಯದಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅಲ್ಲಿಂದ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.

13 ಅಡಿ ಕಾಳಿಂಗ ಸರ್ಪವನ್ನು ಹಿಡಿದು ಚಾರ್ಮಾಡಿ ಘಾಟ್ ಗೆ ಬಿಟ್ಟ ಉರಗ ತಜ್ಞ ಜಾಯ್ ಮಸ್ಕರೇನಸ್!

Monday, June 18th, 2018
mangaluru

ಮಂಗಳೂರು: ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ರಸ್ತೆ ಪಕ್ಕದ ಬೇಲಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಹದಿಮೂರು ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ತಜ್ಞರು ರಕ್ಷಿಸಿದ್ದಾರೆ. ಕಾಳಿಂಗ ಸರ್ಪವು ಸವಣಾಲು- ಅಯಿಲಹದಿಮೆ ರಸ್ತೆಯಲ್ಲಿ ಬೇಲಿಯಿಂದ ಹೊರಬರಲು ಹೆಣಗುತ್ತಿದ್ದ ಕಾಳಿಂಗ ಸರ್ಪವನ್ನು ಗ್ರಾಮಸ್ಥರು ನೋಡಿದ್ದಾರೆ. ಆ ಕೂಡಲೇ ಉರಗ ತಜ್ಞ ಜಾಯ್ ಮಸ್ಕರೇನಸ್ (ಸ್ನೇಕ್ ಜಾಯ್ ಅಂತಲೇ ಹೆಸರುವಾಸಿ)ಗೆ ವಿಷಯ ತಲುಪಿಸಿದ್ದಾರೆ. ಹಾವು ಹಿಡಿಯುವ ಕೋಲು ಹಾಗೂ ಚೀಲದೊಂದಿಗೆ ಜಾಯ್ ಸ್ಥಳಕ್ಕೆ ತಲುಪಿದ್ದಾರೆ. ಅಪಾಯಕಾರಿ ವಿಷಜಂತುವಾದ ಕಾಳಿಂಗ ಸರ್ಪವನ್ನು ಬೇಲಿಯಿಂದ […]

ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಧಾರಾಕಾರ ಮಳೆ‌…ಶಾಲಾ-ಕಾಲೇಜುಗಳಿಗೆ ರಜೆ!

Thursday, June 14th, 2018
heavy-rain

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು ಸುಳ್ಯ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ‌ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ರಾತ್ರಿಯಿಂದ‌ ಈ ಮೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ‌ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ‌ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಕಳೆದ ರಾತ್ರಿಯಿಂದ ಸ್ಥಗಿತಗೊಂಡಿದ್ದ ಚಾರ್ಮಾಡಿ ಘಾಟ್… ಕೊನೆಗೂ ವಾಹನ ಸಂಚಾರಕ್ಕೆ ಮುಕ್ತ..!

Tuesday, June 12th, 2018
gatt-belthangady-2

ಬೆಳ್ತಂಗಡಿ: ಕಳೆದ ರಾತ್ರಿಯಿಂದ ಸ್ಥಗಿತಗೊಂಡಿದ್ದ ಚಾರ್ಮಾಡಿ ಘಾಟ್ ಕೊನೆಗೂ ಜನ ಸಂಚಾರಕ್ಕೆ ಮುಕ್ತವಾಗಿದೆ. ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನ ಎರಡನೇ ಹಾಗೂ ಮೂರನೇ ತಿರುವಿನಲ್ಲಿ ಗುಡ್ಡ ಕುಸಿದ ಪರಿಣಾಮ ನಿನ್ನೆ ರಾತ್ರಿಯಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪರಿಣಾಮ ಕಳೆದ ರಾತ್ರಿಯಿಂದ ನೂರಾರು ವಾಹನಗಳು ಘಾಟಿಯಲ್ಲಿಯೇ ಸಿಲುಕಿಕೊಂಡಿದ್ದವು. ರಸ್ತೆಗೆ ಬಿದ್ದಿದ್ದ ಭಾರೀ ಪ್ರಮಾಣದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಘಾಟಿಯಲ್ಲಿ ಸಿಲುಕಿದ್ದ ವಾಹನಗಳು ನಿಧಾನವಾಗಿ ಸಂಚಾರ ಆರಂಭಿಸಿವೆ. ಚಾರ್ಮಾಡಿ ಘಾಟಿ ವಾಹನ ಸಂಚಾರಕ್ಕೆ ಮುಕ್ತವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ […]

ಚಾರ್ಮಾಡಿ ಗುಡ್ಡ ಕುಸಿತ..ವಾಹನ ಸಂಚಾರ ಸ್ಥಗಿತ..!

Tuesday, June 12th, 2018
charmudi-ghat

ಮಂಗಳೂರು: ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ರಸ್ತೆ ಗೆ ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣ ಸಾಧ್ಯವಾಗದೆ ಸಂಕಷ್ಟದಲ್ಲಿರುವ ಸಣ್ಣ ಮಕ್ಕಳು, ವೃದ್ದರ ನೆರವಿಗೆ ಧರ್ಮಸ್ಥಳ , ಬೆಳ್ತಂಗಡಿ ಪೊಲೀಸರು ಆಹಾರ ಒದಗಿಸುವ ವ್ಯವಸ್ಥೆ ಮಾಡಿದ್ದಾರೆ. ಮತ್ತೊಂದೆಡೆ ಗುಡ್ಡ ಕುಸಿತದಿಂದ ರಸ್ತೆ ಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುತ್ತಿದ್ದಾರೆ.

ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Saturday, May 12th, 2018
Anni Acharya

ಬೆಳ್ತಂಗಡಿ :  ತಾಲೂಕಿನ ಅಂಡಿಜೆ ಗ್ರಾಮದ ಶಾಲೆಯಲ್ಲಿ ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಜಾರಿಗೆದಡಿ ನಿವಾಸಿ ಅಣ್ಣಿ ಅಚಾರ್ಯ(70) ಹೃದಯಾಘಾತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮತದಾನ ಮಾಡಲು ತೆರಳಿದ್ದ ಶಾಲೆಯ ಮುಂಭಾಗದಲ್ಲಿ ಹೃದಯಘಾತವಾಗಿ ಕುಸಿದುಬಿದ್ದು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.