Blog Archive

ವಿಧಾನ ಸಭೆ ಚುನಾವಣೆಯ ಪೂರ್ವತಯಾರಿಯಾಗಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸಚಿವ ರೈ ಚಾಲನೆ

Saturday, September 23rd, 2017
Mane manege congress

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಬೆಳಗೆ ಮಂಗಳೂರಿನಲ್ಲಿ ಸಚಿವ ರಮಾನಾಥ ರೈ ಅವರು ಚಾಲನೆ ನೀಡಿದರು. ಇನ್ನು ಕೆಲವೇ ತಿಂಗಳೊಳಗೆ ರಾಜ್ಯ ವಿಧಾನ ಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ  ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಕರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ […]

ಕಲ್ಲಡ್ಕ ಪ್ರಭಾಕರ್ ಭಟ್ ಸರಕಾರಕ್ಕೆ ಅನ್ನನೀಡಲು ಪತ್ರ ಬರೆದರೆ, ಕೊಡಿಸುವ ಜವಾಬ್ದಾರಿ ನನ್ನದು : ರಮಾನಾಥ ರೈ

Monday, August 14th, 2017
Ramanatha Rai

ಮಂಗಳೂರು :  ಕಲ್ಲಡ್ಕ ಪ್ರಭಾಕರ್ ಭಟ್ ಇಂದೇ ಒಂದು ಅರ್ಜಿ ನೀಡಿ ಅಕ್ಷರ ದಾಸೋಹ ಯೋಜನೆಯಡಿ ಅನ್ನನೀಡಲು ಪತ್ರ ಬರೆದರೆ, ಆ ಮಕ್ಕಳಿಗೆ ಅನ್ನದಾನದ ವ್ಯವಸ್ಥೆ ಮಾಡುವ ಜವಾಬ್ದಾರಿ ನನ್ನದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಷರದಾಸೋಹದಲ್ಲಿ ಎಲ್ಲಾ ಶಾಲೆಗಳಿಗೆ ಸರಕಾರವೇ ಅನ್ನ ನೀಡುತ್ತಿದೆ. ಆದರೆ, ಕಲ್ಲಡ್ಕ ಶಾಲೆಗೆ ಅಕ್ಷರದಾಸೋಹ ಬೇಡ ಎಂದು ಲಿಖಿತವಾಗಿ ಹೇಳಿದವರು ಕಲ್ಲಡ್ಕ ಪ್ರಭಾಕರ ಭಟ್ಟರು. ಹಿಂದಿನ ಸರಕಾರ ನಿಯಮಗಳನ್ನು ಮೀರಿ ಈ ಎರಡು […]

ನೀರಿಗಾಗಿ ಅರಣ್ಯ ಎಂಬ ಧ್ಯೇಯ ವಾಕ್ಯದೊಂದಿಗೆ ವನಮಹೋತ್ಸವ : ರಮಾನಾಥ ರೈ

Tuesday, July 11th, 2017
Vanamahotsava

ಮಂಗಳೂರು : ದ.ಕ.ಜಿಲ್ಲಾ ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಸೋಮವಾರ ನಗರದ ಕದ್ರಿ ಮಲ್ಲಿಕಟ್ಟೆಯ ಸರಕಾರಿ ಪ್ರವಾಸಿ ಮಂದಿರದ ಬಳಿ ನಡೆಯಿತು. ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,ಜಾಗತಿಕ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಪ್ರಾಕೃತಿಕ ಅಸಮತೋಲನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಲ್ಲಿಯೂ ಪರಿಸರ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಈ ಬಾರಿ ನೀರಿಗಾಗಿ ಅರಣ್ಯ ಎಂಬ ಧ್ಯೇಯ ವಾಕ್ಯದೊಂದಿಗೆ […]

ನಗರದಲ್ಲಿ ಜುಲೈ 7 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Monday, July 3rd, 2017
Rai

ಮಂಗಳೂರು : ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಜುಲೈ 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆ ಮಾಡಬೇಕು ಎಂಬ ಉದ್ದೇಶದಿಂದ ಜು.7ರಂದು ಅಪರಾಹ್ನ 3 ಗಂಟೆಗೆ ಅಡ್ಯಾರ್ ನಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವರು ಎಂದವರು ಹೇಳಿದ್ದಾರೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, […]

ತಾನೊಬ್ಬ ಸರ್ವಧರ್ಮ ಪ್ರೇಮಿ ಎಂದು ರೈ ಬಿಂಬಿಸುವುದು ಓಟಿಗಾಗಿ ಮಾತ್ರ : ಹರಿಕೃಷ್ಣ ಬಂಟ್ವಾಳ

Wednesday, June 28th, 2017
Harikrishna Bantwal

ಮಂಗಳೂರು : ತಾನೊಬ್ಬ ಸರ್ವಧರ್ಮ ಪ್ರೇಮಿ ಎಂದು ಹೇಳುವ ಸಚಿವ ರಮಾನಾಥ ರೈ, ವಾಸ್ತವದಲ್ಲಿ ಹೃದಯದಿಂದ ಯಾರನ್ನೂ ಪ್ರೀತಿಸುವುದಿಲ್ಲ. ಸಾಮರಸ್ಯವನ್ನು ಬಯಸುವುದಿಲ್ಲ. ಒಂದು ವೇಳೆ ಎಲ್ಲರನ್ನೂ ಪ್ರೀತಿಸಿ, ಸಾಮರಸ್ಯ ಬಯಸುವವರಾಗಿದ್ದರೆ ನಾಲ್ಕು ವರ್ಷದ ಅವಧಿಯಲ್ಲಿ ಎಲ್ಲಾ ಧರ್ಮಗಳ ದರ್ಮಗುರುಗಳನ್ನು ಕರೆಸಿ ಸಾಮರಸ್ಯ ಸಭೆ ನಡೆಸುತ್ತಿದ್ದರು. ಆದರೆ ಅವರು ಧರ್ಮಗುರುಗಳ ಬಳಿ ಹೋಗುವುದು ಓಟಿಗಾಗಿ ಮಾತ್ರ ಎಂದು ಸಾಮಾಜಿಕ ಮುಂದಾಳು ಹರಿಕೃಷ್ಣ ಬಂಟ್ವಾಳ ಆರೋಪಿಸಿದ್ದಾರೆ. ಪತ್ರಿಕಾಘೋಷ್ಠಿಯಲ್ಲಿ  ಮಾತನಾಡಿದ  ಬಂಟ್ವಾಳ್ ಮುಸ್ಲಿಮರನ್ನು ಓಲೈಸಲು ಅಧಿಕಾರಿಗಳನ್ನು ಕರೆಯಿಸಿ ತನಗೆ ಬೇಕಾದ ಹಾಗೆ […]

ರಮಾನಾಥ ರೈ ವರ್ಚಸ್ಸನ್ನು ಕುಗ್ಗಿಸಲು ಬಿಜೆಪಿ ಮತ್ತು ಸಂಘ ಪರಿವಾರ ಪ್ರಯತ್ನ ಮಾಡುತ್ತಿವೆ : ಮಿಥುನ್ ರೈ

Wednesday, June 21st, 2017
mithun

ಮಂಗಳೂರು : ಪ್ರಚೋದನಾಕಾರಿ ಭಾಷಣ ಮಾಡುವವರನ್ನು ಬಂಧಿಸಲು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ.  ಸಚಿವ ರಮಾನಾಥ ರೈ ವರ್ಚಸ್ಸನ್ನು ಕುಗ್ಗಿಸಲು ಬಿಜೆಪಿ ಮತ್ತು ಸಂಘ ಪರಿವಾರ ಪ್ರಯತ್ನ ಮಾಡುತ್ತಿವೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಮಾತನಾಡಿದ ಮಿಥುನ್, ಕಾಂಗ್ರೆಸ್‌ಗೆ ಶಾಂತಿ ಮುಖ್ಯ,  ಜಿಲ್ಲೆಯ ಅಬಿವೃದ್ಧಿ ಕಾಪಾಡುವ ದೃಷ್ಟಿಯಿಂದ ರಮಾನಾಥ ರೈ ನೀಡಿರುವ ಸೂಚನೆಯನ್ನೇ ಅಪರಾಧ ಎಂಬಂತೆ ಬಿಂಬಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ […]

ಡಾ.ಜಿ.ಪರಮೇಶ್ವರ್ ಮರು ಆಯ್ಕೆ- ರಮಾನಾಥ ರೈ ಭೇಟಿ

Thursday, June 8th, 2017
Parameshwara

ಮಂಗಳೂರು :  ಕೆಪಿಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಗೊಂಡಿರುವ ಗೃಹಸಚಿವ ಡಾ,ಜಿ. ಪರಮೇಶ್ವರ್ ಅವರನ್ನು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಗುರುವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದರು. ರಾಜ್ಯ ಸರಕಾರದ ವಿವಿಧ ಯೋಜನೆಗಳು ದ.ಕ.ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರುವ ಬಗ್ಗೆ ಡಾ.ಜಿ. ಪರಮೇಶ್ವರ್ ಅವರು ಅರಣ್ಯ ಸಚಿವರನ್ನು ಶ್ಲಾಘಿಸಿದರು. ದ.ಕ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಬಲಪಡಿಸುವ ಬಗ್ಗೆ  ಉಭಯ ನಾಯಕರು ಚರ್ಚೆ ನಡೆಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಸಾಮಾನ್ಯರಿಗೆ […]

ಪುರಭವನದಲ್ಲಿ ಜನಮನ-ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ

Saturday, May 20th, 2017
Janamana

ಮಂಗಳೂರು : ದ.ಕ.ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ನಗರದ ಪುರಭವನದಲ್ಲಿ  ‘ಜನಮನ-ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ’ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ಅನೇಕ ಜನಪರ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದು, ಅವೆಲ್ಲವೂ ಸ್ವಾಭಿಮಾನದ ಬದುಕಿಗೆ ಪೂರಕವಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ರಾಜ್ಯ ಸರಕಾರ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರ ಜೊತೆ ಏರ್ಪಡಿಸಿದ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣಾ ಸಂದರ್ಭ ನೀಡಿದ ಸಾಕಷ್ಟು […]

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ಶಿಕ್ಷಕರ ತರಬೇತಿ ಕಾರ್ಯಕ್ರಮ

Friday, February 3rd, 2017
yoga-training-centre

ಮಂಗಳೂರು: ಯೋಗದಿಂದ ಜನರು ನೆಮ್ಮದಿಯುತ ಆರೋಗ್ಯಕರ ಜೀವನವನ್ನು ಕಂಡುಕೊಳ್ಳಲು ಸಾಧ್ಯವಾಗಿದ್ದು, ಯೋಗದ ಮಹತ್ವವನ್ನು ಇಂದು ಇಡೀ ವಿಶ್ವವೇ ಅರಿತುಕೊಂಡಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾಲಯದ ಮಾನವಪ್ರಜ್ಞೆ ಮತ್ತು ಯೋಗವಿಜ್ಞಾನ ವಿಭಾಗ ಹಾಗೂ ಧರ್ಮನಿಧಿ ಯೋಗಪೀಠ ಆಶ್ರಯದಲ್ಲಿ ಸೌತ್ ಕೋರಿಯಾದ ವಾಂಕ್ವಾಂಗ್ ಡಿಜಿಟಲ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಂಗಳೂರು ವಿವಿಯಲ್ಲಿ ಐದು ದಿನಗಳ ಕಾಲ ಆಯೋಜಿಸಿರುವ ‘ಅಂತಾರಾಷ್ಟ್ರೀಯ ಯೋಗ ಶಿಕ್ಷಕರ ತರಬೇತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]

ವಾಹನಗಳ ಹೊಗೆ ಪರೀಕ್ಷಣಾ ಸಂಚಾರಿ ವಾಹನಕ್ಕೆ ರಮಾನಾಥ ರೈ ಚಾಲನೆ

Saturday, January 7th, 2017
Ramanatha Rai

ಮಂಗಳೂರು: ವಾಹನಗಳ ಹೊಗೆ ಪರೀಕ್ಷಣಾ ಸಂಚಾರಿ ವಾಹನಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಶುಕ್ರವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಗರದಲ್ಲಿ ಶೇ.60 ರಷ್ಟು ಮಾಲಿನ್ಯ ವಾಹನಗಳು ಹೊರಸೂಸುವ ಹೊಗೆಯಿಂದಾಗಿ ಆಗುತ್ತಿದೆ. ಹಳೆಯ ವಾಹನಗಳನ್ನು ಹೆಚ್ಚಾಗಿ ಬಳಸುವುದು ಕೂಡ ಒಂದು ಕಾರಣ. ಪ್ರತಿಯೊಬ್ಬರಲ್ಲಿ ಮಾಲಿನ್ಯದಿಂದಾಗುವ ಅಪಾಯದ ಅರಿವು ಉಂಟಾಗಬೇಕು. ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯಕ್ರಮಗಳ ಜೊತೆಗೆ ಜನತೆಯೂ ಸಹಕಾರವೂ ಅಗತ್ಯವಿದೆ. ಹಾಗಾಗಿ ಈ ಬಾರಿ ಜಿಲ್ಲೆಯ ಅರಣ್ಯ ಭಾಗದ ಸುಮಾರು 2 […]