ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ: 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Friday, September 21st, 2018ಉಡುಪಿ: ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಕಡಲ ತೀರದ ಬಳಿ ನಡೆದಿದೆ. ಸಾಗರದಿಂದ ಭಟ್ಕಳ ಮೂಲಕ ಕುಂದಾಪುರಕ್ಕೆ ಬರುತ್ತಿದ್ದ ಬಸ್ಸು ಮತ್ತು ಹುಬ್ಬಳ್ಳಿಯತ್ತ ಸಾಗುತ್ತಿದ್ದ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡು ಬಸ್ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳು ಪ್ರಯಾಣಿಕರನ್ನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಗಂಗೊಳ್ಳಿ ಪೊಲೀಸ್ […]