Blog Archive

ಇಂದೇ ಸಾಲಮನ್ನಾ ಘೋಷಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಎಸ್.ಯಡಿಯೂರಪ್ಪ

Friday, May 25th, 2018
yedeyurappa

ಬೆಂಗಳೂರು: ಇಂದಿನ ಅಧಿವೇಶನದಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡಲಿಲ್ಲವೆಂದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು. ವಿಧಾನಸಭೆ ಕಲಾಪಕ್ಕೆ ತೆರಳುವ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಈಗ ಬಹುಮತ ಇಲ್ಲ ಸಾಲಮನ್ನಾ ಮಾಡಲಾಗಲ್ಲ ಎಂಬ ಮಾತುಗಳನ್ನು ಆಡುತ್ತಿದ್ದಾರೆ, ಆದರೆ ನಾವು ಹಾಗಾಗಲು ಬಿಡುವುದಿಲ್ಲ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದರು. ಜೆಡಿಎಸ್-ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ, ಉಲ್ಲಂಘಿಸುವಂತಿಲ್ಲ ‘ಬಿಜೆಪಿಯ ಎಲ್ಲ ಶಾಸಕರು ಸಿಂಹದ ಮರಿಗಳಂತೆ ವಿಧಾನಸಭೆಯಲ್ಲಿ ಕೂತು ಸರ್ಕಾರದ […]

ಮೊದಲ ಸುದ್ದಿಗೋಷ್ಠಿಯಲ್ಲೇ ಉಪಮುಖ್ಯಮಂತ್ರಿ ಯನ್ನು ದೂರ ಇಟ್ಟ ಕುಮಾರಸ್ವಾಮಿ

Thursday, May 24th, 2018
Kumaraswamy Parameshwara

ಬೆಂಗಳೂರು : ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಅವಕಾಶ ನೀಡದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಹಂಕಾರಿ, ಸರ್ವಾಧಿಕಾರಿ ವರ್ತನೆವುಳ್ಳವರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದು, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಕುಮಾರಸ್ವಾಮಿ ಏಕೆ ಅವಕಾಶ ನೀಡಲಿಲ್ಲ […]

ಬಿಜೆಪಿ ನಾಯಕರು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ: ಕುಮಾರಸ್ವಾಮಿ

Thursday, May 24th, 2018
janatha-dal

ಬೆಂಗಳೂರು: ಬುಧವಾರ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿ ಕಾರಿದರು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ನಾಯಕರು ನಮ್ಮ ಮೇಲೆ ಟೀಕೆ ಮಾಡುವುದನ್ನ ಬಿಡಬೇಕು ಅದರಲ್ಲೇ ಕಾಲ ಕಳೆಯಬಾರದು ಎಂದು ಟಾಂಗ್ ನೀಡಿದರು. ಇನ್ನು […]

ಮಾತು ತಪ್ಪಿದರೆ ಕುಮಾರಸ್ವಾಮಿಗೆ ತಕ್ಕ ಪಾಠ: ರೈತ ಸಂಘ ಎಚ್ಚರಿಕೆ

Wednesday, May 23rd, 2018
formers

ಮೈಸೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹೆಚ್‌‌. ಡಿ. ಕುಮಾರಸ್ವಾಮಿ, ಮಾತು ತಪ್ಪದೇ ರೈತರ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿವೆ. ನ್ಯಾಯಾಲಯದ ಮುಂಭಾಗವಿರುವ ಪಾರ್ಕ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕೃಷಿಕರು, ಜೆಡಿಎಸ್ ಪಕ್ಷಕ್ಕೆ ಮತದಾರರು ಬಹುಮತ ನೀಡದೇ ಇರಬಹುದು. ಆದರೆ, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡವರು ರಾಜ್ಯದ ರೈತರ ಹಿತದೃಷ್ಟಿಯಿಂದ ಸಾಲ ಮನ್ನಾಕ್ಕೆ ಎಲ್ಲ ಸಹಕಾರ ನೀಡುತ್ತಾರೆ. ಎಲ್ಲರ ಸಹಕಾರ ಪಡೆದು ರೈತರ ಸಾಲ ಮಾಡಬೇಕು ಎಂದು […]

ಕುಮಾರಸ್ವಾಮಿ ಪ್ರಮಾಣವಚನ… ಇಂದು ಮಂಗಳೂರು ನಗರ ಸ್ತಬ್ಧ

Wednesday, May 23rd, 2018
peace-mangaluru

ಮಂಗಳೂರು: ಇಂದು ಮುಖ್ಯಮಂತ್ರಿಯಾಗಿ ಹೆಚ್‌‌.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮಂಗಳೂರು ನಗರದಲ್ಲಿ ಕಲಂ 35 ರ ಅನ್ವಯ ನಿರ್ಬಂಧ ಆಜ್ಞೆಯನ್ನು ಹೊರಡಿಸಲಾಗಿದೆ. ಮಂಗಳೂರು ಪೊಲೀಸ್ ಕಮೀಷನರ್ ವಿಪುಲ್ ಕುಮಾರ್ ನಿರ್ಬಂಧ ಆಜ್ಞೆಯನ್ನು ಹೊರಡಿಸಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಯಿಂದ ನಾಳೆ ಸಂಜೆ 6 ಗಂಟೆವರೆಗೆ ಈ ನಿರ್ಬಂಧ ಆಜ್ಞೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ವಿಜಯೋತ್ಸವ, ರಾಜಕೀಯ ಸಭೆ ಸಮಾರಂಭ‌ಗಳ ಮೇಲೆ ನಿಷೇಧ ಹೇರಲಾಗಿದೆ.

ಹೆಚ್‌ಡಿಕೆ ಪಾಲಿಗೆ ಬಿಸಿ ತುಪ್ಪವಾಗುವುದೇ ರೈತರ ಸಂಪೂರ್ಣ ಸಾಲ ಮನ್ನಾ ಭರವಸೆ!?

Wednesday, May 23rd, 2018
kumarswamy

ಬೆಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಬ್ಯಾಂಕಿನಲ್ಲಿರುವ ರೈತರ 51 ಸಾವಿರ ಕೋಟಿ ಮತ್ತು ಸ್ತ್ರೀಶಕ್ತಿ ಸಂಘದ 4,300 ಕೋಟಿ ರೂ. ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದ ನಿಯೋಜಿತ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈಗ ದೊಡ್ಡ ಇಕ್ಕಟ್ಟಿಗೆ ಸಿಲುಕಿದ್ದಾರೆ. ಹೆಚ್‌ಡಿಕೆ ಅಧಿಕಾರಕ್ಕೆ ಬರುವ ಮೊದಲು ಹೇಳಿಕೊಂಡಿದ್ದ ಮಾತು ಇದೀಗ ಆಚರಣೆಗೆ ತೆರಲೇಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದೆ. ಮಿತ್ರಪಕ್ಷವಾದ ಕಾಂಗ್ರೆಸ್‌ಅನ್ನು ಮೊದಲ ವಿಚಾರದಲ್ಲಿಯೇ ಎದುರು ಹಾಕಿಕೊಳ್ಳಬೇಕಾದ ಸ್ಥಿತಿ ಎದುರಾಗಿದೆ. ಸಾಲ […]

ಸ್ಥಿರ ಸರ್ಕಾರ ರಚನೆಗೆ ಹೆಚ್‌ಡಿಕೆ ಕಾರ್ಯತಂತ್ರ!

Tuesday, May 22nd, 2018
jds-kumarswamy

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಯಾವುದೇ ವಿವಾದ, ಗೊಂದಲಗಳಿಗೆ ಅವಕಾಶ ಕೊಡದೆ ಐದು ವರ್ಷಗಳ ಸ್ಥಿರ ಸರ್ಕಾರ ನೀಡಬೇಕೆಂದು ಹೆಚ್.ಡಿ. ಕುಮಾರಸ್ವಾಮಿಯವರು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಸರ್ಕಾರ ರಚನೆ, ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಐದು ವರ್ಷಗಳ ಕಾಲ ಸುಗಮವಾಗಿ ಸರ್ಕಾರ ನೀಡಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮುಂದಾಗಿದ್ದಾರೆ. ಅಧಿಕಾರ ಹಂಚಿಕೆಯಲ್ಲಿ ತುಸು ಎಡವಟ್ಟು ಮಾಡಿಕೊಂಡರೂ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಅರಿತಿರುವ ಉಭಯ ಪಕ್ಷಗಳ ನಾಯಕರು ಅಂತಹ […]

ಯಾರಿಗೂ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ: ಆನಂದ್‌ ಸಿಂಗ್‌ಗೆ ಡಿಕೆಶಿ ಮನವರಿಕೆ?

Tuesday, May 22nd, 2018
anand-singh

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮೂರು ತಿಂಗಳ ಮೊದಲು ಬಿಜೆಪಿ ಬಿಟ್ಟು ಕಾಂಗ್ರೆಸ್‌‌ ಸೇರಿಕೊಂಡು, ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್‌ಗೆ ಕಾಂಗ್ರೆಸ್‌ ಮುಖಂಡ ಡಿಕೆಶಿ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಹಿಲ್ಟನ್‌ ಹೋಟೆಲ್‌ನಲ್ಲಿ ತಂಗಿರುವ ಕಾಂಗ್ರೆಸ್‌ ನಾಯಕರ ಭೇಟಿಗೆ ತೆರಳಿದ್ದ ಡಿಕೆಶಿ, ಶಾಸಕ ಆನಂದ್‌ ಸಿಂಗ್‌ ಜತೆಗೆ ಪ್ರತ್ಯೇಕ ಮಾತುಕತೆ ನಡೆಸಿದರು. ನಿಮಗೆ ಯಾವುದೇ ಬೆದರಿಕೆ ಬಂದರೂ ನಿಮ್ಮ ಬೆಂಬಲಕ್ಕೆ ಇರುತ್ತೇವೆ. ನೀವು ಭಯಪಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆನಂದ್‌ […]

ಕುಮಾರಸ್ವಾಮಿಗೆ ಮುಖ್ಯಮಂತ್ರಿ ಪಟ್ಟ-ಜೆಡಿಎಸ್-ಕೈ ಕಾರ್ಯಕರ್ತರಿಂದ ಮಂಗಳೂರಿನಲ್ಲಿ ಸಂಭ್ರಮಾಚರಣೆ

Saturday, May 19th, 2018
jds

ಮಂಗಳೂರು: ರಾಜ್ಯಪಾಲ ವಜುಭಾಯಿ ವಾಲ ಅವರು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟ ಕ್ಕೆ ಅಹ್ವಾನ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜೆ‌ಡಿಎಸ್ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮಂಗಳೂರಿನ ಬೆಂದೂರ್‌‌ವೆಲ್‌‌ನಲ್ಲಿರುವ ಜೆಡಿಎಸ್ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ, ‌ಕುಮಾರಸ್ವಾಮಿಗೆ ಜೈಕಾರ ಹಾಕುತ್ತ ಸಿಹಿ ವಿತರಿಸಿ ಸಂಭ್ರಮಿಸಿದರು. ಇನ್ನು ನಗರದ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌‌ಗೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ, ಸಿಹಿ […]

ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ವಿಧಾನಸೌಧಕ್ಕೆ ಆಗಮನ..!

Saturday, May 19th, 2018
anand-singh-cngrs

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಶಾಸಕ ಆನಂದ್ ಸಿಂಗ್ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ. ವಿಶ್ವಾಸಮತ ಯಾಚನೆಗೆ ಸಮಯ ನಿಗದಿಯಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನಸೌಧ ಆವರಣಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಆನಂದ್ ಸಿಂಗ್ ಅವರನ್ನು ಕೈಹಿಡಿದುಕೊಂಡು ಡಿಕೆಶಿ ವಿಧಾನಸಭೆಗೆ ಕರೆದೊಯ್ದರು. ವಿಧಾನಸೌಧದೊಳಕ್ಕೂ ಡಿಕೆಶಿ ಕೈಹಿಡಿದುಕೊಡೇ ಸಾಗಿದ ಶಾಸಕ ನಾಗೇಂದ್ರ ಅವರು ಹಿರಿಯ ಕಾಂಗ್ರೆಸ್ ಮುಖಂಡರಿಗೆ ವಿಶ್ ಮಾಡಿದರು. ಬಳಿಕ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರಿಗೂ ವಿಶ್ ಮಾಡಿ ನಾನಿದ್ದೇನೆ ಎಂದು […]