ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ : ಸಚಿವ ಯು.ಟಿ.ಖಾದರ್
Tuesday, March 18th, 2014ಶಿವಮೊಗ್ಗ : ಇತ್ತೀಚೆಗೆ ರಾಜ್ಯದ ನಾಲ್ಕಾರು ಜಿಲ್ಲೆಗಳಲ್ಲಿ ಕಂಡುಬಂದಿರುವ ಮಂಗನಕಾಯಿಲೆ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗುವುದೆಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಹೇಳಿದರು. ಅವರು ಸೋಮವಾರ ತೀರ್ಥಹಳ್ಳಿಯ ತಾಲೂಕು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಕಾಯಿಲೆಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು. ವಿಶೇಷವಾಗಿ ಈ ಕಾಯಿಲೆಯು ಅರಣ್ಯಗಳಲ್ಲಿ ವಾಸಿಸುವ ವನವಾಸಿಗಳಲ್ಲೇ ಕಂಡುಬರುತ್ತಿರುವುದರಿಂದ ಮಲೆನಾಡಿನ ಅರಣ್ಯ ಪ್ರದೇಶಗಳಲ್ಲಿವಾಸಿಸುವ ಹಾಗೂ ಕಾಯಿಲೆ ಪೀಡಿತರಿಗೆ […]