Blog Archive

ಸದಾ ನಾಟಿ ಕೋಳಿ, ಮಟನ್ ಸಾರನ್ನೇ ನೆಚ್ಚಿಕೊಂಡಿದ್ದ ಮಾಜಿ ಸಿಎಂ ಈಗ ಶುದ್ಧ ಸಸ್ಯಹಾರಿ..!

Wednesday, June 20th, 2018
siddaramaih

ಮಂಗಳೂರು: ನಾಟಿ ಕೋಳಿ, ಬನ್ನೂರು ಮಟನ್ ಹಾಗು ಪಾಯ ಸೂಪ್ ಎಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಪ್ರಾಣ. ಮುಂಜಾನೆ ಅವರಿಗೆ ಪಾಯ ಸೂಪ್ ಬೇಕೇ ಬೇಕು. ಹೆಚ್ಚಾಗಿ ಮಾಂಸಾಹಾರಕ್ಕೆ ಒಲವು ತೋರುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಆಪ್ಪಟ ಸಸ್ಯಹಾರಿ. ಅರೆರೆ ಇದು ಹೇಗೆ ಸಾಧ್ಯ ಎಂಬ ಕುತೂಹಲವೇ? ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿ ವನದಲ್ಲಿ ಪ್ರಾಕೃತಿಕ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಈಗ ಸಸ್ಯಹಾರಿಯಾಗಿ ಬದಲಾಗಿದ್ದಾರೆ. ಸದಾ ನಾಟಿ ಕೋಳಿ, ಮಟನ್ ಸಾರನ್ನೇ ನೆಚ್ಚಿಕೊಂಡಿದ್ದ ಮಾಜಿ […]

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ರೇವಣ್ಣ!

Tuesday, June 19th, 2018
h-d-revanna

ಮಂಗಳೂರು: ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರೇವಣ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಲ್ಲಾ ಪ್ರವಾಸದಲ್ಲಿರುವ ರೇವಣ್ಣ ಅವರು ಧರ್ಮಸ್ಥಳ ಪ್ರಕೃತಿ ಚಿಕಿತ್ಸಾಲಯದಲ್ಲಿ ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಸಚಿವ ರೇವಣ್ಣ ಅವರು ಗುಡ್ಡ ಕುಸಿತದಿಂದ ಸಮಸ್ಯೆಗಳೊಗಾದ ಚಾರ್ಮಾಡಿ ಘಾಟಿಯನ್ನು ವೀಕ್ಷಿಸಿದರು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಆ ಕಾರು ನನಗೆ ಬೇಕು: ಸಚಿವ ಜಮೀರ್ ಅಹ್ಮದ್

Tuesday, June 19th, 2018
jameer-ahmed

ಬೆಂಗಳೂರು: ಸಿದ್ದರಾಮಯ್ಯ ಅಂದ್ರೆ ನನಗಿಷ್ಟ, ಅವರ ಕಾರನ್ನೇ ಕೊಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಜಮೀರ್ ಅಹ್ಮದ್ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಆ ಕಾರು ನನಗೆ ಬೇಕು. ಫಾರ್ಚೂನರ್ ಕಾರು ನನಗೆ ಕೊಡಿ ಎಂದು ಜಮೀರ್ ಅಹ್ಮದ್ ಡಿಪಿಎಆರ್ ಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಂ- 01, ಜಿ 5734 ನಂಬರಿನ ಫಾರ್ಚೂನರ್ ಕಾರು ಬಳಸುತ್ತಿದ್ದರು. ಈಗ ಅದೇ ಕಾರು ಬೇಕು ಎಂದು ಜಮೀರ್ ಪಟ್ಟು […]

ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಕಂಟಕ..!

Monday, June 18th, 2018
siddaramaih

ಬೆಂಗಳೂರು: ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಕಂಟಕ ಎದುರಾಗಿದೆ. ಮಾಜಿ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸಲು ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ 25 ವರ್ಷಗಳಷ್ಟು ಹಳೆಯದಾದ ಪ್ರಕರಣಕ್ಕೆ ಈಗ ಮತ್ತೆ ಮರುಜೀವ ಬಂದಿದೆ. ವಿಜಯನಗರ 2ನೇ ಹಂತದಲ್ಲಿ ಅಕ್ರಮವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಉಲ್ಲಂಘಿಸಿ ಸಿದ್ದರಾಮಯ್ಯ ನಿವೇಶನ ಪಡೆದಿದ್ದರು. ಸಿದ್ದರಾಮಯ್ಯ ಡಿಸಿಎಂ ಆಗಿದ್ದ ವೇಳೆ ಈ ಭೂ ಅಕ್ರಮ ನಡೆದಿತ್ತು ಎಂದು ಆರೋಪಿಸಲಾಗಿದೆ. ಅಲ್ಲದೆ, ಸಿಎಂ […]

ವಾರದೊಳಗೆ 30 ಶಾಸಕರಿಗೆ ನಿಗಮ-ಮಂಡಳಿ‌ ಸ್ಥಾನ‌: ಸಿದ್ದರಾಮಯ್ಯ

Friday, June 15th, 2018
siddaramaih

ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿ ಸ್ಥಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಮುಂದಿನ ಒಂದು ವಾರದೊಳಗೆ ಸಿಎಂ ಹಾಗೂ ಉಪ ಮುಖ್ಯಮಂತ್ರಿಗಳು ಚರ್ಚಿಸಿ 30 ಶಾಸಕರನ್ನು ನೇಮಕ ಮಾಡಲಿದ್ದಾರೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಆದರೆ ಕೆಲ ಶಾಸಕರು ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿರುವುದರಿಂದ ಅವರ ಓಲೈಕೆಗೂ ತೆರೆಯಲ್ಲಿ ಕಸರತ್ತು ನಡೆಯುತ್ತಿದೆ. ಈ ನಡುವೆ ನಿಗಮ-ಮಂಡಳಿ‌ ಸ್ಥಾನಕ್ಕೆ ತೃಪ್ತರಾಗುತ್ತಾರಾ ಎಂಬುವುದು ಕುತೂಹಲ ಮೂಡಿಸಿದೆ.

ಜಯನಗರ ಶಾಸಕಿ ಸೌಮ್ಯ ರೆಡ್ಡಿಯನ್ನು ಅಭಿನಂದಿಸಿದ ಮಾಜಿ ಸಿಎಂ ಸಿದ್ದರಾಮಯ್ಯ!

Thursday, June 14th, 2018
siddaramaih

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರ ಚುನಾವಣೆಯಲ್ಲಿ ಜಯಗಳಿಸಿರುವ ಸೌಮ್ಯ ರೆಡ್ಡಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದರು. ತಮ್ಮ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ್ದ ಸೌಮ್ಯ ರೆಡ್ಡಿ ಅವರನ್ನು ಸಿದ್ದರಾಮಯ್ಯ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬೆಂಗಳೂರು ನಗರದ 28 ಕ್ಷೇತ್ರದ ಪೈಕಿ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಮತದಾರರು ಆಶೀರ್ವಾದ ಮಾಡಿದ್ದಾರೆ. ರಾಜ್ಯದಲ್ಲಿ ಶೇ.38 ರಷ್ಟು ಮತ ಲಭಿಸಿದೆ‌. ಈಗ ಇನ್ನೆರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವೆ. ರಾಜ್ಯದ ಜನತೆಯ ಒಲವು ನಮ್ಮೊಂದಿಗೆ ಇದೆ ಎಂದು ವಿಶ್ವಾಸ […]

ಮುಖ್ಯಮಂತ್ರಿಯಾಗಿ ಇಷ್ಟೆಲ್ಲಾ ಕೆಲಸ ಮಾಡಿದರೂ ಜನತೆ ಯಾಕೆ ಒಪ್ಪಿಕೊಳ್ಳಲಿಲ್ಲ: ಸಿದ್ದರಾಮಯ್ಯ

Wednesday, June 13th, 2018
yathindra

ಮೈಸೂರು: ವಿಧಾನಸಭೆ ಚುನಾವಣೆಯ ಸೋಲಿನಿಂದ ಎದೆಗುಂದಿಲ್ಲ, ಆದರೆ, ಮುಖ್ಯಮಂತ್ರಿಯಾಗಿ ಇಷ್ಟೆಲ್ಲಾ ಕೆಲಸ ಮಾಡಿದರೂ ಜನತೆ ಯಾಕೆ ಒಪ್ಪಿಕೊಳ್ಳಲಿಲ್ಲ ಎಂಬ ನೋವಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಮಂಗಳವಾರ ಏರ್ಪಡಿಸಿದ್ದ ವರುಣಾ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐದು ವರ್ಷಗಳಿಗೊಮ್ಮೆ ಚುನಾವಣೆ ಬರುತ್ತಲೇ ಇರುತ್ತದೆ. ಹೀಗಾಗಿ ಸೋಲು-ಗೆಲುವು ಸಹಜ, ಜನರ ತೀರ್ಪನ್ನು ಸಮಚಿತ್ತದಿಂದ ಸ್ವೀಕರಿಸಬೇಕು. ಚುನಾವಣೆ ಸೋಲು ನನಗೆ ಇದೇ ಮೊದಲೇನಲ್ಲ, ಹಿಂದೆಯೂ […]

ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ಸಹಿತ ಎಲ್ಲ ಭಾಗ್ಯ ಯೋಜನೆಗಳು ಮುಂದುವರಿಯಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

Saturday, June 9th, 2018
siddaramaih

ಬಾದಾಮಿ: ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ಸೇರಿದಂತೆ ಹಿಂದಿನ ಸರ್ಕಾರ ಜಾರಿಗೆ ತಂದಿರುವ ಯಾವುದೇ ಯೋಜನೆ ಸ್ಥಗಿತಗೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕ್ಷೇತ್ರ ಪ್ರವಾಸ ಸಂದರ್ಭದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಜಾರಿಗೆ ತಂದಿರುವ ಯಾವುದೇ ಜನಪರ ಕಾರ್ಯಕ್ರಮ ನಿಲ್ಲಲು ಬಿಡುವುದಿಲ್ಲ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದರೂ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಇಂದಿರಾ ಕ್ಯಾಂಟೀನ್ ಸೇರಿದಂತೆ ಎಲ್ಲ ಭಾಗ್ಯ ಯೋಜನೆಗಳು ಯಥಾವತ್ತಾಗಿ ಮುಂದುವರಿಯಲಿದೆ ಎಂದರು. ಚುನಾವಣೆಯಲ್ಲಿ ನಮಗೆ […]

ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಅವರ ಜೊತೆಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ

Friday, June 1st, 2018
siddaramaih

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೆನ್ನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ನಿಂತು, ಸಿಬಿಐ ದಾಳಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ಸಿದ್ದರಾಮಯ್ಯ, ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು‌ ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಅವರ ಜೊತೆಗಿದೆ ಎಂದು ಡಿಕೆಶಿಗೆ ಅಭಯ ನೀಡಿದ್ದಾರೆ. ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ […]

ದೆಹಲಿಗೆ ತೆರಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್‌

Saturday, May 26th, 2018
rahul-gandhi

ಬೆಂಗಳೂರು: ಕಾಂಗ್ರೆಸ್ ಪಕ್ಷದ ಯಾವ ಯಾವ ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂಬುದನ್ನು ಹೈಕಮಾಂಡ್‌ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್‌ ಅವರು ಇಂದು ದೆಹಲಿಗೆ ತೆರಳಿದ್ದಾರೆ. ನಿನ್ನೆಯಷ್ಟೆ ವಿಶ್ವಾಸಮತವನ್ನು ಸಮ್ಮಿಶ್ರ ಸರ್ಕಾರ ಗೆದ್ದಿದ್ದು, ಇಂದಿನಿಂದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಪ್ರಾರಂಭವಾಗಿದೆ. ಅದರ ಭಾಗವಾಗಿಯೇ ಇಂದು ಈ ಇಬ್ಬರು ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿ ಆಗಲು ತೆರಳಿದ್ದಾರೆ. ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರಿಂದ ‘ದೆಹಲಿ ಲಾಬಿ’ ಜೆಡಿಎಸ್‌-ಕಾಂಗ್ರೆಸ್‌ನ ಮೈತ್ರಿ ಸರ್ಕಾರವು […]