Blog Archive

ವಿಧಾನಸಭೆಯ ಸದ್ಯದ ಮ್ಯಾಜಿಕ್ ನಂಬರ್ 110…!

Saturday, May 19th, 2018
siddaramaih

ಬೆಂಗಳೂರು: ವಿಧಾನಸಭೆಯಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಮಸ್ಕಿ ಶಾಸಕ ಪ್ರತಾಪ್ ಗೌಡ ಗೈರಾದ ಹಿನ್ನೆಲೆಯಲ್ಲಿ ಮ್ಯಾಜಿಕ್ ಸಂಖ್ಯೆ 110ಕ್ಕೆ ಇಳಿದಿದೆ. ಬಿಜೆಪಿ ಕಡೆಯಿಂದ ಎಲ್ಲಾ 104 ಸದಸ್ಯರಿದ್ದಾರೆ. ಕಾಂಗ್ರೆಸ್‌ನ 78 ಸದಸ್ಯರ ಪೈಕಿ 76 ಮಂದಿ ಉಪಸ್ಥಿತರಿದ್ದಾರೆ. ಜೆಡಿಎಸ್‌ನ 37 ಶಾಸಕರ ಪೈಕಿ 36 ಮಂದಿ ಇದ್ದಾರೆ. ಇವರ ಒಟ್ಟು ಸದಸ್ಯರ ಸಂಖ್ಯೆ 38 ಆಗಿದ್ದರೂ, ಕುಮಾರಸ್ವಾಮಿ ಎರಡು ಕ್ಷೇತ್ರದಲ್ಲಿ ಗೆದ್ದಿರುವ ಕಾರಣ ಇವರ ಶಾಸಕರ ಬಲ 37. ಇಂದು ಎಲ್ಲರೂ ಹಾಜರಾಗುತ್ತಿದ್ದು, ಹೆಚ್.ಡಿ. […]

ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ, ಕಾಂಗ್ರೆಸ್ ನಲ್ಲೂ ಯಾವುದೇ ಸಮಸ್ಯೆ ಇಲ್ಲ: ಕುಮಾರಸ್ವಾಮಿ

Saturday, May 19th, 2018
kumaraswamy

ಬೆಂಗಳೂರು: ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಕಾಂಗ್ರೆಸ್ ನಲ್ಲೂ ಯಾವುದೇ ಸಮಸ್ಯೆ ಇಲ್ಲ. ಎಲ್ಲ ಶಾಸಕರು ಒಗ್ಗಟ್ಟಿನಿಂದ ಇದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಎಸ್ ಯಡಿಯೂರಪ್ಪ ವಿಶ್ವಾಸ ಮತ ಯಾಚನೆಯಲ್ಲಿ ಸೋಲುತ್ತಾರೆ ಎಂದು ಕುಮಾರಸ್ವಾಮಿ ನುಡಿದರು. ಪ್ರತಿಯೊಬ್ಬರಿಗೂ ಆಶಾವಾದ ಇದ್ದೇ ಇರುತ್ತದೆ. ಸಂಜೆ 4 ಗಂಟೆಯವರೆಗೆ ಬಿಜೆಪಿ ನಾಯಕರು ನಮ್ಮ ಶಾಸಕರಿಗಾಗಿ ಗಾಳ ಹಾಕುತ್ತಾರೆ. ಅವರು ಆಶಾವಾದ ಹೊಂದಿರುವುದು ತಪ್ಪಲ್ಲ ಎಂದರು. ಮಾಜಿ ಮುಖ್ಯ ಮಂತ್ರಿ […]

ಸದನದಲ್ಲಿ ಮ್ಯಾಜಿಕ್ ನಂಬರ್ ಗಳಿಸಲು ಬಿಜೆಪಿಗೆ ಅಗ್ನಿಪರೀಕ್ಷೆ..

Friday, May 18th, 2018
bjp-paksha

ಬೆಂಗಳೂರು: ದಕ್ಷಿಣ ಭಾರತದ ಅತಿ ದೊಡ್ಡ ರಾಜ್ಯ ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳುವಂತೆ ಮಾಡುವಲ್ಲಿ ಯಶಸ್ವಿಯಾದ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಈಗ ಅಗ್ನಿಪರೀಕ್ಷೆ ಎದುರಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮತ್ತೊಮ್ಮೆ ವಿಶ್ವಾಸಮತ ಯಾಚನೆಗೆ ಸಜ್ಜಾಗುತ್ತಿದ್ದಾರೆ. ನಾಳೆ(ಮೇ 19) ಸಂಜೆ 4 ಗಂಟೆ ವೇಳೆಗೆ ವಿಶ್ವಾಸಮತ ಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಹೀಗಾಗಿ, ನಾಳೆ ದಿನ ವಿಧಾನಸಭೆಯಲ್ಲಿ ಏನೆಲ್ಲ ಘಟನಾವಳಿಗಳು ನಡೆಯಲಿವೆ. ವಿಶ್ವಾಸಯತ ಯಾಚನೆ ಪ್ರಕ್ರಿಯೆ ಹೇಗೆ ನಡೆಯಲಿದೆ? ಅಗ್ನಿಪರೀಕ್ಷೆ ಗೆಲ್ಲಲು ಬಿಜೆಪಿ ಏನು ಮಾಡಬೇಕು? […]

ಅತಂತ್ರ ವಿಧಾನಸಭೆ: ಮರುಕಳಿಸಿದ ಹದಿನಾಲ್ಕು ವರ್ಷದ ಹಿಂದಿನ ಇತಿಹಾಸ!

Wednesday, May 16th, 2018
siddarmah

ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮೈತ್ರಿ ಸರ್ಕಾರ ರಚನೆಗಾಗಿ ಮೂರು ಪಕ್ಷಗಳ ನಡುವೆ ಜಂಘೀ ಕುಸ್ತಿ ಆರಂಭಗೊಂಡಿದ್ದು, ಮೊದಲ ಪ್ರಯತ್ನದಲ್ಲಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸುವ ದಿಕ್ಕಿನತ್ತ ದಾಪುಗಾಲಿಟ್ಟಿವೆ. ಹದಿನಾಲ್ಕು ವರ್ಷದ ಹಿಂದಿನ ಇತಿಹಾಸ ಈ ಬಾರಿ ಮತ್ತೆ ಮರುಕಳಿಸಿದೆ. 2004ರ ವಿಧಾನಸಭೆ ಚುನಾವಣೆಯಲ್ಲಿ ಇದೇ ರೀತಿಯ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಆಗ ಮೊದಲ ಹಂತದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ […]

ಕನ್ನಡಿಗರ ಸರ್ಕಾರ, ಕುಮಾರಸ್ವಾಮಿ ಸಿಎಂ ಅಗುವುದು ಬಹುತೇಕ ಖಚಿತ..!

Tuesday, May 15th, 2018
kumaraswamy-cm

ಬೆಂಗಳೂರು: 15ನೇ ವಿಧಾನಸಭೆಗಾಗಿ ಮೇ 12ರಂದು ಚುನಾವಣೆ ನಡೆದಿದ್ದು, ಮೇ 15ರಂದು ಫಲಿತಾಂಶ ಹೊರಬಂದಿದೆ. ಬೆಂಗಳೂರಿನ ಜಯನಗರದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆಯಿಂದಾಗಿ 224ಕ್ಷೇತ್ರಗಳ ಬದಲಿಗೆ 222 ಕ್ಷೇತ್ರಗಳಲ್ಲಿ ಮಾತ್ರ ಮತದಾನವಾಗಿತ್ತು. ಯಾರಿಗೆ ಸಿಗಲಿದೆ ಬಹುಮತ? ಯಾರು ಅಧಿಕಾರ ಸ್ವೀಕರಿಸಲಿದ್ದಾರೆ? ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಯಾವ ಪಕ್ಷಕ್ಕೂ ಮ್ಯಾಜಿಕ್ ನಂಬರ್ ದಾಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಸಾಧ್ಯತೆ ಹಿನ್ನಲೆಯಲ್ಲಿ ಟ್ರಾಲ್ಸ್ […]

ಜೆಡಿಎಸ್-ಕಾಂಗ್ರೆಸ್ ಮೈತ್ರಿ, ಪ್ರಜಾತಂತ್ರದ ಕಟು ಅಣಕ!

Tuesday, May 15th, 2018
kumaraswamy

ಬೆಂಗಳೂರು: ಕರ್ನಾಟಕದ ಜನತೆಯ ಮತಗಳಿಗೆ, ಮತ ಪ್ರಹಾಪ್ರಭುವಿನ ನಾಲ್ಕು ಕಾಸಿನ ಕಿಮ್ಮತ್ತಿಲ್ಲದಂತೆ, ಪ್ರಜಾಪ್ರಭುತ್ವಕ್ಕೂ ಬೆಲೆಯಿಲ್ಲದಂತೆ ಕಾಂಗ್ರೆಸ್ ಪಕ್ಷ ಜಾತ್ಯತೀಯ ಜನತಾದಳಕ್ಕೆ ಸರಕಾರ ರಚಿಸಲು ಬೆಂಬಲ ನೀಡಿದೆ. ಕುಮಾರಸ್ವಾಮಿಯವರ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತಾಗಿದೆ. ಜಾತ್ಯತೀತ ಜನತಾದಳವನ್ನು ಭಾರತೀಯ ಜನತಾ ಪಕ್ಷದ ‘ಬಿ ಟೀಮ್’ ಎಂದು ಪ್ರಚಾರ ಸಮಾವೇಶವೊಂದರಲ್ಲಿ ಬಹಿರಂಗವಾಗಿ ಜರಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈಗ ಬಹಿರಂಗವಾಗಿಯೇ ಅದೇ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಇಲ್ಲಿ ಏನು ಬೇಕಾದರೂ ಆಗಬಹುದು. ಅವರಿಗೆ ಅಧಿಕಾರ ಸಿಗಬಾರದೆಂದು ಎಂಥ ಅಪವಿತ್ರ ಮೈತ್ರಿಗೂ […]

ಕರ್ನಾಟಕ ಅಭಿವೃದ್ಧಿ ಕಡೆ ನಡೆಯಲು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ: ನಟಿ ರಚಿತಾ ರಾಮ್

Saturday, April 21st, 2018
rachitha-ram

ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಕಾಣಿಸಿಕೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ. ರಾಜ್ಯದಲ್ಲಿ ರೈತರ ಪರ ಹೋರಾಟ ನಡೆಸುವ ನಾಯಕರ ಅಗತ್ಯವಿದ್ದು, ಕುಮಾರ ಸ್ವಾಮಿಯವರು ಒಳ್ಳೆಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕರ್ನಾಟಕ ಭವಿಷ್ಯಕ್ಕಾಗಿ ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಬಹಳ ಮುಖ್ಯವಾಗಿದ್ದು, ಜೆಡಿಎಸ್ ಪಕ್ಷಕ್ಕೆ ಮತ ನೀಡಿ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ. ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಹಲವು ಸ್ಯಾಡಲ್‍ವುಡ್ ನಟ ನಟಿಯರು ತಮ್ಮ ನೆಚ್ಚಿನ ರಾಜಕೀಯ ನಾಯಕರ ಪರ […]

ಕುಡಿದು ವಾಹನ ಚಲಾಯಿಸಿದರೆ ಹುಷಾರ್.. ವಿಡಿಯೋ ರೆಕಾರ್ಡಿಂಗ್ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು: ಟಿ.ಆರ್. ಸುರೇಶ್

Saturday, March 10th, 2018
commissioner

ಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಬಗ್ಗೆ ವಿಡಿಯೋ ರೆಕಾರ್ಡಿಂಗ್ ಮಾಡಿ, ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಹೇಳಿದ್ದಾರೆ. ತನ್ನ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಬಸ್, ರಿಕ್ಷಾ, ಕಾರು, ಬೈಕ್ ಮತ್ತು ಇತರ ವಾಹನಗಳ ಚಾಲಕರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಸಿಟಿ ಬಸ್ ಕಾರ್ಮಿಕರಿಗೆ ತರಬೇತಿಯನ್ನು ಏರ್ಪಡಿಸಿ ವಾಹನ ಚಾಲನೆ ಮತ್ತು […]

ಜೆಡಿಎಸ್ ಅಧಿಕಾರಕ್ಕೆ ಬಂದರೆ ತಜ್ಞ ವೈದ್ಯರೇ ಆರೋಗ್ಯ ಮಂತ್ರಿ: ಕುಮಾರಸ್ವಾಮಿ

Tuesday, March 6th, 2018
kumarswamy

ಮಂಗಳೂರು: ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಮುಖ ಆದ್ಯತೆ ನೀಡಲಾಗುವುದು. ಜತೆಗೆ ವಿಧಾನಸಭೆಗೆ ಆಯ್ಕೆಯಾದ ಸದಸ್ಯರನ್ನು ಹೊರತುಪಡಿಸಿ, ಆರೋಗ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ತಜ್ಞ ವೈದ್ಯರನ್ನೇ ಆರೋಗ್ಯ ಸಚಿವರ ಸ್ಥಾನ ನೀಡಲಾಗುವುದು. ಈ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ. ಅವರು ಇಂದು ನಗರದ ಹೊಟೇಲ್‌ನಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಆಯೋಜಿಸಲಾದ ಬುದ್ಧಿಜೀವಿಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ನವಸಾಕ್ಷರ […]

ರೈತ ಪರ ಯಾತ್ರೆ ಮಾಡಲು ಸಜ್ಜಾಗಿರುವ ಕುಮಾರಸ್ವಾಮಿ

Monday, January 22nd, 2018
kumaraswamy

ಶಿವಮೊಗ್ಗ: ಬಿಜೆಪಿಯ ಪರಿವರ್ತನಾ ಯಾತ್ರೆ ಮುಗಿದ ನಂತರ ರೈತರ ಪರವಾದ ಯಾತ್ರೆಯೊಂದನ್ನು ಆರಂಭಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಯಡ್ಡಿಯೂರಪ್ಪ ಅವರಿಗೆ ರಾಜ್ಯದ ರೈತರ ಬಗ್ಗೆ ಕಾಳಜಿ ಪ್ರಾರಂಭವಾದಂತೆ ಕಾಣುತ್ತಿದೆ. ಪರಿವರ್ತನಾ ರ್ಯಾಲಿಯಲ್ಲಿ ರೈತರ ಆತ್ಮಹತ್ಯೆಗೆ ರಾಜ್ಯ ಸರ್ಕಾರ ಸ್ಪಂಧಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ಇಷ್ಟುದಿನ ಅವರು ನಿದ್ದೆ ಮಾಡುತ್ತಿದ್ದರಾ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಕೀಳು ಮಟ್ಟದ ರಾಜಕೀಯ ಆರಂಭವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ […]