Blog Archive

ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ : ಜಿಲ್ಲಾಧಿಕಾರಿ

Saturday, July 18th, 2020
Sindu B Roopesh

ಮಂಗಳೂರು : ಜುಲೈ 15ರ ರಾತ್ರಿಯಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 8 ರಿಂದ 11 ಗಂಟೆಯ ತನಕ ಇರುವ ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ರವಿವಾರ (ಜು.19) ಲಾಕ್‌ಡೌನ್ ನಲ್ಲಿ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯ- ಜಿಲ್ಲಾಧಿಕಾರಿ

Monday, July 13th, 2020
Dharmika-Datthi-Elakhe

ಮಂಗಳೂರು : ದೇವಾಲಯಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಒಳಗೊಂಡಿರಬೇಕು ಮತ್ತು ಅವುಗಳು ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ನಿತ್ಯ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿನ ಆಭರಣಗಳನ್ನು ಸಂರಕ್ಷಣೆ ಹಾಗೂ ಮೌಲ್ಯಮಾಪನ ಮಾಡುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾದ ಸಭೆಯನ್ನುದ್ಧೇಶಿಸಿ ಅವರು ಮಾತನಾಡಿದರು. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಅನಾದಿ ಕಾಲದ ವಿಗ್ರಹ, ಚಿನಬೆಳ್ಳಿ ಮತ್ತು ಇನ್ನಿತರ ಅಮೂಲ್ಯ […]

ಮಳೆಗಾಲ: ಪ್ರಾಕೃತಿಕ ದುರಂತದಿಂದ ಹಾನಿ ತಪ್ಪಿಸಲು ಈಗಿನಿಂದಲೇ ಕ್ರಮ -ಜಿಲ್ಲಾಧಿಕಾರಿ 

Saturday, May 23rd, 2020
rain-DC

ಮಂಗಳೂರು : ಕಳೆದ ವರ್ಷದಲ್ಲಿ ಅಪಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡು ರಸ್ತೆ, ಸೇತುವೆ ಸೇರಿದಂತೆ ಅನೇಕ ರೀತಿ ಮೂಲ ಸೌಕರ್ಯಗಳಿಗೆ ಹಾನಿ ಉಂಟಾಗಿತ್ತು. ಪ್ರಸುತ್ತ ಸಾಲಿನಲ್ಲಿ ಕಳೆದ ಸಾಲಿಗಿಂತ ಹೆಚ್ಚುವರಿ ಮಳೆಯಾದರೆ ಸಮರ್ಥವಾಗಿ ನಿಭಾಯಿಸಲು ಅಗತ್ಯವಾದ ಸಿದ್ಧತೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಮಾಡಿಕೊಂಡಿರಬೇಕು. ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ […]

ಉಡುಪಿ ಜಿಲ್ಲೆಯಲ್ಲಿ16 ಮಕ್ಕಳಲ್ಲಿ ಕೊರೊನಾ ಸೋಂಕು, ಗುರುವಾರ ಒಟ್ಟು 27 ಪ್ರಕರಣ ಪತ್ತೆ

Thursday, May 21st, 2020
Udupi Covid Attack

ಉಡುಪಿ :  ಅರೋಗ್ಯ ಇಲಾಖೆ ಗುರುವಾರ ಮಧ್ಯಾಹ್ನ ಬಿಡುಗಡೆ ಮಾಡಿದ ಬುಲೆಟಿನ್ನಲ್ಲಿ  ಉಡುಪಿ ಜಿಲ್ಲೆಯಲ್ಲಿ  ಒಟ್ಟು  27 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಈ ಪೈಕಿ ದುಬೈ ಹಾಗೂ ಮುಂಬೈಯಿಂದ ಬಂದ ಪ್ರಯಾಣಿಕರಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಸ್ವೀಕೃತವಾದ 199 ಜನರ ವರದಿಯಲ್ಲಿ 27 ಜನರಲ್ಲಿ ಪಾಸಿಟಿವ್ ಬಂದಿದ್ದು, ಈ ಪೈಕಿ ಮಹಾರಾಷ್ಟ್ರದಿಂದ ಬಂದ 23 ಜನರಲ್ಲಿ, ತೆಲಂಗಾಣದಿಂದ ಬಂದ ಮೂವರಲ್ಲಿ ಹಾಗೂ ಕೇರಳದಿಂದ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದ ಒಬ್ಬರಲ್ಲಿ ಪಾಸಿಟಿವ್ […]

ಮೇ 4 ರಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆರಿಕೆ, ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸೀಮಿತ ಸಡಿಲಿಕೆ

Sunday, May 3rd, 2020
sindhu roopesh

ಮಂಗಳೂರು : ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಮೇ.4 ರಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಕೊರೋನಾ ಪ್ರಕರಣಗಳು ಸಕ್ರಿಯವಾಗಿದ್ದು 8 ವಲಯಗಳನ್ನು ಸಂಪೂರ್ಣ ನಿರ್ಬಂಧದಲ್ಲಿ ಇಡಲಾಗಿದೆ ಇಲ್ಲಿ ಯಾವುದೇ ಸಡಿಲಿಕೆ ನೀಡಿಲ್ಲ ಮೇ.17ರ ವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಆದರೆ ರಾಜ್ಯ ಸರ್ಕಾರ ಕೆಲವೊಂದು ಪ್ರದೇಶಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ದ.ಕ. ಜಿಲ್ಲೆಯಲ್ಲೂ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಅದರಂತೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ಓಡಾಟಕ್ಕೆ ಅವಕಾಶವಿದೆ. […]

ಪಾಲಘರ್ ಸಂತರ ಹತ್ಯೆ : ಅಪರಾಧಿಗಳ ಉಗ್ರಶಿಕ್ಷೆಗೆ ಆಗ್ರಹಿಸಿ ರಾಷ್ಟ್ರಪತಿಗೆ ಜಿಲ್ಲಾಧಿಕಾರಿಯವರ ಮೂಲಕ ಮನವಿ

Tuesday, April 28th, 2020
palghar

ಮಂಗಳೂರು  :  ಮಹಾರಾಷ್ಟ್ರದ ಪಾಲಘಾರ್ ಗ್ರಾಮದಲ್ಲಿ ಕಳೆದ ಗುರುವಾರ ಏಪ್ರಿಲ್ 16, 2020 ರಂದು ಇಬ್ಬರು ಸಾಧುಗಳು ಹಾಗು ಅವರ ಸಹಾಯಕ ಸೇರಿದಂತೆ 3 ಜನರ ನಿರ್ದಯವಾದ ಬರ್ಬರ ಹತ್ಯೆ ನಡೆದಿರುವುದು ಸಂಪೂರ್ಣ ಹಿಂದುಸಮಾಜಕ್ಕೆ ತೀವ್ರ ಆಘಾತವನ್ನು ಉಂಟುಮಾಡಿದೆ. ತಮ್ಮ ಗುರುಗಳ ಅಂತ್ಯಕ್ರಿಯೆಗೆಂದು ಮುಂಬೈನಿಂದ ಗುಜರಾತಿಗೆ ತೆರಳುತ್ತಿದ್ದ ಈ ಪೂಜ್ಯ ಸಂತರನ್ನು ಮಕ್ಕಳನ್ನು ಅಪಹರಿಸುವ ಕಳ್ಳರು ಎಂದು ಸುಳ್ಳು ವದಂತಿ ಹಬ್ಬಿಸಿ ನೂರಾರು ಗ್ರಾಮಸ್ಥರು ಲಾಠಿ ಇತ್ಯಾದಿ ಮಾರಕಾಸ್ತ್ರಗಳಿಂದ ಸಾಮೂಹಿಕ ಆಕ್ರಮಣ ನಡೆಸಿರುವುದರ ಹಿಂದೆ ಒಂದು ಯೋಜಿತ ಸಂಚು […]

ಕೊರೊನಾದಿಂದ ಮೃತ ವ್ಯಕ್ತಿಯನ್ನು ದಫನ ಮಾಡುವುದರಿಂದ ಸೋಂಕು ಹರಡಲ್ಲ : ಜಿಲ್ಲಾಧಿಕಾರಿ

Friday, April 24th, 2020
DC Sindhu

ಮಂಗಳೂರು: ಸೋಂಕಿತ ವ್ಯಕ್ತಿಯ ಮೃತದೇಹವನ್ನು ಹೂಳುವುದು ಅಥವಾ ದಹನ ಮಾಡುವ ಮೂಲಕ ಅಂತ್ಯಕ್ರಿಯೆ ಜರುಗಿಸಬಹುದು. ಹೀಗೆ ದಹಿಸಿದ ಅಥವಾ ದಫನ ಮಾಡಿದ ದೇಹದ ಬೂದಿಯಿಂದ ಮತ್ತೊಬ್ಬರಿಗೆ ಯಾವುದೇ ವೈರಾಣು ಹರಡುವುದಿಲ್ಲ. ಈ ಬೂದಿಯನ್ನು ಸಂಗ್ರಹಿಸಿ ಇತರ ಧಾರ್ಮಿಕ ಆಚರಣೆಗಳನ್ನೂ ನಡೆಸಬಹುದು ಎಂದು ಜಿಲ್ಲಾಧಿಕಾರಿ  ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನಿವಾಸಿ 78 ವರ್ಷದ ಮಹಿಳೆ ಕೋವಿಡ್-19ನಿಂದ ಮೃತಪಟ್ಟ ಬಳಿಕ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದಂತೆ ಉಂಟಾದ ಗೊಂದಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಕೆಲವು ಮಾಹಿತಿಗನ್ನು ಸಾರ್ವಜನಿಕರಿಗೆ ನೀಡಿದ್ದಾರೆ. ಕೊರೊನಾ ಸೋಂಕಿತರ ಮೃತದೇಹದಿಂದ […]

ಕೇರಳದ ಸೋಂಕಿತರನ್ನು ಗಡಿಯೊಳಗೆ ಬರದಂತೆ ತಡೆಯಿರಿ : ಸಿದ್ದರಾಮಯ್ಯ

Tuesday, March 31st, 2020
Sidhramahia

ಬೆಂಗಳೂರು: ಕೇರಳ ರಾಜ್ಯದವರು ಕೋವಿಡ್-19 ಸೋಂಕು ಇರುವವರನ್ನು ಕರ್ನಾಟಕಕ್ಕೆ ಕಳುಹಿಸುತ್ತಿದ್ದಾರೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು ಗಡಿ ಮೂಲಕ ರಾಜ್ಯಕ್ಕೆ ಕಳುಹಿಸುತ್ತಿದ್ದಾರೆ. ಕೇರಳದವರನ್ನು ರಾಜ್ಯದ ಗಡಿಯೊಳಗೆ ಬರದಂತೆ ತಡೆಯಿರಿ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಮೈಸೂರು ಜಿಲ್ಲಾಧಿಕಾರಿಯವರ ಜೊತೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಈ ಸೂಚನೆ ನೀಡಿದರು. ರಾಜ್ಯದಲ್ಲಿ ಕೋವಿಡ್-19 ವಿರುದ್ಧ ಹೋರಾಡಲು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಭೆ ಸೇರಿ ಚರ್ಚೆ ನಡೆಸಿದರು. ಈ ವೇಳೆ […]

ಉಡುಪಿ : ಮಾರ್ಚ್ 29ರ ಬೆಳಿಗ್ಗೆ 7 ರಿಂದ11 ಗಂಟೆಯವರೆಗೆ ಮಾತ್ರ ದಿನಸಿ ಅಂಗಡಿ ಕಾರ್ಯಾಚಚರಣೆ

Saturday, March 28th, 2020
Jagadeesha

ಉಡುಪಿ : ಮಾರ್ಚ್ 29ರ ರವಿವಾರದಿಂದ ಜಿಲ್ಲೆಯಾದ್ಯಂತ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಮಾತ್ರವೇ ದಿನಬಳಕೆಯ ದಿನಸಿ ಸಾಮಗ್ರಿಗಳ ಅಂಗಡಿಗಳು ಕಾರ್ಯಾಚರಿಸಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಜಿಲ್ಲಾಡಳಿತ ನಿಗದಿಪಡಿಸಿರುವ ಈ ಅವಧಿಯಲ್ಲಿ ಮಾತ್ರವೇ ಗ್ರಾಹಕರು ತಮಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳು, ತರಕಾರಿ ಹಣ್ಣು, ಹಾಲು, ಮಾಂಸ, ಮೀನು ಮುಂತಾದ ಅವಶ್ಯಕ ವಸ್ತುಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಮತ್ತು ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.  

ಜನರು ಕೊರೊನಾ ವೈರಸ್ ಬಗ್ಗೆ ಆಂತಕಗೊಳ್ಳುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ

Thursday, March 12th, 2020
dc

ಮಂಗಳೂರು:  ಜನರು ಆಂತಕಗೊಳ್ಳುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸೂಕ್ತ ಸಿದ್ದತೆ ಮಾಡಿದೆ. ಜಿಲ್ಲೆಯಲ್ಲಿ ಯಾವುದೇ ಕೊರೊನಾ ವೈರಸ್ ಪತ್ತೆಯಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಹೇಳಿದರು. ಬುಧವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ವಿಮಾನ ಮತ್ತು ಎನ್‌ಎಂಪಿಟಿಯಲ್ಲಿ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಈವರೆಗೆ ಜಿಲ್ಲೆಯಲ್ಲಿ 10 ಗಂಟಲು ಜನರ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆ ಕಳುಹಿಸಲಾಗಿದ್ದು ಅದರಲ್ಲಿ ಏಳು ವರದಿ ನೆಗೆಟಿವ್ ಬಂದಿದೆ.ಇನ್ನೂ ಮೂರು ವರದಿ ಪರೀಕ್ಷಾ ಹಂತದಲ್ಲಿ ಇದೆ ಎಂದು […]