Blog Archive

ಮಕ್ಕಳ ಕಳ್ಳರ ಜಾಲ ಇರುವ ಬಗ್ಗೆ ಶಂಕೆ: ಮೂವರು ಯುವಕರು ಪೊಲೀಸರ ಬಲೆಗೆ

Tuesday, November 29th, 2016
Child

ಪುತ್ತೂರು: ಮೂವರು ಯುವಕರು ತಂದೆ-ತಾಯಿ ಇಲ್ಲದ ಹಸುಗೂಸನ್ನು ಬಾಡಿಗೆ ಮನೆಯಲ್ಲಿ ಸಾಕಲು ಯತ್ನಿಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರಿಂದ ಮಕ್ಕಳ ಕಳ್ಳರ ಜಾಲ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಂದೆ ತಾಯಿ ಇಲ್ಲದ ಸುಮಾರು 55 ದಿನಗಳ ಗಂಡು ಮಗುವೊಂದನ್ನು ಮೂವರು ಯುವಕರು ಬಂಟ್ವಾಳ ತಾಲೂಕಿನ ಪೆರ್ನೆ ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಸಾಕಲೆತ್ನಿಸಿದ್ದಾರೆ. ಈ ಮಾಹಿತಿಯಂತೆ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಮಗುವನ್ನು ವಶಕ್ಕೆ ತೆಗೆದುಕೊಂಡರು. ಮಗುವಿನ ತಾಯಿ ನೇಪಾಳಕ್ಕೆ ಹೋಗಿದ್ದ […]

ನೇತ್ರಾವತಿ ರಕ್ಷಣೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್

Thursday, May 19th, 2016
Bundh

ಮಂಗಳೂರು: ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಎತ್ತಿನ ಹೊಳೆ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಮೇ 19ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೆದಿದ್ದ ಸ್ವಯಂ ಘೋಷಿತ ಬಂದ್‌ ಯಶಸ್ವೀಯಾಗಿದೆ. ಬಂದ್‌ ಶಾಂತಿಯುತವಾಗಿದ್ದು ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು, ಸರ್ಕಾರಿ ಬಸ್‌ಗಳು ಸಂಚರಿಸಿಲ್ಲ. ಕೆಲವೆಡೆ ಹೊರರಾಜ್ಯದಿಂದ ಬಂದ ಪ್ರಯಾಣಿಕರು ಪರದಾಡಬೇಕಾಗಿ ಬಂತು . ಮೆಡಿಕಲ್‌ ಶಾಪ್‌ ಮಾತ್ರ ಬೆಳಗ್ಗಿನಿಂದಲೇ ತೆರೆದಿತ್ತು. ಅಂಬುಲೆನ್ಸ್‌ಗಳು ಹೊರತು ಪಡಿಸಿ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿದ್ದು ಹೆದ್ದಾರಿ ಸಹಿತ ಮುಖ್ಯ ರಸ್ತೆಗಳು ಬಿಕೋ ಎನ್ನುತ್ತಿತ್ತು. ಜಿಲ್ಲೆಯ […]

ಯಾರು ಹಿತವರು ನಮಗೆ ಈ ಮೂವರೊಳಗೆ

Tuesday, April 8th, 2014
3 candidate

ಮಂಗಳೂರು : 16 ಲಕ್ಷ ಮತದಾರರಿರುವ ದಕ್ಷಿಣ ಕನ್ನಡ ಜಿಲ್ಲೆ ಮುಖ್ಯ ಪಕ್ಷಗಳಿಂದ ಬದಲಾವಣೆಯ ಆಶೆಯನ್ನು ಇಡಬಾರದು. ಏಕೆಂದರೆ, ಕಾಂಗ್ರೆಸ್ನ ಅಭ್ಯರ್ಥಿ ಸನ್ಮಾನ್ಯ ಜನಾರ್ಧನ ಪೂಜಾರಿಯವರು 8 ಸಲ, ಈ ಕ್ಷೇತ್ರದಿಂದ ಅವರ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿ, ಚುನಾವಣೆಯಲ್ಲಿ 4 ಸಲ ಗೆದ್ದಿದ್ದಾರೆ, 4 ಸಲ ಸೋತಿದ್ದಾರೆ. ಇನ್ನೊಂದು 4 ಸಲ ಅವರನ್ನು ಅವರ ಪಕ್ಷ ರಾಜ್ಯಸಭಾ ಸದಸ್ಯರಾಗಿ ಮಾಡಿದ್ದಾರೆ. ಹಾಗಾದರೆ ಈ ಮಹಾನುಭಾವರು 8 ಸಲ ಪಾರ್ಲಿಮೆಂಟಿನಲ್ಲಿ ದಕ್ಷಿಣಕನ್ನಡದ ಪ್ರತಿನಿಧಿಯಾಗಿದ್ದರು. ಇವರು 80ರ ಅಂಚಿನಲ್ಲಿದ್ದಾರೆ. ನನ್ನ […]

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರ ಹೆಜ್ಜೆಗುರುತು

Saturday, November 9th, 2013
Belthangady

ಬೆಳ್ತಂಗಡಿ :  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರಿನಲ್ಲಿ ರಾಮಚಂದ್ರ ಭಟ್‌ ಎಂಬುವವರ ಮನೆಗೆ ಭೇಟಿ ನೀಡಿದ ನಕ್ಸಲರ ತಂಡವು ಅಂಗಳದಲ್ಲಿ ನಿಲ್ಲಿಸಲಾಗಿದ್ದ ಕಾರು ಮತ್ತು ಬೈಕ್‌ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಇಂದು ಮುಂಜಾನೆ ಸುಮಾರು 2 ಗಂಟೆ ಹೊತ್ತಿಗೆ ನಡೆದಿದೆ. ಪಂಚಾಯತ್‌ ಸದಸ್ಯರಾಗಿರುವ ರಾಮಚಂದ್ರ ಭಟ್‌ ಅವರು ಪೊಲೀಸ್‌ ಮಾಹಿತಿದಾರರೆಂಬ ಶಂಕೆಯಲ್ಲಿ ನಕ್ಸಲರು ಈ ಕೃತ್ಯ ಎಸಗಿರಬೇಕೆಂದು ಅನುಮಾನಿಸಲಾಗುತ್ತಿದೆ. ಮನೆ ಆವರಣವನ್ನು ಪ್ರವೇಶಿಸಿದ ಸುಮಾರು 10 – 20 ಜನರಷ್ಟಿದ್ದ ಶಸ್ತ್ರಸಜ್ಜಿತ […]

ರಾಜ್ಯ ವಿಧಾನಸಭಾ ಚುನಾವಣೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಜಯ

Wednesday, May 8th, 2013
Dk Politicians

ಮಂಗಳೂರು : ಮೇ 5ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 8 ಬುಧವಾರ  ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 8  ಕ್ಷೇತ್ರಗಳಲ್ಲಿ ಕಾಂಗ್ರೆಸ್ 7 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದು ಉಳಿದ 1  ಕ್ಷೇತ್ರ ಸುಳ್ಯದಲ್ಲಿ  ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಗೆಲುವನ್ನು ಸಾಧಿಸಿದ್ದಾರೆ. ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಯ ಚಂದ್ರಹಾಸ್ ಉಚ್ಚಿಲ್ ರವರನ್ನು 29,087 ಮತಗಳ ಅಂತರದಿಂದ ಸೋಲಿಸಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ […]

ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ರಾಜ್ಯಕ್ಕೆ ದ್ವಿತಿಯ ಸ್ಥಾನ ಪಡೆದ ಮಂಗಳೂರಿನ ಮಾನ್ವಿತಾ

Monday, May 6th, 2013
Manvitha

ಮಂಗಳೂರು : ಮೇ 6 ಸೋಮವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕೊಣಾಜೆ ವಿಶ್ವಮಂಗಳ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಮಾನ್ವಿತಾ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನಿಯಾಗಿದ್ದು, ಇಡಿ ರಾಜ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾಳೆ. ಒಟ್ಟು 625 ಅಂಕಗಳಲ್ಲಿ 621 ಅಂಕ ಪಡೆದ ಮಾನ್ವಿತ ಇಂಗ್ಲೀಷ್, ಗಣಿತ ಮತ್ತು ಸಮಾಜ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ 99 ಅಂಕಗಳನ್ನು ಪಡೆದರೆ, ವಿಜ್ನಾನ ನದಲ್ಲಿ 98 ಅಂಕ ಪಡೆದಿದ್ದಾಳೆ. ಓದಿನಲ್ಲಿ ಮುಂದಿರುವ […]

ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆದ ಚುನಾವಣೆಯ ಸಂಪೂರ್ಣ ವಿವರ

Monday, March 25th, 2013

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 7 ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಸುಳ್ಯ ಹೊರತುಪಡಿಸಿ ಉಳಿದೆಡೆ ಬಿಜೆಪಿ ಧೂಳೀಪಟವಾಗಿದೆ. ಜೆಡಿಎಸ್, ಸಿಪಿಎಂ, ಎಸ್ ಡಿಪಿಐ ಖಾತೆ ತೆರೆದಿದ್ದರೆ ಹೊಸ ಪಕ್ಷಗಳಾದ ಕೆಜೆಪಿ, ಡಬ್ಲುಪಿಐ, ಬಿಎಸ್ಆರ್ ಹಳೆ ಪಕ್ಷಗಳಾದ ಜೆಡಿಯು, ಸಿಪಿಐ, ಐಎಂಎಲ್ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಜಿಲ್ಲೆಯ 189 ಸ್ಥಾನಗಳ ಪೈಕಿ ಕಾಂಗ್ರೆಸ್ 108, ಬಿಜೆಪಿ 63, ಜೆಡಿಎಸ್ 6, ಎಸ್ ಡಿಪಿಐ 5, ಸಿಪಿಎಂ 2 […]

ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ, ಮಾರ್ಚ್ 28ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿ

Wednesday, March 13th, 2013
Second PU examination at DK

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯು ಇಂದಿನಿಂದ 28ರ ವರೆಗೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ  ವರ್ಷ 49 ಪರೀಕ್ಷಾ ಕೇಂದ್ರಗಳಲ್ಲಿ  170 ಕಾಲೇಜುಗಳ 32,267 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯು ಸುಸೂತ್ರವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯುವ ಹಿನ್ನಲೆಯಲ್ಲಿ  ಜಿಲ್ಲೆಯಲ್ಲಿ  ಮಾರ್ಚ್ 28ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ವಿವಿಧ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರದ ಸುತ್ತಲಿನ 200 […]

ಸ್ಥಳೀಯಾಡಳಿತ ಚುನಾವಣೆ ಫೈಟ್ ಗಿಳಿದ226 ಮಹಿಳೆಯರು !

Thursday, March 7th, 2013

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ  ಏಳು ಸ್ಥಳೀಯಾಡಳಿತ ಪ್ರದೇಶಗಳಿಗೆ ನಡೆಯಲಿರುವ ಚುನಾವಣಾ ಕದನದಲ್ಲಿ  226ಮಂದಿ ಮಹಿಳೆಯರು ಫೈಟ್ ಗಿಳಿದಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ, ಮೂಡುಬಿದಿರೆ. ಉಳ್ಳಾಲ, ಬಂಟ್ವಾಳ, ಪುತ್ತೂರು ಪುರಸಭೆ,  ಬೆಳ್ತಂಗಡಿ, ಸುಳ್ಯ ಪಟ್ಟಣ ಪಂಚಾಯಿತಿ  ವ್ಯಾಪ್ತಿಯಲ್ಲಿ  ಚುನಾವಣಾ  ಕದನ ಕಣದಲ್ಲಿ ರುವ ಒಟ್ಟು 677ಮಂದಿ ಅಭ್ಯರ್ಥಿಗಳ ಪೈಕಿ 226ಮಂದಿ ಮಹಿಳೆಯರು ! ಕಾಂಗ್ರೆಸ್ ಮತ್ತು ಬಿಜೆಪಿಯಿಂದ ತಲಾ 72ಮಂದಿ ಮಹಿಳೆಯರು ಕಣದಲ್ಲಿದ್ದರೆ, ಜೆಡಿಎಸ್ ನಿಂದ  42 ಮಂದಿ  ಸ್ತ್ರೀಯರು ಸ್ಪರ್ಧಿಸುತ್ತಿದ್ದಾರೆ. ಉಳಿದಂತೆ ಎಸ್ ಡಿಪಿಐ […]

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ :ಮಾರ್ಚ್ 7ರಂದು ಜಿಲ್ಲೆಯ 677 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Wednesday, March 6th, 2013
Local bodies election

ಮಂಗಳೂರು : ಮಾರ್ಚ್ 7ರಂದು ನಡೆಯುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 677 ಅಭ್ಯರ್ಥಿಗಳ ಭವಿಷ್ಯ ನಿರ್ಧಾರಗೊಳ್ಳಲಿದೆ. ಅದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳು ಬಿರುಸಿನ ಮತಪ್ರಚಾರದಲ್ಲಿ ತೊಡಗಿದ್ದು, ಅಂತಿಮವಾಗಿ ಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದು ಕುತೂಹಲ ಹುಟ್ಟಿಸಿದೆ. ಈ ಚುನಾವಣೆಯು ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಪೂರ್ವಭಾವಿಯಾದ ಸೆಮಿಫೈನಲ್ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಸ್ಥಳೀಯಾಡಳಿತ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಾರೋ […]