Blog Archive

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ

Thursday, October 24th, 2019
Pattabhisheka

ಧರ್ಮಸ್ಥಳದ : ನ್ಯಾಯವೇ ನನ್ನ ತಂದೆ, ಸತ್ಯವೇ ನನ್ನ ತಾಯಿ ಎಂಬ ಭಾವನೆಯೊಂದಿಗೆ ತಾನು ನ್ಯಾಯ ಮತ್ತು ಸತ್ಯದ ನೆಲೆಯಲ್ಲಿ ಕೆಲಸ ಮಾಡುತ್ತೇನೆ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು. ನಮ್ಮ ದೇಶದಲ್ಲಿ ಅನೇಕ ಮಂದಿ ಆಚಾರ್ಯರಿದ್ದಾರೆ ಆದರೆ ಆಚಾರವಿಲ್ಲ. ದೇಶಕ್ಕೆ ದೊಡ್ಡ ಚರಿತ್ರೆ ಇದೆ, ಆದರೆ ಚಾರತ್ರ್ಯವಿಲ್ಲ. ಅಲ್ಲಲ್ಲಿ ಸಂಘರ್ಷವಿದೆ […]

ಪಾಶ್ವಾತ್ಯ ಸಂಗೀತದಿಂದ ಭಾರತೀಯ ಸಂಗೀತ ಕ್ಷೇತ್ರಕ್ಕೆ ಅಪಾಯವಿಲ್ಲ

Saturday, October 12th, 2019
Western music

ಉಜಿರೆ: ಪಾಶ್ಚಾತ್ಯ ಸಂಗೀತದ ಪ್ರಭಾವದಿಂದಯಕ್ಷಗಾನ, ಜನಪದ ಕಲೆಗಳು, ಶಾಸ್ತ್ರೀಯ ಸಂಗೀತ ಮೊದಲಾದ ಭಾರತೀಯ ಕಲಾಪ್ರಕಾರಗಳು ಮರೆಯಾಗಬಹುದೆಂಬ ಭಯ, ಆತಂಕಅಗತ್ಯವಿಲ್ಲ ಎಂದುಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ವಸಂತ ಮಹಲ್‌ನಲ್ಲಿ ಶ್ರೀ ಮಂಜುನಾಥ ಸ್ವಾಮಿದೇವಸ್ಥಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರಿನ ಸ್ವರಮೂರ್ತಿ ವಿ.ಎನ್. ರಾವ್ ಮೆಮೋರಿಯಲ್‌ಟ್ರಸ್ಟ್‌ನ ಸಂಯುಕ್ತಆಶ್ರಯದಲ್ಲಿ ನಡೆದ ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವದಲ್ಲಿ ಸಂಗೀತ ಕಳಾನಿಧಿ ಎ. ಕನ್ಯಾಕುಮಾರಿಅವರಿಗೆ ವೀಣೆ ಶೇಷಣ್ಣ ಸ್ಮಾರಕರಾಷ್ಟ್ರೀಯ ಪ್ರಶಸ್ತಿ (ಒಂದು ಲಕ್ಷರೂ. ನಗದು) […]

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಅವರ ಪುತ್ರ ಧರ್ಮಸ್ಥಳಕ್ಕೆ ಭೇಟಿ

Wednesday, August 7th, 2019
harshavardhana

ಧರ್ಮಸ್ಥಳ : ಭಾರತದ ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡುಅವರ ಮಗ ಹರ್ಷವರ್ಧನ್‌ ಇಂದು (ಮಂಗಳವಾರ) ಧರ್ಮಸ್ಥಳಕ್ಕೆ ಭೇಟಿ ನೀಡಿಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಶ್ರೀ ಮಂಜುನಾಥ ಸ್ವಾಮಿಯದರ್ಶನ ಪಡೆದು ಸುಬ್ರಹ್ಮಣ್ಯಕ್ಕೆಪ್ರಯಾಣ ಬೆಳೆಸಿದರು.

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

Friday, May 24th, 2019
dharmasthala

  ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ ಪಂಚಾಯಿತಿ, ಕೆ.ಎಸ್.ಆರ್.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಜನರು ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ ಬೆಳಿಗ್ಗೆ ಗಂಟೆ 6.30 ರಿಂದ 9 ರ ವರೆಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ನದಿಯಲ್ಲಿ ಪ್ರವಾಸಿಗರು ಬಿಸಾಡಿದ ಬಟ್ಟೆ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಲಾರಿಗಳಲ್ಲಿ […]

ಬೆಂಗಳೂರಿನ ಭಕ್ತಾದಿಗಳಿಂದ ಧರ್ಮಸ್ಥಳಕ್ಕೆ ಕುಡಿಯುವ ನೀರು ಸರಬರಾಜು

Wednesday, May 22nd, 2019
water

ಧರ್ಮಸ್ಥಳ : ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರರಾತ್ರಿ 6,780 ಲೀಟರ್‌ಕುಡಿಯುವ ನೀರನ್ನುಕೊಡುಗೆಯಾಗಿ ನೀಡಿದರು. 339 ಕ್ಯಾನ್‌ಗಳಲ್ಲಿ ತಲಾ 20 ಲೀಟರ್‌ನಂತೆಒಟ್ಟು  6,780 ಲೀ ನೀರನ್ನುಅವರುತಮ್ಮ ವಾಹನಗಳಲ್ಲಿ ಸೋಮವಾರರಾತ್ರಿತಂದುಕೊಟ್ಟರು. ಅನ್ನಪೂರ್ಣಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದುಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ನಲ್ವತ್ತೆಂಟನೇ ವರ್ಷದ ಉಚಿತ ಸಾಮೂಹಿಕ ವಿವಾಹ ವೈಭವ

Friday, May 3rd, 2019
mass-marriage

ಉಜಿರೆ: ನಾಡಿವ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆಯ ಸಂಭ್ರಮ – ಸಡಗರ. ಸಂದರ್ಭ ನಲ್ವತ್ತೆಂಟನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ. ಸಂಜೆ ಗಂಟೆ 6.48 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ 102 ಜೋಡಿ ವಧು-ವರರು ಮಂಗಲಸೂತ್ರ ಧಾರಣೆಯೊಂದಿಗೆ ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದರು. ಬೆಳಿಗ್ಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬೀಡಿನಲ್ಲಿ (ತಮ್ಮ ನಿವಾಸದಲ್ಲಿ) ವಧುವಿಗೆ ಸೀರೆ, ರವಿಕೆ, ಹಾಗೂ ವರನಿಗೆ ಶಾಲು, ಧೋತಿ ನೀಡಿ ಹರಸಿದರು. ನೂತನ ವಧು-ವರರ ಜೋಡಿ ಹೆಗ್ಗಡೆಯವರಿಗೆ ಫಲ […]

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಧರ್ಮಸ್ಥಳಕ್ಕೆ ಭೇಟಿ

Monday, April 1st, 2019
sumalatha

ಮಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ  ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿದರು. ಮಂಡ್ಯ  ಕ್ಷೇತ್ರದಲ್ಲಿ ಗೆಲುವಿಗಾಗಿ ರಾಜಕೀಯ ತಂತ್ರ ಮತ್ತು ಪ್ರತಿತಂತ್ರ ನಡೆಯುತ್ತಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಮತದಾರರ ಓಲೈಕೆಗೆ ಜೆಡಿಎಸ್ ನಾನಾ ಕಸರತ್ತು ಗಳನ್ನು ರಾಜಕೀಯ ಪಟ್ಟುಗಳನ್ನು ಅನುಸರಿಸುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಮಣಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕೂಟ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿರುವ ಬೆನ್ನಲ್ಲೇ […]

ಧರ್ಮಸ್ಥಳ ಕೆಎಸ್ಆರ್​ಟಿಸಿ ಬಸ್ ಡಿಪೋದಲ್ಲಿ ಮೂರು ಸಿಬ್ಬಂದಿ ಸಾವು

Wednesday, March 20th, 2019
Ksrtc-Dharmasthala

ಧರ್ಮಸ್ಥಳ: ಕೆಎಸ್ಆರ್ಟಿಸಿ ಬಸ್ ಡಿಪೋದ ರೆಸ್ಟ್ ರೂಂನಲ್ಲಿ ಚಾಲಕ-ನಿರ್ವಾಹಕರೋರ್ವರು ಮಲಗಿದ್ದಲ್ಲೇ ಮೃತಪಟ್ಟ ಘಟನೆ  ಸೋಮವಾರ  ನಡೆದಿದೆ. ವಿಜಾಪುರದ ನಿವಾಸಿ ಸುರೇಶ್ ಬಡಿಗೇರ್(45) ಮೃತಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಜೆ ಕೇಳಿದರೂ, ಹೆಚ್ಚುವರಿಯಾಗಿ ದುಡಿಸಿಕೊಂಡ ಕಾರಣ ತೀವ್ರ ಕಾಯಿಲೆಗೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಧರ್ಮಸ್ಥಳ ಕೆಎಸ್ಆರ್ಟಿಸಿ ಬಸ್ ಡಿಪೋ ಹಲವಾರು ಹಗರಣ, ಅವ್ಯವಹಾರಗಳ ಆಗರವಾಗಿದೆ. ಒಂದೇ ವಾರದಲ್ಲಿ ಇಲ್ಲಿನ ಮೂವರು ಸಿಬ್ಬಂದಿ ಮೃತಪಟ್ಟಿದ್ದು, ಡಿಪೋದಲ್ಲಿರುವ ಅಧಿಕಾರಿಗಳು ನೀಡುವ ಮಾನಸಿಕ ಕಿರುಕುಳವೇ ಈ ಸಾವುಗಳಿಗೆ ಕಾರಣ ಎಂಬ […]

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ. ಶಿವ ಪಂಚಾಕ್ಷರಿ ಪಠಣ, ಭಜನೆ, ಅರ್ಚನೆ, ಜಾಗರಣೆ.

Wednesday, March 6th, 2019
Dharmasthala Shivaratri

ಧರ್ಮಸ್ಥಳ : ದೃಢ ಸಂಕಲ್ಪದೊಂದಿಗೆ ಏಕಾಗ್ರತೆಯಿಂದ ದೇವರ ಭಕ್ತಿ ಮಾಡಿದರೆ ನಮ್ಮ ಎಲ್ಲಾ ಸಂಕಷ್ಟಗಳ ಮುಕ್ತಿಯಾಗಿ ನಾವು ಭಗವಂತನ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಅಹೋರಾತ್ರಿ ನಡೆಯುವ ಶಿವಪಂಚಾಕ್ಷರಿ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರವಣ, ಕೀರ್ತನ, ಅರ್ಚನೆ, ವಂದನೆ, ಧ್ಯಾನ, ಆತ್ಮ ನಿವೇದನೆ ಮೊದಲಾದ ನವವಿಧ ಭಕ್ತಿಯಿಂದ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು. ಶಿವರಾತ್ರಿಯ ಪವಿತ್ರ ಸಂದರ್ಭದಲ್ಲಿ ಭಕ್ತಾದಿಗಳು ಪುಣ್ಯ ಸಂಚಯನಕ್ಕಾಗಿ ಧರ್ಮಸ್ಥಳಕ್ಕೆ […]

ಧರ್ಮಸ್ಥಳದಲ್ಲಿ ಎಂ. ವೀರಪ್ಪ ಮೊಯಿಲಿ ರಚಿಸಿದ ಬಾಹುಬಲಿ ಅಹಿಂಸಾ ದಿಗ್ವಿಜಯಂ ಗ್ರಂಥ ಬಿಡುಗಡೆ 

Friday, February 15th, 2019
veerappa-moily

ಧರ್ಮಸ್ಥಳ : ಜೈನಧರ್ಮದ ಬಾಹುಬಲಿ ಅಹಿಂಸಾ ದಿಗ್ವಿಜಯಂ ಗದ್ಯಾನುವಾದದ ಗ್ರಂಥ ಬರೆಯುವಾಗ ನನ್ನನ್ನು ನಾನು ಪರಿವರ್ತನೆ ಮಾಡಿಕೊಳ್ಳಲು ಸಾಧ್ಯವಾಯಿತು. ಗ್ರಂಥದ ಗದ್ಯಾನುಸಾರ ಮಾಡಲು ಪ್ರಾರಂಭಿಸಿದ ಮೇಲೆ ನನಗೆ ಕೋಪ ಬರುವುದಿಲ್ಲ. ಯಾರಲ್ಲಿಯೂ ಸಿಟ್ಟು ಮಾಡುವುದಿಲ್ಲ. ಯಾವಾಗಲೂ ಶಾಂತಿ, ನೆಮ್ಮದಿಯಿಂದ ಇದ್ದೇನೆ ಎಂದು ತನ್ನ ಸ್ವಾನುಭವವನ್ನು ವಿವರಿಸಿದವರು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ವೇಯಿಲಿ ಅವರು. ಸಂದರ್ಭ: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಗುರುವಾರ ಅಮೃತವರ್ಷಿಣಿಯಲ್ಲಿ ಅವರ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಧನ್ಯತೆಯಿಂದ ಅವರು ಮಾತನಾಡಿದರು. ಮೂರು […]