ರಾಜಕೀಯದಲ್ಲಿ ನಮ್ಮ ತಾಯಿ ಹೆಸರು ತರಬೇಡಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿ
Friday, May 25th, 2018ಬೆಂಗಳೂರು: ರಾಜಕೀಯ ವಿಚಾರದಲ್ಲಿ ದಯವಿಟ್ಟು ನಮ್ಮ ತಾಯಿಯವರ ಹೆಸರನ್ನು ತರಬೇಡಿ. ಅವರು ಎಂದೂ ಪ್ರಚಾರ ಬಯಸಿದವರಲ್ಲ. ಸಿದ್ದರಾಮಯ್ಯ ಅವರನ್ನು ಕ್ಷಮಿಸಲು ನಾನ್ಯಾರು ಎಂದು ಹೇಳಿರುವುದನ್ನೇ ಕೆಲವು ಮಾಧ್ಯಮದವರು ಅವರನ್ನು ನಾನು ಯಾವತ್ತೂ ಕ್ಷಮಿಸಲ್ಲ ಎಂದು ಬರೆದಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಗೃಹ ಕಚೇರಿಯಲ್ಲಿ ಇಂದು ಜೆಡಿಎಸ್ ಶಾಸಕ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತಾಯಿ ಚೆನ್ನಮ್ಮ ಅವರು ಸಿದ್ದರಾಮಯ್ಯನವರನ್ನು ಯಾವತ್ತೂ ಕ್ಷಮಿಸಲ್ಲ ಎಂದು ಹೇಳಿದ್ದಾರೆ ಅಂತಾ ಕೆಲವು ಮಾಧ್ಯಮದವರು ಬರೆದಿದ್ದಾರೆ. […]