ದೇಶಸೇವೆಯನ್ನೇ ಉಸಿರಾಗಿಸಿಕೊಂಡಿರುವ ಸಂಘಟನೆ ಆರ್ ಎಸ್‍ಎಸ್ : ಕಂದಾಯ ಸಚಿವ ಆರ್ ಅಶೋಕ

Wednesday, October 6th, 2021
R Ashoka

ಬೆಂಗಳೂರು  : “ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆರ್ ಎಸ್ ಎಸ್ ಅನ್ನು ಟೀಕಿಸುವುದು ತಪ್ಪು. ಎಲ್ಲವನ್ನು ತಿಳಿದುಕೊಂಡು ಮಾತನಾಡಬೇಕು”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಆರೆಸ್ಸೆಸ್ ಒಂದು ದೇಶಭಕ್ತ ಸಂಘಟನೆ. ಸೇವೆಯೆ ಅದರ ಮೂಲಮಂತ್ರ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಬಂಧಿತರಾದವರು ಶೇಕಡ 80 ರಷ್ಟು ಜನ ಆರ್‍ಎಸ್‍ಎಸ್ ಗೆ ಸೇರಿದವರು. ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡುವಲ್ಲಿ ಮತ್ತು ಪ್ರಜಾಪ್ರಭುತ್ವವನ್ನು […]

ಬರುವ ದಿನಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಸೂಕ್ತ ತೀರ್ಮಾನ: ಸಚಿವ ಆರ್ ಅಶೋಕ

Thursday, September 16th, 2021
R Ashoka

ಬೆಂಗಳೂರು  : “ಸುಪ್ರೀಂ ಕೋರ್ಟ್‍ನ ತೀರ್ಪನ್ನು ಯಥಾವತ್ತಾಗಿ ಪಾಲನೆ ಮಾಡುವುದು ಕರ್ತವ್ಯ. ಆದರೆ ಆ ಧಾವಂತದಲ್ಲಿ ಅಧಿಕಾರಿಗಳು ಈ ರೀತಿಯ ಅವಸರದ ತೀರ್ಮಾನ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಜಿಲ್ಲಾಡಳಿತದಿಂದ ಜನರ ಭಾವನೆಗಳಿಗೆ ಧಕ್ಕೆಯಾಗದಂತಹ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ನಂಜನಗೂಡು ಮತ್ತು ಮೈಸೂರಿನಲ್ಲಿನ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವರು,”ಅಧಿಕಾರಿಗಳು ಹೀಗೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ತಪ್ಪು. ಸುಪ್ರೀಂ ಕೋರ್ಟ್ ಕೂಡಾ ರಸ್ತೆ ಮಧ್ಯದಲ್ಲಿರುವ […]

ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾತುಕತೆ : ಸಚಿವ ಅಶೋಕ

Saturday, September 11th, 2021
R ashoka

ಬೆಂಗಳೂರು  : ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಇಂದು ಕಂದಾಯ ಸಚಿವ ಆರ್ ಅಶೋಕ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಜೆಡಿ ಎಸ್ ಮಾಜಿ ಸಚಿವ ಸಾ ರಾ ಮಹೇಶ್ ಅವರ ಆಹ್ವಾನದ ಮೇರೆಗೆ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ದೊಡ್ಡಬಳ್ಳಾಪುರ ಹಾಗೂ ಕಲ್ಬುರ್ಗಿ ಪಾಲಿಕೆಗಳಲ್ಲಿ ಮೈತ್ರಿ ಆಡಳಿತ ನಡೆಸುವ ಕುರಿತಂತೆ ಒಂದು […]

ಮಹಿಳಾ ಕಾರ್ಯಕರ್ತರಿಗೆ ಬಾಗಿನ ನೀಡಿ, ಪರಿಸರ ಸ್ನೇಹಿ ಗಣೇಶ ಮೂರ್ತಿ ವಿತರಿಸಿದ : ಕಂದಾಯ ಸಚಿವ ಆರ್ ಅಶೋಕ

Thursday, September 9th, 2021
R Ashoka Ganesha

ಬೆಂಗಳೂರು  : “ಜೀವ, ಜೀವನ ಬಹಳ ಮುಖ್ಯ. ನಾವು ಬದುಕಿದರೆ ಮಾತ್ರ ಮುಂದೆ ಏನಾದರು ಸಾಧನೆ ಮಾಡಬಹುದು” ಎಂದು ಆರ್ ಅಶೋಕ ಹೇಳಿದರು. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಚಿವರು ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸಿದರು. ಪದ್ಮನಾಭನಗರ ಕ್ಷೇತ್ರದ ವಿವಿಧ ಸ್ಥಳಗಳಲ್ಲಿ ಗೌರಿ ಹಬ್ಬದ ಶುಭದಿನದಂದು ಮಹಿಳೆಯರಿಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ನಾವು ಗಣೇಶ ಹಬ್ಬವನ್ನು ಆಯೋಜಿಸಲು ಅನುಮತಿ ನೀಡಿದ್ದೇವೆ. ಗೌರಿ ಮತ್ತು ಗಣೇಶ ಹಬ್ಬವು ಸಹೋದರತ್ವವನ್ನು ಸಂಕೇತಿಸುತ್ತದೆ. […]

ಕಂದಾಯ ಸಚಿವರಿಂದ ರಕ್ಷಾಬಂಧನ‌ ಆಚರಣೆ

Sunday, August 22nd, 2021
Rakshabandhan

ಬೆಂಗಳೂರು : ಭಾತೃತ್ವದ ಸಂಕೇತವಾಗಿರುವ‌ ರಕ್ಷಾಬಂಧನದ ನಿಮಿತ್ತ ಕಂದಾಯ ಸಚಿವ ಆರ್‌ ಅಶೋಕ‌ ಅವರು ಹೊಸಕೆರೆಹಳ್ಳಿಯಲ್ಲಿ‌ ಮಹಿಳಾ ಕಾರ್ಯಕರ್ತರಿಂದ ರಾಖಿ ಕಟ್ಟಿಸಿಕೊಂಡು ಶುಭ ಕೋರಿದರು. ಈ ವೇಳೆ ಮಾತನಾಡಿದ ಸಚಿವರು,”ಹಿಂದೂ ಸಂಪ್ರದಾಯದಲ್ಲಿ ರಕ್ಷಾ ಬಂಧನಕ್ಕೆ ಪೌರಾಣಿಕ ಹಿನ್ನೆಲೆಯಿದೆ. ಸಹೋದರಿಯ ರಕ್ಷಣೆಯ ಸೂಚಕವಾಗಿ ರಾಖಿ ಕಟ್ಟಿಸಿಕೊಳ್ಳುವ ಸಹೋದರ ಆ‌ ಮೂಲಕ ಆಕೆಗೆ ನಿರಂತರ ರಕ್ಷಣೆ ನೀಡುವ ಅಭಯ ಈ ಆಚರಣೆಯಲ್ಲಿ ಅಡಗಿದೆ”, ಎಂದು ಹೇಳಿದರು.

ಡಿಸೆಂಬರ್ ವೇಳೆಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗವುದು: ಆರ್ ಅಶೋಕ

Tuesday, August 17th, 2021
R Ashoka

ಬೆಂಗಳೂರು : ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕಂದಾಯ ಸಚಿವ ಆರ್ ಅಶೋಕ ಅವರು ಕಿಟ್ ವಿತರಣೆ ಹಾಗೂ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಸೋಮವಾರ ಚಾಲನೆ ನೀಡಿದರು. ಈ ವೇಳೆ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯ ಆವರಣದಲ್ಲಿ ಸಾವಿರಕ್ಕೂ ಹೆಚ್ಚು ಶಾಲಾ ಸಿಬ್ಬಂದಿಗಳಿಗೆ ಸಚಿವರು ದಿನಸಿ ಕಿಟ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅಶೋಕ,”ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ನಾನಾ ಕಠಿಣ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ […]

ಕಂದಾಯ ಸಚಿವ ಆರ್ ಅಶೋಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

Sunday, July 25th, 2021
Ashok-Flood-Area

ಬೆಂಗಳೂರು  : ಅತಿವೃಷ್ಠಿಯಿಂದ ಹಾನಿಗೊಳಗಾಗಿರುವ ಹಾಸನ ಜಿಲ್ಲೆಯ ದೊಣಿಗಲ್‍ಗೆ ಕಂದಾಯ ಸಚಿವ ಆರ್ ಅಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದೇನೆ. ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಮತ್ತು ರಸ್ತೆ ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ. ಎನ್‍ಡಿಆರ್‍ಎಫ್ ನಿಧಿಯಡಿ ಪರಿಹಾರ ನೀಡುವಂತೆ ಡಿಸಿಗಳಿಗೆ ಆದೇಶಿಸಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ […]

ಒಕ್ಕಲಿಗರ ಸರ್ವತೋಮುಖ ಏಳಿಗೆಗೆ ನೆರವಾಗಲು ಅಭಿವೃದ್ಧಿ ನಿಗಮ: ಕಂದಾಯ ಸಚಿವ ಆರ್ ಅಶೋಕ

Wednesday, July 21st, 2021
Okkaliga welfare

ಬೆಂಗಳೂರು  : ಕಂದಾಯ ಸಚಿವ ಆರ್ ಅಶೋಕ ಮತ್ತು ಹೊಸದಾಗಿ ನೇಮಕಗೊಂಡ ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಕೃಷ್ಣಪ್ಪ ಅವರು ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ಒಕ್ಕಲಿಗ ಉಪ ಪಂಗಡಗಳ ಕಲ್ಯಾಣಕ್ಕಾಗಿ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ರಚಿಸುವಂತೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದರು. ಅವರ ಸಲಹೆಯನ್ನು ಪರಿಗಣಿಸಿ ಮುಖ್ಯಮಂತ್ರಿಗಳು ನಿಗಮವನ್ನು […]

ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ: ಆರ್ ಅಶೋಕ ಕಿಡಿ

Tuesday, July 20th, 2021
R Ashoka

ಬೆಂಗಳೂರು  : ಸಿಎಂ ಬದಲಾವಣೆಯ ಕುರಿತಾದ ವದಂತಿಗಳು ವಿರೋಧ ಪಕ್ಷಗಳ ಪಿತೂರಿಯಲ್ಲದೆ ಮತ್ತೇನಲ್ಲ. ಕಾಂಗ್ರೆಸ್ ನಾಯಕರು ಬಿಜೆಪಿಯ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುತ್ತಾರೆ. ಯಡಿಯೂರಪ್ಪ ಅವರೇ ಕರ್ನಾಟಕದ ಸಿಎಂ ಆಗಿ ಮುಂದುವರಿಯುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸುಮ್ಮನೆ ಗೊಂದಲ ಸೃಷ್ಟಿಸುತ್ತಿದೆ.” ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಮಂಗಳವಾರ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ, “ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಿಸುವ ಬಗ್ಗೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ಸಚಿವ ಅಶೋಕ […]

ಒಕ್ಕಲಿಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎಂ ಕೃಷ್ಣಪ್ಪ ಅವರನ್ನ ಅಭಿನಂದಿಸಿದ ಆರ್ ಅಶೋಕ

Monday, July 19th, 2021
R Ashoka

ಬೆಂಗಳೂರು  : ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ನೂತನವಾಗಿ ನೇಮಕಗೊಂಡ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂಕೃಷ್ಣಪ್ಪ ಅವರನ್ನು ಕಂದಾಯ ಸಚಿವ ಆರ್ ಅಶೋಕ ಅಭಿನಂದಿಸಿದರು. ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರನ್ನ ಭವ್ಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರ್ ಅಶೋಕ,”ಒಕ್ಕಲಿಗ ಸಮುದಾಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆಂದೆ ಈಗಗಾಲೇ ಬಜೆಟ್ ನಲ್ಲಿ ರೂ.500 ಕೋಟಿ ಮೀಸಲಿರಿಸಲಾಗಿದೆ. ಈ ನಿಗಮದ ಮೊದಲ ಅಧ್ಯಕ್ಷರಾಗಿ ಕೃಷ್ಣಪ್ಪ ಅವರು ಆಯ್ಕೆಯಾಗಿರುವುದು ಸುಯೋಗ ಎಂದೇ ಭಾವಿಸುತ್ತೇನೆ” ಎಂದು ಹೇಳಿದರು. ಹಾಗೆಯೇ […]